Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 30:13 - ಕನ್ನಡ ಸತ್ಯವೇದವು J.V. (BSI)

13 ಲೆಕ್ಕಿಸಲ್ಪಟ್ಟವರಲ್ಲಿ ಸೇರುವ ಪ್ರತಿಯೊಬ್ಬನು ಯೆಹೋವನಿಗೆ ಅರ್ಧ ರೂಪಾಯಿಯ ಮೇರೆಗೆ ಕಪ್ಪ ಕೊಡಬೇಕು. ದೇವರ ಸೇವೆಗೆ ನೇಮಕವಾದ ಇಪ್ಪತ್ತು ಗೇರಾ ತೂಕದ ರೂಪಾಯಿಯ ಮೇರೆಗೆ ಅರ್ಧರ್ಧ ರೂಪಾಯಿ ಕಪ್ಪವಾಗಿ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಲೆಕ್ಕಿತರಾದವರಲ್ಲಿ ಪ್ರತಿಯೊಬ್ಬನೂ ದೇವರ ಸೇವೆಗೆ ನೇಮಕವಾದ ಇಪ್ಪತ್ತು ಗೇರಾ ತೂಕದ ರೂಪಾಯಿಯ ಮೇರೆಗೆ ಅರ್ಧ ಶೆಕೆಲ್ ಕಾಣಿಕೆಯನ್ನು ಕೊಡಬೇಕು. ಈ ಅರ್ಧ ಶೆಕೆಲ್ ಯೆಹೋವನಿಗೆ ಪವಿತ್ರವಾದ ಕಾಣಿಕೆಯಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಲೆಕ್ಕಿತರಾದವರಲ್ಲಿ ಪ್ರತಿಯೊಬ್ಬನು ನನಗೆ ಅರ್ಧ ಶೆಕೆಲ್‍ ನಾಣ್ಯದ ಮೇರೆಗೆ ತೆರಿಗೆ ಕಟ್ಟಬೇಕು. ದೇವರ ಸೇವೆಗೆ ನೇಮಕವಾದ ಇಪ್ಪತ್ತು ‘ಗೇರಾ’ ತೂಕದ ನಾಣ್ಯದ ಮೇರೆಗೆ ಅರ್ಧರ್ಧ ನಾಣ್ಯವನ್ನು ತೆರಿಗೆಯಾಗಿ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಲೆಕ್ಕಿಸಲ್ಪಟ್ಟ ಪ್ರತಿಯೊಬ್ಬನು ಅಧಿಕೃತ ಅಳತೆಗನುಸಾರವಾಗಿರುವ ಅರ್ಧಶೆಕೆಲ್ ಕಪ್ಪಕಾಣಿಕೆಯನ್ನು ಕೊಡಬೇಕು. ಈ ಅರ್ಧಶೆಕೆಲ್ ಯೆಹೋವನಿಗೆ ಕಾಣಿಕೆಯಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಲೆಕ್ಕಿತರಾದವರಲ್ಲಿ ಸೇರುವ ಪ್ರತಿಯೊಬ್ಬ ಮನುಷ್ಯನು ಕೊಡಬೇಕಾದದ್ದು ಏನೆಂದರೆ ಶೆಕೆಲಿಗೆ ಇಪ್ಪತ್ತು ಗೇರಾಗಳ ಪ್ರಕಾರವಾಗಿ ಪರಿಶುದ್ಧ ಆಲಯದ ಶೆಕೆಲಿನ ಮೇರೆಗೆ ಅರ್ಧ ಶೆಕೆಲ್ ಕೊಡಬೇಕು. ಅರ್ಧ ಶೆಕೆಲ್ ಯೆಹೋವ ದೇವರಿಗೆ ಅರ್ಪಿಸುವ ಕಾಣಿಕೆಯಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 30:13
17 ತಿಳಿವುಗಳ ಹೋಲಿಕೆ  

ದೇವರ ಸೇವೆಯಲ್ಲಿ ನೇಮಕವಾದ ಇಪ್ಪತ್ತು ಗೇರಾ ತೂಕದ ರೂಪಾಯಿಯ ಮೇರೆಗೆ ನೀವು ಬೆಲೆಯನ್ನು ಯಾವಾಗಲೂ ನಿರ್ಣಯಿಸಬೇಕು.


ದೇವರ ಸೇವೆಗೆ ನೇಮಕವಾದ ಇಪ್ಪತ್ತು ಗೇರಾ ತೂಕದ ರೂಪಾಯಿಯ ಮೇರೆಗೆ ತೆಗೆದುಕೊಳ್ಳಬೇಕು.


ತೊಲೆಯು ಇಪ್ಪತ್ತು ಗೇರಾ ತೂಕವಾಗಿರಬೇಕು; ನಿಮ್ಮಲ್ಲಿ ಸಲ್ಲುವ ಮಾನೆಯು ಇಪ್ಪತ್ತು, ಇಪ್ಪತ್ತೈದು [ಅಥವಾ] ಹದಿನೈದು ತೊಲೆಯ ತೂಕದ್ದಾಗಿರಲಿ.


ಅವರು ಕಪೆರ್ನೌವಿುಗೆ ಬಂದಾಗ ದೇವಾಲಯಕ್ಕಾಗಿ ತೆರಿಗೆಯನ್ನು ಎತ್ತುವವರು ಪೇತ್ರನ ಬಳಿಗೆ ಬಂದು - ನಿಮ್ಮ ಬೋಧಕನು ದೇವಾಲಯದ ತೆರಿಗೆಯನ್ನು ಸಲ್ಲಿಸುವದಿಲ್ಲವೇ ಎಂದು ಕೇಳಲು - ಹೌದು, ಸಲ್ಲಿಸುವನು ಅಂದನು.


ಆಗ ಪಿಲಾತನು ತನ್ನ ಯತ್ನ ನಡೆಯುವದಿಲ್ಲ, ಗದ್ದಲ ಮಾತ್ರ ಹೆಚ್ಚಾಗುತ್ತದೆ ಎಂದು ತಿಳಿದು ನೀರು ತಕ್ಕೊಂಡು ಜನರ ಮುಂದೆ ಕೈ ತೊಳಕೊಂಡು - ಈ ಪುರುಷನನ್ನು ಕೊಲ್ಲಿಸಿದ್ದಕ್ಕೆ ನಾನು ಸೇರಿದವನಲ್ಲ, ನೀವೇ ನೋಡಿಕೊಳ್ಳಿರಿ ಅನ್ನಲಾಗಿ ಜನರೆಲ್ಲಾ -


ಬಳಿಕ ಯೇಸು ದೇವಾಲಯಕ್ಕೆ ಹೋಗಿ ಅದರಲ್ಲಿ ಮಾರುವ ಕೊಳ್ಳುವ ಎಲ್ಲರನ್ನೂ ಹೊರಡಿಸಿಬಿಟ್ಟು ಚಿನಿವಾರರ ಮೇಜುಗಳನ್ನೂ ಪಾರಿವಾಳಮಾರುವವರ ಕಾಲ್ಮಣೆಗಳನ್ನೂ ಕೆಡವಿ


ನಾನೂರು ರೂಪಾಯಿ ಬಾಳುವ ಭೂವಿುಯ ವಿಷಯದಲ್ಲಿ ನಿನಗೂ ನನಗೂ ವಾದವೇತಕ್ಕೆ? ಸಮಾಧಿಮಾಡಬಹುದು ಅಂದನು.


ಲೆಕ್ಕಿಸಲ್ಪಟ್ಟವರಲ್ಲಿ ಸೇರಿದವರೊಳಗೆ ಇಪ್ಪತ್ತು ವರುಷದವರೂ ಅದಕ್ಕೆ ಹೆಚ್ಚಿನ ವಯಸ್ಸುಳ್ಳವರೂ ಆ ಕಪ್ಪವನ್ನು ಯೆಹೋವನಿಗೆ ಕೊಡಬೇಕು.


ದೇವ ಮಂದಿರದ ಸಕಲವಿಧವಾದ ಕೆಲಸದಲ್ಲಿ ಉಪಯೋಗಿಸಿದ ಕಾಣಿಕೆಯ ಬಂಗಾರವು ದೇವರ ಸೇವೆಗೆ ನೇಮಕವಾದ ಶೆಕೆಲಿನ ಮೇರೆಗೆ ಇಪ್ಪತ್ತೊಂಭತ್ತು ತಲಾಂತು ಏಳು ನೂರಮೂವತ್ತು ಶೆಕೆಲ್.


ಯಾವನಾದರೂ ಯೆಹೋವನಿಗೆ ಸಲ್ಲಿಸಬೇಕಾದ ದೇವರ ವಸ್ತುಗಳನ್ನು ಸಮರ್ಪಿಸುವದರಲ್ಲಿ ಅಜಾಗ್ರತೆಯಿಂದ ದ್ರೋಹಮಾಡಿ ದೋಷಕ್ಕೆ ಒಳಗಾದರೆ ಅವನು ಆ ಅಪರಾಧಪ್ರಾಯಶ್ಚಿತ್ತಕ್ಕಾಗಿ ದೇವರ ಸೇವೆಗೆ ನೇಮಕವಾದ ರೂಪಾಯಿಯ ಮೇರೆಗೆ ಎರಡು ಅಥವಾ ಹೆಚ್ಚು ರೂಪಾಯಿ ಬಾಳುವದೆಂದು ನಿಮಗೆ ತೋರುವ ಪೂರ್ಣಾಂಗವಾದ ಟಗರನ್ನು ಆಡುಕುರಿಗಳ ಹಿಂಡಿನಿಂದ ತೆಗೆದುಕೊಂಡು ಬಂದು ಯೆಹೋವನಿಗೆ ಸಮರ್ಪಿಸಬೇಕು.


ಇಪ್ಪತ್ತು ವರುಷದಿಂದ ಅರುವತ್ತು ವರುಷದ ಪರ್ಯಂತರ ವಯಸ್ಸುಳ್ಳ ಪುರುಷನಿಗೋಸ್ಕರ ಐವತ್ತು ರೂಪಾಯಿಗಳನ್ನೂ


ಅವನ ಕಾಣಿಕೆ ಯಾವದಂದರೆ - ದೇವರ ಸೇವೆಗೆ ನೇಮಕವಾದ ರೂಪಾಯಿಯ ತೂಕದ ಮೇರೆಗೆ ನೂರ ಮೂವತ್ತು ರೂಪಾಯಿ ತೂಕದ ಬೆಳ್ಳಿಯ ಹರಿವಾಣವು; ಎಪ್ಪತ್ತು ತೊಲೆ ತೂಕವುಳ್ಳ ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು;


ಧೂಪದ್ರವ್ಯ ತುಂಬಿದ್ದ ಒಂದೊಂದು ಚಿನ್ನದ ಧೂಪಾರತಿಯ ತೂಕವು ದೇವರ ಸೇವೆಗೆ ನೇಮಕವಾದ ತೊಲೆಯ ಪ್ರಕಾರ ಹತ್ತು ಹತ್ತು ತೊಲೆಯ ಮೇರೆಗೆ ಇರುವದರಿಂದ ಆ ಹನ್ನೆರಡು ಧೂಪಾರತಿಗಳ ಚಿನ್ನವು ಒಟ್ಟಾಗಿ 120 ತೊಲೆ.


ಯೆಹೋವಾಷನು ಯಾಜಕರಿಗೆ - ನೀವು ಯೆಹೋವನ ಆಲಯಕ್ಕೆ ಸೇರುವ ಎಲ್ಲಾ ಪರಿಶುದ್ಧದ್ರವ್ಯವನ್ನು ಅಂದರೆ ಖಾನೇಷುಮಾರಿಯಲ್ಲಿ ಲೆಕ್ಕಿಸಲ್ಪಟ್ಟ ಪ್ರತಿಯೊಬ್ಬನು ತಂದುಕೊಡುವ ಹಣ, ದೇವರಿಗೆ ಪ್ರತಿಷ್ಠಿತನಾದ ಮನುಷ್ಯನು ತನ್ನ ಪ್ರಾಣವನ್ನು ಬಿಡಿಸಿಕೊಳ್ಳುವದಕ್ಕಾಗಿ ತರುವ ಹಣ, ಜನರು ಯೆಹೋವನ ಆಲಯಕ್ಕೆ ಸ್ವೇಚ್ಫೆಯಿಂದ ತಂದೊಪ್ಪಿಸುವ ಹಣ ಇವುಗಳನ್ನು ತೆಗೆದುಕೊಂಡು


ಬಿಟ್ಟುಬಿಡಬೇಕಾದ ಶಿಶುಗಳು ಒಂದು ತಿಂಗಳಿನ ಪ್ರಾಯಕ್ಕೆ ಬಂದಾಗಲೇ ನೀವು ಗೊತ್ತಾದ ಈಡನ್ನು ಅಂದರೆ ದೇವರ ಸೇವೆಗೆ ನೇಮಕವಾದ ಇಪ್ಪತ್ತು ಗೇರಾ ತೂಕದ ರೂಪಾಯಿಯ ಮೇರೆಗೆ ಐದು ರೂಪಾಯಿಯನ್ನು ತೆಗೆದುಕೊಂಡು ಅವುಗಳನ್ನು ಬಿಟ್ಟುಬಿಡಬೇಕು.


ದೇವಾಲಯವು ಎಲ್ಲೆಲ್ಲಿ ಶಿಥಿಲವಾಗಿರುತ್ತದೆಂದು ನೋಡಿ ಅದನ್ನು ಸರಿಮಾಡುವದಕ್ಕೋಸ್ಕರ ವಿನಿಯೋಗಿಸಿರಿ; ಪ್ರತಿಯೊಬ್ಬನೂ ತನ್ನ ತನ್ನ ಪರಿಚಿತರಿಂದಲೇ ಹಣ ತೆಗೆದುಕೊಳ್ಳಬೇಕು ಎಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು