Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:14 - ಕನ್ನಡ ಸತ್ಯವೇದವು J.V. (BSI)

14 ಆಗ ಯೆಹೋವನು ತನ್ನ ಪ್ರಜೆಗಳಿಗೆ ಮಾಡುವೆನೆಂದು ತಾನು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬೇರೆ ಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಯೆಹೋವನು ತನ್ನ ಪ್ರಜೆಗಳಿಗೆ ಮಾಡುವೆನೆಂದು ತಾನು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬದಲಾಯಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆಗ ಸರ್ವೇಶ್ವರ ತಮ್ಮ ಪ್ರಜೆಗಳಿಗೆ ಮಾಡುವೆನೆಂದು ಹೇಳಿದ ಕೇಡಿನ ಬಗ್ಗೆ ಮನಸ್ಸನ್ನು ಮಾರ್ಪಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದ್ದರಿಂದ ಯೆಹೋವನು ಜನರಿಗಾಗಿ ಮರುಕಪಟ್ಟು ತನ್ನ ಮನಸ್ಸನ್ನು ಮಾರ್ಪಡಿಸಿಕೊಂಡನು; ತಾನು ಹೇಳಿದ್ದ ಕೇಡನ್ನು ಮಾಡಲಿಲ್ಲ; ತನ್ನ ಜನರನ್ನು ನಾಶಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ಯೆಹೋವ ದೇವರು ತಮ್ಮ ಜನರಿಗೆ ಮಾಡುವೆನೆಂದು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಮಾರ್ಪಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:14
20 ತಿಳಿವುಗಳ ಹೋಲಿಕೆ  

ದೇವರು ನಿನೆವೆಯವರ ಕಾರ್ಯಗಳನ್ನು ನೋಡಿ ಅವರು ತಮ್ಮ ದುರ್ಮಾರ್ಗದಿಂದ ತಿರುಗಿಕೊಂಡರೆಂದು ತಿಳಿದು ಮನಮರುಗಿ ತಾನು ಅವರಿಗೆ ಮಾಡುವೆನೆಂದು ಪ್ರಕಟಿಸಿದ್ದ ಕೇಡನ್ನು ಮಾಡದೆ ಬಿಟ್ಟನು.


ಈಗಲೇ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನ್ನೂ ತಿದ್ದಿಕೊಂಡು ನಿಮ್ಮ ದೇವರಾದ ಯೆಹೋವನ ನುಡಿಗೆ ಕಿವಿಗೊಡಿರಿ; ಹಾಗಾದರೆ ಯೆಹೋವನು ನಿಮ್ಮ ವಿಷಯವಾಗಿ ನುಡಿದಿರುವ ಕೇಡನ್ನು ಮನಮರುಗಿ ಮಾಡದಿರುವನು.


ತನ್ನ ಒಡಂಬಡಿಕೆಯನ್ನು ನೆನಪುಮಾಡಿಕೊಂಡು ತನ್ನ ಕೃಪಾತಿಶಯದಿಂದ ಅವರನ್ನು ಕನಿಕರಿಸಿದನು.


ನಾನು ದಂಡನೆ ನಿರ್ಣಯಿಸಿದ ಆ ಜನಾಂಗದವರು ತಮ್ಮ ಕೆಟ್ಟತನದಿಂದ ತಿರುಗಿಕೊಂಡರೆ ನಾನು ಮಾಡಬೇಕೆಂದಿದ್ದ ಕೇಡನ್ನು ಮನಮರುಗಿ ಮಾಡದಿರುವೆನು.


ದೇವರು ಯೆರೂಸಲೇಮನ್ನೂ ಸಂಹರಿಸುವದಕ್ಕೆ ದೂತನನ್ನು ಕಳುಹಿಸಿದನು; ಆದರೆ ಆ ದೂತನು ಸಂಹರಿಸುವದಕ್ಕಿದ್ದಾಗ ಯೆಹೋವನು ಅದನ್ನು ಕಂಡು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪ ಪಟ್ಟು ಸಂಹಾರಕದೂತನಿಗೆ - ಸಾಕು, ನಿನ್ನ ಕೈಯನ್ನು ಹಿಂದೆಗೆ ಎಂದು ಆಜ್ಞಾಪಿಸಿದನು. ಆಗ ಯೆಹೋವನ ದೂತನು ಯೆಬೂಸಿಯನಾದ ಒರ್ನಾನನ ಕಣದಲ್ಲಿ ನಿಂತನು.


ದೇವದೂತನು ಯೆರೂಸಲೇಮನ್ನೂ ಸಂಹರಿಸುವದಕ್ಕೆ ಕೈಚಾಚಿದಾಗ ಯೆಹೋವನು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಟ್ಟು ಸಂಹಾರಕದೂತನಿಗೆ - ಈಗ ಸಾಕು, ನಿನ್ನ ಕೈಯನ್ನು ಹಿಂದೆಗೆ ಎಂದು ಆಜ್ಞಾಪಿಸಿದನು. ಆಗ ಆ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು.


ಅವನು ಸಿಟ್ಟುಗೊಂಡು - ಯೆಹೋವಾ, ಲಾಲಿಸು, ನಾನು ಸ್ವದೇಶದಲ್ಲಿರುವಾಗಲೇ ಹೀಗಾಗುವದೆಂದು ಹೇಳಿದೆನಷ್ಟೆ; ನೀನು ದಯೆಯೂ ಕನಿಕರವೂ ದೀರ್ಘಶಾಂತಿಯೂ ಮಹಾಕೃಪೆಯೂ ಉಳ್ಳ ದೇವರು, ಮಾಡಬೇಕೆಂದಿದ್ದ ಕೇಡಿಗೆ ಮನಮರುಗುವವನು ಎಂದು ನಾನು ತಿಳಿದೇ ತಾರ್ಷೀಷಿಗೆ ಓಡಿ ಹೋಗಲು ತ್ವರೆಪಟ್ಟೆನು.


ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯಗಳನ್ನು ಹರಿದುಕೊಂಡು ನಿಮ್ಮ ದೇವರಾದ ಯೆಹೋವನ ಕಡೆಗೆ ತಿರಿಗಿಕೊಳ್ಳಿರಿ; ಆತನು ದಯೆಯೂ ಕನಿಕರವೂ ದೀರ್ಘಶಾಂತಿಯೂ ಮಹಾಕೃಪೆಯೂ ಉಳ್ಳವನಾಗಿ ಮಾಡಬೇಕೆಂದಿದ್ದ ಕೇಡಿಗೆ ಮನಮರುಗುತ್ತಾನೆ.


ಯೆಹೂದದ ಅರಸನಾದ ಹಿಜ್ಕೀಯನೂ ಎಲ್ಲಾ ಯೆಹೂದ್ಯರೂ ಅವನನ್ನು ಕೊಂದುಹಾಕಿದರೋ? ಇಲ್ಲವೇ ಇಲ್ಲ. ಆ ಅರಸನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ದಯೆಯನ್ನು ಬೇಡಿಕೊಳ್ಳಲು ಯೆಹೋವನು ಅವರ ವಿಷಯವಾಗಿ ನುಡಿದಿದ್ದ ಕೇಡನ್ನು ಮನಮರುಗಿ ಮಾಡದೆ ಬಿಟ್ಟನಲ್ಲಾ. ನಾವಾದರೋ [ಇವನನ್ನು ಕೊಂದುಹಾಕಿ] ನಮಗೆ ದೊಡ್ಡ ಕೇಡನ್ನು ಉಂಟುಮಾಡಿಕೊಳ್ಳುವವರಾಗಿದ್ದೇವೆ ಎಂಬದಾಗಿ ಸಕಲಜನ ಸಮೂಹಕ್ಕೆ ಹೇಳಿದರು.


ಅವರನ್ನು ಸಂಪೂರ್ಣವಾಗಿ ನಾಶಮಾಡುತ್ತಿದ್ದೆನು, ಅವರು ಮನುಷ್ಯರ ಜ್ಞಾಪಕದಲ್ಲೂ ಇಲ್ಲದಂತೆ ಮಾಡುತ್ತಿದ್ದೆನು;


ನನಗೆ ನಿನ್ನ ದಯೆ ದೊರಕಿದ್ದಾದರೆ ನಾನು ನಿನ್ನನ್ನು ಬಲ್ಲವನಾಗಿರುವಂತೆ ನಿನ್ನ ಮಾರ್ಗವನ್ನು ನನಗೆ ತೋರಿಸು; ಆಗ ನಿನ್ನ ದಯೆ ನನಗೆ ದೊರೆಯಿತೆಂದು ನನಗೆ ತಿಳಿದಿರುವದು; ಈ ಜನವು ನಿನ್ನ ಪ್ರಜೆಯೆಂದು ಜ್ಞಾಪಕಮಾಡಿಕೋ ಎಂದು ಅರಿಕೆಮಾಡಿದನು.


ಯೆಹೋವನು ನೋಡಿ ತಾನು ಭೂವಿುಯ ಮೇಲೆ ಮನುಷ್ಯರನ್ನು ಉಂಟುಮಾಡಿದ್ದಕ್ಕೆ ಪಶ್ಚಾತ್ತಾಪಪಟ್ಟು ತನ್ನ ಹೃದಯದಲ್ಲಿ ನೊಂದುಕೊಂಡನು.


ಅದಕ್ಕೆ ಯೆಹೋವನು - ನಿನ್ನ ಪ್ರಾರ್ಥನೆಯ ಮೇರೆಗೆ ನಾನು ಕ್ಷವಿುಸಿದ್ದೇನೆ.


ನಾನು ಮುಂಚಿನಂತೆ ಹಗಲಿರುಳು ನಾಲ್ವತ್ತು ದಿನವು ಬೆಟ್ಟದ ಮೇಲೆ ಇರಲಾಗಿ ಯೆಹೋವನು ಆ ಕಾಲದಲ್ಲಿಯೂ ನನ್ನ ಪ್ರಾರ್ಥನೆಯನ್ನು ಕೇಳಿ ನಿಮ್ಮನ್ನು ನಾಶ ಮಾಡಬೇಕೆಂಬ ಆಲೋಚನೆಯನ್ನು ಬಿಟ್ಟುಬಿಟ್ಟನು.


ಆಗ ಯೆಹೋವನು ತನ್ನ ಜನರಿಗೋಸ್ಕರ ನ್ಯಾಯತೀರಿಸುವನು. ಪರತಂತ್ರರಾಗಲಿ ಸ್ವತಂತ್ರರಾಗಲಿ ಅವರೆಲ್ಲರೂ ನಿರಾಶ್ರಯರಾಗಿ ನಿಶ್ಶೇಷರಾದದ್ದನ್ನು ಆತನು ತಿಳಿದಾಗ ತನ್ನ ಸೇವಕರಾದ ಅವರ ವಿಷಯದಲ್ಲಿ ಪಶ್ಚಾತ್ತಾಪಪಡುವನು.


ವೈರಿಗಳ ಹಿಂಸೆಯನ್ನು ತಾಳಲಾರದ ಇಸ್ರಾಯೇಲ್ಯರ ಗೋಳಾಟವನ್ನು ಯೆಹೋವನು ಕೇಳಿ ಕನಿಕರಪಟ್ಟು ನ್ಯಾಯಸ್ಥಾಪಕರನ್ನು ಎಬ್ಬಿಸಿ ಅವರ ಜೀವಮಾನವೆಲ್ಲಾ ಅವರ ಸಂಗಡ ಇದ್ದು ಅವರ ಮೂಲಕವಾಗಿ ಇಸ್ರಾಯೇಲ್ಯರನ್ನು ಶತ್ರುಗಳಿಂದ ಬಿಡಿಸಿದನು.


ಆದದರಿಂದ ಆತನು ಅವರನ್ನು ಸಂಹರಿಸುವೆನೆನ್ನಲು ಆತನು ಆರಿಸಿಕೊಂಡ ಮೋಶೆಯು ಮಧ್ಯಸ್ಥನಾಗಿ ಅವರನ್ನು ಸಂಹರಿಸದಂತೆ ಆತನ ಕೋಪವನ್ನು ಶಾಂತಪಡಿಸಿದನು.


ಯೆಹೋವನು ಮನಮರುಗಿ ಈ ದರ್ಶನವು ನೆರವೇರದು ಅಂದನು.


ಕರ್ತನಾದ ಯೆಹೋವನು ಮನಮರುಗಿ ಈ ದರ್ಶನವೂ ನೆರವೇರದು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು