ವಿಮೋಚನಕಾಂಡ 33:19 - ಕನ್ನಡ ಸತ್ಯವೇದವು J.V. (BSI)19 ಆತನು - ನನ್ನ ಸರ್ವೋತ್ತಮತ್ವವನ್ನು ನಿನ್ನೆದುರಾಗಿ ದಾಟಿಹೋಗುವಂತೆ ಮಾಡುವೆನು; ಯೆಹೋವನ ನಾಮದ ಮಹತ್ವವನ್ನು ನಿನ್ನೆದುರಾಗಿ ಪ್ರಕಟಿಸುವೆನು. ಯಾವನ ಮೇಲೆ ದಯೆಯಿಡುವೆನೋ ಅವನ ಮೇಲೆ ದಯೆಯಿಡುವೆನು; ಯಾರನ್ನು ಕರುಣಿಸುವೆನೋ ಅವರನ್ನು ಕರುಣಿಸುವೆನು ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಸರ್ವೋತ್ತಮತ್ವವನ್ನು ಅದಕ್ಕೆ ಆತನು, “ನಾನು ನನ್ನ ಮಹಿಮೆಯನ್ನು ಪೂರ್ಣವಾಗಿ ನಿನ್ನೆದುರಿಗೆ ಬರುವಂತೆ ಮಾಡುವೆನು. ಯೆಹೋವನೆಂಬ ನನ್ನ ನಾಮದ ಪೂರ್ಣ ಮಹತ್ವವನ್ನು ನಿನ್ನೆದುರಾಗಿ ಪ್ರಕಟಿಸುವೆನು. ನಾನು ಯಾರ ಮೇಲೆ ದಯೆತೋರಿಸಬೇಕೆಂದಿರುವೆನೋ ಅವನ ಮೇಲೆ ದಯೆ ತೋರಿಸುವೆನು, ಯಾರನ್ನು ಕರುಣಿಸಬೇಕೆಂದಿರುವೆನೋ ಅವನನ್ನು ಕರುಣಿಸುವೆನು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಸರ್ವೇಶ್ವರ, “ನನ್ನ ಒಳ್ಳೆಯತನವೆಲ್ಲ ನಿನ್ನೆದುರಿಗೆ ಹಾದುಹೋಗುವಂತೆ ಮಾಡುವೆನು. ಸರ್ವೇಶ್ವರನಾದ ನನ್ನ ನಾಮದ ಮಹತ್ವವನ್ನು ನಿನ್ನೆದುರಿಗೆ ಪ್ರಕಟಿಸುವೆನು. ಯಾರ್ಯಾರ ಮೇಲೆ ದಯೆಯಿಡಲು ಆಶಿಸುತ್ತೇನೋ ಅವರ ಮೇಲೆ ದಯೆಯಿಡುತ್ತೇನೆ. ಯಾರ್ಯಾರನ್ನು ಕರುಣಿಸಲು ಆಶಿಸುತ್ತೇನೋ ಅವರನ್ನು ಕರುಣಿಸುತ್ತೇನೆ,” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆಗ ಯೆಹೋವನು “ನನ್ನ ನಾಮದ ಮಹತ್ವವನ್ನು ನಿನ್ನ ಮುಂದೆ ದಾಟಿಹೋಗುವಂತೆ ಮಾಡುವೆನು. ನಾನೇ ಯೆಹೋವನು. ನಿನಗೆ ಕೇಳಿಸುವಂತೆ ನನ್ನ ಹೆಸರನ್ನು ಪ್ರಕಟಿಸುವೆನು. ನಾನು ಆರಿಸಿಕೊಂಡ ಜನರಿಗೆ ದಯೆಯನ್ನೂ ಪ್ರೀತಿಯನ್ನೂ ಅನುಗ್ರಹಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅದಕ್ಕೆ ಅವರು, “ನಾನು ನನ್ನ ಒಳ್ಳೆಯತನವನ್ನೆಲ್ಲಾ ನಿನ್ನ ಎದುರಿಗೆ ಹಾದು ಹೋಗ ಮಾಡಿ, ಯೆಹೋವ ದೇವರ ಹೆಸರನ್ನು ನಿನ್ನ ಮುಂದೆ ಪ್ರಕಟಮಾಡಿ, ಯಾವನ ಮೇಲೆ ನನ್ನ ಕರುಣೆ ಉಂಟೋ, ಅವನನ್ನು ಕರುಣಿಸುವೆನು. ಯಾವನ ಮೇಲೆ ನನ್ನ ಕನಿಕರವಿದೆಯೋ ಅವನನ್ನು ಕನಿಕರಿಸುವೆನು,” ಎಂದರು. ಅಧ್ಯಾಯವನ್ನು ನೋಡಿ |