Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:31 - ಕನ್ನಡ ಸತ್ಯವೇದವು J.V. (BSI)

31 ಆಗ ಮೋಶೆ ಯೆಹೋವನ ಬಳಿಗೆ ತಿರಿಗಿ ಹೋಗಿ - ಅಯ್ಯೋ ಅಯ್ಯೋ, ಈ ಜನರು ಮಹಾಪಾಪವನ್ನು ಮಾಡಿದ್ದಾರೆ; ಚಿನ್ನದ ದೇವರನ್ನು ಮಾಡಿಕೊಂಡಿದ್ದಾರೆ. ಆದರೂ ನೀನು ಕರುಣವಿಟ್ಟು ಅವರ ಪಾಪವನ್ನು ಕ್ಷವಿುಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆಗ ಮೋಶೆ ಯೆಹೋವನ ಬಳಿಗೆ ತಿರುಗಿ ಹೋಗಿ, “ಅಯ್ಯೋ! ಈ ಜನರು ಮಹಾ ಪಾಪವನ್ನು ಮಾಡಿದ್ದಾರೆ. ಚಿನ್ನದ ಹೋರಿಕರುವನ್ನು ಮಾಡಿ ದೇವರೆಂದುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಅಂತೆಯೇ ಮೋಶೆ ಸರ್ವೇಶ್ವರನ ಬಳಿಗೆ ಮರಳಿ ಬಂದು, “ಅಕಟಕಟಾ, ಚಿನ್ನದಿಂದ ದೇವರನ್ನು ಮಾಡಿಕೊಂಡು ಈ ಜನರು ಮಹಾಪಾಪವನ್ನು ಕಟ್ಟಿಕೊಂಡಿದ್ದಾರೆ! ಆದರೂ ಕರುಣೆಯಿಟ್ಟು ಅವರ ಪಾಪವನ್ನು ಕ್ಷಮಿಸಿಬಿಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಅಂತೆಯೇ ಮೋಶೆಯು ಯೆಹೋವನ ಬಳಿಗೆ ಮರಳಿ ಹೋಗಿ, “ದಯವಿಟ್ಟು ಆಲಿಸು! ಈ ಜನರು ಬಹಳ ಕೆಟ್ಟ ಪಾಪವನ್ನು ಮಾಡಿದ್ದಾರೆ. ಚಿನ್ನದಿಂದ ಮೂರ್ತಿಯನ್ನು ಮಾಡಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಹೀಗೆ ಮೋಶೆಯು ಯೆಹೋವ ದೇವರ ಬಳಿಗೆ ತಿರುಗಿ ಹೋಗಿ, “ಅಯ್ಯೋ, ಈ ಜನರು ದೊಡ್ಡ ಪಾಪವನ್ನು ಮಾಡಿದ್ದಾರೆ. ಅವರು ತಮಗೆ ಚಿನ್ನದ ದೇವರುಗಳನ್ನು ಮಾಡಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:31
12 ತಿಳಿವುಗಳ ಹೋಲಿಕೆ  

ಆದದರಿಂದ ನೀವು ಬೆಳ್ಳಿಬಂಗಾರಗಳಿಂದ ದೇವರುಗಳನ್ನು ಮಾಡಿಕೊಂಡು ನನ್ನ ಜೊತೆಯಲ್ಲಿ ಸೇರಿಸಕೂಡದು.


ಇಸ್ರಾಯೇಲ್ಯರೆಲ್ಲರೂ ನಿನ್ನ ಧರ್ಮಪ್ರಮಾಣವನ್ನು ಮೀರಿ ನಿನ್ನ ಮಾತನ್ನು ಕೇಳಲೊಲ್ಲದೆ ಓರೆಯಾಗಿ ಹೋದರು; ಆದಕಾರಣ ನಿನ್ನ ಶಾಪದ ಕೇಡುಗಳೂ ದೇವಸೇವಕನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ನೀನು ಆಣೆಯಿಟ್ಟು ಪ್ರಕಟಿಸಿದ ವಿಪತ್ತುಗಳೂ ನಮ್ಮ ಮೇಲೆ ಸುರಿಯಲ್ಪಟ್ಟಿವೆ; ನಾವು ದೇವದ್ರೋಹಿಗಳೇ ಸರಿ.


ಸ್ವಾಮೀ, ನಿನಗೆ ವಿರುದ್ಧವಾಗಿ ಪಾಪಮಾಡಿದ್ದರಿಂದ ನಾವೂ ನಮ್ಮ ಅರಸರೂ ಪ್ರಧಾನರೂ ಹಿರಿಯರೂ ನಾಚಿಕೆಗೆ ಗುರಿಯಾಗಿದ್ದೇವೆ.


ಮರುದಿನದಲ್ಲಿ ಮೋಶೆ ಜನರಿಗೆ - ನೀವು ಮಹಾಪಾಪವನ್ನು ಮಾಡಿದಿರಿ. ಆದರೂ ನಾನು ಬೆಟ್ಟವನ್ನು ಹತ್ತಿ ಯೆಹೋವನ ಸನ್ನಿಧಿಗೆ ಹೋಗುವೆನು; ಒಂದು ವೇಳೆ ನೀವು ಮಾಡಿದ ಪಾಪಕೃತ್ಯಕ್ಕೆ ಕ್ಷಮಾಪಣೆಯು ನನ್ನ ಮೂಲಕ ದೊರಕೀತು ಎಂದು ಹೇಳಿದನು.


ನಾವು ಪಾಪಾಪರಾಧಗಳನ್ನು ಮಾಡಿ ಕೆಟ್ಟವರಾಗಿ ನಡೆದು ನಿನಗೆ ತಿರುಗಿಬಿದ್ದು ನಿನ್ನ ಆಜ್ಞಾವಿಧಿಗಳನ್ನು ತೊರೆದು


ನೀನು ನಮ್ಮ ಮೇಲೆ ಎಷ್ಟು ಕೇಡನ್ನು ಬರಮಾಡಿದರೂ ನೀನು ಧರ್ಮಸ್ವರೂಪನೇ; ನೀನು ಸತ್ಯವನ್ನೇ ನಡಿಸಿದಿ, ನಾವಾದರೋ ದುಷ್ಟರು.


ಯೆಹೋವನೇ, ಇಸ್ರಾಯೇಲ್‍ದೇವರೇ, ಈಗಿರುವಷ್ಟು ಜನರನ್ನು ನಮ್ಮಲ್ಲಿ ಉಳಿಸಿದ್ದರಿಂದ ನೀನು ಧರ್ಮಸ್ವರೂಪನೆಂದು ಪ್ರಕಟವಾಯಿತು. ನಾವಾದರೋ ನಿನ್ನ ದೃಷ್ಟಿಯಲ್ಲಿ ಅಪರಾಧಿಗಳು. ಈ ನಮ್ಮ ದುಷ್ಕೃತ್ಯದ ನಿವಿುತ್ತವಾಗಿ ನಿನ್ನೆದುರಿನಲ್ಲಿ ನಿಲ್ಲಲಾರೆವು ಎಂಬದೇ.


ಮೋಶೆ ಆ ಬೆಟ್ಟದಲ್ಲಿ ಯೆಹೋವನ ಸನ್ನಿಧಿಯಲ್ಲಿ ಹಗಲಿರಳು ನಾಲ್ವತ್ತು ದಿನ ಇದ್ದನು. ಅವನು ಏನೂ ಊಟಮಾಡಲಿಲ್ಲ, ಏನೂ ಕುಡಿಯಲಿಲ್ಲ. ಆತನು ನಿಬಂಧನದ ವಾಕ್ಯಗಳನ್ನು ಅಂದರೆ ಹತ್ತು ಆಜ್ಞೆಗಳನ್ನು ಆ ಕಲ್ಲಿನ ಹಲಿಗೆಗಳ ಮೇಲೆ ಬರೆದನು.


ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು. ಆಕಾಶದಲ್ಲಾಗಲಿ ಭೂವಿುಯಲ್ಲಾಗಲಿ ಭೂವಿುಯ ಕೆಳಗಣ ನೀರಿನಲ್ಲಾಗಲಿ ಇರುವ ಯಾವದರ ರೂಪವನ್ನೂ ಮಾಡಿಕೊಳ್ಳಬಾರದು.


ಅವರು ತಮಗೆ ಎರಕದ ಬಸವನನ್ನು ಮಾಡಿಕೊಂಡು - [ಇಸ್ರಾಯೇಲ್ಯರೇ,] ನಿಮ್ಮನ್ನು ಐಗುಪ್ತದಿಂದ ಕರಕೊಂಡು ಬಂದ ದೇವರು ಇದೇ ಎಂದು ಹೇಳಿ ನಿನ್ನನ್ನು ಅಸಡ್ಡೆ ಮಾಡಿದಾಗಲೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು