Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 30:23 - ಕನ್ನಡ ಸತ್ಯವೇದವು J.V. (BSI)

23 ನೀನು ಮುಖ್ಯವಾದ ಸುಗಂಧದ್ರವ್ಯಗಳಲ್ಲಿ ದೇವರ ಸೇವೆಗೆ ನೇಮಕವಾದ ತೂಕದ ಮೇರೆಗೆ ಐನೂರು ತೊಲೆ ಅಚ್ಚ ರಕ್ತಬೋಳ, ಇನ್ನೂರೈವತ್ತು ತೊಲೆ ಶ್ರೇಷ್ಠವಾದ ಲವಂಗಚಕ್ಕೆ, ಇನ್ನೂರೈವತ್ತು ತೊಲೆ ಸುಗಂಧವಾದ ಬಜೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 “ನೀನು ಸುಗಂಧದ್ರವ್ಯಗಳಲ್ಲಿ ದೇವರ ಸೇವೆಗೆ ನೇಮಕವಾದ ತೂಕದ ಮೇರೆಗೆ ಐನೂರು ಶೆಕೆಲ್ ಅಚ್ಚರಕ್ತಬೋಳ, ಅದರರ್ಧ ಅಂದರೆ ಇನ್ನೂರೈವತ್ತು ಶೆಕೆಲ್ ಶ್ರೇಷ್ಠವಾದ ಲವಂಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 “ಸುಗಂಧ ದ್ರವ್ಯಗಳಲ್ಲಿ ದೇವರ ಸೇವೆಗೆ ನೇಮಕವಾದ ತೂಕದ ಮೇರೆಗೆ ಆರು ಕಿಲೋಗ್ರಾಂ ಅಚ್ಚರಕ್ತಬೋಳ, ಮೂರು ಕಿಲೋಗ್ರಾಂ ಶ್ರೇಷ್ಠವಾದ ಲವಂಗಚಕ್ಕೆ, ಮೂರು ಕಿಲೋಗ್ರಾಂ ಸುಗಂಧವಾದ ಬಜೆ ಹಾಗು ಆರು ಕಿಲೋಗ್ರಾಂ ದಾಲ್ಚಿನ್ನಿಯನ್ನು ತೆಗೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ಶ್ರೇಷ್ಠವಾದ ಸುಗಂಧದ್ರವ್ಯಗಳನ್ನು ಮಾಡಿಸು. ಹನ್ನೆರಡು ಪೌಂಡುಗಳಷ್ಟು ಅಚ್ಚ ರಕ್ತಬೋಳ, ಅದರ ಅರ್ಧದಷ್ಟು ಅಂದರೆ ಆರು ಪೌಂಡು ಸುವಾಸನೆಯುಳ್ಳ ದಾಲ್ಚಿನ್ನಿ, ಹನ್ನೆರಡು ಪೌಂಡುಗಳಷ್ಟು ಸುವಾಸನೆಯುಳ್ಳ ಬಜೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 “ಉತ್ತಮವಾದ ತೈಲಗಳನ್ನು ಆರು ಕಿಲೋಗ್ರಾಂ ಸ್ವಚ್ಛವಾದ ರಕ್ತಬೋಳವು, ಇದರ ಅರ್ಧದಷ್ಟು ಮೂರು ಕಿಲೋಗ್ರಾಂ ಸುಗಂಧವಾದ ಲವಂಗಚಕ್ಕೆಯನ್ನು ಮತ್ತು ಮೂರು ಕಿಲೋಗ್ರಾಂ ಸುಗಂಧವಾದ ಬಜೆಯನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 30:23
20 ತಿಳಿವುಗಳ ಹೋಲಿಕೆ  

ವೆದಾನಿನವರೂ ಯಾವಾನಿನವರೂ ಊಜಾಲಿನಿಂದ ನಾನಾ ಸನುಗುಗಳನ್ನು ತಂದು ನಿನಗೆ ಒಪ್ಪಿಸಿದರು. ಉಕ್ಕುಬಜೆಲವಂಗಚಕ್ಕೆಗಳು ನಿನಗೆ ಆಮದಾದವು.


ಜಟಾಮಾಂಸಿ, ಕುಂಕುಮ, ಬಜೆ, ಲವಂಗಚಕ್ಕೆ, ಸಮಸ್ತವಿಧಧೂಪ, ರಕ್ತಬೋಳ, ಅಗುರು, ಸಕಲ ಮುಖ್ಯ ಮುಖ್ಯ ಸುಗಂಧದ್ರವ್ಯ ಇವುಗಳೇ ಚಿಗುರುತ್ತವೆ.


ಶೆಬದವರೂ ರಗ್ಮದವರೂ ನಿನ್ನ ಕಡೆಯ ವರ್ತಕರಾಗಿ ಕನಕ ಮುಖ್ಯ ಮುಖ್ಯ ಸುಗಂಧದ್ರವ್ಯ ಸಮಾಸ್ತಾಮೂಲ್ಯರತ್ನ ಈ ಸರಕುಗಳನ್ನು ನಿನಗೋಸ್ಕರ ತಂದರು.


ನೀವು ಶೆಬದ ಧೂಪವನ್ನೂ ದೂರದೇಶದ ಒಳ್ಳೆ ಬಜೆಯನ್ನೂ ನನಗೆ ಅರ್ಪಿಸುವದರಿಂದ ಏನು ಪ್ರಯೋಜನ? ನಿಮ್ಮ ಹೋಮಗಳು ನನಗೆ ಮೆಚ್ಚಿಕೆಯಲ್ಲ, ನಿಮ್ಮ ಯಜ್ಞಗಳು ನನಗೆ ಇಷ್ಟವಲ್ಲ.


ಎನ್ನಿನಿಯನು ನನ್ನ ಸ್ತನಗಳ ಮಧ್ಯದಲ್ಲಿನ ರಕ್ತಬೋಳದ ಚೀಲ;


ನಿನ್ನ ತೈಲವು ಸುಗಂಧ; ನಿನ್ನ ಹೆಸರು ಸುರಿದ ತೈಲದ ಸುಗಂಧದಂತೆ ವ್ಯಾಪಿಸಿರುವದರಿಂದ ತರುಣಿಯರು ನಿನ್ನನ್ನು ಪ್ರೀತಿಸುವರು.


ಹಾಸಿಗೆಯ ಮೇಲೆ ರಕ್ತಬೋಳ, ಅಗುರು, ಲವಂಗ, ಚಕ್ಕೆ, ಇವುಗಳ ಚೂರ್ಣವನ್ನು ಉದರಿಸಿದ್ದೇನೆ.


ನಿನ್ನ ದಿವ್ಯಾಂಬರಗಳು ರಕ್ತಬೋಳ ಅಗರು ಚಂದನಗಳಿಂದ ಎಷ್ಟೋ ಸುವಾಸನೆಯುಳ್ಳವುಗಳಾಗಿವೆ; ಗಜದಂತಮಂದಿರಗಳೊಳಗೆ ಉತ್ಕೃಷ್ಟವಾದ್ಯಗಳು ನಿನ್ನನ್ನು ಆನಂದಗೊಳಿಸುವವು.


ಅದಲ್ಲದೆ ಅವನು ದೇವರ ಸೇವೆಗೆ ನೇಮಕವಾದ ಪಟ್ಟಾಭಿಷೇಕತೈಲವನ್ನೂ ಪರಿಮಳ ದ್ರವ್ಯಗಳಿಂದುಂಟಾದ ಸ್ವಚ್ಫವಾದ ಧೂಪದ್ರವ್ಯವನ್ನೂ ಸುಗಂಧದ್ರವ್ಯಕಾರರ ವಿದ್ಯೆಯ ಮೇರೆಗೆ ಮಾಡಿದನು.


ದೀಪಕ್ಕೆ ಬೇಕಾದ ಎಣ್ಣೆಯೂ ಅಭಿಷೇಕತೈಲಕ್ಕೆ ಮತ್ತು ಪರಿಮಳಧೂಪಕ್ಕೆ ಬೇಕಾದ ಸುವಾಸನಾದ್ರವ್ಯಗಳೂ


ಅದಲ್ಲದೆ ಯೆಹೋವನು ಮೋಶೆಗೆ ಹೇಳಿದ್ದೇನಂದರೆ -


ಐನೂರು ತೊಲೆ ದಾಲ್ಚಿನ್ನಿ, ಆರುವರೆ ಸೇರು ಒಲೀವ ತೈಲ ಇವುಗಳನ್ನೆಲ್ಲಾ ತೆಗೆದುಕೊಂಡು


ಪಟ್ಟಾಭಿಷೇಕತೈಲ, ಪವಿತ್ರಸ್ಥಾನದ ಸೇವೆಗೆ ಬೇಕಾದ ಪರಿಮಳಧೂಪ ಇವುಗಳನ್ನೆಲ್ಲಾ ನಾನು ನಿನಗೆ ಆಜ್ಞಾಪಿಸಿದಂತೆಯೇ ಅವರು ಮಾಡುವರು.


ದೀಪಕ್ಕೆ ಬೇಕಾದ ಎಣ್ಣೆಯನ್ನೂ ಅಭಿಷೇಕತೈಲಕ್ಕೆ ಮತ್ತು ಪರಿಮಳಧೂಪಕ್ಕೆ ಬೇಕಾದ ಸುಗಂಧದ್ರವ್ಯಗಳನ್ನೂ ತಂದುಕೊಟ್ಟರು.


ಆ ಆಳು ಮುಂದೆ ಹೋದಾಗ ಸಮುವೇಲನು ಎಣ್ಣೇ ಕುಪ್ಪಿಯಿಂದ ಅವನ ತಲೆಯ ಮೇಲೆ ತೈಲವನ್ನು ಹೊಯ್ದು ಅವನನ್ನು ಮುದ್ದಿಟ್ಟು ಅವನಿಗೆ - ಯೆಹೋವನು ತನ್ನ ಸ್ವಾಸ್ತ್ಯದ ಮೇಲೆ ಪ್ರಭುವಾಗಿರುವದಕ್ಕೋಸ್ಕರ ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ.


ಯಾಜಕನಾದ ಚಾದೋಕನು ದೇವದರ್ಶನದ ಗುಡಾರದಲ್ಲಿರುವ ಎಣ್ಣೆಯ ಕೊಂಬನ್ನು ತೆಗೆದುಕೊಂಡು ಸೊಲೊಮೋನನನ್ನು ಅಭಿಷೇಕಿಸಿದನು. ಕೂಡಲೆ ಕೊಂಬನ್ನೂದಿ ಎಲ್ಲಾ ಜನರು - ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ ಎಂದು ಆರ್ಭಟಿಸಿದರು.


ಯಾಜಕಸಂತಾನದವರಲ್ಲಿ ಕೆಲವರು ಪರಿಮಳದ್ರವ್ಯಗಳಿಂದ ತೈಲಮಾಡುತ್ತಿದ್ದರು.


ನೀನು ನನಗೋಸ್ಕರ ಹಣಕೊಟ್ಟು ಬಜೆಯನ್ನು ತರಲಿಲ್ಲ, ಯಜ್ಞಪಶುಗಳ ವಪೆಯಿಂದ ನನ್ನನ್ನು ತೃಪ್ತಿಪಡಿಸಲಿಲ್ಲ; ಆದರೆ ನಿನ್ನ ಪಾಪಗಳಿಂದ ನನ್ನನ್ನು ನೀನು ತೊಂದರೆಪಡಿಸಿದ್ದೀ, ನಿನ್ನ ದೋಷಗಳಿಂದ ನನ್ನನ್ನು ಬೇಸರಗೊಳಿಸಿದ್ದೀ.


ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ದೀಪದ ಎಣ್ಣೆಯನ್ನೂ ಪರಿಮಳಧೂಪವನ್ನೂ ನಿತ್ಯವಾಗಿ ನೈವೇದ್ಯ ಮಾಡುವ ಧಾನ್ಯದ್ರವ್ಯವನ್ನೂ ಅಭೀಷೇಕ ತೈಲವನ್ನೂ ತನ್ನ ವಶದಲ್ಲಿ ಇಟ್ಟುಕೊಳ್ಳಬೇಕು. ಅದಲ್ಲದೆ ದೇವದರ್ಶನದ ಗುಡಾರದ ಎಲ್ಲಾ ಭಾಗಗಳೂ ಅದರಲ್ಲಿಯೂ ಅದರ ಪಾತ್ರೆಗಳಲ್ಲಿಯೂ ಇರುವ ಸಮಸ್ತ ವಸ್ತುಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು.


ಇನ್ನು ಕೆಲವರು ದೇವಾಲಯದ ಎಲ್ಲಾ ಸಾಮಾನುಗಳ ಮೇಲ್ವಿಚಾರಕರೂ ಗೋದಿಹಿಟ್ಟು, ದ್ರಾಕ್ಷಾರಸ, ಎಣ್ಣೆ, ಧೂಪ, ಪರಿಮಳದ್ರವ್ಯ ಇವುಗಳ ಪಾರುಪತ್ಯಗಾರರು ಆಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು