Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 34:1 - ಕನ್ನಡ ಸತ್ಯವೇದವು J.V. (BSI)

1 ಯೆಹೋವನು ಮೋಶೆಗೆ - ನೀನು ಮೊದಲಿನ ಕಲ್ಲಿನ ಹಲಿಗೆಗಳಂತೆ ಇನ್ನು ಎರಡು ಕಲ್ಲಿನ ಹಲಿಗೆಗಳನ್ನು ಸಿದ್ಧಪಡಿಸಿಕೋ. ನೀನು ಒಡೆದು ಬಿಟ್ಟ ಆ ಮೊದಲನೆಯ ಹಲಿಗೆಗಳ ಮೇಲಿದ್ದ ವಾಕ್ಯಗಳನ್ನು ನಾನು ಈ ಹಲಿಗೆಗಳ ಮೇಲೆ ಬರೆಯುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಮೋಶೆಗೆ, “ನೀನು ಮೊದಲಿನ ಕಲ್ಲಿನ ಹಲಗೆಗಳಂತೆ ಇನ್ನೂ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿಕೋ. ನೀನು ಒಡೆದು ಬಿಟ್ಟ ಆ ಮೊದಲನೆಯ ಹಲಗೆಗಳ ಮೇಲಿದ್ದ ವಾಕ್ಯಗಳನ್ನು ಈ ಹಲಗೆಗಳ ಮೇಲೆ ನಾನು ಬರೆಯುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಸ್ವಾಮಿ ಮೋಶೆಗೆ, “ನೀನು ಮೊದಲಿನ ಕಲ್ಲಿನ ಹಲಗೆಗಳಂತೆ ಇನ್ನು ಎರಡು ಕಲ್ಲಿನ ಹಲಗೆಗಳನ್ನು ಸಿದ್ಧಪಡಿಸಿಕೋ. ನೀನು ಒಡೆದುಬಿಟ್ಟ ಆ ಮೊದಲನೆಯ ಹಲಗೆಗಳ ಮೇಲಿದ್ದ ವಾಕ್ಯಗಳನ್ನು ನಾನು ಈ ಹಲಗೆಗಳ ಮೇಲೆ ಬರೆಯುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ತರುವಾಯ ಯೆಹೋವನು ಮೋಶೆಗೆ, “ಒಡೆದುಹೋದ ಮೊದಲಿನ ಎರಡು ಕಲ್ಲಿನ ಹಲಿಗೆಗಳಂತೆ ಇನ್ನೆರಡು ಕಲ್ಲಿನ ಹಲಿಗೆಗಳನ್ನು ಮಾಡು. ಮೊದಲಿನ ಕಲ್ಲುಗಳಲ್ಲಿ ಬರೆದಿದ್ದ ಮಾತುಗಳನ್ನೇ ನಾನು ಈ ಕಲ್ಲುಗಳ ಮೇಲೆ ಬರೆಯುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಮೋಶೆಗೆ, “ಮೊದಲಿನವುಗಳ ಹಾಗೆ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿಕೋ. ಆಗ ನೀನು ಒಡೆದ ಆ ಮೊದಲನೆಯ ಹಲಗೆಗಳ ಮೇಲೆ ಇದ್ದ ವಾಕ್ಯಗಳನ್ನು ಈ ಹಲಗೆಗಳ ಮೇಲೆ ನಾನು ಬರೆಯುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 34:1
11 ತಿಳಿವುಗಳ ಹೋಲಿಕೆ  

ಅವನು ಪಾಳೆಯದ ಹತ್ತಿರಕ್ಕೆ ಬಂದು ಆ ಬಸವನನ್ನೂ ಜನರು ಕುಣಿದಾಡುವದನ್ನೂ ಕಂಡಾಗ ಬಹು ಕೋಪಗೊಂಡು ಕೈಯಲ್ಲಿದ್ದ ಶಿಲಾಶಾಸನಗಳನ್ನು ಬೆಟ್ಟದ ಬುಡದಲ್ಲಿ ನೆಲಕ್ಕೆ ಹಾಕಿ ಒಡೆದುಬಿಟ್ಟನು.


ಯೆಹೋವನೇ, ನಿನ್ನ ವಾಕ್ಯವು ಪರಲೋಕದಲ್ಲಿ ಶಾಶ್ವತವಾಗಿ ಸ್ಥಾಪಿಸಲ್ಪಟ್ಟದೆ.


ಯೆಹೋವನು ಸೀನಾಯಿಬೆಟ್ಟದಲ್ಲಿ ಮೋಶೆಯ ಸಂಗಡ ಮಾತಾಡುವದನ್ನು ಮುಗಿಸಿದ ಮೇಲೆ ಅವನಿಗೆ ಆ ಎರಡು ಆಜ್ಞಾಶಾಸನಗಳನ್ನು ಕೊಟ್ಟನು. ಅವು ದೇವರ ಕೈಯಿಂದ ಕೆತ್ತಲ್ಪಟ್ಟ ಶಿಲಾಶಾಸನಗಳೇ.


ಮೋಶೆ ಆ ಬೆಟ್ಟದಲ್ಲಿ ಯೆಹೋವನ ಸನ್ನಿಧಿಯಲ್ಲಿ ಹಗಲಿರಳು ನಾಲ್ವತ್ತು ದಿನ ಇದ್ದನು. ಅವನು ಏನೂ ಊಟಮಾಡಲಿಲ್ಲ, ಏನೂ ಕುಡಿಯಲಿಲ್ಲ. ಆತನು ನಿಬಂಧನದ ವಾಕ್ಯಗಳನ್ನು ಅಂದರೆ ಹತ್ತು ಆಜ್ಞೆಗಳನ್ನು ಆ ಕಲ್ಲಿನ ಹಲಿಗೆಗಳ ಮೇಲೆ ಬರೆದನು.


ಆ ಶಿಲಾಶಾಸನಗಳು ದೇವರ ಕೆಲಸವೇ; ಅವುಗಳಲ್ಲಿ ಬರೆದದ್ದು ದೇವರು ಕೆತ್ತಿದ ಅಕ್ಷರಗಳೇ.


ಯೆಹೋವನು ಮೋಶೆಗೆ - ನೀನು ಬೆಟ್ಟವನ್ನು ಹತ್ತಿ ಬಂದು ನನ್ನ ಹತ್ತಿರದಲ್ಲೇ ಇರು; ನೀನು ಆ ಧರ್ಮಶಾಸ್ತ್ರವನ್ನೂ ಆಜ್ಞೆಗಳನ್ನೂ ಜನರಿಗೆ ಬೋಧಿಸುವಂತೆ ನಾನು ಅವುಗಳನ್ನು ಬರೆದಿರುವ ಶಿಲಾಶಾಸನಗಳನ್ನು ನಿನಗೆ ಕೊಡುತ್ತೇನೆ ಎಂದು ಹೇಳಲಾಗಿ


ಆದಕಾರಣ ಮೋಶೆ ಮೊದಲಿದ್ದ ಹಲಿಗೆಗಳಂತೆ ಎರಡು ಕಲ್ಲಿನ ಹಲಿಗೆಗಳನ್ನು ಸಿದ್ಧಪಡಿಸಿಕೊಂಡು ಯೆಹೋವನ ಅಪ್ಪಣೆಯ ಮೇರೆಗೆ ಬೆಳಿಗ್ಗೆ ಎದ್ದು ಆ ಎರಡು ಕಲ್ಲಿನ ಹಲಿಗೆಗಳನ್ನು ಕೈಯಲ್ಲಿ ತೆಗೆದುಕೊಂಡು ಸೀನಾಯಿಬೆಟ್ಟವನ್ನು ಹತ್ತಿದನು.


ನೀವು ಅನುಸರಿಸಬೇಕೆಂದು ಆತನು ನೇವಿುಸಿದ ನಿಬಂಧನೆಯನ್ನು ಅಂದರೆ ಹತ್ತು ಕಟ್ಟಳೆಗಳನ್ನು ನಿಮಗೆ ವಿವರಿಸಿ ಎರಡುಕಲ್ಲಿನ ಹಲಗೆಗಳಲ್ಲಿ ಕೆತ್ತಿಸಿದ್ದೂ;


ಆಗ ಯೆರೆಮೀಯನು ಇನ್ನೊಂದು ಸುರಳಿಯನ್ನು ತೆಗೆದುಕೊಂಡು ನೇರೀಯನ ಮಗನಾಗಿರುವ ಲೇಖಕನಾದ ಬಾರೂಕನಿಗೆ ಕೊಡಲು ಅವನು ಅದರಲ್ಲಿ ಯೆಹೂದದ ಅರಸನಾದ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಗ್ರಂಥದ ಎಲ್ಲಾ ಮಾತುಗಳನ್ನಲ್ಲದೆ ಇನ್ನು ಇಂಥಾ ಅನೇಕ ಮಾತುಗಳನ್ನು ಯೆರೆಮೀಯನ ಬಾಯಿಂದ ಬಂದ ಹಾಗೆ ಬರೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು