ವಿಮೋಚನಕಾಂಡ 30:7 - ಕನ್ನಡ ಸತ್ಯವೇದವು J.V. (BSI)7 ಆರೋನನು ಪ್ರತಿನಿತ್ಯವೂ ಹೊತ್ತಾರೆಯಲ್ಲಿ ದೀಪಗಳನ್ನು ಸರಿಪಡಿಸುವಾಗಲೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 “ಆರೋನನು ಪ್ರತಿನಿತ್ಯ ಹೊತ್ತಾರೆಯಲ್ಲಿ ದೀಪಗಳನ್ನು ಸರಿಪಡಿಸುವಾಗಲೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆರೋನನು ಪ್ರತಿನಿತ್ಯವು ಬೆಳಿಗ್ಗೆ ದೀಪಗಳನ್ನು ಸರಿಪಡಿಸುವಾಗ ಹಾಗು ಸಂಜೆದೀಪಗಳನ್ನು ಹೊತ್ತಿಸುವಾಗ ಆ ವೇದಿಕೆಯ ಮೇಲೆ ಸುಗಂಧದ್ರವ್ಯಗಳಿಂದ ಧೂಪವನ್ನು ಹಾಕಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 “ಆರೋನನು ಪ್ರತಿಮುಂಜಾನೆ ಧೂಪವೇದಿಕೆಯ ಮೇಲೆ ಸುಗಂಧದ್ರವ್ಯಗಳ ಧೂಪವನ್ನು ಉರಿಸಬೇಕು. ಅವನು ದೀಪಗಳನ್ನು ಸರಿಪಡಿಸಲು ಬರುವಾಗ ಇದನ್ನು ಮಾಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 “ಅದರ ಮೇಲೆ ಆರೋನನು ಪರಿಮಳ ಧೂಪವನ್ನು ಸುಡಬೇಕು. ಪ್ರತಿದಿನ ಬೆಳಿಗ್ಗೆ ಸುಡಬೇಕು. ಪ್ರತಿದಿನ ಬೆಳಿಗ್ಗೆ ದೀಪಗಳನ್ನು ಸಿದ್ಧಮಾಡುವಾಗ ಅದನ್ನು ಸುಡಬೇಕು. ಅಧ್ಯಾಯವನ್ನು ನೋಡಿ |
ಈಗ ನಾನು ನನ್ನ ದೇವರಾದ ಯೆಹೋವನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಿಸಿ ಇಸ್ರಾಯೇಲ್ಯರಿಗಿರುವ ಶಾಶ್ವತನಿಯಮದ ಪ್ರಕಾರ ಆತನ ಸನ್ನಿಧಿಯಲ್ಲಿ ಸುಗಂಧದ್ರವ್ಯಗಳಿಂದ ಧೂಪಹಾಕುವದಕ್ಕೂ ಪ್ರತಿನಿತ್ಯ ನೈವೇದ್ಯದ ರೊಟ್ಟಿಗಳನ್ನಿಡುವದಕ್ಕೂ ಪ್ರಾತಃಕಾಲ, ಸಾಯಂಕಾಲ, ಸಬ್ಬತ್‍ದಿನ, ಅಮಾವಾಸ್ಯೆ, ನಮ್ಮ ದೇವರಾದ ಯೆಹೋವನ ಜಾತ್ರೆ ಇವುಗಳಲ್ಲಿ ಸರ್ವಾಂಗ ಹೋಮವನ್ನರ್ಪಿಸುವದಕ್ಕೂ ಆ ಆಲಯವನ್ನು ಆತನಿಗೋಸ್ಕರ ಪ್ರತಿಷ್ಠಿಸಬೇಕೆಂದಿದ್ದೇನೆ.