Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 30:15 - ಕನ್ನಡ ಸತ್ಯವೇದವು J.V. (BSI)

15 ಪ್ರಾಣರಕ್ಷಣೆಯ ಕಪ್ಪವನ್ನು ಯೆಹೋವನಿಗೆ ಕೊಡುವದರಲ್ಲಿ ಐಶ್ವರ್ಯವಂತರು ಅರ್ಧ ರೂಪಾಯಿಗಿಂತ ಹೆಚ್ಚು ಕೊಡಬಾರದು, ಬಡವರು ಕಮ್ಮಿಕೊಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಪ್ರಾಣಗಳ ಪ್ರಾಯಶ್ಚಿತ್ತಕ್ಕಾಗಿ ಕಾಣಿಕೆಯನ್ನು ಯೆಹೋವನಿಗೆ ಕೊಡುವುದರಲ್ಲಿ ಐಶ್ವರ್ಯವಂತರಾದರೂ ಅರ್ಧಶೆಕೆಲಿಗಿಂತ ಹೆಚ್ಚು ಕೊಡಬಾರದು. ಬಡವರು ಕಡಿಮೆ ಕೊಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಪ್ರಾಣರಕ್ಷಣೆಯ ಈ ತೆರಿಗೆಯನ್ನು ನನಗೆ ಕೊಡುವವರಲ್ಲಿ ಐಶ್ವರ್ಯವಂತರು ಅರ್ಧನಾಣ್ಯಕ್ಕಿಂತ ಹೆಚ್ಚು ಕೊಡಬಾರದು; ಬಡವರು ಕಮ್ಮಿ ಕೊಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಐಶ್ವರ್ಯವಂತರು ಅರ್ಧಶೆಕೆಲಿಗಿಂತ ಹೆಚ್ಚು ಕೊಡಬಾರದು; ಬಡವರು ಅರ್ಧಶೆಕೆಲಿಗಿಂತ ಕಡಿಮೆ ಕೊಡಬಾರದು. ಜನರೆಲ್ಲರೂ ಈ ಕಾಣಿಕೆಯನ್ನು ಯೆಹೋವನಿಗೆ ಅರ್ಪಿಸಬೇಕು. ಇದು ನಿಮ್ಮ ಪ್ರಾಣರಕ್ಷಣೆಯ ತೆರಿಗೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನಿಮ್ಮ ಜೀವನದ ಪ್ರಾಯಶ್ಚಿತ್ತಕ್ಕೆ ಯೆಹೋವ ದೇವರಿಗೆ ಅರ್ಪಿಸುವ ಕಾಣಿಕೆಯನ್ನು ಕೊಡುವುದರಲ್ಲಿ ಐಶ್ವರ್ಯವಂತರು ಅರ್ಧ ಶೇಕೆಲಿಗಿಂತ ಹೆಚ್ಚು ಕೊಡಬಾರದು. ಬಡವನು ಕಡಿಮೆ ಕೊಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 30:15
12 ತಿಳಿವುಗಳ ಹೋಲಿಕೆ  

ಆದಕಾರಣ ಯೆಹೋವನು ಕಾಪಾಡಿದ ನಮ್ಮ ಪ್ರಾಣಗಳಿಗೆ ಈಡಾಗಿ ಆತನಿಗೋಸ್ಕರ ಕಾಣಿಕೆಯಾಗಿ ನಮ್ಮಲ್ಲಿ ಒಬ್ಬೊಬ್ಬನು ತನಗೆ ಸಿಕ್ಕಿದ ಚಿನ್ನದ ಒಡವೆಗಳನ್ನು ಅಂದರೆ ತೋಳ್ಬಳೆ, ಕಡಗ, ಮುದ್ರೆಯುಂಗರ, ಮುರುವು, ಕಂಠಮಾಲೆ ಮುಂತಾದವುಗಳನ್ನು ತಂದಿದ್ದೇವೆ ಅಂದರು.


ಯಜಮಾನರೇ, ನಿಮ್ಮ ಕೈಕೆಳಗಿರುವ ದಾಸರ ವಿಷಯದಲ್ಲಿ ಅದೇ ರೀತಿಯಾಗಿ ನಡೆಯಿರಿ. ಪರಲೋಕದಲ್ಲಿ ನಿಮಗೂ ಅವರಿಗೂ ಯಜಮಾನನಾಗಿರುವಾತನು ಇದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ನಿಮ್ಮ ದಾಸರನ್ನು ಬೆದರಿಸುವ ಪದ್ಧತಿಯನ್ನು ಬಿಟ್ಟುಬಿಡಿರಿ.


ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸದೆ ಬಡವರು ಬಲ್ಲಿದರು ಎಂಬ ಭೇದವನ್ನು ಮಾಡದೆ ಇರುವನು; ಅವರೆಲ್ಲರೂ ಆತನ ಸೃಷ್ಟಿಯಾಗಿದ್ದಾರಷ್ಟೆ.


ಯಾಕಂದರೆ ಪ್ರತಿದೇಹಿಗೂ ರಕ್ತವೇ ಪ್ರಾಣಾಧಾರ. ಅಂಥ ರಕ್ತವನ್ನು ನೀವು ಯಜ್ಞವೇದಿಗೆ ಎರಚಿ ನಿಮಗೋಸ್ಕರ ದೋಷಪರಿಹಾರ ಮಾಡಿಕೊಳ್ಳಬೇಕೆಂದು ನಿಮಗೆ ಅನುಗ್ರಹ ಮಾಡಿದ್ದೇನೆ. ರಕ್ತವು ಪ್ರಾಣಾಧಾರವಾಗಿರುವ ಕಾರಣ ಅದರಿಂದ ದೋಷಪರಿಹಾರವಾಗುತ್ತದಷ್ಟೆ.


ನೀನು ಖಾನೇಷುಮಾರಿಯಾಗತಕ್ಕ ಇಸ್ರಾಯೇಲ್ಯರನ್ನು ಲೆಕ್ಕಿಸುವಾಗ ಅವರೊಳಗೆ ವ್ಯಾಧಿಸಂಭವಿಸದಂತೆ ಪ್ರತಿಯೊಬ್ಬನು ತನ್ನ ತನ್ನ ಪ್ರಾಣಕ್ಕೆ ಈಡಾಗಿ ಯೆಹೋವನಿಗೆ ಕಪ್ಪವನ್ನು ಕೊಡಬೇಕು.


ಅನ್ಯಾಯಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕ ಪ್ರತಿಫಲವನ್ನು ಹೊಂದುವನಷ್ಟೆ; ಪಕ್ಷಪಾತವಿರುವದಿಲ್ಲ.


ಬಡವರು ಬಲ್ಲಿದರು ಸ್ಥಿತಿಯಲ್ಲಿ ಎದುರುಬದುರಾಗಿದ್ದಾರೆ, ಯೆಹೋವನೇ ಅವರನ್ನೆಲ್ಲಾ ಸೃಷ್ಟಿಸಿದನು.


ಆಗ ಅರಸನಾದ ದಾವೀದನು ಗಿಬ್ಯೋನ್ಯರನ್ನು ಕರೆದು - ನಾನು ನಿಮಗೋಸ್ಕರ ಏನು ಮಾಡಬೇಕೆನ್ನುತ್ತೀರಿ? ನಿಮಗೆ ಪ್ರಾಯಶ್ಚಿತ್ತವಾಗಿ ಯಾವದನ್ನು ಕೊಟ್ಟರೆ ನೀವು ಯೆಹೋವನ ಸ್ವಾಸ್ತ್ಯವನ್ನು ಆಶೀರ್ವದಿಸುವಿರಿ ಎಂದು ಕೇಳಿದನು.


ಲೆಕ್ಕಿಸಲ್ಪಟ್ಟವರಲ್ಲಿ ಸೇರಿದವರೊಳಗೆ ಇಪ್ಪತ್ತು ವರುಷದವರೂ ಅದಕ್ಕೆ ಹೆಚ್ಚಿನ ವಯಸ್ಸುಳ್ಳವರೂ ಆ ಕಪ್ಪವನ್ನು ಯೆಹೋವನಿಗೆ ಕೊಡಬೇಕು.


ನೀನು ಪ್ರಾಣರಕ್ಷಣೆಯ ಹಣವನ್ನು ಇಸ್ರಾಯೇಲ್ಯರಿಂದ ತೆಗೆದುಕೊಂಡು ದೇವದರ್ಶನದ ಗುಡಾರದ ಸೇವೆಗೆ ಉಪಯೋಗಿಸಬೇಕು. ಇಸ್ರಾಯೇಲ್ಯರ ಪ್ರಾಣಗಳನ್ನು ಉಳಿಸಬೇಕೆಂಬದಾಗಿ ಆ ಕಪ್ಪವು ಯೆಹೋವನ ಸನ್ನಿಧಿಯಲ್ಲಿ ಜ್ಞಾಪಕ ಕೊಡುವದು.


ಇವುಗಳನ್ನು ದೇಶದ ಸಕಲ ಜನರು ಇಸ್ರಾಯೇಲಿನ ಪ್ರಭುವಿಗೆ ಒಪ್ಪಿಸತಕ್ಕದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು