Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:30 - ಕನ್ನಡ ಸತ್ಯವೇದವು J.V. (BSI)

30 ಮರುದಿನದಲ್ಲಿ ಮೋಶೆ ಜನರಿಗೆ - ನೀವು ಮಹಾಪಾಪವನ್ನು ಮಾಡಿದಿರಿ. ಆದರೂ ನಾನು ಬೆಟ್ಟವನ್ನು ಹತ್ತಿ ಯೆಹೋವನ ಸನ್ನಿಧಿಗೆ ಹೋಗುವೆನು; ಒಂದು ವೇಳೆ ನೀವು ಮಾಡಿದ ಪಾಪಕೃತ್ಯಕ್ಕೆ ಕ್ಷಮಾಪಣೆಯು ನನ್ನ ಮೂಲಕ ದೊರಕೀತು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಮರುದಿನದಲ್ಲಿ ಮೋಶೆಯು ಜನರಿಗೆ, “ನೀವು ಮಹಾ ಪಾಪವನ್ನು ಮಾಡಿರುವಿರಿ. ಆದರೂ ನಾನು ಬೆಟ್ಟವನ್ನು ಹತ್ತಿ ಯೆಹೋವನ ಸನ್ನಿಧಿಗೆ ಹೋಗುವೆನು. ಒಂದು ವೇಳೆ ನೀವು ಮಾಡಿದ ಪಾಪಕೃತ್ಯಕ್ಕೆ ಪ್ರಾಯಶ್ಚಿತ್ತವನ್ನು ನಾನು ಮಾಡಬಹುದೇನೋ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಮರುದಿನ ಮೋಶೆ ಜನರಿಗೆ, “ನೀವು ಮಹಾಪಾಪವನ್ನು ಮಾಡಿದಿರಿ. ಆದರೂ ನಾನು ಬೆಟ್ಟಹತ್ತಿ ಸರ್ವೇಶ್ವರನ ಸನ್ನಿಧಿಗೆ ಹೋಗುವೆನು. ಬಹುಶಃ ನೀವು ಮಾಡಿದ ಪಾಪಕೃತ್ಯಕ್ಕೆ ಕ್ಷಮಾಪಣೆ ನನ್ನ ಮುಖಾಂತರ ದೊರಕೀತು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಮರುದಿನ ಮುಂಜಾನೆ ಮೋಶೆಯು ಜನರಿಗೆ, “ನೀವು ಭಯಂಕರವಾದ ಪಾಪವನ್ನು ಮಾಡಿದ್ದೀರಿ. ಆದರೆ ಈಗ ನಾನು ಯೆಹೋವನ ಬಳಿಗೆ ಹೋಗಿ, ಆತನು ನಿಮ್ಮ ಪಾಪಗಳನ್ನು ಕ್ಷಮಿಸುವಂತೆ ನಾನೇನಾದರೂ ಮಾಡಬಹುದೊ ಎಂದು ವಿಚಾರಿಸುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಮರುದಿನದಲ್ಲಿ, ಮೋಶೆಯು ಜನರಿಗೆ, “ನೀವು ದೊಡ್ಡ ಪಾಪವನ್ನು ಮಾಡಿದ್ದೀರಿ. ಆದ್ದರಿಂದ ನಾನು ಈಗ ಬೆಟ್ಟವನ್ನು ಹತ್ತಿ ಯೆಹೋವ ದೇವರ ಬಳಿಗೆ ಹೋಗುವೆನು. ಒಂದು ವೇಳೆ ನಿಮ್ಮ ಪಾಪಕ್ಕಾಗಿ ನಾನು ಪ್ರಾಯಶ್ಚಿತ್ತ ಮಾಡಿಕೊಳ್ಳಬಹುದು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:30
22 ತಿಳಿವುಗಳ ಹೋಲಿಕೆ  

ಭಯಪಡಬೇಡಿರಿ; ಇಷ್ಟು ಪಾಪಮಾಡಿದ ನೀವು ಇನ್ನು ಮುಂದೆಯಾದರೂ ಅದನ್ನು ಬಿಟ್ಟು ಯೆಹೋವನನ್ನು ಅಂಟಿಕೊಂಡು ಪೂರ್ಣಮನಸ್ಸಿನಿಂದ ಆತನೊಬ್ಬನನ್ನೇ ಸೇವಿಸಿರಿ.


ಆ ಒಡಂಬಡಿಕೆ ಏನಂದರೆ, ಅವನಿಗೂ ಅವನ ತರುವಾಯ ಅವನ ಸಂತತಿಯವರಿಗೂ ಯಾಜಕತ್ವವು ಶಾಶ್ವತವಾಗಿಯೇ ಇರುವದೆಂದು ಮಾತುಕೊಡುತ್ತೇನೆ. ಅವನು ತನ್ನ ದೇವರ ಗೌರವವನ್ನು ಸ್ಥಾಪಿಸಿ ಇಸ್ರಾಯೇಲ್ಯರಿಗೋಸ್ಕರ ದೋಷಪರಿಹಾರವನ್ನು ಮಾಡಿದ್ದರಿಂದ ನಾನು ಅವನಿಗೆ ಈ ಮಾತನ್ನು ಕೊಟ್ಟಿದ್ದೇನೆ ಎಂದು ಹೇಳಿದನು.


ದೇವರು ಒಂದು ವೇಳೆ ಮನಮರುಗಿ ಹಿಂದಿರುಗಿ ತನ್ನ ಉಗ್ರಕೋಪವನ್ನು ತೊಲಗಿಸಾನು, ನಾವು ನಾಶವಾಗದೆ ಉಳಿದೇವು ಎಂಬದನ್ನು ನಿನೆವೆಯಲ್ಲೆಲ್ಲಾ ಸಾರಿಸಿದನು.


ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೇದನ್ನು ಪ್ರೀತಿಸಿರಿ, ಚಾವಡಿಯಲ್ಲಿ ನ್ಯಾಯವನ್ನು ಸ್ಥಾಪಿಸಿರಿ; ಒಂದು ವೇಳೆ ಸೇನಾಧೀಶ್ವರದೇವರಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ಪ್ರಸನ್ನನಾದಾನು.


ಆತನು ಇಸ್ರಾಯೇಲ್ ರಾಜ್ಯವನ್ನು ದಾವೀದಸಂತಾನದವರ ಕೈಯಿಂದ ಕಿತ್ತುಕೊಂಡನಂತರ ಇಸ್ರಾಯೇಲ್ಯರು ನೆಬಾಟನ ಮಗನಾದ ಯಾರೊಬ್ಬಾಮನನ್ನು ಅರಸನನ್ನಾಗಿ ಮಾಡಿಕೊಳ್ಳಲು ಅವನು ಅವರನ್ನು


ಒಂದು ವೇಳೆ ಯೆಹೋವನು ನನ್ನ ಕಷ್ಟವನ್ನು ನೋಡಿ ಈಹೊತ್ತಿನ ಶಾಪಕ್ಕೆ ಬದಲಾಗಿ ನನಗೆ ಶುಭವನ್ನು ಅನುಗ್ರಹಿಸಾನು ಎಂದು ಹೇಳಿದನು.


ನಾನಾದರೋ ನಿಮಗೋಸ್ಕರವಾಗಿ ಯೆಹೋವನನ್ನು ಪ್ರಾರ್ಥಿಸುತ್ತಾ ಆತನ ಉತ್ತಮ ನೀತಿಮಾರ್ಗವನ್ನು ನಿಮಗೆ ತೋರಿಸಿಕೊಡುವದನ್ನು ಬಿಡುವದೇ ಇಲ್ಲ; ಬಿಟ್ಟರೆ ಆತನ ದೃಷ್ಟಿಯಲ್ಲಿ ಪಾಪಿಯಾಗಿರುವೆನು.


ಮೋಶೆ ಹೇಳಿದಂತೆ ಆರೋನನು ಧೂಪಾರತಿಯನ್ನು ತೆಗೆದುಕೊಂಡು ಸಮೂಹದವರ ಮಧ್ಯಕ್ಕೆ ಓಡಿದಾಗ ಘೋರವ್ಯಾಧಿ ಆ ಜನರಲ್ಲಿ ಹರಡಿಕೊಳ್ಳುತ್ತಾ ಇತ್ತು. ಆದದರಿಂದ ಅವನು ಧೂಪಹಾಕಿ ಜನರಿಗೋಸ್ಕರ ದೋಷಪರಿಹಾರವನ್ನು ಮಾಡಿದನು.


ಎದುರಿಸುವವರನ್ನು ನಿಧಾನದಿಂದ ತಿದ್ದುವವನೂ ಆಗಿರಬೇಕು. ಒಂದು ವೇಳೆ ದೇವರು ಆ ಎದುರಿಸುವವರ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿ ಸತ್ಯದ ಜ್ಞಾನವನ್ನು ಅವರಿಗೆ ಕೊಟ್ಟಾನು.


ಅಬ್ರಹಾಮನಿಗೆ ಉಂಟಾದ ಆಶೀರ್ವಾದವು ಕ್ರಿಸ್ತ ಯೇಸುವಿನಲ್ಲಿ ಅನ್ಯಜನರಿಗೆ ಉಂಟಾಗುವಂತೆಯೂ ದೇವರು ವಾಗ್ದಾನಮಾಡಿದ ಆತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತೆಯೂ


ಶರೀರಸಂಬಂಧವಾಗಿ ಸ್ವಜನರಾಗಿರುವ ನನ್ನ ಸಹೋದರರಿಗೋಸ್ಕರ ನಾನೇ ಸಾಧ್ಯವಾದರೆ ಕ್ರಿಸ್ತನನ್ನು ಅಗಲಿ ಶಾಪಗ್ರಸ್ತನಾಗುವದಕ್ಕೆ ಒಪ್ಪಿಕೊಂಡೇನು.


ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ - ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ಪಾಪ ಮಾಡಿದ್ದೇನೆ; ಇನ್ನು ನಾನು ನಿನ್ನ ಮಗನೆನಿಸಿಕೊಳ್ಳುವದಕ್ಕೆ ಯೋಗ್ಯನಲ್ಲ;


ಹೀಗಿರಲು ನಾನು ಹೇಳುವ ಮಾತೇನಂದರೆ - ಇವಳ ಪಾಪಗಳು ಬಹಳವಾಗಿದ್ದರೂ ಅವು ಕ್ಷವಿುಸಲ್ಪಟ್ಟಿವೆ. ಇದಕ್ಕೆ ಪ್ರಮಾಣವೇನಂದರೆ ಇವಳು ತೋರಿಸಿದ ಪ್ರೀತಿ ಬಹಳ. ಆದರೆ ಯಾವನಿಗೆ ಸ್ವಲ್ಪ ಮಾತ್ರ ಕ್ಷವಿುಸಲ್ಪಟ್ಟಿದೆಯೋ ಅವನು ತೋರಿಸುವ ಪ್ರೀತಿಯು ಸ್ವಲ್ಪವೇ ಅಂದನು.


ಹೀಗೆ ಆ ಯೌವನಸ್ಥರು ಯೆಹೋವನ ನೈವೇದ್ಯವನ್ನು ತುಚ್ಫೀಕರಿಸಿದ್ದರಿಂದ ಅವರ ಅಪರಾಧವು ಆತನ ದೃಷ್ಟಿಯಲ್ಲಿ ಅಧಿಕವಾಯಿತು.


ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ ಒಬ್ಬರಿಗೋಸ್ಕರ ಒಬ್ಬರು ದೇವರನ್ನು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ವಿಜ್ಞಾಪನೆಯು ಬಹು ಬಲವಾಗಿದೆ.


ಹೀಗಿರಲು ನೀನು ಯೆಹೋವನಾದ ನನ್ನ ಆಜ್ಞೆಯನ್ನು ತಿರಸ್ಕರಿಸಿ ನನ್ನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವದನ್ನು ಮಾಡಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಕತ್ತಿಯಿಂದ ಕೊಲ್ಲಿಸಿ ಅವನ ಹೆಂಡತಿಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಂಡಿ.


ಮೋಶೆ [ಲೇವಿಯರಿಗೆ] - ಈ ಹೊತ್ತು ನಿಮ್ಮಲ್ಲಿ ಪ್ರತಿಯೊಬ್ಬನು ಮಗನನ್ನಾದರೂ ಅಣ್ಣತಮ್ಮಂದಿರನ್ನಾದರೂ ಲಕ್ಷ್ಯಕ್ಕೆ ತೆಗೆದುಕೊಳ್ಳದೆ ನಿಮ್ಮನ್ನು ಯೆಹೋವನ ಸೇವೆಗೆ ಪ್ರತಿಷ್ಠಿಸಿಕೊಳ್ಳಬೇಕು; ಹಾಗಾದರೆ ಆತನು ಈ ಹೊತ್ತೇ ನಿಮ್ಮನ್ನು ಆಶೀರ್ವದಿಸುವನು ಎಂದು ಹೇಳಿದನು.


ಆತನ ಯಾಜಕರಲ್ಲಿ ಮೋಶೆ ಆರೋನರೂ ಆತನ ಹೆಸರಿನಲ್ಲಿ ಪ್ರಾರ್ಥಿಸುವವರೊಳಗೆ ಸಮುವೇಲನೂ ಪ್ರಾರ್ಥಿಸಿಕೊಂಡಾಗೆಲ್ಲಾ ಯೆಹೋವನು ಅವರಿಗೆ ಸದುತ್ತರವನ್ನು ದಯಪಾಲಿಸುತ್ತಿದ್ದನು.


ನಾನು ಯೆಹೋವನಿಗೆ ಮೊರೆಯಿಡುವೆನು; ಈಗ ಗೋದಿಯ ಸುಗ್ಗಿಯಿದ್ದರೂ ಆತನು ಗುಡುಗನ್ನೂ ಮಳೆಯನ್ನೂ ಕಳುಹಿಸುವದರ ಮೂಲಕ ನೀವು ಅರಸನನ್ನು ಕೇಳಿಕೊಂಡದ್ದು ತನ್ನ ದೃಷ್ಟಿಯಲ್ಲಿ ಎಷ್ಟೋ ಕೆಟ್ಟದ್ದಾಗಿದೆ ಎಂಬದನ್ನು ತೋರಿಸಿಕೊಡುವನು ಎಂದು ಅವರಿಗೆ ಹೇಳಿ ಯೆಹೋವನಿಗೆ ಮೊರೆಯಿಡಲು


ನಮಗೊಬ್ಬ ಅರಸನು ಬೇಕೆಂದು ನಾವು ಬೇಡಿಕೊಂಡದರಿಂದ ನಮ್ಮ ಪಾಪಗಳಿಗೆ ಮತ್ತೊಂದು ಪಾಪವು ಕೂಡಿತು; ಆದದರಿಂದ ನಿನ್ನ ಸೇವಕರಾದ ನಾವು ಸಾಯದಂತೆ ನಿನ್ನ ದೇವರಾದ ಯೆಹೋವನನ್ನು ಬೇಡಿಕೋ ಎಂದು ವಿಜ್ಞಾಪಿಸಲು ಅವನು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು