Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 33:6 - ಕನ್ನಡ ಸತ್ಯವೇದವು J.V. (BSI)

6 ಆದದರಿಂದ ಇಸ್ರಾಯೇಲ್ಯರು ಹೋರೆಬ್ ಬೆಟ್ಟದಿಂದೀಚೆಗೆ ಆಭರಣಗಳನ್ನು ಧರಿಸಿಕೊಳ್ಳದೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅದರಂತೆಯೇ ಇಸ್ರಾಯೇಲ್ಯರು ಹೋರೇಬ್ ಬೆಟ್ಟದಿಂದ ಮುಂದೆ ಆಭರಣಗಳನ್ನು ಧರಿಸಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅಂತೆಯೇ ಇಸ್ರಯೇಲರು ಹೋರೆಬ್ ಬೆಟ್ಟದಿಂದೀಚೆಗೆ ಒಡವೆವಸ್ತುಗಳನ್ನು ತೊಟ್ಟುಕೊಳ್ಳದೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಇಸ್ರೇಲರು ಹೋರೆಬ್ ಬೆಟ್ಟದಲ್ಲಿದ್ದಾಗ ಆಭರಣಗಳನ್ನು ಧರಿಸಿಕೊಳ್ಳುವುದನ್ನು ಬಿಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅದರಂತೆಯೇ ಇಸ್ರಾಯೇಲರು ಹೋರೇಬ್ ಬೆಟ್ಟದ ಬಳಿಯಲ್ಲಿ ತಮ್ಮ ಆಭರಣಗಳನ್ನು ತೆಗೆದುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 33:6
7 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ ಜನರು ಈ ದುಃಖಕರವಾದ ವಾಕ್ಯವನ್ನು ಕೇಳಿ ಮನಗುಂದಿದವರಾದರು; ಅವರಲ್ಲಿ ಒಬ್ಬರೂ ಆಭರಣಗಳನ್ನು ಧರಿಸಿಕೊಳ್ಳಲಿಲ್ಲ.


ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವದು, ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವವು; ನೀನು ನನ್ನ ಭಯವಿಲ್ಲದೆ ನಿನ್ನ ದೇವರಾದ ಯೆಹೋವನೆಂಬ ನನ್ನನ್ನು ತೊರೆದುಬಿಟ್ಟದ್ದು ಕೆಟ್ಟದ್ದಾಗಿಯೂ ವಿಷವಾಗಿಯೂ ಇರುತ್ತದೆಂದು ಗ್ರಹಿಸಿಕೋ, ಕಣ್ಣಾರೆ ನೋಡು ಎಂಬದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನ ನುಡಿ.


ಜನರೆಲ್ಲರು ತಮ್ಮ ಕಿವಿಗಳಲ್ಲಿದ್ದ ಚಿನ್ನದ ಮುರುವುಗಳನ್ನು ಕಿತ್ತು ಆರೋನನ ಬಳಿಗೆ ತಂದು ಕೊಟ್ಟರು.


ಮೋಶೆ ತನ್ನ ಮಾವನಾಗಿರುವ ವಿುದ್ಯಾನ್ಯರ ಆಚಾರ್ಯನಾದ ಇತ್ರೋನನ ಮಂದೆಯನ್ನು ಮೇಯಿಸುತ್ತಿರುವಾಗ ಆ ಮಂದೆಯನ್ನು ಕಾಡಿನ ಹಿಂಭಾಗಕ್ಕೆ ನಡಿಸಿಕೊಂಡು ಹೋರೇಬ್ ಎಂಬ ದೇವರ ಬೆಟ್ಟಕ್ಕೆ ಬಂದನು.


ಯೆಹೋವನು ಮೋಶೆಗೆ ಹೀಗಂದನು - ನೀನು ಇಸ್ರಾಯೇಲ್ಯರಿಗೆ ಹೇಳಬೇಕಾದದ್ದೇನಂದರೆ - ನೀವು ನನ್ನ ಆಜ್ಞೆಗಳಿಗೆ ಬೊಗ್ಗದವರೇ. ನಾನು ಒಂದು ಕ್ಷಣಮಾತ್ರ ನಿಮ್ಮ ಮಧ್ಯದಲ್ಲಿ ಬರುವದಾದರೆ ನೀವು ನಿರ್ಮೂಲವಾಗಿ ಹೋದೀರಿ, ನೋಡಿಕೊಳ್ಳಿರಿ. ಆದಕಾರಣ ನಿಮ್ಮ ಆಭರಣಗಳನ್ನು ಈಗ ತೆಗೆದುಬಿಡಿರಿ ನಿಮಗೆ ನಾನು ಏನು ಮಾಡಬೇಕೆಂಬದನ್ನು ಆಲೋಚಿಸಿಕೊಳ್ಳುವೆನು ಅಂದನು.


ಮೋಶೆ ಡೇರೆಯನ್ನು ಪಾಳೆಯದ ಹೊರಗೆ ದೂರವಾಗಿ ಹಾಕಿಸುತ್ತಿದ್ದನು. ಅದಕ್ಕೆ ದೇವದರ್ಶನದ ಡೇರೆ ಎಂದು ಹೆಸರಿಟ್ಟನು. ಯೆಹೋವನ ಉತ್ತರವನ್ನು ಬಯಸಿದವರೆಲ್ಲರು ಪಾಳೆಯದ ಹೊರಗಿದ್ದ ದೇವದರ್ಶನದ ಡೇರೆಗೆ ಹೋಗುತ್ತಿದ್ದರು.


ಇದನ್ನು ಕೇಳಿ ನಿನೆವೆಯವರು ದೇವರಲ್ಲಿ ನಂಬಿಕೆಯಿಟ್ಟು ಉಪವಾಸವನ್ನು ಗೊತ್ತುಮಾಡಿ ಸಾರಿದರು; ದೊಡ್ಡವರು ಮೊದಲುಗೊಂಡು ಚಿಕ್ಕವರ ತನಕ ಎಲ್ಲರೂ ಗೋಣಿತಟ್ಟನ್ನು ಸುತ್ತಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು