ವಿಮೋಚನಕಾಂಡ 31:18 - ಕನ್ನಡ ಸತ್ಯವೇದವು J.V. (BSI)18 ಯೆಹೋವನು ಸೀನಾಯಿಬೆಟ್ಟದಲ್ಲಿ ಮೋಶೆಯ ಸಂಗಡ ಮಾತಾಡುವದನ್ನು ಮುಗಿಸಿದ ಮೇಲೆ ಅವನಿಗೆ ಆ ಎರಡು ಆಜ್ಞಾಶಾಸನಗಳನ್ನು ಕೊಟ್ಟನು. ಅವು ದೇವರ ಕೈಯಿಂದ ಕೆತ್ತಲ್ಪಟ್ಟ ಶಿಲಾಶಾಸನಗಳೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಯೆಹೋವನು ಸೀನಾಯಿ ಬೆಟ್ಟದಲ್ಲಿ ಮೋಶೆಯ ಸಂಗಡ ಮಾತನಾಡುವುದನ್ನು ಮುಗಿಸಿದ ಮೇಲೆ ಅವನಿಗೆ ಆ ಎರಡು ಆಜ್ಞಾಶಾಸನಗಳನ್ನು ಕೊಟ್ಟನು. ಅವು ದೇವರ ಕೈಯಿಂದ ಬರೆಯಲ್ಪಟ್ಟ ಶಿಲಾಶಾಸನಗಳಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಸರ್ವೇಶ್ವರ ಸೀನಾಯಿ ಬೆಟ್ಟದಲ್ಲಿ ಮೋಶೆಯ ಸಂಗಡ ಮಾತಾಡುವುದನ್ನು ಮುಗಿಸಿದ ಮೇಲೆ ಅವನಿಗೆ ತಮ್ಮ ಕೈಯಿಂದ ಕೆತ್ತಲ್ಪಟ್ಟ ಶಿಲಾಶಾಸನಗಳಾದ ಎರಡು ಆಜ್ಞಾಶಾಸನಗಳನ್ನು ಕೊಟ್ಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಹೀಗೆ, ಯೆಹೋವನು ಮೋಶೆಯೊಡನೆ ಸೀನಾಯಿ ಬೆಟ್ಟದಲ್ಲಿ ಮಾತಾಡುವುದನ್ನು ಮುಗಿಸಿದನು. ಬಳಿಕ ಯೆಹೋವನು ಒಡಂಬಡಿಕೆ ಬರೆಯಲ್ಪಟ್ಟಿದ್ದ ಎರಡು ಕಲ್ಲಿನ ಹಲಿಗೆಗಳನ್ನು ಮೋಶೆಗೆ ಕೊಟ್ಟನು. ಅವು ದೇವರ ಬೆರಳಿನಿಂದ ಲಿಖಿತವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಯೆಹೋವ ದೇವರು ಮೋಶೆಯ ಸಂಗಡ ಸೀನಾಯಿ ಬೆಟ್ಟದಲ್ಲಿ ಮಾತನಾಡಿ ಮುಗಿಸಿದ ಮೇಲೆ, ಅವನಿಗೆ ಸಾಕ್ಷಿಯ ಎರಡು ಹಲಗೆಗಳನ್ನೂ ದೇವರು ಬೆರಳಿನಿಂದ ಬರೆದ ಕಲ್ಲಿನ ಹಲಗೆಗಳನ್ನೂ ಕೊಟ್ಟನು. ಅಧ್ಯಾಯವನ್ನು ನೋಡಿ |