Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 32:6 - ಕನ್ನಡ ಸತ್ಯವೇದವು J.V. (BSI)

6 ಆದದರಿಂದ ಮರುದಿನದಲ್ಲಿ ಜನರು ಬೆಳಿಗ್ಗೆ ಎದ್ದು ಸರ್ವಾಂಗಹೋಮಗಳನ್ನೂ ಸಮಾಧಾನ ಯಜ್ಞಗಳನ್ನೂ ಸಮರ್ಪಿಸಿದರು. ಜನರು ಉಣ್ಣುವದಕ್ಕೂ ಕುಡಿಯುವದಕ್ಕೂ ಕೂತುಕೊಂಡರು; ಆಮೇಲೆ ಎದ್ದು ಕುಣಿದಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆದುದರಿಂದ ಮರುದಿನದಲ್ಲಿ ಜನರು ಬೆಳಿಗ್ಗೆ ಎದ್ದು ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು. ಆನಂತರ ಜನರು ತಿನ್ನುವುದಕ್ಕೂ ಕುಡಿಯುವುದಕ್ಕೂ ಕುಳಿತುಕೊಂಡರು. ಆಮೇಲೆ ಕುಣಿದಾಡಲು ಎದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅಂತೆಯೇ ಮರುದಿನ ಬೆಳಿಗ್ಗೆ ಜನರು ಎದ್ದು ದಹನಬಲಿಗಳನ್ನೂ ಸಮಾಧಾನಬಲಿಗಳನ್ನೂ ಸಮರ್ಪಿಸಿದರು. ಬಳಿಕ ತಿನ್ನಲೂ ಕುಡಿಯಲೂ ಕುಳಿತುಕೊಂಡರು. ಆಮೇಲೆ ಎದ್ದು ಕುಣಿದಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಮರುದಿನ ಮುಂಜಾನೆ ಜನರೆಲ್ಲರೂ ಬೇಗನೆ ಎದ್ದು ತಮ್ಮ ಪಶುಗಳನ್ನು ವಧಿಸಿ ಸರ್ವಾಂಗಹೋಮಗಳನ್ನಾಗಿಯೂ ಸಮಾಧಾನಯಜ್ಞಗಳನ್ನಾಗಿಯೂ ಅರ್ಪಿಸಿ ತಿನ್ನುವುದಕ್ಕೂ ಕುಡಿಯುವುದಕ್ಕೂ ಕುಳಿತುಕೊಂಡರು. ಬಳಿಕ ಎದ್ದು ಕುಣಿದಾಡಿದರು ಮತ್ತು ಕೂಗಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಮರುದಿನ ಬೆಳಿಗ್ಗೆ ಜನರು ಎದ್ದು, ದಹನಬಲಿಗಳನ್ನೂ, ಸಮಾಧಾನ ಬಲಿಗಳನ್ನೂ ಸಮರ್ಪಿಸಿದರು. ಬಳಿಕ ತಿನ್ನಲೂ ಕುಡಿಯಲೂ ಕುಳಿತುಕೊಂಡರು, ಆಮೇಲೆ ಎದ್ದು ಕುಣಿದಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 32:6
10 ತಿಳಿವುಗಳ ಹೋಲಿಕೆ  

ಅವರಲ್ಲಿ ಕೆಲವರು ವಿಗ್ರಹಾರಾಧಕರಾಗಿದ್ದರು; ಜನರು ಉಣ್ಣುವದಕ್ಕೂ ಕುಡಿಯುವದಕ್ಕೂ ಕೂತುಕೊಂಡರು, ಕುಣಿದಾಡುವದಕ್ಕೆ ಎದ್ದರು ಎಂದು ಬರೆದದೆಯಲ್ಲಾ; ನೀವು ವಿಗ್ರಹಾರಾಧಕರಾಗಬೇಡಿರಿ.


ಆ ಸ್ತ್ರೀಯರು ತಮ್ಮ ದೇವತೆಗಳಿಗೆ ಮಾಡಿದ ಔತಣದ ಯಜ್ಞಗಳಿಗೆ ಇಸ್ರಾಯೇಲ್ಯರನ್ನು ಕರಿಸಲು ಇವರು ಆ ಭೋಜನವನ್ನು ಮಾಡಿ ಅವರ ದೇವತೆಗಳಿಗೆ ನಮಸ್ಕರಿಸುವವರಾದರು.


ಈ ಇಬ್ಬರು ಪ್ರವಾದಿಗಳು ಭೂನಿವಾಸಿಗಳನ್ನು ಪೀಡಿಸಿದ್ದರಿಂದ ಇವರು ಸತ್ತದ್ದಕ್ಕೆ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕಳುಹಿಸುವರು.


ನಿಮ್ಮ ಉತ್ಸವಗಳನ್ನು ದುಃಖಕ್ಕೆ ಮಾರ್ಪಡಿಸುವೆನು, ನಿಮ್ಮ ಗಾಯನಗಳನ್ನೆಲ್ಲಾ ಶೋಕಗೀತಕ್ಕೆ ತಿರುಗಿಸುವೆನು; ಎಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು ತಲೆಬೋಳಿಸಿಕೊಳ್ಳುವಂತೆ ಮಾಡುವೆನು; ನಿನ್ನ ಪ್ರಲಾಪವು ಏಕಪುತ್ರಶೋಕಕ್ಕೆ ಸಮಾನವಾಗುವದು, ಅದು ಆದ ಮೇಲೂ ವ್ಯಾಕುಲವು ಇದ್ದೇ ಇರುವದು.


ಒಂದೊಂದು ಯಜ್ಞವೇದಿಯ ಹತ್ತಿರದಲ್ಲಿಯೂ ಅಡವಾಗಿ ಇಟ್ಟುಕೊಂಡ ಬಟ್ಟೆಗಳ ಮೇಲೆ ಮಲಗಿಕೊಳ್ಳುತ್ತಾರೆ; ದಂಡಹಾಕಿಸಿಕೊಂಡವರ ದ್ರಾಕ್ಷಾರಸವನ್ನು ತಮ್ಮ ದೇವರ ಮಂದಿರದಲ್ಲಿಯೂ ಕುಡಿಯುತ್ತಾರೆ.


ಆರೋನನು ಅದನ್ನು ನೋಡಿ ಬಸವನಿಗೆ ಎದುರಾಗಿ ಯಜ್ಞವೇದಿಯನ್ನು ಕಟ್ಟಿಸಿ - ನಾಳೆ ಯೆಹೋವನಿಗೆ ಉತ್ಸವವಾಗಬೇಕು ಎಂದು ಪ್ರಕಟಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು