Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 33:20 - ಕನ್ನಡ ಸತ್ಯವೇದವು J.V. (BSI)

20 ಅದರೆ ಆತನು ಅವನಿಗೆ - ನೀನು ನನ್ನ ಮುಖವನ್ನು ನೋಡುವದಕ್ಕಾಗದು; ಮನುಷ್ಯರಲ್ಲಿ ಯಾವನೂ ನನ್ನನ್ನು ನೋಡಿ ಜೀವಿಸಲಾರನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆದರೆ ಆತನು ಅವನಿಗೆ, “ನೀನು ನನ್ನ ಮುಖವನ್ನು ನೋಡುವುದಕ್ಕೆ ಸಾಧ್ಯವಿಲ್ಲ. ಏಕೆಂದರೆ ಮನುಷ್ಯರಲ್ಲಿ ಯಾರೂ ನನ್ನನ್ನು ನೋಡಿ ಬದುಕಿರಲಾರನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಮತ್ತೆ ಅವರು, “ಆದರೆ ನೀನು ನನ್ನ ಮುಖವನ್ನು ನೋಡಲಾಗದು. ಏಕೆಂದರೆ ನನ್ನನ್ನು ನೋಡಿದ ಮಾನವ ಜೀವಂತನಾಗಿ ಉಳಿಯಲಾರ,” ಎಂದು ಹೇಳೀದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನನ್ನನ್ನು ಯಾರೂ ಮುಖಾಮುಖಿಯಾಗಿ ಕಾಣಲು ಸಾಧ್ಯವಿಲ್ಲ. ನನ್ನನ್ನು ನೋಡಿದ ಯಾವನೂ ಬದುಕಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಮತ್ತೆ ದೇವರು ಮೋಶೆಗೆ, “ನೀನು ನನ್ನ ಮುಖವನ್ನು ನೋಡಲಾರಿ. ಏಕೆಂದರೆ ಯಾವ ಮನುಷ್ಯನೂ ನನ್ನನ್ನು ನೋಡಿ ಬದುಕಿರಲಾರನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 33:20
14 ತಿಳಿವುಗಳ ಹೋಲಿಕೆ  

ದೇವರನ್ನು ಯಾರೂ ಎಂದೂ ಕಂಡಿಲ್ಲ; ಯಾವನು ಏಕಪುತ್ರನೂ ಸ್ವತಃ ದೇವರೂ ಆಗಿದ್ದು ತಂದೆಯ ಎದೆಯಲ್ಲಿದ್ದಾನೋ ಆತನೇ ತಿಳಿಯಪಡಿಸಿದನು.


ಯಾಕೋಬನು - ನಾನು ದೇವರನ್ನೇ ಪ್ರತ್ಯಕ್ಷವಾಗಿ ನೋಡಿದ್ದೇನಲ್ಲಾ; ಆದರೂ ನನ್ನ ಪ್ರಾಣ ಉಳಿದದೆ ಅಂದುಕೊಂಡು ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.


ತಾನೊಬ್ಬನೇ ಅಮರತ್ವವುಳ್ಳವನೂ ಅಗಮ್ಯವಾದ ಬೆಳಕಿನಲ್ಲಿ ವಾಸಮಾಡುವವನೂ ಆಗಿದ್ದಾನೆ; ಮನುಷ್ಯರಲ್ಲಿ ಯಾರೂ ಆತನನ್ನು ಕಾಣಲಿಲ್ಲ, ಯಾರೂ ಕಾಣಲಾರರು; ಆತನಿಗೆ ಮಾನವೂ ನಿತ್ಯಾಧಿಪತ್ಯವೂ ಇರಲಿ. ಆಮೆನ್.


ಆಗ ನಾನು - ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ! ನಾಶವಾದೆನಲ್ಲಾ; ನಾನು ಹೊಲಸು ತುಟಿಯವನು, ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು; ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡವು ಎಂದು ಕೂಗಿಕೊಳ್ಳಲು


ಆತನು ಯೆಹೋವನ ದೂತನೆಂದು ಗಿದ್ಯೋನನು ತಿಳಿದು ಭಯಪಟ್ಟು - ಅಯ್ಯೋ ಕರ್ತನೇ, ಯೆಹೋವನೇ, ಯೆಹೋವನ ದೂತನನ್ನು ಮುಖಾಮುಖಿಯಾಗಿ ನೋಡಿಬಿಟ್ಟೆನಲ್ಲಾ ಎಂದು ಕೂಗಿದನು.


ನಾವು ಸಾಯಬೇಕು. ದೇವರನ್ನು ಕಣ್ಣಾರೆ ಕಂಡೆವಲ್ಲಾ ಅನ್ನಲು


ನಮ್ಮ ದೇವರಾದ ಯೆಹೋವನು ತನ್ನ ಘನವನ್ನೂ ಮಹಿಮೆಯನ್ನೂ ನಮಗೆ ತೋರಿಸಿ ಅಗ್ನಿಜ್ವಾಲೆಯೊಳಗಿಂದ ತನ್ನ ಸ್ವರವನ್ನು ನಮಗೆ ಕೇಳಿಸಿದನಲ್ಲಾ. ಮನುಷ್ಯನು ತನ್ನ ಸಂಗಡ ದೇವರು ಮಾತಾಡಿದರೂ ಸಾಯದೆ ಬದುಕಿದ್ದುಂಟೆಂಬದು ಈ ಹೊತ್ತು ನಮಗೆ ತಿಳಿಯಬಂತು.


ಅವರಿಗೆ ಇಸ್ರಾಯೇಲ್ಯರ ದೇವರ ದರ್ಶನವಾಯಿತು. ಆಕಾಶಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟು ಆತನ ಪಾದಪೀಠವಾಗಿತ್ತು.


ಆದರೆ ದೇವದೂತರಲ್ಲಿ ಯಾವ ವಿಷಯದಲ್ಲಿಯಾದರೂ - ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವಾಗ ಮಾಡುವತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂಬದಾಗಿ ಎಂದಾದರೂ ಹೇಳಿದ್ದಾನೋ?


ಅದಕ್ಕೆ ಮೋಶೆ - ನಿನ್ನ ಮಹಿಮೆಯನ್ನು ದಯಮಾಡಿ ನನಗೆ ತೋರಿಸು ಎಂದು ಕೇಳಲಾಗಿ


ತರುವಾಯ ನಾನು ಕೈ ತೆಗೆದಾಗ ನೀನು ನನ್ನ ಹಿಂಭಾಗವನ್ನು ನೋಡುವಿಯೇ ಹೊರತು ನನ್ನ ಮುಖವು ನಿನಗೆ ಕಾಣಿಸುವದಿಲ್ಲ ಎಂದು ಹೇಳಿದನು.


ಅದಲ್ಲದೆ ಆತನು - ನಾನು ನಿನ್ನ ತಂದೆಯ ದೇವರು, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಅಂದಾಗ ಮೋಶೆ ದೇವರನ್ನು ನೋಡುವದಕ್ಕೆ ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.


ಮೋಶೆ ಆರೋನ್ ನಾದಾಬ್ ಅಬೀಹೂ ಎಂಬವರೂ ಇಸ್ರಾಯೇಲ್ಯರ ಹಿರಿಯರಲ್ಲಿ ಎಪ್ಪತ್ತು ಮಂದಿಯೂ ಬೆಟ್ಟವನ್ನು ಹತ್ತಿದರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು