Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 30:38 - ಕನ್ನಡ ಸತ್ಯವೇದವು J.V. (BSI)

38 ಸುವಾಸನೆಗೋಸ್ಕರ ಅಂಥದನ್ನು ಮಾಡಿಕೊಳ್ಳುವವನು ತನ್ನ ಕುಲದಿಂದ ತೆಗೆದುಹಾಕಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಸುವಾಸನೆಗೋಸ್ಕರ ಅಂಥದನ್ನು ಮಾಡಿಕೊಳ್ಳುವವನು ತನ್ನ ಕುಲದಿಂದ ಬಹಿಷ್ಕಾರಕ್ಕೆ ಗುರಿಯಾಗುವನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಕೇವಲ ಸುವಾಸನೆಗಾಗಿ ಅಂಥದ್ದನ್ನು ಮಾಡಿಕೊಳ್ಳುವವನನ್ನು ಅವನ ಕುಲದಿಂದ ಬಹಿಷ್ಕರಿಸಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಸುವಾಸನೆಗೋಸ್ಕರ ಒಬ್ಬನು ತನಗಾಗಿ ಸ್ವಲ್ಪ ಧೂಪವನ್ನು ಈ ರೀತಿಯಲ್ಲಿ ಮಾಡಿದರೆ ಅವನನ್ನು ಅವನ ಕುಲದಿಂದ ಬಹಿಷ್ಕರಿಸಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಸುವಾಸನೆಗಾಗಿ ಅದನ್ನು ಮಾಡಿಕೊಳ್ಳುವವನನ್ನು ಅವನ ಕುಲದಿಂದ ಬಹಿಷ್ಕರಿಸಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 30:38
9 ತಿಳಿವುಗಳ ಹೋಲಿಕೆ  

ಇದರಂತೆ ತೈಲವನ್ನು ಮಾಡುವವನಾಗಲಿ ಇದನ್ನು ಯಾಜಕನಲ್ಲದವನ ಮೇಲೆ ಹಚ್ಚುವವನಾಗಲಿ ತನ್ನ ಕುಲದಿಂದ ತೆಗೆದುಹಾಕಲ್ಪಡಬೇಕು.


ಯೆಹೋವನು ಮೋಶೆಗೆ ಹೀಗಂದನು -


ಸುನ್ನತಿ ಮಾಡಿಸಿಕೊಳ್ಳದ ಗಂಡಸು ನನ್ನ ಒಡಂಬಡಿಕೆಯನ್ನು ಮೀರಿದವನಾದ ಕಾರಣ ಅವನು ಕುಲದಿಂದ ತೆಗೆದುಹಾಕಲ್ಪಡಬೇಕು ಎಂದು ಹೇಳಿದನು.


ಏಳು ದಿವಸ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನೆಲ್ಲಾ ನಿಮ್ಮ ಮನೆಗಳೊಳಗಿಂದ ತೆಗೆದುಬಿಡಬೇಕು. ಆ ದಿವಸ ಮೊದಲುಗೊಂಡು ಏಳು ದಿವಸಗಳೊಳಗೆ ಯಾವನಾದರೂ ಹುಳಿಬೆರಸಿದ್ದನ್ನು ತಿಂದರೆ ಅವನು ಇಸ್ರಾಯೇಲ್ಯರಿಂದ ತೆಗೆದು ಹಾಕಲ್ಪಡಬೇಕು.


ಆದಕಾರಣ ನೀವು ಸಬ್ಬತ್ ದಿನವನ್ನು ದೇವರ ದಿನವೆಂದು ಭಾವಿಸಿ ಆಚರಿಸಬೇಕು. ಅದನ್ನು ಅಪರಿಶುದ್ಧವಾದದ್ದೆಂದು ಎಣಿಸಿ ನಡೆದವನಿಗೆ ಮರಣಶಿಕ್ಷೆಯಾಗಬೇಕು. ಆ ದಿನದಲ್ಲಿ ಕೆಲಸವೇನಾದರೂ ಮಾಡುವವನು ತನ್ನ ಕುಲದಿಂದ ತೆಗೆದುಹಾಕಲ್ಪಡಬೇಕು.


ಯಾವನಾದರೂ ಅಶುದ್ಧನಾಗಿದ್ದು ಯೆಹೋವನಿಗೆ ಸಮರ್ಪಿತವಾದ ಸಮಾಧಾನಯಜ್ಞಪಶುವಿನ ಮಾಂಸವನ್ನು ತಿಂದರೆ ಅವನು ತನ್ನ ಕುಲದಿಂದ ತೆಗೆದುಹಾಕಲ್ಪಡಬೇಕು.


ಪಾಳೆಯದ ಒಳಗಾಗಲಿ ಹೊರಗಾಗಲಿ ಕೊಯಿದರೆ ಅವನನ್ನು ಕೊಲೆಪಾತಕ ಮಾಡಿದವನೆಂದು ನೀವು ನಿರ್ಣಯಿಸಬೇಕು. ಅವನು ರಕ್ತವನ್ನು ಸುರಿಸಿದವನಾದದರಿಂದ ಕುಲದಿಂದ ತೆಗೆದುಹಾಕಲ್ಪಡಬೇಕು.


ಕೆಹಾತ್ಯರ ಗೋತ್ರ ಕುಟುಂಬಗಳವರು ಲೇವಿಯರೊಳಗೆ ಉಳಿಯದೆ ನಾಶವಾಗುವದಕ್ಕೆ ಆಸ್ಪದಕೊಡಬೇಡಿರಿ.


ಆದರೆ ಯಾವನಾದರೂ ಶುದ್ಧನಾಗಿಯೂ ಪ್ರಯಾಣಮಾಡದೆಯೂ ಇದ್ದು ಪಸ್ಕಹಬ್ಬವನ್ನು ಆಚರಿಸದೆ ತಪ್ಪಿದರೆ ಅವನು ತನ್ನ ಕುಲದಿಂದ ತೆಗೆದುಹಾಕಲ್ಪಡಬೇಕು. ಅವನು ಯೆಹೋವನಿಂದ ನೇವಿುತವಾದ ಯಜ್ಞವನ್ನು ಗೊತ್ತಾದ ಕಾಲದಲ್ಲಿ ಸಮರ್ಪಿಸದೆ ಹೋದದರಿಂದ ತನ್ನ ದೋಷಫಲವನ್ನು ಅನುಭವಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು