Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:5 - ಕನ್ನಡ ಸತ್ಯವೇದವು J.V. (BSI)

5 ಆರೋನನು ಅದನ್ನು ನೋಡಿ ಬಸವನಿಗೆ ಎದುರಾಗಿ ಯಜ್ಞವೇದಿಯನ್ನು ಕಟ್ಟಿಸಿ - ನಾಳೆ ಯೆಹೋವನಿಗೆ ಉತ್ಸವವಾಗಬೇಕು ಎಂದು ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆರೋನನು ಅದನ್ನು ನೋಡಿದಾಗ ಹೋರಿಕರುವಿಗೆ ಎದುರಾಗಿ ಒಂದು ಯಜ್ಞವೇದಿಯನ್ನು ಕಟ್ಟಿಸಿ, “ನಾಳೆ ಯೆಹೋವನಿಗೆ ಹಬ್ಬವಾಗಬೇಕು” ಎಂದು ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆರೋನನು ಇದನ್ನು ನೋಡಿ ಆ ಹೋರಿಕರುವಿನ ಮುಂದೆ ಒಂದು ಬಲಿಪೀಠವನ್ನು ಕಟ್ಟಿಸಿ, “ನಾಳೆ ಸರ್ವೇಶ್ವರ ಸ್ವಾಮಿಯ ಗೌರವಾರ್ಥ ಹಬ್ಬವನ್ನು ಆಚರಿಸಬೇಕು,” ಎಂದು ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆರೋನನು ಇವೆಲ್ಲವನ್ನು ನೋಡಿ, ಬಸವನ ಮುಂದೆ ಒಂದು ಯಜ್ಞವೇದಿಕೆಯನ್ನು ಕಟ್ಟಿಸಿದನು. ಬಳಿಕ, “ನಾಳೆ ಯೆಹೋವನನ್ನು ಸನ್ಮಾನಿಸಲು ಒಂದು ವಿಶೇಷ ಹಬ್ಬವಿರುವುದು” ಎಂದು ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆರೋನನು ಅದನ್ನು ನೋಡಿ ಅದರ ಮುಂದೆ ಬಲಿಪೀಠವನ್ನು ಕಟ್ಟಿದನು. “ನಾಳೆ ಯೆಹೋವ ದೇವರಿಗೆ ಹಬ್ಬ,” ಎಂದು ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:5
18 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು ದೂತರ ಮುಖಾಂತರವಾಗಿ - ಬಾಳನ ಎಲ್ಲಾ ಭಕ್ತರೂ ತಮ್ಮನ್ನು ಶುದ್ಧಪಡಿಸಿಕೊಂಡು ಜಾತ್ರೆಗೆ ಬರಬೇಕೆಂದು ಇಸ್ರಾಯೇಲ್ಯರ ಸಮಸ್ತ ಪ್ರಾಂತಗಳಲ್ಲಿ ಪ್ರಕಟಿಸಿದನು.


ಯೆಹೋವನು ನೇವಿುಸಿರುವ ಸಬ್ಬತ್ ದಿನಗಳ ಹೊರತಾಗಿ ಮೇಲೆ ಕಂಡವುಗಳೇ ಯೆಹೋವನ ಹಬ್ಬದ ದಿನಗಳು. ಆ ದಿನಗಳಲ್ಲಿ ದೇವಾರಾಧನೆಗಾಗಿ ಸಭೆಕೂಡುವಂತೆ ನೀವು ಪ್ರಕಟಿಸಬೇಕು.


ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸಬೇಕು - ಯೆಹೋವನಿಂದ ನೇಮಕವಾದ ಹಬ್ಬಗಳ ದಿನಗಳು ಇವೇ; ಈ ದಿನಗಳಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕೆಂಬದಾಗಿ ಸಾರಬೇಕು. ನಾನು ನೇವಿುಸಿರುವ ಹಬ್ಬದದಿನಗಳು ಯಾವವಂದರೆ -


ಆದಕಾರಣ ನಾವು ಹಳೇ ಹುಳಿಯನ್ನು ಅಂದರೆ ದುರ್ಮಾರ್ಗತ್ವ ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೆ ಸರಳತೆ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯನ್ನೇ ತೆಗೆದುಕೊಂಡು ಹಬ್ಬವನ್ನು ಆಚರಿಸೋಣ.


ಇಸ್ರಾಯೇಲು ತನ್ನ ಸೃಷ್ಟಿಕರ್ತನನ್ನು ಮರೆತು ಅರಮನೆಗಳನ್ನು ಕಟ್ಟಿಕೊಂಡಿದೆ; ಯೆಹೂದವು ಕೋಟೆಕೊತ್ತಲಗಳ ಪಟ್ಟಣಗಳನ್ನು ಮಾಡಿಕೊಂಡಿದೆ; ಆಹಾ, ನಾನು ಆ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು, ಅದು ಆ ಸೌಧಗಳನ್ನು ನುಂಗಿಬಿಡುವದು.


ಎಫ್ರಾಯೀಮು ಯಜ್ಞವೇದಿಗಳನ್ನು ಹೆಚ್ಚೆಚ್ಚಾಗಿ ಕಟ್ಟಿ ಪಾಪಮಾಡಿದೆ; ಕಟ್ಟಿದ ಯಜ್ಞವೇದಿಗಳೇ ಅದಕ್ಕೆ ಪಾಪವಾಗಿ ಪರಿಣವಿುಸಿವೆ.


ಜನರು ಇಸ್ರಾಯೇಲ್‍ದೇವರಾದ ಯೆಹೋವನಿಗೋಸ್ಕರ ಪಸ್ಕವನ್ನಾಚರಿಸುವದಕ್ಕಾಗಿ ಯೆರೂಸಲೇವಿುಗೆ ಬರಬೇಕು ಎಂಬದಾಗಿ ಬೇರ್ಷೆಬದಿಂದ ದಾನಿನವರೆಗೂ ವಾಸಿಸುವ ಇಸ್ರಾಯೇಲ್ಯರೊಳಗೆ ಡಂಗುರಹೊಡಿಸಬೇಕೆಂದು ನಿರ್ಣಯಿಸಿದರು. ಜನರಲ್ಲಿ ಹೆಚ್ಚು ಮಂದಿ ಆವರೆಗೂ ಧರ್ಮಶಾಸ್ತ್ರವಿಧಿಯ ಮೇರೆಗೆ ಪಸ್ಕವನ್ನು ಆಚರಿಸಿರಲಿಲ್ಲ.


ಅರಸನಾದ ಆಹಾಜನು ದಮಸ್ಕದಿಂದ ಬರುವಷ್ಟರಲ್ಲಿ ಊರೀಯನು ಅರಸನಿಂದ ತನಗೆ ಬಂದ ಮಾದರಿಯ ಪ್ರಕಾರ ಒಂದು ವೇದಿಯನ್ನು ಮಾಡಿಸಿಟ್ಟಿದ್ದನು.


ಅದರಲ್ಲಿ - ಎಲ್ಲರೂ ಉಪವಾಸ ಮಾಡಬೇಕೆಂದು ಪ್ರಕಟಿಸಿ ನಾಬೋತನನ್ನು ನೆರೆದ ಸಭೆಯ ಮುಂದೆ ನಿಲ್ಲಿಸಿ


ಸೌಲನು ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸಿದನು; ಅವನು ಕಟ್ಟಿಸಿದ ಯಜ್ಞವೇದಿಗಳಲ್ಲಿ ಇದೇ ಮೊದಲನೆಯದು.


ಆ ದಿವಸದಲ್ಲಿ ದೇವಾರಾಧನೆಗಾಗಿ ಸಭೆ ಕೂಡಬೇಕೆಂಬದಾಗಿ ಪ್ರಸಿದ್ಧಪಡಿಸಬೇಕು. ಅದರಲ್ಲಿ ಯಾವ ಉದ್ಯೋಗವನ್ನೂ ನಡಿಸಬಾರದು. ಇದು ನಿಮಗೂ ನಿಮ್ಮ ಸಂತತಿಯವರಿಗೂ ನಿಮ್ಮ ಎಲ್ಲಾ ನಿವಾಸಗಳಲ್ಲಿ ಶಾಶ್ವತನಿಯಮ.


ಯೆಹೋವನಿಂದ ನೇಮಕವಾದ ಹಬ್ಬದ ಕಾಲಗಳು ಇವೇ; ಈ ಕಾಲಗಳಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ನೇಮಕವಾದ ದಿನಗಳಲ್ಲಿ ಇವುಗಳನ್ನು ಪ್ರಸಿದ್ಧಪಡಿಸಬೇಕು.


ಅವನು ಆ ಚಿನ್ನವನ್ನು ತನ್ನ ವಶಕ್ಕೆ ತೆಗೆದುಕೊಂಡು ಬಸವನ ಆಕಾರವನ್ನು ಉಳಿಯಿಂದ ರೂಪಿಸಿ ಎರಕ ಹೊಯಿಸಲಾಗಿ ಅವರು - ಇಸ್ರಾಯೇಲ್ಯರೇ, ನೋಡಿರಿ; ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರಕೊಂಡುಬಂದ ದೇವರು ಎಂದು ಹೇಳಿದರು.


ಆ ದಿನವು ನಿಮಗೆ ಜ್ಞಾಪಕಾರ್ಥವಾಗಿರುವದು. ಅದರಲ್ಲಿ ಯೆಹೋವನ ಘನಕ್ಕಾಗಿ ಹಬ್ಬವನ್ನು ಮಾಡಬೇಕು. ಅದನ್ನು ಶಾಶ್ವತನಿಯಮವೆಂದು ತಲತಲಾಂತರಕ್ಕೂ ಆಚರಿಸಬೇಕು.


ಮೋಶೆ ಅವನಿಗೆ - ನಾವು ಯೆಹೋವನಿಗೆ ಜಾತ್ರೆಯನ್ನು ನಡಿಸಬೇಕಾಗಿದೆ; ಆದಕಾರಣ ಹುಡುಗರು, ಮುದುಕರು ಎಲ್ಲರು ಹೋಗುತ್ತೇವೆ; ಗಂಡು ಹೆಣ್ಣು ಮಕ್ಕಳನ್ನೂ ದನಕುರಿಗಳನ್ನೂ ತೆಗೆದುಕೊಂಡು ಹೋಗುತ್ತೇವೆ ಎಂದು ಉತ್ತರ ಕೊಟ್ಟನು.


ಆದದರಿಂದ ಮರುದಿನದಲ್ಲಿ ಜನರು ಬೆಳಿಗ್ಗೆ ಎದ್ದು ಸರ್ವಾಂಗಹೋಮಗಳನ್ನೂ ಸಮಾಧಾನ ಯಜ್ಞಗಳನ್ನೂ ಸಮರ್ಪಿಸಿದರು. ಜನರು ಉಣ್ಣುವದಕ್ಕೂ ಕುಡಿಯುವದಕ್ಕೂ ಕೂತುಕೊಂಡರು; ಆಮೇಲೆ ಎದ್ದು ಕುಣಿದಾಡಿದರು.


ಆ ಸ್ಥಳದಲ್ಲಿ ಮೋಶೆಯು ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ ಯೆಹೋವ ನಿಸ್ಸಿ ಎಂದು ಹೆಸರಿಟ್ಟು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು