Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 31:3 - ಕನ್ನಡ ಸತ್ಯವೇದವು J.V. (BSI)

3 ರತ್ನಗಳನ್ನು ಕೆತ್ತುವದಕ್ಕೂ ಮರದಲ್ಲಿ ವಿಚಿತ್ರವಾಗಿ ಕೆತ್ತನೇ ಕೆಲಸವನ್ನು ಮಾಡುವದಕ್ಕೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಕಲಾತ್ಮಕವಾದ ವಿನ್ಯಾಸಗಳನ್ನು ಮಾಡುವುದಕ್ಕೂ, ಚಿನ್ನ, ಬೆಳ್ಳಿ ಹಾಗು ತಾಮ್ರಗಳಿಂದ ಕೆಲಸ ಮಾಡುವುದಕ್ಕೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಮತ್ತು ಅವನಿಗೆ ದೈವಾತ್ಮಶಕ್ತಿಯನ್ನು ಕೊಟ್ಟು, ತಕ್ಕಜ್ಞಾನ, ವಿವೇಕ ವಿವಿಧ ಶಿಲ್ಪಶಾಸ್ತ್ರ ಕುಶಲತೆಯನ್ನು ಅನುಗ್ರಹಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾನು ಬೆಚಲೇಲನನ್ನು ದೇವರಾತ್ಮಭರಿತನನ್ನಾಗಿ ಮಾಡಿದ್ದೇನೆ. ನಾನು ಅವನಿಗೆ ಎಲ್ಲಾ ಬಗೆಯ ಕೆಲಸಗಳನ್ನು ಮಾಡಲು ನಿಪುಣತೆಯನ್ನೂ ಜ್ಞಾನವನ್ನೂ ಅನುಗ್ರಹಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾನು ಅವನನ್ನು ದೇವರ ಆತ್ಮನಿಂದಲೂ ಜ್ಞಾನದಿಂದಲೂ ತಿಳುವಳಿಕೆಯಿಂದಲೂ ವಿವೇಕದಿಂದಲೂ ಎಲ್ಲಾ ವಿಧವಾದ ಕೌಶಲ್ಯದಿಂದಲೂ ತುಂಬಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 31:3
12 ತಿಳಿವುಗಳ ಹೋಲಿಕೆ  

ಚಿನ್ನ ಬೆಳ್ಳಿ ತಾಮ್ರಗಳಿಂದ ಕೆಲಸನಡಿಸುವದಕ್ಕೂ ರತ್ನಗಳನ್ನು ಕೆತ್ತುವದಕ್ಕೂ ಮರದಲ್ಲಿ ವಿಚಿತ್ರವಾಗಿ ಕೆತ್ತನೇ ಕೆಲಸವನ್ನು ಮಾಡುವದಕ್ಕೂ


ಅವನ ದೇವರು ಇದನ್ನೆಲ್ಲಾ ಅವನಿಗೆ ಸರಿಯಾಗಿ ಕಲಿಸಿ ತಿದ್ದುತ್ತಾನೆ.


ಇವನು ನಫ್ತಾಲಿಕುಲದ ಒಬ್ಬ ವಿಧವೆಯಲ್ಲಿ ತೂರ್‍ಪಟ್ಟಣದ ಒಬ್ಬ ಕಂಚುಗಾರನಿಗೆ ಹುಟ್ಟಿದವನು. ಜಾಣನೂ ತಾಮ್ರದ ಕೆಲಸದಲ್ಲಿ ನಿಪುಣನೂ ಅನುಭವಶಾಲಿಯೂ ಆಗಿದ್ದ ಇವನು ಅರಸನ ಬಳಿಗೆ ಬಂದು ಅವನ ಎಲ್ಲಾ ಕೆಲಸವನ್ನು ಮಾಡಿದನು.


ಆತನೇ ನ್ಯಾಯಾಸನದಲ್ಲಿ ಕುಳಿತವನಿಗೆ ನ್ಯಾಯವಿವೇಚನೆಯಾಗಿಯೂ ಊರಬಾಗಿಲಲ್ಲಿ ಶತ್ರುಗಳನ್ನು ತಳ್ಳಿಬಿಡುವವರಿಗೆ ಶೌರ್ಯವಾಗಿಯೂ ಪರಿಣವಿುಸುವನು.


ಆದದರಿಂದ ಅದನ್ನು ಆಳುವದಕ್ಕೂ ನ್ಯಾಯಾನ್ಯಾಯಗಳನ್ನು ಕಂಡುಹಿಡಿಯುವದಕ್ಕೂ ನನಗೆ ವಿವೇಕವನ್ನು ದಯಪಾಲಿಸು. ಈ ಮಹಾ ಜನಾಂಗವನ್ನು ಆಳಲು ಸಮರ್ಥರು ಯಾರು ಎಂದು ಬೇಡಿಕೊಂಡನು.


ಯಾರಿಗೆ ನಾನು ಜಾಣತನದ ವರವನ್ನು ಪರಿಪೂರ್ತಿಯಾಗಿ ಅನುಗ್ರಹಿಸಿದ್ದೇನೋ ಅಂಥ ಜಾಣರೆಲ್ಲರ ಸಂಗಡ ನೀನು ಮಾತಾಡಿ ಅವರ ಕೈಯಿಂದ ಆ ವಸ್ತ್ರಗಳನ್ನು ಸಿದ್ಧಪಡಿಸಬೇಕು. ಆರೋನನು ಅವುಗಳನ್ನು ಧರಿಸಿಕೊಂಡು ನನ್ನ ಯಾಜಕನಾಗುವದಕ್ಕೆ ಪ್ರತಿಷ್ಠಿತನಾಗುವನು.


ಇವೇ ಮೊದಲಾದ ಸಮಸ್ತ ಶೃಂಗಾರವಾದ ಕೆಲಸವನ್ನು ಮಾಡುವದಕ್ಕೂ ನಾನು ಯೆಹೂದಕುಲದವನಾದ ಹೂರನ ಮೊಮ್ಮಗನೂ ಊರಿಯ ಮಗನೂ ಆಗಿರುವ ಬೆಚಲೇಲನೆಂಬವನನ್ನು ಗೊತ್ತುಮಾಡಿದ್ದೇನೆ.


ಶಿಲ್ಪಿಗಳು, ಚಮತ್ಕಾರವಾದ ಕೆಲಸ ಕಲ್ಪಿಸುವವರು, ನೀಲಿ ಧೂಮ್ರರಕ್ತವರ್ಣದ ದಾರದಿಂದಲೂ ನಾರುಬಟ್ಟೆಯಿಂದಲೂ ಬುಟೇದಾರೀ ಕೆಲಸಮಾಡುವವರು, ನೇಯುವವರು, ಅಂತೂ ಎಲ್ಲಾ ಕಸಬುದಾರರು ನಡಿಸುವ ಕೆಲಸಗಳನ್ನು ಕಲ್ಪಿಸುವದಕ್ಕೂ ಮಾಡುವದಕ್ಕೂ ಯೆಹೋವನು ಅವರಿಗೆ ಜ್ಞಾನವನ್ನು ಪರಿಪೂರ್ಣವಾಗಿ ಅನುಗ್ರಹಿಸಿದ್ದಾನೆ.


ಹೀಗಿರಲು ಬಂಗಾರ ಬೆಳ್ಳಿ ತಾಮ್ರ ಕಬ್ಬಿಣ ಇವುಗಳ ಕೆಲಸಮಾಡುವದರಲ್ಲಿಯೂ ಧೂಮ್ರ ರಕ್ತ ನೀಲವರ್ಣಗಳ ಬಟ್ಟೆಯನ್ನು ನೇಯುವದರಲ್ಲಿಯೂ ಚಿತ್ರ ಕೆತ್ತುವದರಲ್ಲಿಯೂ ಜಾಣನಾದ ಮನುಷ್ಯನನ್ನು ನನ್ನ ಬಳಿಗೆ ಕಳುಹಿಸು; ನನ್ನ ತಂದೆಯು ಗೊತ್ತು ಮಾಡಿದಂಥ ಮತ್ತು ನನ್ನೊಡನೆ ಯೆಹೂದದಲ್ಲಿಯೂ ಯೆರೂಸಲೇವಿುನಲ್ಲಿಯೂ ಇರುವಂಥ ಜಾಣರೊಂದಿಗೆ ಅವನು ಕೆಲಸಮಾಡಲಿ.


ಅರಸನಾದ ಸೊಲೊಮೋನನು ತೂರ್ ಪಟ್ಟಣದಿಂದ ಹೀರಾಮ್ ಎಂಬವನನ್ನು ಕರಿಸಿದನು.


ಯೆಹೋವನೇ ಜ್ಞಾನವನ್ನು ಕೊಡುವಾತನು, ಆತನ ಬಾಯಿಂದಲೇ ತಿಳುವಳಿಕೆಯೂ ವಿವೇಕವೂ ಹೊರಟು ಬರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು