Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 33:2 - ಕನ್ನಡ ಸತ್ಯವೇದವು J.V. (BSI)

2 ನಾನು ನಿನ್ನ ಮುಂದುಗಡೆಯಲ್ಲಿ ದೂತನನ್ನು ಕಳುಹಿಸಿ ಕಾನಾನ್ಯರನ್ನೂ ಅಮೋರಿಯರನ್ನೂ ಹಿತ್ತಿಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಹೊರಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಾನು, ನಿನಗಿಂತ ಮುಂದಾಗಿ ಒಬ್ಬ ದೂತನನ್ನು ಕಳುಹಿಸಿ ಕಾನಾನ್ಯರನ್ನು, ಅಮೋರಿಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಹಾಗು ಯೆಬೂಸಿಯರನ್ನು ಹೊರದೂಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಾನು ಒಬ್ಬ ದೂತನನ್ನು ನಿನಗೆ ಮುಂದಾಗಿ ಕಳಿಸಿ ಕಾನಾನ್ಯರನ್ನು, ಅಮೋರಿಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು, ಹಾಗು ಯೆಬೂಸಿಯರನ್ನು ಅಲ್ಲಿಂದ ಹೊರದೂಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಿಮ್ಮ ಮುಂದೆ ಹೋಗುವುದಕ್ಕೆ ನಾನು ಒಬ್ಬ ದೂತನನ್ನು ಕಳುಹಿಸುವೆನು. ಕಾನಾನ್ಯರನ್ನು, ಅಮೋರಿಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಮತ್ತು ಯೆಬೂಸಿಯರನ್ನು ನಾನು ಸೋಲಿಸುವೆನು. ನಿಮ್ಮ ದೇಶದಿಂದ ಅವರನ್ನು ಬಲವಂತದಿಂದ ಅಟ್ಟಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಾನು ನಿನ್ನ ಮುಂದೆ ದೂತನನ್ನು ಕಳುಹಿಸಿ ಕಾನಾನ್ಯರನ್ನೂ, ಅಮೋರಿಯರನ್ನೂ, ಹಿತ್ತಿಯರನ್ನೂ, ಪೆರಿಜೀಯರನ್ನೂ, ಹಿವ್ವಿಯರನ್ನೂ, ಯೆಬೂಸಿಯರನ್ನೂ ಹೊರದೂಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 33:2
16 ತಿಳಿವುಗಳ ಹೋಲಿಕೆ  

ನೀವು ಯೊರ್ದನನ್ನು ದಾಟಿ ಯೆರಿಕೋವಿಗೆ ಬಂದಿರಿ. ಆಗ ಯೆರಿಕೋವಿನವರು, ಅಮೋರಿಯರು, ಪೆರಿಜ್ಜೀಯರು, ಕಾನಾನ್ಯರು, ಹಿತ್ತಿಯರು, ಗಿರ್ಗಾಷಿಯರು, ಹಿವ್ವಿಯರು, ಯೆಬೂಸಿಯರು ಇವರೆಲ್ಲಾ ನಿಮಗೆ ವಿರೋಧವಾಗಿ ಯುದ್ಧಕ್ಕೆ ಬರಲು ನಾನು ಅವರೆಲ್ಲರನ್ನೂ ನಿಮ್ಮ ಕೈಗೆ ಒಪ್ಪಿಸಿದೆನು.


ನೀನು ಇಲ್ಲಿಂದ ಹೊರಟು ನಾನು ನಿನಗೆ ಹೇಳಿದ ದೇಶಕ್ಕೆ ಈ ಜನರನ್ನು ನಡಿಸಿಕೊಂಡು ಹೋಗು. ನನ್ನ ದೂತನು ನಿನ್ನ ಮುಂದುಗಡೆಯಲ್ಲಿ ನಡೆಯುವನು. ಆದರೂ ನಾನು ಅವರನ್ನು ಶಿಕ್ಷಿಸುವಾಗ ಅವರ ಪಾಪಕ್ಕೆ ತಕ್ಕಂತೆ ಶಿಕ್ಷಿಸುವೆನು.


ಇಗೋ, ದಾರಿಯಲ್ಲಿ ನಿಮ್ಮನ್ನು ಕಾಪಾಡುವದಕ್ಕೂ ನಾನು ಗೊತ್ತುಮಾಡಿರುವ ಸ್ಧಳಕ್ಕೆ ಕರತರುವದಕ್ಕೂ ದೂತನನ್ನು ನಿಮ್ಮ ಮುಂದುಗಡೆಯಲ್ಲಿ ಕಳುಹಿಸುತ್ತೇನೆ.


ನಿಮ್ಮ ದೇವರಾದ ಯೆಹೋವನು ಆ ಜನಾಂಗಗಳನ್ನು ನಿಮ್ಮ ಎದುರಿನಿಂದ ಸ್ವಲ್ಪಸ್ವಲ್ಪವಾಗಿ ಹೊರಡಿಸುತ್ತಿರುವನು. ನೀವು ಬಹು ಶೀಘ್ರವಾಗಿ ಅವರನ್ನು ನಿರ್ಮೂಲಮಾಡಕೂಡದು; ಮಾಡಿದರೆ ಕಾಡುಮೃಗಗಳು ಹೆಚ್ಚಿ ನಿಮಗೆ ತೊಂದರೆಯನ್ನುಂಟುಮಾಡಾವು.


ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವದನ್ನು ನೀವು ಅನುಸರಿಸಿ ನಡೆಯಬೇಕು. ಇಗೋ, ನಾನು ಅಮೋರಿಯರನ್ನೂ ಕಾನಾನ್ಯರನ್ನೂ ಹಿತ್ತಿಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ನಿಮ್ಮ ಮುಂದೆ ಹೊರಡಿಸುವೆನು.


ಐಗುಪ್ತದೇಶದಲ್ಲಿ ನಿಮಗುಂಟಾಗಿರುವ ದುರವಸ್ಥೆಯಿಂದ ನಿಮ್ಮನ್ನು ತಪ್ಪಿಸಿ ಹಾಲೂ ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಪೆರಿಜೀಯರೂ ಹಿವ್ವಿಯರೂ ಯೆಬೂಸಿಯರೂ ವಾಸವಾಗಿರುವ ದೇಶಕ್ಕೆ ಬರಮಾಡುವೆನೆಂದು ನಿರ್ಣಯಿಸಿದ್ದೇನೆ ಎಂಬದಾಗಿ ನನಗೆ ಹೇಳಿದನೆಂದು ತಿಳಿಸು.


ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ತಪ್ಪಿಸುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಪೆರಿಜೀಯರೂ ಹಿವ್ವಿಯರೂ ಯೆಬೂಸಿಯರೂ ವಾಸವಾಗಿರುವ ದೇಶಕ್ಕೆ ನಡಿಸಿಕೊಂಡು ಹೋಗುವದಕ್ಕೂ ಇಳಿದುಬಂದಿದ್ದೇನೆ.


ಮೋಶೆ ಯೆಹೋವನಿಗೆ - ಈ ಜನರನ್ನು ಆ ಸೀಮೆಗೆ ನಡಿಸಿಕೊಂಡುಹೋಗಬೇಕೆಂದು ನೀನು ನನಗೆ ಆಜ್ಞಾಪಿಸಿದಿಯಷ್ಟೆ; ನನ್ನ ಸಂಗಡ ಯಾರನ್ನು ಕಳುಹಿಸುವಿಯೋ ಅದನ್ನು ನನಗೆ ತಿಳಿಸಲಿಲ್ಲ. ನಿನ್ನ ಹೆಸರನ್ನು ಗೊತ್ತುಮಾಡಿದ್ದೇನೆಂದೂ ನಿನಗೆ ನನ್ನ ದಯೆ ದೊರಕಿತೆಂದೂ ನೀನು ನನಗೆ ಹೇಳಿದಿಯಲ್ಲಾ.


ನಾನು ನಿಮ್ಮ ಎದುರಿನಿಂದ ಅನ್ಯಜನಗಳನ್ನು ಹೊರಡಿಸಿ ನಿಮ್ಮ ದೇಶವನ್ನು ವಿಸ್ತರಿಸುವೆನು. ಅಷ್ಟೇ ಅಲ್ಲದೆ ನೀವು ವರುಷಕ್ಕೆ ಮೂರಾವರ್ತಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಗೆ ಹೋಗುವಾಗ ಯಾರೂ ನಿಮ್ಮ ಭೂವಿುಯನ್ನು ಅಪಹರಿಸುವದಕ್ಕೆ ಅಪೇಕ್ಷಿಸುವದಿಲ್ಲ.


ಚೈತನ್ಯಸ್ವರೂಪನಾದ ದೇವರು ನಿಮ್ಮ ಮಧ್ಯದಲ್ಲಿರುತ್ತಾನೆಂಬದೂ ಆತನು ಕಾನಾನ್ಯರು, ಹಿತ್ತಿಯರು, ಹಿವ್ವಿಯರು, ಪೆರಿಜೀಯರು, ಗಿರ್ಗಾಷಿಯರು, ಅಮೋರಿಯರು, ಯೆಬೂಸಿಯರು ಇವರನ್ನೆಲ್ಲಾ ನಿಮ್ಮ ಮುಂದೆ ತಪ್ಪದೆ ಹೊರಡಿಸುವನೆಂಬದೂ


ಆ ದಿನದಲ್ಲಿ ಯೆಹೋವನು ಯೆರೂಸಲೇವಿುನವರನ್ನು ಸುತ್ತಲು ಕಾಪಾಡುವನು; ಅವರೊಳಗೆ ಈಗಿನ ಕುಂಟನು ಆ ದಿನದಲ್ಲಿ ದಾವೀದನಂತಿರುವನು; ದಾವೀದ ವಂಶವು ದೇವರಂತೆ, ಯೆಹೋವನ ದೂತನ ಹಾಗೆ ಅವರಿಗೆ ಮುಂದಾಳಾಗುವದು.


ಕಾನಾನ್ಯರೂ ಗಿರ್ಗಾಷಿಯರೂ ಯೆಬೂಸಿಯರೂ ವಾಸವಾಗಿರುವ ದೇಶವನ್ನು ಕೊಡುವೆನೆಂದು ವಾಗ್ದಾನ ಮಾಡಿದನು.


ನನ್ನ ತಂದೆಯ ಮನೆಯಿಂದಲೂ ನಾನು ಹುಟ್ಟಿದ ದೇಶದಿಂದಲೂ ನನ್ನನ್ನು ಕರತಂದು - ನಿನ್ನ ಸಂತತಿಗೆ ಈ ದೇಶವನ್ನು ಕೊಡುವೆನೆಂದು ಪ್ರಮಾಣಮಾಡಿ ಹೇಳಿದ ಪರಲೋಕದೇವರಾದ ಯೆಹೋವನು ನಿನ್ನ ಮುಂದೆ ತನ್ನ ದೂತನನ್ನು ಕಳುಹಿಸಿ ನೀನು ಅಲ್ಲಿಂದ ನನ್ನ ಮಗನಿಗೋಸ್ಕರ ಹೆಣ್ಣನ್ನು ತೆಗೆದುಕೊಳ್ಳುವಂತೆ ಅನುಕೂಲಮಾಡುವನು.


ಐಗುಪ್ತ್ಯರಿಂದ ನಿಮ್ಮನ್ನು ಬಿಡಿಸಿದ್ದಲ್ಲದೆ ಬೇರೆ ಎಲ್ಲಾ ಬಾಧಕರಿಂದಲೂ ನಿಮ್ಮನ್ನು ಬಿಡಿಸಿ ಅವರನ್ನು ನಿಮ್ಮೆದುರಿನಿಂದ ಅಟ್ಟಿಬಿಟ್ಟು ಅವರ ದೇಶವನ್ನು ನಿಮಗೆ ಕೊಟ್ಟೆನು.


ಇದಲ್ಲದೆ ಯೆಬೂಸಿಯರೂ ಅಮೋರಿಯರೂ ಗಿರ್ಗಾಷಿಯರೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು