Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 30:3 - ಕನ್ನಡ ಸತ್ಯವೇದವು J.V. (BSI)

3 ಅದರ ಮೇಲ್ಭಾಗಕ್ಕೂ ನಾಲ್ಕು ಪಕ್ಕಗಳಿಗೂ ಕೊಂಬುಗಳಿಗೂ ಚೊಕ್ಕ ಬಂಗಾರದ ತಗಡುಗಳನ್ನು ಹೊದಿಸಬೇಕು. ಸುತ್ತಲೂ ಚಿನ್ನದ ಗೋಟು ಕಟ್ಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅದರ ಮೇಲ್ಭಾಗಕ್ಕೆ, ನಾಲ್ಕು ಬದಿಗಳಿಗೆ ಹಾಗೂ ಕೊಂಬುಗಳಿಗೆ, ಚೊಕ್ಕ ಬಂಗಾರದ ತಗಡುಗಳನ್ನು ಹೊದಿಸಬೇಕು. ಸುತ್ತಲೂ ಚಿನ್ನದ ಅರುಗನ್ನು (ಅಂಚು) ಕಟ್ಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅದರ ಮೇಲ್ಭಾಗಕ್ಕೂ, ನಾಲ್ಕು ಪಕ್ಕಗಳಿಗೂ ಹಾಗು ಕೊಂಬುಗಳಿಗೂ ಚೊಕ್ಕಬಂಗಾರದ ತಗಡುಗಳನ್ನು ಹೊದಿಸಬೇಕು. ಸುತ್ತಲು ಚಿನ್ನದ ತೋರಣ ಕಟ್ಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಧೂಪವೇದಿಕೆಯ ಮೇಲ್ಭಾಗವನ್ನೂ ಎಲ್ಲಾ ಪಾರ್ಶ್ವಗಳನ್ನೂ ಅದರ ಕೊಂಬುಗಳನ್ನೂ ಶುದ್ಧಬಂಗಾರದ ತಗಡಿನಿಂದ ಹೊದಿಸಬೇಕು ಮತ್ತು ಸುತ್ತಲೂ ಚಿನ್ನದ ಕಟ್ಟನ್ನು ಕಟ್ಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅದರ ಮೇಲ್ಭಾಗವನ್ನೂ ಅದರ ಸುತ್ತಲಿನ ಬದಿಗಳನ್ನೂ ಕೊಂಬುಗಳನ್ನೂ ಶುದ್ಧ ಬಂಗಾರದಿಂದ ಹೊದಿಸಿ, ಅದರ ಸುತ್ತಲೂ ಬಂಗಾರದ ಗೋಟನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 30:3
8 ತಿಳಿವುಗಳ ಹೋಲಿಕೆ  

ಅದಕ್ಕೆ ಚೊಕ್ಕ ಬಂಗಾರದ ತಗಡುಗಳನ್ನು ಹೊದಿಸಿ ಸುತ್ತಲೂ ಚಿನ್ನದ ಗೋಟು ಕಟ್ಟಿಸಬೇಕು.


ಚೊಕ್ಕಬಂಗಾರದ ತಗಡುಗಳನ್ನು ಅದರ ಹೊರಗಡೆಯೂ ಒಳಗಡೆಯೂ ಹೊದಿಸಬೇಕು. ಅದರ ಮೇಲೆ ಸುತ್ತಲೂ ಚಿನ್ನದ ಗೋಟು ಕಟ್ಟಿಸಬೇಕು.


ಆಮೇಲೆ ಮತ್ತೊಬ್ಬ ದೇವದೂತನು ಬಂದು ಯಜ್ಞವೇದಿಯ ಬಳಿಯಲ್ಲಿ ನಿಂತನು; ಅವನ ಕೈಯಲ್ಲಿ ಚಿನ್ನದ ಧೂಪಾರತಿ ಇತ್ತು. ಸಿಂಹಾಸನದ ಮುಂದಣ ಚಿನ್ನದ ಧೂಪವೇದಿಯ ಮೇಲೆ ದೇವಜನರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಸಮರ್ಪಿಸುವದಕ್ಕಾಗಿ ಅವನಿಗೆ ಬಹಳ ಧೂಪ ಕೊಡಲ್ಪಟ್ಟಿತು.


ಅದು ಒಂದು ಮೊಳ ಉದ್ದವಾಗಿಯೂ ಒಂದು ಮೊಳ ಅಗಲವಾಗಿಯೂ ಚಚ್ಚೌಕವಾಗಿರಬೇಕು; ಅದರ ಎತ್ತರವು ಎರಡು ಮೊಳವಾಗಿರಬೇಕು. ಅದರ ಕೊಂಬುಗಳು ಅದರೊಂದಿಗೆ ಏಕವಾಗಿರಬೇಕು.


ಅದರ ಕೆಳಗೆ ವೇದಿಯ ಎರಡು ಪಾರ್ಶ್ವಗಳಲ್ಲಿ ಎರಡೆರಡು ಚಿನ್ನದ ಬಳೆಗಳನ್ನು ಮೂಲೆಗಳಲ್ಲಿಯೇ ಹಾಕಿಸಬೇಕು. ವೇದಿಯನ್ನು ಹೊರುವದಕ್ಕೆ ಕೋಲುಗಳನ್ನು ಅವುಗಳಲ್ಲಿ ಸೇರಿಸಬೇಕು.


ದೇವಾಲಯದ ಎಲ್ಲಾ ಗೋಡೆಗಳನ್ನೂ ಮಹಾಪರಿಶುದ್ಧಸ್ಥಳಕ್ಕೆ ಸೇರಿದ ವೇದಿಯನ್ನೂ ಪೂರ್ಣವಾಗಿ ಬಂಗಾರದ ತಗಡಿನಿಂದ ಹೊದಿಸಿದನು.


ಆ ಗರ್ಭಗೃಹವು ಇಪ್ಪತ್ತು ಮೊಳ ಉದ್ದವೂ ಇಪ್ಪತ್ತು ಮೊಳ ಅಗಲವೂ ಇಪ್ಪತ್ತು ಮೊಳ ಎತ್ತರವೂ ಇತ್ತು. ಅದನ್ನು ಚೊಕ್ಕ ಬಂಗಾರದ ತಗಡಿನಿಂದಲೂ ವೇದಿಯನ್ನು ದೇವದಾರುಮರದಿಂದಲೂ ಹೊದಿಸಿದನು.


ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಮಾಡಿಸಿದ ಒಳಗಿನ ಸಾಮಾನುಗಳು ಯಾವವಂದರೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು