Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 33:7 - ಕನ್ನಡ ಸತ್ಯವೇದವು J.V. (BSI)

7 ಮೋಶೆ ಡೇರೆಯನ್ನು ಪಾಳೆಯದ ಹೊರಗೆ ದೂರವಾಗಿ ಹಾಕಿಸುತ್ತಿದ್ದನು. ಅದಕ್ಕೆ ದೇವದರ್ಶನದ ಡೇರೆ ಎಂದು ಹೆಸರಿಟ್ಟನು. ಯೆಹೋವನ ಉತ್ತರವನ್ನು ಬಯಸಿದವರೆಲ್ಲರು ಪಾಳೆಯದ ಹೊರಗಿದ್ದ ದೇವದರ್ಶನದ ಡೇರೆಗೆ ಹೋಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಮೋಶೆಯು ಗುಡಾರವನ್ನು ಪಾಳೆಯದ ಹೊರಗೆ ದೂರವಾಗಿ ಹಾಕಿದ್ದನು. ಅದಕ್ಕೆ ದೇವದರ್ಶನದ ಗುಡಾರ ಎಂದು ಹೆಸರಿಟ್ಟನು. ಯೆಹೋವನ ಉತ್ತರವನ್ನು ಬಯಸಿದವರೆಲ್ಲರೂ ಪಾಳೆಯದ ಹೊರಗಿದ್ದ ದೇವದರ್ಶನದ ಗುಡಾರಕ್ಕೆ ಹೋಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಮೋಶೆ ಗುಡಾರವನ್ನು ಪಾಳೆಯದ ಹೊರಗೆ ದೂರದಲ್ಲಿ ಹಾಕಿಸುತ್ತಿದ್ದನು. ಅದಕ್ಕೆ ‘ದೇವದರ್ಶನದ ಗುಡಾರ’ ಎಂದು ಹೆಸರಿಟ್ಟನು. ಸರ್ವೇಶ್ವರನಿಂದ ಉತ್ತರವನ್ನು ಬಯಸುತ್ತಿದ್ದವರೆಲ್ಲರು ಪಾಳೆಯದ ಹೊರಗಿದ್ದ ಆ ದೇವದರ್ಶನದ ಗುಡಾರಕ್ಕೆ ಹೋಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಮೋಶೆಯು ಗುಡಾರವನ್ನು ಪಾಳೆಯದ ಹೊರಗೆ ಸ್ವಲ್ಪದೂರ ತೆಗೆದುಕೊಂಡು ಹೋಗುತ್ತಿದ್ದನು. ಮೋಶೆಯು ಅದನ್ನು, “ದೇವದರ್ಶನದ ಗುಡಾರ” ಎಂದು ಕರೆದನು. ಯೆಹೋವನಿಂದ ಉತ್ತರವನ್ನು ಕೇಳಬೇಕೆಂದು ಬಯಸುವ ವ್ಯಕ್ತಿಯು ಪಾಳೆಯದ ಹೊರಗಿದ್ದ ದೇವದರ್ಶನ ಗುಡಾರಕ್ಕೆ ಹೋಗುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಮೋಶೆಯು ಗುಡಾರವನ್ನು ತೆಗೆದು ಪಾಳೆಯದ ಹೊರಗೆ ಪಾಳೆಯಕ್ಕೆ ದೂರವಾಗಿ ಹಾಕಿ, ಅದಕ್ಕೆ “ದೇವದರ್ಶನದ ಗುಡಾರ” ಎಂದು ಹೆಸರಿಟ್ಟನು. ತರುವಾಯ ಯೆಹೋವ ದೇವರನ್ನು ಹುಡುಕುವವರೆಲ್ಲಾ ಪಾಳೆಯದ ಹೊರಗೆ ಇರುವ ದೇವದರ್ಶನದ ಗುಡಾರಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 33:7
17 ತಿಳಿವುಗಳ ಹೋಲಿಕೆ  

ಆದರೆ ನಿಮ್ಮ ಅಪರಾಧಗಳೇ ನಿಮ್ಮ ದೇವರಿಂದ ನಿಮ್ಮನ್ನು ಅಗಲಿಸುತ್ತಾ ಬಂದಿವೆ; ನಿಮ್ಮ ಪಾಪಗಳೇ ಆತನು ಕೇಳಲಾರದಂತೆ ಆತನ ಮುಖಕ್ಕೆ ಅಡ್ಡವಾಗಿವೆ.


ಯೆಹೋವನು ದುಷ್ಟರಿಗೆ ದೂರ, ಶಿಷ್ಟರ ಬಿನ್ನಹಕ್ಕೆ ಹತ್ತಿರ.


ದಾವೀದನ ಕಾಲದಲ್ಲಿ ಮೂರು ವರುಷಗಳವರೆಗೂ ಬಿಡದೆ ಬರವಿತ್ತು. ದಾವೀದನು ಯೆಹೋವನನ್ನು ವಿಚಾರಿಸಲು ಆತನು - ಸೌಲನು ಗಿಬ್ಯೋನ್ಯರನ್ನು ಕೊಲ್ಲಿಸಿದ್ದರಿಂದ ಅವನ ಮೇಲೆಯೂ ಅವನ ಮನೆಯವರ ಮೇಲೆಯೂ ರಕ್ತಾಪರಾಧವಿರುತ್ತದೆ ಎಂದು ಉತ್ತರಕೊಟ್ಟನು.


ಅಲ್ಲಿಂದಲಾದರೂ ನೀವು ಸಂಪೂರ್ಣ ಹೃದಯದಿಂದಲೂ ಮನಸ್ಸಿನಿಂದಲೂ ನಿಮ್ಮ ದೇವರಾದ ಯೆಹೋವನನ್ನು ಹುಡುಕಿದರೆ ಆತನು ನಿಮಗೆ ಸಿಕ್ಕುವನು.


ಒಂದು ವೇಳೆ ಮಕ್ಕಳನ್ನು ಹೆತ್ತು ಸಾಕಿದರೂ ಯಾವನೂ ಉಳಿಯದೆ ಇರುವ ತನಕ ಅವರಿಗೆ ಪುತ್ರಶೋಕವನ್ನು ಉಂಟುಮಾಡುತ್ತಲೇ ಬರುವೆನು; ಹೌದು, ನಾನು ಅವರಿಗೆ ವಿಮುಖನಾಗಲು ಅವರ ಗತಿಯನ್ನು ಏನೆಂದು ಹೇಳಲಿ!


ಯೆಹೋವನೇ, ನೀನೇ ನೋಡಿದಿಯಲ್ಲವೇ? ಸುಮ್ಮನಿರಬೇಡ; ನನ್ನ ಒಡೆಯನೇ, ನನಗೆ ದೂರವಾಗಿರುವದೇಕೆ?


ನನ್ನ ಸಾನ್ನಿಧ್ಯಕ್ಕೆ ಬಾ ಎಂಬ ನಿನ್ನ ಮಾತಿಗೆ ನಾನು - ಯೆಹೋವನೇ, ನಿನ್ನ ಸಾನ್ನಿಧ್ಯಕ್ಕೆ ಬರಲೇ ಬರುವೆನು ಎಂದು ಉತ್ತರ ಕೊಟ್ಟೆನು.


ಯೆಹೋವನೇ, ನೀನು ಯಾಕೆ ದೂರವಾಗಿ ನಿಂತಿದ್ದೀ; ಕಷ್ಟಕಾಲದಲ್ಲಿ ಯಾಕೆ ಮರೆಯಾಗುತ್ತೀ?


ಈತನು ಪವಿತ್ರಸ್ಥಾನದಲ್ಲಿ ಅಂದರೆ ಮನುಷ್ಯನು ಹಾಕದೆ ಕರ್ತನೇ ಹಾಕಿದ ನಿಜವಾದ ದೇವದರ್ಶನಗುಡಾರದಲ್ಲಿ ಯಾಜಕೋದ್ಯೋಗ ನಡಿಸುವವನಾಗಿದ್ದಾನೆ.


ಅವನು ತನ್ನ ಮಾವನನ್ನು ಎದುರುಗೊಳ್ಳುವದಕ್ಕೆ ಹೊರಟು ವಂದಿಸಿ ಮುದ್ದಿಟ್ಟನು. ಅವರು ಪರಸ್ಪರ ಯೋಗಕ್ಷೇಮವನ್ನು ವಿಚಾರಿಸಿದ ಮೇಲೆ ಡೇರೆಯೊಳಕ್ಕೆ ಬಂದರು.


ಅದಲ್ಲದೆ ಮೋಶೆಯ ಮಾವನಾದ ಇತ್ರೋವನು ದೇವರಿಗೆ ಸರ್ವಾಂಗಹೋಮ ಯಜ್ಞಗಳನ್ನು ಸಮರ್ಪಿಸಲಾಗಿ ಆರೋನನೂ ಇಸ್ರಾಯೇಲ್ಯರ ಹಿರಿಯರೆಲ್ಲರೂ ಅವನ ಸಂಗಡ ದೇವರ ಸನ್ನಿಧಿಯಲ್ಲಿ ಸಹಭೋಜನವನ್ನು ಮಾಡುವದಕ್ಕೆ ಬಂದರು.


ಆದದರಿಂದ ಇಸ್ರಾಯೇಲ್ಯರು ಹೋರೆಬ್ ಬೆಟ್ಟದಿಂದೀಚೆಗೆ ಆಭರಣಗಳನ್ನು ಧರಿಸಿಕೊಳ್ಳದೆ ಇದ್ದರು.


ಮೋಶೆ ಆ ಡೇರೆಗೆ ಹೋಗುವಾಗೆಲ್ಲಾ ಜನರೆಲ್ಲರು ಎದ್ದು ತಮ್ಮ ತಮ್ಮ ಡೇರೆಗಳ ಬಾಗಲಲ್ಲಿ ನಿಂತು ಮೋಶೆಯು ಆ ಡೇರೆಯೊಳಕ್ಕೆ ಹೋಗುವತನಕ ಅವನ ಹಿಂದೆ ನೋಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು