Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 33:17 - ಕನ್ನಡ ಸತ್ಯವೇದವು J.V. (BSI)

17 ಯೆಹೋವನು ಮೋಶೆಗೆ - ನಿನಗೆ ನನ್ನ ಅನುಗ್ರಹ ದೊರಕಿದ್ದರಿಂದಲೂ ನಾನು ನಿನ್ನ ಹೆಸರನ್ನು ಗೊತ್ತುಮಾಡಿದ್ದರಿಂದಲೂ ನಿನಗೋಸ್ಕರ ಈ ಕಾರ್ಯವನ್ನು ಮಾಡುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೆಹೋವನು ಮೋಶೆಗೆ, “ನಿನಗೆ ನನ್ನ ದಯೆಯು ದೊರಕಿರುವುದರಿಂದಲೂ, ನಾನು ನಿನ್ನ ಹೆಸರನ್ನು ಬಲ್ಲವನಾಗಿರುವುದರಿಂದಲೂ ನಿನಗೋಸ್ಕರ ಈ ಕಾರ್ಯವನ್ನು ಮಾಡುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅದಕ್ಕೆ ಸರ್ವೇಶ್ವರ, “ನಿನ್ನ ಕೋರಿಕೆಯಂತೆ ಮಾಡುವೆನು. ಏಕೆಂದರೆ ನೀನು ನನ್ನ ಅನುಗ್ರಹಕ್ಕೆ ಪಾತ್ರನು; ನಿನ್ನನ್ನು ಹೆಸರಿಡಿದು ಗುರುತಿಸಿದ್ದೇನೆ,” ಎಂದು ಮೋಶೆಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆಗ ಯೆಹೋವನು ಮೋಶೆಗೆ, “ನಿನ್ನ ಕೋರಿಕೆಯನ್ನು ಅನುಗ್ರಹಿಸುತ್ತೇನೆ. ನಾನು ನಿನ್ನನ್ನು ಮೆಚ್ಚಿಕೊಂಡದ್ದರಿಂದಲೇ ಇದನ್ನು ಮಾಡುತ್ತೇನೆ. ನಾನು ನಿನ್ನನ್ನು ಚೆನ್ನಾಗಿ ಬಲ್ಲೆನು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅದಕ್ಕೆ ಯೆಹೋವ ದೇವರು ಮೋಶೆಗೆ, “ನೀನು ಆಡಿದ ಈ ಮಾತಿನಂತೆಯೇ ನಾನು ಇದನ್ನು ಮಾಡುತ್ತೇನೆ. ಏಕೆಂದರೆ ನನ್ನ ದೃಷ್ಟಿಯಲ್ಲಿ ನಿನಗೆ ದಯೆ ದೊರಕಿತು. ನಾನು ನಿನ್ನನ್ನು ನಿನ್ನ ಹೆಸರಿನಿಂದ ತಿಳಿದಿದ್ದೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 33:17
11 ತಿಳಿವುಗಳ ಹೋಲಿಕೆ  

ಆಗ ಅವರು ಬೇಡುವದರೊಳಗೆ ಸದುತ್ತರವನ್ನು ದಯಪಾಲಿಸುವೆನು; ಅವರು ಹೇಳುತ್ತಿರುವಾಗಲೇ ಕೇಳುವೆನು.


ಮೋಶೆ ಯೆಹೋವನಿಗೆ - ಈ ಜನರನ್ನು ಆ ಸೀಮೆಗೆ ನಡಿಸಿಕೊಂಡುಹೋಗಬೇಕೆಂದು ನೀನು ನನಗೆ ಆಜ್ಞಾಪಿಸಿದಿಯಷ್ಟೆ; ನನ್ನ ಸಂಗಡ ಯಾರನ್ನು ಕಳುಹಿಸುವಿಯೋ ಅದನ್ನು ನನಗೆ ತಿಳಿಸಲಿಲ್ಲ. ನಿನ್ನ ಹೆಸರನ್ನು ಗೊತ್ತುಮಾಡಿದ್ದೇನೆಂದೂ ನಿನಗೆ ನನ್ನ ದಯೆ ದೊರಕಿತೆಂದೂ ನೀನು ನನಗೆ ಹೇಳಿದಿಯಲ್ಲಾ.


ಅದಕ್ಕಾತನು - ಈ ವಿಷಯದಲ್ಲಿಯೂ ನಿನಗೆ ಅನುಗ್ರಹಮಾಡಿದ್ದೇನೆ, ನೋಡು; ನೀನು ಹೇಳಿದ ಊರನ್ನು ನಾನು ಕೆಡಹುವದಿಲ್ಲ.


ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ ಒಬ್ಬರಿಗೋಸ್ಕರ ಒಬ್ಬರು ದೇವರನ್ನು ಪ್ರಾರ್ಥಿಸಿರಿ; ನೀತಿವಂತನ ಅತ್ಯಾಸಕ್ತಿಯುಳ್ಳ ವಿಜ್ಞಾಪನೆಯು ಬಹು ಬಲವಾಗಿದೆ.


ಆ ದಿನದಲ್ಲಿ ನೀವು ನನಗೆ ಯಾವ ಪ್ರಶ್ನೆಯನ್ನೂ ಮಾಡುವದಿಲ್ಲ. ನಿಮಗೆ ನಿಜನಿಜವಾಗಿ ಹೇಳುತ್ತೇನೆ, ನೀವು ತಂದೆಯನ್ನು ಏನಾದರೂ ಬೇಡಿಕೊಂಡರೆ ಅದನ್ನು ಆತನು ನನ್ನ ಹೆಸರಿನ ಮೇಲೆ ನಿಮಗೆ ಕೊಡುವನು.


ಆದರೆ ನೋಹನಿಗೆ ಯೆಹೋವನ ದಯವು ದೊರಕಿತು.


ನೀನು ನಿನ್ನ ದಾಸನ ಮೇಲೆ ದಯವಿಟ್ಟು ನನ್ನ ಪ್ರಾಣವನ್ನು ಉಳಿಸಿದ್ದು ಬಹು ವಿಶೇಷವಾದ ಉಪಕಾರವೇ; ಆದರೆ ಬೆಟ್ಟಕ್ಕೆ ಓಡಿಹೋಗಲಾರೆನು: ನಾನು ಹೋಗುತ್ತಿರುವಾಗ ಆ ವಿಪತ್ತು ನನಗೂ ಉಂಟಾಗಿ ಸತ್ತೇನು.


ಅಬ್ರಹಾಮನು - ಸ್ವಾಮೀ, ನಿನಗೆ ಸಿಟ್ಟಾಗಬಾರದು; ಇನ್ನು ಒಂದೇ ಸಾರಿ ಮಾತಾಡುತ್ತೇನೆ; ಒಂದು ವೇಳೆ ಹತ್ತು ಮಂದಿ ಸಿಕ್ಕಾರು ಎನ್ನಲು ಆತನು - ಹತ್ತು ಮಂದಿಯ ನಿವಿುತ್ತವೂ ಅದನ್ನು ಉಳಿಸುವೆನು, ನಾಶಮಾಡುವದಿಲ್ಲ ಅಂದನು.


ನಿನ್ನ ಹೆಸರುಹಿಡಿದು ಕರೆಯುವ ನಾನು ಯೆಹೋವನು, ಇಸ್ರಾಯೇಲ್ಯರ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆ ಕತ್ತಲಲ್ಲಿ ಬಚ್ಚಿಟ್ಟಿರುವ ಆಸ್ತಿಪಾಸ್ತಿಯನ್ನೂ ಗುಪ್ತಸ್ಥಳಗಳಲ್ಲಿ ಮರೆಮಾಡಿದ ನಿಧಿನಿಕ್ಷೇಪವನ್ನೂ ನಿನಗೆ ಕೊಡುವೆನು.


ಯೆಹೋವನು ನಿಮ್ಮ ಮೇಲೆ ಬಹುಕೋಪವನ್ನು ಮಾಡಿ ನಿಮ್ಮನ್ನು ನಾಶಮಾಡಬೇಕೆಂದು ಆಲೋಚಿಸಿದದರಿಂದ ನಾನು ಹೆದರಿಕೊಂಡೆನು. ಆದರೆ ಆ ಕಾಲದಲ್ಲಿಯೂ ಆತನು ನನ್ನ ಮನವಿಯನ್ನು ಕೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು