Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 30:10 - ಕನ್ನಡ ಸತ್ಯವೇದವು J.V. (BSI)

10 ಆರೋನನೂ ಅವನ ಸಂತತಿಯವರೂ ವರುಷಕ್ಕೊಮ್ಮೆ ದೋಷಪರಿಹಾರಕ ಯಜ್ಞಪಶುವಿನ ರಕ್ತವನ್ನು ಆ ವೇದಿಯ ಕೊಂಬುಗಳಿಗೆ ಹಚ್ಚಿ ಅದರ ವಿಷಯವಾಗಿ ದೋಷ ಪರಿಹಾರವನ್ನು ಮಾಡಬೇಕು. ಅದು ಯೆಹೋವನಿಗೆ ಅತಿಪರಿಶುದ್ಧವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆರೋನನು ಅವನ ಸಂತತಿಯವರೂ ವರ್ಷಕ್ಕೆ ಒಂದು ಸಾರಿ ದೋಷಪರಿಹಾರಕ ಯಜ್ಞದ ಪಶುವಿನ ರಕ್ತವನ್ನು ಆ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಅದರ ಕುರಿತಾಗಿ ದೋಷಪರಿಹಾರವನ್ನು ಮಾಡಬೇಕು. ಅದು ಯೆಹೋವನಿಗೆ ಅತಿ ಪರಿಶುದ್ಧವಾಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆರೋನನು ಮತ್ತು ಅವನ ಸಂತತಿಯವರು ವರ್ಷಕ್ಕೊಮ್ಮೆ ಪಾಪಪರಿಹಾರಕ ಯಜ್ಞಪಶುವಿನ ರಕ್ತವನ್ನು ಆ ವೇದಿಕೆಯ ಕೊಂಬುಗಳಿಗೆ ಹಚ್ಚಿ ಅದರ ವಿಷಯವಾಗಿ ದೋಷಪರಿಹಾರವನ್ನು ಮಾಡಬೇಕು. ಅದು ಸರ್ವೇಶ್ವರನಾದ ನನಗೆ ಪರಮ ಪವಿತ್ರವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಆರೋನನು ವರ್ಷಕ್ಕೊಮ್ಮೆ ಯೆಹೋವನಿಗೆ ವಿಶೇಷ ಯಜ್ಞವನ್ನು ಸಮರ್ಪಿಸಬೇಕು. ಜನರ ಪಾಪಗಳ ಪ್ರಾಯಶ್ಚಿತ್ತಕ್ಕಾಗಿ ಆರೋನನು ದೋಷಪರಿಹಾರಕ ಯಜ್ಞದ ರಕ್ತವನ್ನು ಉಪಯೋಗಿಸುವನು. ಆರೋನನು ಇದನ್ನು ಈ ಯಜ್ಞವೇದಿಕೆಯ ಕೊಂಬುಗಳಲ್ಲಿ ಮಾಡುವನು. ಆ ದಿನವು ದೋಷಪರಿಹಾರಕ ದಿನವೆಂದು ಕರೆಯಲ್ಪಡುವುದು. ಯೆಹೋವನಿಗೆ ಇದು ಅತೀ ಪರಿಶುದ್ಧವಾದ ವಿಶೇಷ ದಿನವಾಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆರೋನನು ಮತ್ತು ಅವನ ಸಂತತಿಯವರು ವರ್ಷಕ್ಕೆ ಒಂದು ಸಾರಿ ಪಾಪ ಪರಿಹಾರದ ಬಲಿಯ ರಕ್ತದಿಂದ ಅದರ ಕೊಂಬುಗಳಿಗೆ ಹಚ್ಚಿ ಪ್ರಾಯಶ್ಚಿತ್ತ ಮಾಡಬೇಕು. ಅದು ಯೆಹೋವ ದೇವರಿಗೆ ಮಹಾಪರಿಶುದ್ಧವಾದದ್ದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 30:10
18 ತಿಳಿವುಗಳ ಹೋಲಿಕೆ  

ತರುವಾಯ ಅವನು ಹೊರಗೆ ಬಂದು ಯೆಹೋವನ ಸನ್ನಿಧಿಯಲ್ಲಿರುವ ಯಜ್ಞವೇದಿಯ ಬಳಿಗೆ ಹೋಗಿ ಅದಕ್ಕಾಗಿ ದೋಷಪರಿಹಾರ ಮಾಡಬೇಕು. ಆ ಹೋರಿಯ ರಕ್ತದಲ್ಲಿಯೂ ಆ ಹೋತನ ರಕ್ತದಲ್ಲಿಯೂ ಸ್ವಲ್ಪ ಸ್ವಲ್ಪ ತೆಗೆದುಕೊಂಡು ವೇದಿಯ ಕೊಂಬುಗಳಿಗೆ ಸುತ್ತಲೂ ಹಚ್ಚಬೇಕು.


ಇದಲ್ಲದೆ ಮಹಾಯಾಜಕನು ವರುಷ ವರುಷವೂ ಅನ್ಯ ರಕ್ತವನ್ನು ತೆಗೆದುಕೊಂಡು ಪವಿತ್ರಾಲಯದಲ್ಲಿ ಪ್ರವೇಶಿಸುವ ಪ್ರಕಾರ ಆತನು ತನ್ನನ್ನು ಅನೇಕ ಸಾರಿ ಸಮರ್ಪಿಸುವದಕ್ಕೆ ಪರಲೋಕದಲ್ಲಿ ಪ್ರವೇಶಿಸಲಿಲ್ಲ;


ಅದೇ ಏಳನೆಯ ತಿಂಗಳಿನ ಹತ್ತನೆಯ ದಿನವು ಸರ್ವದೋಷಪರಿಹಾರಕ ದಿನ. ಅದರಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು; ನೀವು ಪೂರ್ಣವಾಗಿ ಉಪವಾಸಮಾಡಬೇಕು, ಮತ್ತು ಯೆಹೋವನ ಸನ್ನಿಧಿಯಲ್ಲಿ ಹೋಮವನ್ನು ಮಾಡಬೇಕು.


ಆದರೆ ಎರಡನೆಯ ಭಾಗದೊಳಗೆ ಮಹಾಯಾಜಕನೊಬ್ಬನೇ ವರುಷಕ್ಕೆ ಒಂದೇ ಸಾರಿ ಹೋಗುತ್ತಾನೆ, ಅವನು ರಕ್ತವನ್ನು ತಕ್ಕೊಳ್ಳದೆ ಹೋಗುವದಿಲ್ಲ; ಆ ರಕ್ತವನ್ನು ತನಗೋಸ್ಕರವೂ ಜನರ ತಪ್ಪುಗಳಿಗೋಸ್ಕರವೂ ಸಮರ್ಪಿಸುತ್ತಾನೆ.


ಈತನು ದೇವರ ಪ್ರಭಾವದ ಪ್ರಕಾಶವೂ ಆತನ ತತ್ವದ ಮೂರ್ತಿಯೂ ತನ್ನ ಶಕ್ತಿಯ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ಪಾಪವಿಶುದ್ಧಿಮಾಡಿದ ಮೇಲೆ ಉನ್ನತಲೋಕದೊಳಗೆ ಮಹತ್ವವುಳ್ಳ ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ಆರನೆಯ ದೇವದೂತನು ತುತೂರಿಯನ್ನೂದಿದಾಗ ದೇವರ ಸಮ್ಮುಖದಲ್ಲಿರುವ ಚಿನ್ನದ ವೇದಿಯ ಕೊಂಬುಗಳಿಂದ ಹೊರಟ ಒಂದೇ ಧ್ವನಿಯನ್ನು ಕೇಳಿದೆನು.


ಆ ವೇದಿಯ ಮೇಲೆ ಬೇರೆ ಯಾವ ಧೂಪವನ್ನೂ ಹಾಕಕೂಡದು; ಅದರ ಮೇಲೆ ಹೋಮವನ್ನಾಗಲಿ ಧಾನ್ಯ ದ್ರವ್ಯವನ್ನಾಗಲಿ ಪಾನದ್ರವ್ಯವನ್ನಾಗಲಿ ಸಮರ್ಪಿಸಕೂಡದು.


ಯೆಹೋವನು ಮೋಶೆಗೆ ಹೇಳಿದ್ದೇನಂದರೆ -


ಯೆಹೋವನು ಮೋಶೆಯ ಸಂಗಡ ಮಾತಾಡಿ ಹೇಳಿದ್ದೇನಂದರೆ - ನಿನ್ನ ಅಣ್ಣನಾದ ಆರೋನನು ಮನಸ್ಸಿಗೆ ಬಂದಾಗೆಲ್ಲಾ ತೆರೆಯನ್ನು ದಾಟಿ ಮಹಾಪವಿತ್ರಸ್ಥಾನದೊಳಕ್ಕೆ ಮಂಜೂಷದ ಮೇಲಣ ಕೃಪಾಸನದ ಹತ್ತಿರಕ್ಕೆ ಬರಬಾರದೆಂದು ಅವನಿಗೆ ಹೇಳು. ನಾನು ಕೃಪಾಸನದ ಮೇಲೆ ಮೇಘದಲ್ಲಿ ಕಾಣಿಸಿಕೊಳ್ಳುವದರಿಂದ ಅವನು ನಾಶವಾದಾನು.


ಹೀಗೆ ಇಸ್ರಾಯೇಲ್ಯರು ನಾನಾ ವಿಧವಾದ ಅಪರಿಶುದ್ಧತ್ವ, ಅಪರಾಧ, ದ್ರೋಹ ಇವುಗಳಿಂದ ಮಹಾಪವಿತ್ರಸ್ಥಾನಕ್ಕೆ ಉಂಟುಮಾಡಿದ ದೋಷವನ್ನು ಆರೋನನು ಪರಿಹರಿಸುವನು. ಅಶುದ್ಧರಾದ ಅವರ ನಡುವೆ ಇರುವ ದೇವದರ್ಶನದ ಗುಡಾರಕ್ಕೋಸ್ಕರವೂ ಹಾಗೆಯೇ ದೋಷಪರಿಹಾರ ಮಾಡುವನು.


ಅದೋನೀಯನು ಸೊಲೊಮೋನನಿಗೆ ಹೆದರಿ ಹೊರಟುಹೋಗಿ ಯಜ್ಞವೇದಿಯ ಕೊಂಬುಗಳನ್ನು ಹಿಡಿದನು.


ದೇವರ ಸೇವಕನಾದ ಮೋಶೆಯ ಎಲ್ಲಾ ಆಜ್ಞೆಗಳಿಗನುಸಾರವಾಗಿ ಆರೋನನೂ ಅವನ ಮಕ್ಕಳೂ ಇಸ್ರಾಯೇಲ್ಯರಿಗೋಸ್ಕರ ಯಜ್ಞವೇದಿ, ಧೂಪವೇದಿ ಇವುಗಳ ಮೇಲೆ ಹೋಮಮಾಡುತ್ತಾ ಧೂಪಹಾಕುತ್ತಾ ಮಹಾಪರಿಶುದ್ಧ ಸ್ಥಳದ ಎಲ್ಲಾ ಸೇವೆಯನ್ನು ಮಾಡುತ್ತಾ ದೋಷಪರಿಹಾರ ಮಾಡುತ್ತಾ ಇದ್ದರು.


ಆಗ ಯಾಜಕನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಪರಿಮಳಧೂಪವೇದಿಯ ಕೊಂಬುಗಳಿಗೆ ಆ ರಕ್ತವನ್ನು ಹಚ್ಚಿ ಹೋರಿಯ ವಿುಕ್ಕ ರಕ್ತವನ್ನೆಲ್ಲಾ ದೇವದರ್ಶನದ ಗುಡಾರದ ಬಾಗಲಿಗೆ ಎದುರಾಗಿ ಸರ್ವಾಂಗಹೋಮಮಾಡುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.


ಆ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಧೂಪವೇದಿಯ ಕೊಂಬುಗಳಿಗೆ ಹಚ್ಚಿ ವಿುಕ್ಕದ್ದನ್ನೆಲ್ಲಾ ದೇವದರ್ಶನದ ಗುಡಾರದ ಬಾಗಲಿಗೆದುರಾಗಿರುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು