Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 34:11 - ಕನ್ನಡ ಸತ್ಯವೇದವು J.V. (BSI)

11 ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವದನ್ನು ನೀವು ಅನುಸರಿಸಿ ನಡೆಯಬೇಕು. ಇಗೋ, ನಾನು ಅಮೋರಿಯರನ್ನೂ ಕಾನಾನ್ಯರನ್ನೂ ಹಿತ್ತಿಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ನಿಮ್ಮ ಮುಂದೆ ಹೊರಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಾನು ಈ ದಿನ ನಿಮಗೆ ಆಜ್ಞಾಪಿಸುವುದನ್ನು ನೀವು ಅನುಸರಿಸಿ ನಡೆಯಬೇಕು. ಇಗೋ, ನಾನು ಅಮೋರಿಯರನ್ನು, ಕಾನಾನ್ಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಹಾಗು ಯೆಬೂಸಿಯರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ನಾನು ಈ ದಿನ ನಿಮಗೆ ಆಜ್ಞಾಪಿಸುವುದನ್ನು ನೀವು ಅನುಸರಿಸಿ ನಡೆಯಬೇಕು. ಇಗೋ, ನಾನು ಅಮೋರಿಯರನ್ನು, ಕಾನಾನ್ಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಹಾಗು ಯೆಬೂಸಿಯರನ್ನು ನಿಮ್ಮ ಮುಂದೆಯೇ ಹೊರಡಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಾನು ಈ ದಿನ ಕೊಡುವ ಆಜ್ಞೆಗಳಿಗೆ ವಿಧೇಯರಾಗಿರಿ. ನಿಮ್ಮ ವೈರಿಗಳಾದ ಅಮೋರಿಯರನ್ನು, ಕಾನಾನ್ಯರನ್ನು, ಹಿತ್ತಿಯರನ್ನು, ಪೆರಿಜೀಯರನ್ನು, ಹಿವ್ವಿಯರನ್ನು ಮತ್ತು ಯೆಬೂಸಿಯರನ್ನು ನಾನು ಹೊರಗಟ್ಟುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನಾನು ಈ ಹೊತ್ತು ನಿಮಗೆ ಆಜ್ಞಾಪಿಸುವುದನ್ನು ಅನುಸರಿಸಿ ನಡೆಯಬೇಕು. ಹಿತ್ತಿಯರನ್ನೂ ಅಮೋರಿಯರನ್ನೂ ಕಾನಾನ್ಯರನ್ನೂ, ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ನಿಮ್ಮ ಮುಂದೆಯೇ ಹೊರಡಿಸಿಬಿಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 34:11
23 ತಿಳಿವುಗಳ ಹೋಲಿಕೆ  

ನಾನು ನಿನ್ನ ಮುಂದುಗಡೆಯಲ್ಲಿ ದೂತನನ್ನು ಕಳುಹಿಸಿ ಕಾನಾನ್ಯರನ್ನೂ ಅಮೋರಿಯರನ್ನೂ ಹಿತ್ತಿಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಹೊರಡಿಸುವೆನು.


ಐಗುಪ್ತದೇಶದಲ್ಲಿ ನಿಮಗುಂಟಾಗಿರುವ ದುರವಸ್ಥೆಯಿಂದ ನಿಮ್ಮನ್ನು ತಪ್ಪಿಸಿ ಹಾಲೂ ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಪೆರಿಜೀಯರೂ ಹಿವ್ವಿಯರೂ ಯೆಬೂಸಿಯರೂ ವಾಸವಾಗಿರುವ ದೇಶಕ್ಕೆ ಬರಮಾಡುವೆನೆಂದು ನಿರ್ಣಯಿಸಿದ್ದೇನೆ ಎಂಬದಾಗಿ ನನಗೆ ಹೇಳಿದನೆಂದು ತಿಳಿಸು.


ನಮ್ಮ ದೇವರಾದ ಯೆಹೋವನು ನಿರೂಪಿಸಿದ ಈ ಧರ್ಮೋಪದೇಶವನ್ನೆಲ್ಲಾ ನಾವು ಅನುಸರಿಸಿದರೆ ಆತನ ದೃಷ್ಟಿಯಲ್ಲಿ ನೀತಿವಂತರೆಂದು ಎಣಿಸಲ್ಪಡುವೆವೆಂಬದಾಗಿ ನೀವು ಉತ್ತರಕೊಡಬೇಕು.


ಆದದರಿಂದ ಇಸ್ರಾಯೇಲ್ಯರೇ, ನಿಮ್ಮ ಪಿತೃಗಳ ದೇವರಾದ ಯೆಹೋವನು ವಾಗ್ದಾನಮಾಡಿದ ಪ್ರಕಾರ ಹಾಲೂ ಜೇನೂ ಹರಿಯುವ ಆ ದೇಶದಲ್ಲಿ ನಿಮಗೆ ಶುಭವುಂಟಾಗುವದಕ್ಕೂ ನೀವು ಬಹಳವಾಗಿ ಹೆಚ್ಚುವದಕ್ಕೂ ಈ ಆಜ್ಞೆಗಳನ್ನು ಲಕ್ಷ್ಯವಿಟ್ಟು ಕೇಳಿ ಅನುಸರಿಸಲೇಬೇಕು.


ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ತಪ್ಪಿಸುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಪೆರಿಜೀಯರೂ ಹಿವ್ವಿಯರೂ ಯೆಬೂಸಿಯರೂ ವಾಸವಾಗಿರುವ ದೇಶಕ್ಕೆ ನಡಿಸಿಕೊಂಡು ಹೋಗುವದಕ್ಕೂ ಇಳಿದುಬಂದಿದ್ದೇನೆ.


ನನ್ನ ಆಜ್ಞೆಗಳನ್ನು ಹೊಂದಿ ಅವುಗಳನ್ನು ಕೈಕೊಂಡು ನಡೆಯುವವನೇ ನನ್ನನ್ನು ಪ್ರೀತಿಸುವವನು. ನನ್ನನ್ನು ಪ್ರೀತಿಸುವವನು ನನ್ನ ತಂದೆಗೆ ಪ್ರಿಯನಾಗಿರುವನು; ನಾನೂ ಅವನನ್ನು ಪ್ರೀತಿಸಿ ಅವನಿಗೆ ಕಾಣಿಸಿಕೊಳ್ಳುವೆನು ಎಂದು ಹೇಳಿದನು.


ನಾನು ನಿಮಗೆ ಆಜ್ಞಾಪಿಸಿದ್ದನ್ನೆಲ್ಲಾ ಕಾಪಾಡಿಕೊಳ್ಳುವದಕ್ಕೆ ಅವರಿಗೆ ಉಪದೇಶ ಮಾಡಿರಿ. ನೋಡಿರಿ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿವಸ ನಿಮ್ಮ ಸಂಗಡ ಇರುತ್ತೇನೆ ಎಂದು ಹೇಳಿದನು.


ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದರೆ ಆತನು ಭೂವಿುಯ ಮೇಲಿರುವ ಎಲ್ಲಾ ಜನಾಂಗಗಳಿಗಿಂತಲೂ ನಿಮ್ಮನ್ನು ಉನ್ನತಸ್ಥಿತಿಗೆ ತರುವನು.


ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ನೀವು ಅನುಸರಿಸಲೇಬೇಕು; ಅದಕ್ಕೆ ಏನೂ ಕೂಡಿಸಬಾರದು; ಅದರಿಂದ ಏನೂ ತೆಗೆದುಬಿಡಬಾರದು.


ನಾನು ಬೋಧಿಸುವ ಈ ಎಲ್ಲಾ ಆಜ್ಞೆಗಳಿಗೆ ನೀವು ಚೆನ್ನಾಗಿ ಕಿವಿಗೊಟ್ಟು ಅವುಗಳನ್ನು ಅನುಸರಿಸಿ ನಿಮ್ಮ ದೇವರಾದ ಯೆಹೋವನಿಗೆ ಒಳ್ಳೇದೂ ಯುಕ್ತವೂ ಆಗಿರುವದನ್ನು ಮಾಡಿದರೆ ನಿಮಗೂ ನಿಮ್ಮ ಸಂತತಿಯವರಿಗೂ ಸದಾಕಾಲ ಶುಭವುಂಟಾಗುವದು.


ನೀವು ಆಗ ಕಣ್ಣಾರೆ ನೋಡಿದ ಪ್ರಕಾರ ಆತನು ವಿಶೇಷ ಮನಶ್ಶೋಧನೆ, ಮಹತ್ಕಾರ್ಯ, ಉತ್ಪಾತ, ಭುಜಪರಾಕ್ರಮ, ಶಿಕ್ಷೆ ಇವುಗಳನ್ನು ಪ್ರಯೋಗಿಸಿ ನಿಮ್ಮನ್ನು ಬಿಡುಗಡೆಮಾಡಿದನಲ್ಲಾ. ನೀವು ಹೆದರಿಕೊಳ್ಳುವ ಆ ಎಲ್ಲಾ ಜನಾಂಗಗಳಿಗೂ ಆತನು ಹಾಗೆಯೇ ಮಾಡುವನು.


ಆದದರಿಂದ ನೀವು ಸ್ವಲ್ಪವಾದರೂ ತಪ್ಪದೆ ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆಯೇ ನಡೆದುಕೊಳ್ಳಬೇಕು.


ನಿಮಗೂ ನಿಮ್ಮ ಸಂತತಿಯವರಿಗೂ ಶುಭವುಂಟಾಗುವಂತೆಯೂ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸದಾಕಾಲ ಬಾಳುವಂತೆಯೂ ನಾನು ನಿಮಗೆ ಈಗ ತಿಳಿಸಿದ ಆತನ ಆಜ್ಞಾವಿಧಿಗಳನ್ನು ನೀವು ಅನುಸರಿಸಿ ನಡೆಯಬೇಕು.


ಅದಲ್ಲದೆ ಕಡಜದ ಹುಳಗಳನ್ನು ನಿಮ್ಮ ಮುಂಚಿತವಾಗಿ ಕಳುಹಿಸುವೆನು; ಹಿವ್ವಿಯರೂ ಕಾನಾನ್ಯರೂ ಹಿತ್ತಿಯರೂ ನಿಮ್ಮ ಮುಂದೆ ನಿಲ್ಲದಂತೆ ಅವು ಅವರನ್ನು ಓಡಿಸಿಬಿಡುವವು.


ಆದಿಯಿಂದಲೂ ದೇವರೇ ನಿಮಗೆ ನಿವಾಸಸ್ಥಾನವಾಗಿದ್ದಾನಲ್ಲಾ; ಸದಾ ದೇವರ ಹಸ್ತವೇ ನಿಮಗೆ ಆಧಾರ. ಆತನು ನಿಮ್ಮೆದುರಿನಿಂದ ಶತ್ರುಗಳನ್ನು ಹೊರಡಿಸಿ ಅವರನ್ನು ಸಂಹರಿಸಿರಿ ಎಂದು ಆಜ್ಞಾಪಿಸಿದನು;


ಅದೇ ಕಾಲದಲ್ಲಿ ನಾನು ಅಷ್ಡೋದ್ ಅಮ್ಮೋನಿಯ ಮೋವಾಬ್ ಸ್ತ್ರೀಯರನ್ನು ಮದುವೆಮಾಡಿಕೊಂಡ ಯೆಹೂದ್ಯರನ್ನು ಕುರಿತು ವಿಚಾರಮಾಡಿ


ನಾವು ಅರಣ್ಯದಲ್ಲಿ ಮೂರು ದಿವಸದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾದ ಯೆಹೋವನು ಆಜ್ಞಾಪಿಸುವ ಪ್ರಕಾರ ಯಜ್ಞಮಾಡಬೇಕು ಅಂದನು.


ನಿಮ್ಮ ದೇವರಾದ ಯೆಹೋವನು ತಾನೇ ಅವರನ್ನು ನಿಮ್ಮ ಕಣ್ಣುಮುಂದೆ ಹೊರಡಿಸಿಬಿಡುವನು. ಆತನ ವಾಗ್ದಾನದಂತೆ ಅವರ ದೇಶವನ್ನು ನೀವು ಸ್ವತಂತ್ರಿಸಿಕೊಳ್ಳುವಿರಿ.


ಇದಲ್ಲದೆ ಯೆಬೂಸಿಯರೂ ಅಮೋರಿಯರೂ ಗಿರ್ಗಾಷಿಯರೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು