ವಿಮೋಚನಕಾಂಡ 30:18 - ಕನ್ನಡ ಸತ್ಯವೇದವು J.V. (BSI)18 ಸ್ನಾನಕ್ಕೋಸ್ಕರ ಒಂದು ತಾಮ್ರದ ಗಂಗಾಳವನ್ನೂ ಅದಕ್ಕೆ ತಾಮ್ರದ ಪೀಠವನ್ನೂ ಮಾಡಿಸಿ ದೇವದರ್ಶನದ ಗುಡಾರಕ್ಕೂ ಯಜ್ಞವೇದಿಗೂ ನಡುವೆ ಇಟ್ಟು ಅದರಲ್ಲಿ ನೀರನ್ನು ತುಂಬಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 “ಸ್ನಾನಕ್ಕಾಗಿ ಒಂದು ತಾಮ್ರದ ತೊಟ್ಟಿಯನ್ನೂ ಅದಕ್ಕೆ ತಾಮ್ರದ ಪೀಠವನ್ನೂ ಮಾಡಿಸಿ ದೇವದರ್ಶನದ ಗುಡಾರಕ್ಕೂ, ಯಜ್ಞವೇದಿಗೂ ನಡುವೆ ಇಟ್ಟು ಅದರಲ್ಲಿ ನೀರು ತುಂಬಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 “ಸ್ನಾನಕ್ಕಾಗಿ ಒಂದು ತಾಮ್ರದ ತೊಟ್ಟಿಯನ್ನು ಕಟ್ಟಿಸು. ಅದನ್ನು ಇಡಲು ಒಂದು ತಾಮ್ರದ ಪೀಠವನ್ನು ಮಾಡಿಸು. ದೇವದರ್ಶನದ ಗುಡಾರಕ್ಕೂ ಬಲಿಪೀಠಕ್ಕೂ ನಡುವೆ ಅದನ್ನಿಟ್ಟು ಅದರಲ್ಲಿ ನೀರನ್ನು ತುಂಬಿಸಿಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 “ತಾಮ್ರದ ಗಂಗಾಳವನ್ನು ಮಾಡಿ ಅದನ್ನು ತಾಮ್ರದ ಪೀಠದ ಮೇಲಿಡು. ತೊಳೆದುಕೊಳ್ಳುವುದಕ್ಕೆ ನೀವು ಇದನ್ನು ಉಪಯೋಗಿಸುವಿರಿ. ಗಂಗಾಳವನ್ನು ದೇವದರ್ಶನಗುಡಾರ ಮತ್ತು ಯಜ್ಞವೇದಿಕೆಯ ನಡುವೆ ಇಡು. ಗಂಗಾಳದಲ್ಲಿ ನೀರನ್ನು ತುಂಬಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 “ತೊಳೆದುಕೊಳ್ಳುವದಕ್ಕಾಗಿ ಕಂಚಿನ ಬೋಗುಣಿಯನ್ನು ಮಾಡಿಸಿ ಅದಕ್ಕೆ ಕಂಚಿನ ಪೀಠವನ್ನೂ ಮಾಡಿಸಿ, ಅದನ್ನು ದೇವದರ್ಶನದ ಗುಡಾರ ಮತ್ತು ಬಲಿಪೀಠದ ಮಧ್ಯದಲ್ಲಿಟ್ಟು, ಅದರಲ್ಲಿ ನೀರನ್ನು ತುಂಬಿಸಿಡಬೇಕು. ಅಧ್ಯಾಯವನ್ನು ನೋಡಿ |