Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:28 - ಕನ್ನಡ ಸತ್ಯವೇದವು J.V. (BSI)

28 ಲೇವಿಯ ಕುಲದವರು ಮೋಶೆಯ ಆಜ್ಞೆಯ ಮೇರೆಗೆ ಮಾಡಿದರು. ಆ ದಿನದಲ್ಲಿ ಜನರೊಳಗೆ ಹೆಚ್ಚು ಕಡಿಮೆ ಮೂರು ಸಾವಿರ ಮಂದಿ ಕೊಲ್ಲಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಲೇವಿಯ ಕುಲದವರು ಮೋಶೆಯ ಆಜ್ಞೆಯ ಪ್ರಕಾರವೇ ಮಾಡಿದರು. ಆ ದಿನದಲ್ಲಿ ಜನರೊಳಗೆ ಹೆಚ್ಚು ಕಡಿಮೆ ಮೂರು ಸಾವಿರ ಮಂದಿ ಹತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಲೇವಿಯ ಕುಲದವರು ಮೋಶೆಯ ಆಜ್ಞೆಯ ಮೇರೆಗೆ ಮಾಡಿದರು. ಆ ದಿನ ಹೆಚ್ಚು ಕಡಿಮೆ ಮೂರು ಸಾವಿರ ಮಂದಿ ಹತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಲೇವಿಕುಲದವರು ಮೋಶೆಯ ಮಾತಿಗೆ ವಿಧೇಯರಾದರು. ಅಂದು ಇಸ್ರೇಲರಲ್ಲಿ ಸುಮಾರು ಮೂರು ಸಾವಿರ ಮಂದಿ ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಲೇವಿಯರು ಮೋಶೆಯು ಆಜ್ಞಾಪಿಸಿದಂತೆ ಮಾಡಿದರು. ಆ ದಿನ ಹೆಚ್ಚು ಕಡಿಮೆ ಮೂರು ಸಾವಿರ ಜನರು ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:28
12 ತಿಳಿವುಗಳ ಹೋಲಿಕೆ  

ಅವರು ನಿನ್ನ ಆಜ್ಞೆಯನ್ನು ಅನುಸರಿಸುತ್ತಾ ನಿನ್ನ ನಿಬಂಧನೆಯನ್ನು ಕೈಕೊಳ್ಳುವವರಾಗಿ ತಾಯಿತಂದೆಗಳನ್ನು ಪರಿಚಯವಿಲ್ಲವೆಂದೂ ಅಣ್ಣತಮ್ಮಂದಿರನ್ನು ಅರಿಯೆವೆಂದೂ ಸ್ವಂತ ಮಕ್ಕಳನ್ನು ಗುರುತಿಲ್ಲವೆಂದೂ ಹೇಳಿ ಬಿಟ್ಟರಲ್ಲಾ.


ಅವರಲ್ಲಿ ಕೆಲವರು ಜಾರತ್ವಮಾಡಿ ಒಂದೇ ದಿನದಲ್ಲಿ ಇಪ್ಪತ್ತುಮೂರು ಸಾವಿರ ಮಂದಿ ಸತ್ತರು; ನಾವು ಜಾರತ್ವಮಾಡದೆ ಇರೋಣ.


ಮರುದಿನ ಇಸ್ರಾಯೇಲ್ಯರ ಸರ್ವಸಮೂಹದವರು ಮೋಶೆ ಆರೋನರ ಮೇಲೆ ಗುಣುಗುಟ್ಟುತ್ತಾ - ನೀವೇ ಯೆಹೋವನ ಜನರನ್ನು ಸಾಯಿಸಿದಿರಿ ಎಂದು ಹೇಳುವವರಾದರು.


ಮೋಶೆ ಅವರಿಗೆ - ಇಸ್ರಾಯೇಲ್ಯರ ದೇವರಾದ ಯೆಹೋವನು ಅಪ್ಪಣೆಮಾಡುವದೇನಂದರೆ - ನಿಮ್ಮಲ್ಲಿ ಪ್ರತಿಯೊಬ್ಬನು ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಪಾಳೆಯದ ಮಧ್ಯದಲ್ಲಿ ಒಂದು ಬಾಗಲಿನಿಂದ ಮತ್ತೊಂದು ಬಾಗಲಿನವರೆಗೂ ಹೋಗುತ್ತಾ ಬರುತ್ತಾ ಅಣ್ಣ ತಮ್ಮ ಗೆಳೆಯ ನೆರೆಯವ ಎಂದು ಲಕ್ಷಿಸದೆ ಜನರನ್ನು ಸಂಹರಿಸಬೇಕು ಎಂದು ಹೇಳಿದನು.


ಮೋಶೆ [ಲೇವಿಯರಿಗೆ] - ಈ ಹೊತ್ತು ನಿಮ್ಮಲ್ಲಿ ಪ್ರತಿಯೊಬ್ಬನು ಮಗನನ್ನಾದರೂ ಅಣ್ಣತಮ್ಮಂದಿರನ್ನಾದರೂ ಲಕ್ಷ್ಯಕ್ಕೆ ತೆಗೆದುಕೊಳ್ಳದೆ ನಿಮ್ಮನ್ನು ಯೆಹೋವನ ಸೇವೆಗೆ ಪ್ರತಿಷ್ಠಿಸಿಕೊಳ್ಳಬೇಕು; ಹಾಗಾದರೆ ಆತನು ಈ ಹೊತ್ತೇ ನಿಮ್ಮನ್ನು ಆಶೀರ್ವದಿಸುವನು ಎಂದು ಹೇಳಿದನು.


ಇಸ್ರಾಯೇಲ್ಯರು ಆರೋನನ ಕೈಯಿಂದ ಆ ಬಸವನನ್ನು ಮಾಡಿಸಿಕೊಂಡದ್ದರಿಂದ ಯೆಹೋವನು ಅವರನ್ನು ದಂಡಿಸಿದನು.


ಕೂಡಲೆ ಮಾಹಾಯಾಜಕ ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆದ ಫೀನೆಹಾಸನು ಸಭೆಯ ನಡುವೆಯಿಂದೆದ್ದು ಈಟಿಯನ್ನು ಕೈಯಲ್ಲಿ ಹಿಡಿದು


ನಮ್ಮ ಯೆಹೋವದೇವರೇ, ಅವರಿಗೆ ಉತ್ತರಕೊಟ್ಟವನು ನೀನೇ. ನೀನು ದುಷ್ಕೃತ್ಯಗಳಿಗಾಗಿ ಅವರನ್ನು ದಂಡಿಸುತ್ತಿದ್ದರೂ ಕ್ಷವಿುಸುವ ದೇವರಾಗಿದ್ದಿ.


ಇಸ್ರಾಯೇಲ್ಯರ ಸ್ವಾಸ್ತ್ಯದಲ್ಲಿ ಆಯಾ ಕುಲದ ಸ್ವಾಸ್ತ್ಯದ ಪ್ರಮಾಣಕ್ಕೆ ತಕ್ಕ ಹಾಗೆ ಅಂದರೆ ಹೆಚ್ಚಾದ ಮಂದಿಯುಳ್ಳವರಿಂದ ಹೆಚ್ಚಾಗಿಯೂ ಕಡಿಮೆಯಾದ ಮಂದಿಯುಳ್ಳವರಿಂದ ಕಡಿಮೆಯಾಗಿಯೂ ಲೇವಿಯರಿಗೋಸ್ಕರ ಊರುಗಳನ್ನು ಕೊಡಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು