Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:22 - ಕನ್ನಡ ಸತ್ಯವೇದವು J.V. (BSI)

22 ಆರೋನನು - ಸ್ವಾವಿುಯವರು ರೋಷಗೊಳ್ಳಬಾರದು; ಈ ಜನರು ದುಷ್ಟಸ್ವಭಾವಿಗಳೆಂಬದನ್ನು ಬಲ್ಲಿರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆರೋನನು, “ಸ್ವಾಮಿಯವರು, ರೋಷಗೊಳ್ಳಬಾರದು ಈ ಜನರು ದುಷ್ಟಸ್ವಭಾದವರು, ಹಠಮಾರಿಗಳು ಎಂಬುದು ನಿನಗೆ ಗೊತ್ತಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಒಡೆಯಾ, ಕೋಪಗೊಳ್ಳಬೇಡಿ. ಈ ಜನರು ಎಂಥ ಹಟಮಾರಿಗಳೆಂದು ನೀವೇ ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆರೋನನು, “ಕೋಪಗೊಳ್ಳಬೇಡ. ಇವರು ಯಾವಾಗಲೂ ಪಾಪಮಾಡಲು ಸಿದ್ಧರಾಗಿರುವುದು ನಿನಗೆ ಗೊತ್ತೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅದಕ್ಕೆ ಆರೋನನು, “ನನ್ನ ಒಡೆಯನೇ ಕೋಪಗೊಳ್ಳಬೇಡಿ ಈ ಜನರು ಕೆಡುಕಿನ ಮನಸ್ಸಿನವರಾಗಿದ್ದಾರೆಂದು ನೀವು ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:22
17 ತಿಳಿವುಗಳ ಹೋಲಿಕೆ  

ನನಗೆ ನಿಮ್ಮ ಪರಿಚಯವಾದಂದಿನಿಂದಲೂ ನೀವು ಯೆಹೋವನ ಆಜ್ಞೆಯನ್ನು ಉಲ್ಲಂಘಿಸುವವರೇ.


ಸೌಲನು ಸಮುವೇಲನಿಗೆ - ನಾನು ಯೆಹೋವನ ಮತ್ತು ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿದ್ದೇನೆ; ಜನರಿಗೆ ಹೆದರಿ ಅವರ ಮಾತನ್ನು ಕೇಳಿದೆನು.


ಆದಾಗ್ಯೂ ಅವರಲ್ಲಿ ಕೆಲವರು ಮೋಶೆಯ ಮಾತನ್ನು ಕೇಳದೆ ಅದರಲ್ಲಿ ಸ್ವಲ್ಪವನ್ನು ಮರುದಿವಸದ ತನಕ ಇಟ್ಟುಕೊಂಡಾಗ ಅದು ಹುಳಬಿದ್ದು ನಾತಹಿಡಿದು ಕೆಟ್ಟುಹೋಯಿತು. ಅದಕ್ಕೆ ಮೋಶೆ ಅವರ ಮೇಲೆ ಸಿಟ್ಟುಗೊಂಡನು.


ಜನರು - ನಾವೇನು ಕುಡಿಯಬೇಕೆಂದು ಮೋಶೆಯ ಮೇಲೆ ಗುಣುಗುಟ್ಟುತ್ತಿರಲು ಮೋಶೆಯು ಯೆಹೋವನನ್ನು ಪ್ರಾರ್ಥಿಸಿದನು.


ಅವರು ಮೋಶೆಗೆ - ಐಗುಪ್ತದೇಶದಲ್ಲಿ ಸಮಾಧಿಗಳಿಲ್ಲವಾದದರಿಂದ ಅರಣ್ಯದಲ್ಲಿ ಸಾಯಲಿ ಎಂಬದಾಗಿ ನಮ್ಮನ್ನು ಇಲ್ಲಿಗೆ ಕರಕೊಂಡು ಬಂದಿಯೇನು? ಯಾಕೆ ನಮಗೆ ಈ ಪ್ರಕಾರ ಮಾಡಿ ಐಗುಪ್ತದೇಶದಿಂದ ಕರಕೊಂಡು ಬಂದಿ?


ಕೇಡುಮಾಡದಿದ್ದರೆ ಅವರಿಗೆ ನಿದ್ರೆಹತ್ತದು; ಯಾರನ್ನಾದರೂ ಎಡವಿಬೀಳಿಸದಿದ್ದರೆ ಅವರ ನಿದ್ರೆಗೆ ಭಂಗವಾಗುವದು.


ಹಾಸಿಗೆಯ ಮೇಲೆ ಇರುವಾಗಲೂ ಕೆಡುಕನ್ನೇ ಯೋಚಿಸುತ್ತಿರುವನು; ಅಲ್ಲದ ದಾರಿಯಲ್ಲಿ ನಿಂತುಕೊಂಡಿದ್ದಾನೆ; ಎಂಥ ದುಷ್ಕೃತ್ಯಕ್ಕೂ ಹೇಸುವದಿಲ್ಲ.


ಯಾಕಂದರೆ ನೀವು ಹಟಹಿಡಿದು ಆಜ್ಞೆಗೆ ಒಳಗಾಗದವರೆಂಬದು ನನಗೆ ತಿಳಿದೇ ಇದೆ. ನಾನು ಇನ್ನೂ ಜೀವದಿಂದಿರುವಾಗಲೇ ನೀವು ಯೆಹೋವನಿಗೆ ವಿರೋಧವಾಗಿ ತಿರುಗಿ ಬಿದ್ದಿದ್ದೀರಿ; ನಾನು ಹೋದ ತರುವಾಯ ನೀವು ತಿರುಗಿ ಬೀಳುವದು ಮತ್ತಷ್ಟು ನಿಶ್ಚಯ.


ನೀವು ಅರಣ್ಯದಲ್ಲಿ ನಿಮ್ಮ ದೇವರಾದ ಯೆಹೋವನಿಗೆ ಕೋಪಹುಟ್ಟಿಸಿದ್ದನ್ನು ನೆನಪುಮಾಡಿಕೊಳ್ಳಿರಿ; ಅದನ್ನು ಮರೆಯಬೇಡಿರಿ. ನೀವು ಐಗುಪ್ತದೇಶವನ್ನು ಬಿಟ್ಟಂದಿನಿಂದ ಈ ಸ್ಥಳಕ್ಕೆ ಬಂದ ದಿನದವರೆಗೂ ಯೆಹೋವನ ಆಜ್ಞೆಗಳನ್ನು ಧಿಕ್ಕರಿಸುವವರಾಗಿದ್ದಿರಿ.


ಆಗ ಯೆಹೋವನು ಮೋಶೆಗೆ - ನೀವು ಎಲ್ಲಿಯವರೆಗೂ ನನ್ನ ಆಜ್ಞೆಯನ್ನೂ ನಾನು ಮಾಡಿರುವ ನಿಯಮವನ್ನೂ ಅನುಸರಿಸದೆ ಅಲಕ್ಷ್ಯ ಮಾಡುವಿರೋ;


ಆಗ ಯೆಹೂದನು ಹತ್ತರಕ್ಕೆ ಬಂದು - ನಿನ್ನ ಸೇವಕನಾದ ನಾನು ಒಂದು ಮಾತನ್ನು ಅರಿಕೆಮಾಡಿಕೊಳ್ಳುತ್ತೇನೆ, ನನ್ನ ಮೇಲೆ ಸಿಟ್ಟು ಮಾಡಬಾರದು; ನೀನು ಫರೋಹನಿಗೆ ಸಮಾನನಾಗಿದ್ದೀಯೆಂದು ನಾನು ಬಲ್ಲೆ.


ಆಗ ಅವನು ಆರೋನನನ್ನು - ನೀನು ಈ ಜನರಿಂದ ಮಹಾಪರಾಧವನ್ನು ಮಾಡಿಸಿದಿಯಲ್ಲಾ; ಹೀಗೆ ಮಾಡಿಸುವದಕ್ಕೆ ಇವರು ನಿನಗೇನು ಮಾಡಿದರು ಎಂದು ವಿಚಾರಿಸಲು


ಸೌಲನು - ಜನರು ನಿನ್ನ ದೇವರಾದ ಯೆಹೋವನಿಗೋಸ್ಕರ ಯಜ್ಞಸಲ್ಲಿಸುವದಕ್ಕಾಗಿ ಅಮಾಲೇಕ್ಯರ ಕುರಿದನಗಳಲ್ಲಿ ಮೇಲ್ತರದವುಗಳನ್ನು ಉಳಿಸಿ ತಂದಿದ್ದಾರೆ; ವಿುಕ್ಕಾದವುಗಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿದೆವು ಎಂದು ಉತ್ತರಕೊಟ್ಟನು.


ಆದರೆ ಜನರು ಸಂಪೂರ್ಣವಾಗಿ ಸಂಹರಿಸಬೇಕಾದ ಕೊಳ್ಳೆಯಲ್ಲಿ ಉತ್ತಮವಾದ ಕುರಿದನಗಳನ್ನು ನಿನ್ನ ದೇವರಾದ ಯೆಹೋವನಿಗೆ ಗಿಲ್ಗಾಲಿನಲ್ಲಿ ಯಜ್ಞಾರ್ಪಣೆಮಾಡುವದಕ್ಕಾಗಿ ಉಳಿಸಿ ತಂದರು ಎಂದು ಉತ್ತರಕೊಟ್ಟನು.


ಮೋಶೆ ಬೆಟ್ಟದಿಂದ ಇಳಿಯದೆ ತಡಮಾಡಿದ್ದನ್ನು ಇಸ್ರಾಯೇಲ್ಯರು ನೋಡಿ ಆರೋನನ ಬಳಿಗೆ ಕೂಡಿಬಂದು - ಏಳು; ನಮ್ಮ ಮುಂದುಗಡೆಯಲ್ಲಿ ಹೋಗುವದಕ್ಕೆ ನಮಗೆ ದೇವರುಗಳನ್ನು ಮಾಡಿಕೊಡು; ಐಗುಪ್ತದೇಶದಿಂದ ನಮ್ಮನ್ನು ಕರಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ ಎಂದು ಹೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು