Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 33:13 - ಕನ್ನಡ ಸತ್ಯವೇದವು J.V. (BSI)

13 ನನಗೆ ನಿನ್ನ ದಯೆ ದೊರಕಿದ್ದಾದರೆ ನಾನು ನಿನ್ನನ್ನು ಬಲ್ಲವನಾಗಿರುವಂತೆ ನಿನ್ನ ಮಾರ್ಗವನ್ನು ನನಗೆ ತೋರಿಸು; ಆಗ ನಿನ್ನ ದಯೆ ನನಗೆ ದೊರೆಯಿತೆಂದು ನನಗೆ ತಿಳಿದಿರುವದು; ಈ ಜನವು ನಿನ್ನ ಪ್ರಜೆಯೆಂದು ಜ್ಞಾಪಕಮಾಡಿಕೋ ಎಂದು ಅರಿಕೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನನ್ನ ಮೇಲೆ ದಯೆಯಿರುವುದಾದರೆ ನಿನ್ನ ಮಾರ್ಗವನ್ನು ನನಗೆ ತೋರಿಸು ನಾನು ನಿನ್ನನ್ನು ಅರಿತುಕೊಳ್ಳುವಂತೆ ನಿನ್ನ ಕೃಪೆಯನ್ನು ನನಗೆ ದಯಪಾಲಿಸು ಆಗ ನಿನ್ನ ದಯೆ ನನಗೆ ದೊರೆಯಿತೆಂದು ನನಗೆ ತಿಳಿಯುವುದು. ಈ ಜನಾಂಗವು ನಿನ್ನ ಪ್ರಜೆಯೆಂಬುದನ್ನು ನೆನಪುಮಾಡಿಕೋ” ಎಂದು ಅರಿಕೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನನಗೆ ನಿಮ್ಮ ದಯೆ ದೊರಕಿದೆಯಾದರೆ ನಾನು ನಿಮ್ಮನ್ನು ಬಲ್ಲವನಾಗಿರುವಂತೆ ನಿಮ್ಮ ಮಾರ್ಗವನ್ನು ನನಗೆ ತೋರಿಸಿರಿ. ಆಗ ನಿಮ್ಮ ದಯೆ ನನಗೆ ದೊರಕಿದೆಯೆಂದು ತಿಳಿದುಕೊಳ್ಳುತ್ತೇನೆ. ಈ ಜನ ನಿಮ್ಮ ಪ್ರಜೆಯೆಂಬುದನ್ನು ನೆನಪಿನಲ್ಲಿಡಿ,” ಎಂದು ಅರಿಕೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಾನು ನಿನ್ನನ್ನು ನಿಜವಾಗಿಯೂ ಮೆಚ್ಚಿಸಿರುವುದಾದರೆ, ನಾನು ನಿನ್ನನ್ನು ತಿಳಿದುಕೊಳ್ಳುವಂತೆ ನಿನ್ನ ಮಾರ್ಗಗಳನ್ನು ಬೋಧಿಸು. ಆಗ ನಾನು ನಿನ್ನನ್ನು ಯಾವಾಗಲೂ ಮೆಚ್ಚಿಸಲು ಸಾಧ್ಯವಾಗುವುದು. ಇವರೆಲ್ಲರೂ ನಿನ್ನ ಜನರೆಂದು ಜ್ಞಾಪಕಮಾಡಿಕೊ” ಎಂದು ವಿಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಹಾಗಾದರೆ ಈಗ ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರೆಕಿದ್ದೇ ಆದರೆ ನಾನು ನಿಮ್ಮನ್ನು ತಿಳಿಯುವ ಹಾಗೆ, ನಿಮ್ಮ ಮಾರ್ಗವನ್ನು ನನಗೆ ತೋರಿಸಿ. ಆಗ ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಿರುವುದು. ಈ ಜನಾಂಗವು ನಿಮ್ಮ ಜನರೇ, ಎಂದು ಜ್ಞಾಪಿಸಿಕೊಳ್ಳುವೆನು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 33:13
27 ತಿಳಿವುಗಳ ಹೋಲಿಕೆ  

ಯೆಹೋವನೇ, ನಿನ್ನ ನಿಬಂಧನೆಗಳ ಮಾರ್ಗವನ್ನು ಉಪದೇಶಿಸು; ಕಡೇತನಕ ಅದರಲ್ಲಿಯೇ ನಡೆಯುವೆನು.


ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ತಿಳಿಸು; ನೀನು ಒಪ್ಪುವ ದಾರಿಯನ್ನು ತೋರಿಸು.


ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ಹೊಂಚುಹಾಕಿರುವವರಿಗೆ ಸಿಕ್ಕದ ಹಾಗೆ ನನ್ನನ್ನು ಸಮವಾದ ದಾರಿಯಲ್ಲಿ ನಡಿಸು.


ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನಿನ್ನ ಸತ್ಯತೆಯನ್ನು ನನ್ನ ದೃಷ್ಟಿಯಲ್ಲೇ ಇಟ್ಟುಕೊಂಡು ನಡೆಯುವೆನು. ನಾನು ನಿನ್ನ ನಾಮದಲ್ಲಿ ಭಯಭಕ್ತಿಯಿಂದಿರುವಂತೆ ಏಕಮನಸ್ಸನ್ನು ಅನುಗ್ರಹಿಸು.


ಇವರು ಮಹಾಶಕ್ತಿಯಿಂದಲೂ ಭುಜಬಲದಿಂದಲೂ ನೀನು ಬಿಡಿಸಿದ ನಿನ್ನ ಸ್ವಕೀಯ ಜನರಲ್ಲವೇ ಎಂದು ಬಿನ್ನೈಸಿದೆನು.


ನಾನು ಆತನನ್ನು ಬೇಡಿಕೊಳ್ಳುತ್ತಾ - ಕರ್ತನಾದ ಯೆಹೋವನೇ, ನೀನು ನಿನ್ನ ಮಹಿಮೆಯಿಂದ ರಕ್ಷಿಸಿ ನಿನ್ನ ಭುಜಬಲದಿಂದ ಐಗುಪ್ತ್ಯರಿಂದ ಬಿಡುಗಡೆಮಾಡಿದ ನಿನ್ನ ಸ್ವಕೀಯ ಜನರನ್ನು ನಾಶಮಾಡಬೇಡ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಪ್ರಭಾವಸ್ವರೂಪನಾದ ತಂದೆಯೂ ಆಗಿರುವಾತನು ತನ್ನ ವಿಷಯವಾಗಿ ತಿಳುವಳಿಕೆಯನ್ನು ಕೊಟ್ಟು ಇದುವರೆಗೆ ಗುಪ್ತವಾಗಿದ್ದ ಸತ್ಯಾರ್ಥಗಳನ್ನು ತಿಳುಕೊಳ್ಳುವ ಜ್ಞಾನವುಳ್ಳ ಆತ್ಮವನ್ನು ನಿಮಗೆ ದಯಪಾಲಿಸಬೇಕೆಂದು ಪ್ರಾರ್ಥಿಸುತ್ತೇನೆ.


ಕರ್ತನ ಚಿತ್ತದ ವಿಷಯವಾದ ತಿಳುವಳಿಕೆಯಿಂದ ತುಂಬಿಕೊಂಡು ಆತನಿಗೆ ಯೋಗ್ಯರಾಗಿ ನಡೆದು ಎಲ್ಲಾ ವಿಧದಲ್ಲಿ ಆತನನ್ನು ಸಂತೋಷಪಡಿಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯವೆಂಬ ಫಲವನ್ನು ಕೊಡುತ್ತಾ ದೇವಜ್ಞಾನದಿಂದ ಅಭಿವೃದ್ಧಿಯಾಗುತ್ತಿರಬೇಕೆಂತಲೂ


ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವದೇ ನಿತ್ಯಜೀವವು.


ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿಕೊಳ್ಳುವಾಗ ಇದೇ ಮಾರ್ಗ, ಇದರಲ್ಲೇ ನಡೆಯಿರಿ ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವದು.


ಯೆಹೋವನ ಸೇವಕರಾದ ಯಾಜಕರು ದ್ವಾರಮಂಟಪಕ್ಕೂ ಯಜ್ಞವೇದಿಗೂ ನಡುವೆ ಅಳುತ್ತಾ - ಯೆಹೋವನೇ, ನಿನ್ನ ಜನರನ್ನು ಕರುಣಿಸು; ಅನ್ಯಜನಾಂಗಗಳು ಅವರ ಹೆಸರನ್ನು ಕಟ್ಟುಗಾದೆಯಾಗಿ ಎತ್ತುವ ನಿಂದೆಗೆ ನಿನ್ನ ಸ್ವಾಸ್ತ್ಯದವರನ್ನು ಗುರಿಮಾಡಬೇಡ; ಅವರ ದೇವರು ಎಲ್ಲಿ ಎಂಬ ಮಾತು ಮ್ಲೇಚ್ಫರಲ್ಲಿ ಏಕೆ ಸಲ್ಲಬೇಕು ಎಂದು ವಿಜ್ಞಾಪಿಸಲಿ.


ನೀವು ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಅಭಿವೃದ್ಧಿಯನ್ನು ಹೊಂದುತ್ತಾ ಇರ್ರಿ. ಆತನಿಗೆ ಈಗಲೂ ಸದಾಕಾಲವೂ ಸ್ತೋತ್ರ. ಆಮೆನ್.


ಕರ್ತನೇ, ನಿನ್ನ ಅನುಗ್ರಹವು ನನಗೆ ದೊರಕಿದ್ದಾದರೆ ನೀನೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು ಮೊಂಡರೇ; ಆದಾಗ್ಯೂ ನೀನು ನಮ್ಮ ಪಾಪಗಳನ್ನೂ ಅಧರ್ಮಗಳನ್ನೂ ಕ್ಷವಿುಸಿ ನಿನ್ನ ಜನರಾಗುವಂತೆ ನಮ್ಮನ್ನು ಸ್ವೀಕರಿಸಬೇಕೆಂದು ಪ್ರಾರ್ಥಿಸಿದನು.


ಅವರು ಸುವಾರ್ತೆಯನ್ನು ಬೇಡವೆಂದದ್ದರಿಂದ ದೇವರು ನಿಮಗೆ ಹಿತವನ್ನು ಉಂಟುಮಾಡಿ ಅವರನ್ನು ಶತ್ರುಗಳೆಂದೆಣಿಸಿದ್ದಾನೆ. ಆದರೂ ಅವರು ತಾನು ಆರಿಸಿಕೊಂಡ ಅಬ್ರಹಾಮ ಇಸಾಕ ಯಾಕೋಬರೆಂಬ ಪಿತೃಗಳ ವಂಶಸ್ಥರಾಗಿರುವದರಿಂದ ಅವರನ್ನು ಪ್ರಿಯರೆಂದು ಎಣಿಸಿದ್ದಾನೆ.


ನಿನ್ನ ದೊರೆತನಕ್ಕೆ ಎಂದಿಗೂ ಒಳಪಡದೆ ನಿನ್ನ ನಾಮವನ್ನು ಧರಿಸದೆ ಇರುವ ಜನರ ಹಾಗಿದ್ದೇವೆ.


ಯೆಹೋವನೇ, ನಾವು ನಿನ್ನ ಮಾರ್ಗದಿಂದ ತಪ್ಪಿ ಅಲೆಯುವಂತೆ ಏಕೆ ಮಾಡುತ್ತೀ? ನಾವು ನಿನಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿನ ಪಡಿಸುವದೇಕೆ? ನಿನ್ನ ಸೇವಕರ ನಿವಿುತ್ತ ನಿನ್ನ ಬಾಧ್ಯವಾದ ಕುಲಗಳಿಗಾಗಿ ತಿರುಗಿ ಪ್ರಸನ್ನನಾಗು,


ಹೀಗಿರಲಾಗಿ ಯೆಹೋವನು ಮೋಶೆಗೆ - ನೀನು ಬೆಟ್ಟದಿಂದ ಇಳಿದುಹೋಗು; ಐಗುಪ್ತದೇಶದಿಂದ ನೀನು ಕರಕೊಂಡು ಬಂದ ನಿನ್ನ ಜನರು ಕೆಟ್ಟು ಹೋದರು.


ಆಗ ಯೆಹೋವನು - ಐಗುಪ್ತ ದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ. ಬಿಟ್ಟೀಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು; ಅವರ ದುಃಖವನ್ನೆಲ್ಲಾ ನಾನು ಬಲ್ಲೆನು.


ಆದದರಿಂದ ನನ್ನ ಜನರಾಗಿರುವ ಇಸ್ರಾಯೇಲ್ಯರನ್ನು ಐಗುಪ್ತದೇಶದಿಂದ ಹೊರಗೆ ಬರ ಮಾಡುವದಕ್ಕೆ ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತೇನೆ ಬಾ ಅಂದನು.


ಬಳಿಕ ಮೋಶೆ ಆರೋನರು ಫರೋಹನ ಸನ್ನಿಧಿಗೆ ಹೋಗಿ - ಇಸ್ರಾಯೇಲ್ಯರ ದೇವರಾದ ಯೆಹೋವನು - ನನ್ನ ಜನರು ನನಗಾಗಿ ಅರಣ್ಯದೊಳಗೆ ಜಾತ್ರೆ ನಡಿಸುವಂತೆ ಅವರಿಗೆ ಅಪ್ಪಣೆ ಕೊಡಬೇಕೆಂದು ಹೇಳಿದ್ದಾನೆ ಅಂದರು.


ಐಗುಪ್ತ್ಯರು ನಿನ್ನ ವಿಷಯದಲ್ಲಿ - ಯೆಹೋವನು ಕೇಡುಮಾಡಬೇಕೆಂಬ ಅಭಿಪ್ರಾಯದಿಂದಲೇ ಇಸ್ರಾಯೇಲ್ಯರನ್ನು ಇಲ್ಲಿಂದ ಕರಕೊಂಡು ಹೋದನಲ್ಲಾ; ಅವರನ್ನು ಬೆಟ್ಟಗಳಲ್ಲಿ ಸಾಯಿಸಿ ಭೂವಿುಯಲ್ಲಿ ಉಳಿಯದಂತೆ ನಿರ್ಮೂಲ ಮಾಡುವದಕ್ಕೇನೇ ಅವರನ್ನು ಕರಕೊಂಡು ಹೋದನೆಂದು ಹೇಳುವದಕ್ಕೆ ಆಸ್ಪದವಾಗಬೇಕೇ? ನೀನು ರೋಷಾಗ್ನಿಯನ್ನು ಬಿಟ್ಟು ನಿನ್ನ ಪ್ರಜೆಗಳಿಗೆ ಕೆಡುಕನ್ನು ಮಾಡದೆ ಮನಸ್ಸನ್ನು ಬೇರೆ ಮಾಡಿಕೋ.


ಆಗ ಯೆಹೋವನು ತನ್ನ ಪ್ರಜೆಗಳಿಗೆ ಮಾಡುವೆನೆಂದು ತಾನು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಬೇರೆ ಮಾಡಿಕೊಂಡನು.


ಆಗ ನಿನ್ನ ಮಾರ್ಗವನ್ನು ದ್ರೋಹಿಗಳಿಗೆ ಬೋಧಿಸುವೆನು; ಪಾಪಿಗಳು ನಿನ್ನ ಕಡೆಗೆ ತಿರುಗಿಕೊಳ್ಳುವರು.


ಆತನು ಮೋಶೆಗೆ ತನ್ನ ಮಾರ್ಗವನ್ನೂ ಇಸ್ರಾಯೇಲ್ಯರಿಗೆ ತನ್ನ ಕೃತ್ಯಗಳನ್ನೂ ಪ್ರಕಟಿಸಿದನು.


ಅರಸನು ಚಾದೋಕನಿಗೆ - ನೀನು ದೇವರ ಒಡಂಬಡಿಕೆಯ ಮಂಜೂಷವನ್ನು ಹಿಂದಿರುಗಿ ತೆಗೆದುಕೊಂಡು ಹೋಗು; ಯೆಹೋವನ ದೃಷ್ಟಿಯಲ್ಲಿ ನನಗೆ ದಯೆದೊರಕಿದರೆ ನಾನು ಆತನನ್ನೂ ಆತನ ಆಲಯವನ್ನೂ ನೋಡುವ ಹಾಗೆ ತಾನೇ ನನ್ನನ್ನು ಹಿಂದಕ್ಕೆ ಬರಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು