ವಿಮೋಚನಕಾಂಡ 32:13 - ಕನ್ನಡ ಸತ್ಯವೇದವು J.V. (BSI)13 ನಿನ್ನ ಸೇವಕರಾದ ಅಬ್ರಹಾಮ್ ಇಸಾಕ್ ಯಾಕೋಬರನ್ನು ನೆನಪಿಗೆ ತಂದುಕೋ. ನೀನು ನಿನ್ನ ಜೀವದಾಣೆ ಪ್ರಮಾಣಮಾಡಿ ಅವರಿಗೆ - ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಮಾಡುವೆನೆಂದೂ ನಾನು ಸೂಚಿಸಿರುವ ಈ ಪ್ರದೇಶಗಳನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನೆಂದೂ ಅವರು ಈ ದೇಶವನ್ನು ಶಾಶ್ವತವಾಗಿ ಸ್ವಾಧೀನದಲ್ಲಿಟ್ಟುಕೊಳ್ಳುವರೆಂದೂ ಮಾತುಕೊಡಲಿಲ್ಲವೇ ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನಿನ್ನ ಸೇವಕರಾದ ಅಬ್ರಹಾಮ್, ಇಸಾಕ್ ಹಾಗು ಯಾಕೋಬರನ್ನು ನೆನಪಿಗೆ ತಂದುಕೋ. ನೀನು ನಿನ್ನ ಜೀವದಾಣೆ ಪ್ರಮಾಣ ಮಾಡಿ ಅವರಿಗೆ, ‘ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಈ ಪ್ರದೇಶವನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನೆಂದೂ ಇಸ್ರಾಯೇಲರು ಈ ದೇಶವನ್ನು ಶಾಶ್ವತವಾಗಿ ಸ್ವಾಧೀನ ಮಾಡಿಕೊಳ್ಳುವರೆಂದೂ ಮಾತುಕೊಡಲಿಲ್ಲವೇ’” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ತಮ್ಮ ದಾಸರಾದ ಅಬ್ರಹಾಮ್, ಇಸಾಕ್ ಹಾಗು ಯಕೋಬರನ್ನು ನೆನಪಿಗೆ ತಂದುಕೊಳ್ಳಿ. ತಾವು ತಮ್ಮ ಜೀವದಾಣೆ ಪ್ರಮಾಣ ಮಾಡಿ ಅವರಿಗೆ, ‘ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಮಾಡುವೆನು; ನಾನು ಸೂಚಿಸಿರುವ ಈ ಪ್ರದೇಶಗಳನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನು; ಮತ್ತು ಅವರು ಈ ನಾಡನ್ನು ಶಾಶ್ವತವಾಗಿ ಸ್ವಾಧೀನದಲ್ಲಿಟ್ಟುಕೊಳ್ಳುವರು’ ಎಂದು ತಾವು ಮಾತುಕೊಡಲಿಲ್ಲವೆ?” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನಿನ್ನ ಸೇವೆಮಾಡಿದ ಅಬ್ರಹಾಮನನ್ನು, ಇಸಾಕನನ್ನು, ಯಾಕೋಬನನ್ನು ಜ್ಞಾಪಿಸಿಕೊ. ನೀನು ನಿನ್ನ ಹೆಸರನ್ನು ಉಪಯೋಗಿಸಿ ಆ ಜನರಿಗೆ ವಾಗ್ದಾನವನ್ನು ಮಾಡಿದೆ. ‘ನಾನು ನಿನ್ನ ಸಂತತಿಯವರನ್ನು ಆಕಾಶದ ನಕ್ಷತ್ರಗಳಷ್ಟು ಮಾಡುವೆನು. ನಾನು ವಾಗ್ದಾನ ಮಾಡಿದಂತೆ ಈ ದೇಶವನ್ನೆಲ್ಲಾ ನಿನ್ನ ಸಂತತಿಗಳವರಿಗೆ ಕೊಡುವೆನು. ಈ ದೇಶ ಎಂದೆಂದಿಗೂ ಅವರದಾಗಿರುವುದು’ ಎಂದು ನೀನು ನಿನ್ನ ಹೆಸರಿನಲ್ಲಿ ವಾಗ್ದಾನ ಮಾಡಿದೆಯಲ್ಲಾ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆ ನಿಮ್ಮ ಸೇವಕರಾದ ಅಬ್ರಹಾಮನನ್ನೂ, ಇಸಾಕನನ್ನೂ, ಇಸ್ರಾಯೇಲನನ್ನೂ ಜ್ಞಾಪಕಮಾಡಿಕೊಳ್ಳಿರಿ, ಯಾರಿಗೆ ನೀವು ಆಣೆಯಿಟ್ಟು ಪ್ರಮಾಣಮಾಡಿ: ‘ಆಕಾಶದ ನಕ್ಷತ್ರಗಳ ಹಾಗೆ ನಿನ್ನ ಸಂತತಿಯನ್ನು ಹೆಚ್ಚಿಸಿ, ನಾನು ಹೇಳಿದ ಈ ದೇಶವನ್ನು ನಿಮ್ಮ ಸಂತತಿಯವರಿಗೆ ಕೊಡುವೆನು ಮತ್ತು ಅವರು ನಿತ್ಯವಾಗಿ ಸ್ವಾಧೀನವಾಗಿಟ್ಟುಕೊಳ್ಳುವರು’ ಎಂದು ಮಾತುಕೊಡಲಿಲ್ಲವೆ?” ಎಂದನು. ಅಧ್ಯಾಯವನ್ನು ನೋಡಿ |