Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 30:34 - ಕನ್ನಡ ಸತ್ಯವೇದವು J.V. (BSI)

34 ಅದಲ್ಲದೆ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನಂದರೆ - ನೀನು ಹಾಲು ಮಡ್ಡಿ, ಗುಗ್ಗುಲ, ಗಂಧದ ಚೆಕ್ಕೆ ಎಂಬ ಪರಿಮಳದ್ರವ್ಯಗಳನ್ನೂ ಸ್ವಚ್ಫವಾದ ಧೂಪವನ್ನೂ ಸಮಭಾಗವಾಗಿ ತೆಗೆದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಅದಲ್ಲದೆ ಯೆಹೋವನು ಮೋಶೆಗೆ ಆಜ್ಞಾಪಿಸಿದ್ದೇನೆಂದರೆ, “ನೀನು ಹಾಲುಮಡ್ಡಿ, ಗುಗ್ಗುಲ ಹಾಗೂ ಗಂಧದ ಚೆಕ್ಕೆ ಎಂಬ ಪರಿಮಳ ದ್ರವ್ಯಗಳನ್ನು ಸ್ವಚ್ಛವಾದ ಧೂಪವನ್ನೂ ಸಮಭಾಗವಾಗಿ ತೆಗೆದುಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಸರ್ವೇಶ್ವರ ಮೋಶೆಗೆ ಮತ್ತೆ ಆಜ್ಞಾಪಿಸಿದ್ದೇನೆಂದರೆ: “ನೀನು ಹಾಲುಮಡ್ಡಿ, ಗುಗ್ಗುಲ ಹಾಗು ಗಂಧದಚೆಕ್ಕೆ ಎಂಬ ಪರಿಮಳ ದ್ರವ್ಯಗಳನ್ನು ಮತ್ತು ಸ್ವಚ್ಚವಾದ ಧೂಪವನ್ನು ಸಮಭಾಗವಾಗಿ ತೆಗೆದುಕೊಂಡು ಸುವಾಸನೆಯುಳ್ಳ ಬುಕ್ಕಿಟ್ಟಾಗಿರುವಂತೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಬಳಿಕ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ನೀನು ಹಾಲುಮಡ್ಡಿ, ಗುಗ್ಗುಲ, ಗಂಧದ ಚೆಕ್ಕೆ ಎಂಬ ಸುಗಂಧ ದ್ರವ್ಯಗಳನ್ನು ಸಮವಾಗಿ ತೆಗೆದುಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಯೆಹೋವ ದೇವರು ಮೋಶೆಗೆ, “ನೀನು ಹಾಲು ಮಡ್ಡಿ, ಗುಗ್ಗಲ ಹಾಗೂ ಗಂಧದ ಚಕ್ಕೆ ಎಂಬ ಪರಿಮಳಗಳನ್ನೂ ಶುದ್ಧವಾದ ಸಾಮ್ರಾಣಿಯನ್ನೂ ತೆಗೆದುಕೋ. ಅವು ಸಮತೂಕವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 30:34
20 ತಿಳಿವುಗಳ ಹೋಲಿಕೆ  

ಅದಲ್ಲದೆ ಅವನು ದೇವರ ಸೇವೆಗೆ ನೇಮಕವಾದ ಪಟ್ಟಾಭಿಷೇಕತೈಲವನ್ನೂ ಪರಿಮಳ ದ್ರವ್ಯಗಳಿಂದುಂಟಾದ ಸ್ವಚ್ಫವಾದ ಧೂಪದ್ರವ್ಯವನ್ನೂ ಸುಗಂಧದ್ರವ್ಯಕಾರರ ವಿದ್ಯೆಯ ಮೇರೆಗೆ ಮಾಡಿದನು.


ಅದು ನೈವೇದ್ಯ ವಸ್ತುವಾದದರಿಂದ ಅದರ ಮೇಲೆ ಎಣ್ಣೆ ಹೊಯಿದು ಧೂಪವಿಡಬೇಕು.


ನೀನು ಮುಖ್ಯವಾದ ಸುಗಂಧದ್ರವ್ಯಗಳಲ್ಲಿ ದೇವರ ಸೇವೆಗೆ ನೇಮಕವಾದ ತೂಕದ ಮೇರೆಗೆ ಐನೂರು ತೊಲೆ ಅಚ್ಚ ರಕ್ತಬೋಳ, ಇನ್ನೂರೈವತ್ತು ತೊಲೆ ಶ್ರೇಷ್ಠವಾದ ಲವಂಗಚಕ್ಕೆ, ಇನ್ನೂರೈವತ್ತು ತೊಲೆ ಸುಗಂಧವಾದ ಬಜೆ,


ದೀಪಕ್ಕೆ ಬೇಕಾದ ಎಣ್ಣೆಯೂ ಅಭಿಷೇಕತೈಲಕ್ಕೆ ಮತ್ತು ಪರಿಮಳಧೂಪಕ್ಕೆ ಬೇಕಾದ ಸುವಾಸನಾದ್ರವ್ಯಗಳೂ


ಮತ್ತು ಆ ಮನೆಯೊಳಕ್ಕೆ ಹೋಗಿ ಆ ಕೂಸನ್ನು ಅದರ ತಾಯಿಯಾದ ಮರಿಯಳ ಬಳಿಯಲ್ಲಿ ಕಂಡು ಅದಕ್ಕೆ ಸಾಷ್ಟಾಂಗನಮಸ್ಕಾರ ಮಾಡಿ ತಮ್ಮ ಗಂಟುಗಳನ್ನು ಬಿಚ್ಚಿ ಅದಕ್ಕೆ ಚಿನ್ನ ಧೂಪ ರಕ್ತಬೋಳಗಳನ್ನು ಕಾಣಿಕೆಯಾಗಿ ಕೊಟ್ಟರು.


ರಕ್ತಬೋಳ, ಧೂಪ, ವರ್ತಕರ ಸಕಲಸುಗಂಧ ದ್ರವ್ಯಗಳನ್ನು ಧೂಪಿಸಿದ ಧೂಮಸ್ತಂಭಗಳಂತೆ ಅರಣ್ಯದಿಂದ ಬರುವ ಈ ಮೆರವಣಿಗೆ ಯಾರದು?


ಇವನು ಟೋಬೀಯನ ಬೀಗನಾಗಿದ್ದದರಿಂದ ನೈವೇದ್ಯದ್ರವ್ಯ ಧೂಪ ಪಾತ್ರೆ ಇವುಗಳನ್ನೂ ಧಾನ್ಯ ದ್ರಾಕ್ಷಾರಸ ಎಣ್ಣೆ ಇವುಗಳ ದಶಮಾಂಶವನ್ನೂ ಲೇವಿಯ ಗಾಯಕ ದ್ವಾರಪಾಲಕ ಇವರಿಗೆ ಸಲ್ಲತಕ್ಕ ಪದಾರ್ಥಗಳನ್ನೂ ಯಾಜಕರಿಗೋಸ್ಕರ ಪ್ರತ್ಯೇಕಿಸತಕ್ಕ ಪದಾರ್ಥಗಳನ್ನೂ ಇಡುವದಕ್ಕಾಗಿ ಉಪಯೋಗವಾಗುತ್ತಿದ್ದ ಕೊಠಡಿಯನ್ನು ಅವನಿಗೋಸ್ಕರ ಸಿದ್ಧಮಾಡಿಸಿ ಕೊಟ್ಟಿದ್ದನು.


ಒಂದೊಂದು ರಾಶಿಯ ಮೇಲೆ ಸ್ವಚ್ಫವಾದ ಧೂಪವನ್ನು ಇಡಬೇಕು. ಆ ರೊಟ್ಟಿಗಳ ನೈವೇದ್ಯವನ್ನು ಸೂಚಿಸುವದಕ್ಕಾಗಿ ಆ ಧೂಪವೇ ಯೆಹೋವನಿಗೆ ಹೋಮಮಾಡಲ್ಪಡಬೇಕು.


ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ಕೊಡುವದಕ್ಕೂ ಗತಿಯಿಲ್ಲದೆ ಹೋದರೆ ಅವನು ದೋಷಪರಿಹಾರಕ್ಕಾಗಿ ಮೂರು ಸೇರು ಗೋದಿಹಿಟ್ಟನ್ನು ತರಬೇಕು. ಆ ಹೋಮದ್ರವ್ಯವು ದೋಷಪರಿಹಾರಾರ್ಥವಾದ್ದರಿಂದ ಅದರ ಮೇಲೆ ಎಣ್ಣೆಯನ್ನು ಹೊಯ್ಯಕೂಡದು, ಧೂಪವನ್ನು ಇಡಕೂಡದು.


ಯಾವನಾದರೂ ಯೆಹೋವನಿಗೆ ಧಾನ್ಯ ನೈವೇದ್ಯ ಮಾಡಬೇಕೆಂದಿದ್ದರೆ ಅದು ಗೋದಿಹಿಟ್ಟಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಹೊಯಿದು ಧೂಪವನ್ನಿಟ್ಟು


ಇದರಂತೆ ತೈಲವನ್ನು ಮಾಡುವವನಾಗಲಿ ಇದನ್ನು ಯಾಜಕನಲ್ಲದವನ ಮೇಲೆ ಹಚ್ಚುವವನಾಗಲಿ ತನ್ನ ಕುಲದಿಂದ ತೆಗೆದುಹಾಕಲ್ಪಡಬೇಕು.


ಸುವಾಸನೆಯುಳ್ಳ ಬುಕ್ಕಿಟ್ಟಾಗಿರುವಂತೆ ಸುಗಂಧದ್ರವ್ಯಕಾರರ ವಿದ್ಯೆಯ ಮೇರೆಗೆ ಕಲಸಿ ಉಪ್ಪು ಹಾಕಿ ದೇವರ ಸೇವೆಗೆ ಸ್ವಚ್ಫವಾದ ಧೂಪದ್ರವ್ಯವನ್ನು ಮಾಡಿಸಬೇಕು.


ಪಟ್ಟಾಭಿಷೇಕತೈಲ, ಪವಿತ್ರಸ್ಥಾನದ ಸೇವೆಗೆ ಬೇಕಾದ ಪರಿಮಳಧೂಪ ಇವುಗಳನ್ನೆಲ್ಲಾ ನಾನು ನಿನಗೆ ಆಜ್ಞಾಪಿಸಿದಂತೆಯೇ ಅವರು ಮಾಡುವರು.


ಅಭಿಷೇಕ ತೈಲ, ಪರಿಮಳ ಧೂಪದ್ರವ್ಯ, ಗುಡಾರದ ಬಾಗಲಿನ ಪರದೆ,


ಅವನು ತನಗೋಸ್ಕರವಾದ ಹೋರಿಯನ್ನು ವಧಿಸಿದ ಮೇಲೆ ಯೆಹೋವನ ಸನ್ನಿಧಿಯಲ್ಲಿರುವ ವೇದಿಯಿಂದ ಕೆಂಡಗಳನ್ನು ಧೂಪಾರತಿಯಲ್ಲಿ ತುಂಬಿಸಿ ಪರಿಮಳಧೂಪದ್ರವ್ಯದ ಚೂರ್ಣದಲ್ಲಿ ಎರಡು ಹಿಡಿ ತೆಗೆದುಕೊಂಡು ತೆರೆಯನ್ನು ದಾಟಿ


ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ದೀಪದ ಎಣ್ಣೆಯನ್ನೂ ಪರಿಮಳಧೂಪವನ್ನೂ ನಿತ್ಯವಾಗಿ ನೈವೇದ್ಯ ಮಾಡುವ ಧಾನ್ಯದ್ರವ್ಯವನ್ನೂ ಅಭೀಷೇಕ ತೈಲವನ್ನೂ ತನ್ನ ವಶದಲ್ಲಿ ಇಟ್ಟುಕೊಳ್ಳಬೇಕು. ಅದಲ್ಲದೆ ದೇವದರ್ಶನದ ಗುಡಾರದ ಎಲ್ಲಾ ಭಾಗಗಳೂ ಅದರಲ್ಲಿಯೂ ಅದರ ಪಾತ್ರೆಗಳಲ್ಲಿಯೂ ಇರುವ ಸಮಸ್ತ ವಸ್ತುಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು.


ನೀನು ನನಗೆ ಹೋಮಕ್ಕಾಗಿ ಕುರಿಮೇಕೆಗಳನ್ನು ತಂದು ಯಜ್ಞಗಳಿಂದ ನನ್ನನ್ನು ಘನಪಡಿಸಲಿಲ್ಲ, ನೈವೇದ್ಯಕ್ಕಾಗಿ ನಿನ್ನನ್ನು ನಾನು ತೊಂದರೆಪಡಿಸಲಿಲ್ಲ, ಧೂಪಕ್ಕಾಗಿ ನಿನ್ನನ್ನು ಬೇಸರಗೊಳಿಸಲಿಲ್ಲ.


ಆರೋನನು ಪ್ರತಿನಿತ್ಯವೂ ಹೊತ್ತಾರೆಯಲ್ಲಿ ದೀಪಗಳನ್ನು ಸರಿಪಡಿಸುವಾಗಲೂ


ಧೂಪದ್ರವ್ಯ ತುಂಬಿದ್ದ ಹತ್ತು ತೊಲೆ ತೂಕವುಳ್ಳ ಚಿನ್ನದ ಧೂಪಾರತಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು