Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 34:12 - ಕನ್ನಡ ಸತ್ಯವೇದವು J.V. (BSI)

12 ನೀವು ಸೇರುವ ದೇಶದ ನಿವಾಸಿಗಳ ಸಂಗಡ ಯಾವ ಒಡಂಬಡಿಕೆಯನ್ನೂ ಮಾಡಿಕೊಳ್ಳಬಾರದು ನೋಡಿಕೊಳ್ಳಿರಿ; ಮಾಡಿಕೊಂಡರೆ ಅದು ನಿಮ್ಮ ಮಧ್ಯದಲ್ಲಿ ಉರುಲಿನಂತಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೀವು ಹೋಗಿ ಸೇರುವ ದೇಶದ ನಿವಾಸಿಗಳ ಸಂಗಡ ಯಾವ ಒಡಂಬಡಿಕೆಯನ್ನೂ ಮಾಡಿಕೊಳ್ಳದಂತೆ ಎಚ್ಚರಿಕೆಯಿಂದಿರಿ; ಹಾಗೆ ಮಾಡಿಕೊಂಡರೆ ಅದು ನಿಮ್ಮ ಮಧ್ಯದಲ್ಲಿ ಉರುಲಿನಂತಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನೀವು ಸೇರುವ ನಾಡಿನ ನಿವಾಸಿಗಳೊಂದಿಗೆ ಯಾವ ಒಪ್ಪಂದವನ್ನೂ ಮಾಡಿಕೊಳ್ಳದಂತೆ ಎಚ್ಚರಿಕೆಯಿಂದಿರಿ; ಮಾಡಿಕೊಂಡರೆ ಅದು ಕೊರಳನ್ನು ಸಿಕ್ಕಿಸುವ ಉರುಳಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಎಚ್ಚರಿಕೆಯಾಗಿರಿ! ನೀವು ಹೋಗುತ್ತಿರುವ ದೇಶದಲ್ಲಿರುವ ಜನರೊಂದಿಗೆ ಯಾವ ಒಪ್ಪಂದವನ್ನೂ ಮಾಡಿಕೊಳ್ಳಬೇಡಿರಿ. ನೀವು ಆ ಜನರೊಂದಿಗೆ ಒಪ್ಪಂದ ಮಾಡಿಕೊಂಡರೆ, ಅದು ನಿಮಗೆ ಕೇಡನ್ನು ಬರಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನೀನು ಹೋಗುವ ದೇಶದ ನಿವಾಸಿಗಳ ಸಂಗಡ ಒಪ್ಪಂದವನ್ನು ಮಾಡದಂತೆ ನೋಡಿಕೋ. ಒಂದು ವೇಳೆ ಮಾಡಿದರೆ ಅದು ನಿಮ್ಮ ಮಧ್ಯದಲ್ಲಿ ಉರುಲಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 34:12
15 ತಿಳಿವುಗಳ ಹೋಲಿಕೆ  

ನಿಮ್ಮ ಎದುರಿನಿಂದ ಹೊರಡಿಸುವವನಾಗಿ ಅವರನ್ನು ನಿಮ್ಮಿಂದ ಪರಾಜಯಪಡಿಸುವಾಗ ನೀವು ಅವರನ್ನು ನಿಶ್ಶೇಷವಾಗಿ ಸಂಹರಿಸಬೇಕು. ಅವರ ಸಂಗಡ ಒಡಂಬಡಿಕೆಮಾಡಿಕೊಳ್ಳಬಾರದು, ಅವರನ್ನು ಕನಿಕರಿಸಬಾರದು.


ನಿಮ್ಮ ದೇವರಾದ ಯೆಹೋವನು ನಿಮ್ಮಿಂದ ಪರಾಜಯಪಡಿಸುವ ಜನಾಂಗಗಳನ್ನೆಲ್ಲಾ ನೀವು ಕನಿಕರಿಸದೆ ನಾಶಮಾಡಬೇಕು. ಅವರ ದೇವರುಗಳನ್ನು ಪೂಜಿಸಲೇಬಾರದು; ಪೂಜಿಸಿದರೆ ಅವು ನಿಮಗೆ ಉರುಲಾಗುವವು.


ಅವರ ವಿಗ್ರಹಗಳನ್ನು ಸೇವಿಸಿದರು; ಅವು ಅವರಿಗೆ ಉರುಲಿನಂತಾದವು.


ಈ ಬಂಗಾರದಿಂದ ಗಿದ್ಯೋನನು ಒಂದು ಏಫೋದನ್ನು ಮಾಡಿಸಿ ಅದನ್ನು ತನ್ನ ಊರಾದ ಒಫ್ರದಲ್ಲಿಟ್ಟನು. ಅದರಿಂದ ಇಸ್ರಾಯೇಲ್ಯರೆಲ್ಲರೂ ದೇವದ್ರೋಹಿಗಳಾದರು; ಅದು ಗಿದ್ಯೋನನಿಗೂ ಅವನ ಮನೆಯವರಿಗೂ ಉರುಲಾಯಿತು.


ಇಲ್ಲವಾದರೆ ಅವರು ತಮ್ಮ ದೇವರುಗಳಿಗಾಗಿ ಆಚರಿಸುವ ನಿಷಿದ್ಧಾಚಾರಗಳನ್ನು ನಿಮಗೆ ಕಲಿಸಿಕೊಟ್ಟಾರು; ಮತ್ತು ನೀವು ನಿಮ್ಮ ದೇವರಾದ ಯೆಹೋವನಿಗೆ ದ್ರೋಹಿಗಳಾದೀರಿ.


ಯೆಹೋವನು ಈ ಜನಾಂಗಗಳ ವಿಷಯದಲ್ಲಿ ಇಸ್ರಾಯೇಲ್ಯರಿಗೆ - ನಿಮಗೂ ಅವರಿಗೂ ಕೊಟ್ಟುಕೊಳ್ಳುವದು ನಡೆಯಬಾರದು; ಅದು ನಡೆಯುವದಾದರೆ ಅವರು ನಿಮ್ಮ ಮನಸ್ಸನ್ನು ತಮ್ಮ ದೇವತೆಗಳ ಕಡೆಗೆ ತಿರುಗಿಸಾರು ಎಂದು ಆಜ್ಞಾಪಿಸಿದ್ದರೂ ಸೊಲೊಮೋನನು ಅವರ ಸ್ತ್ರೀಯರಲ್ಲಿ ಅನುರಕ್ತನಾಗಿದ್ದನು.


ಎಲ್ಲಾ ದಿನ್ನೆಗಳ ಮೇಲೆ ಮತ್ತು ಎಲ್ಲಾ ಹಸುರು ಮರಗಳ ಕೆಳಗೆ ಕಲ್ಲುಕಂಬ, ಅಶೇರವಿಗ್ರಹ ಸ್ತಂಭ ಇವುಗಳನ್ನು ನಿಲ್ಲಿಸಿದರು;


ಅಂದಿನಿಂದ ಅವರು ತಮ್ಮ ಪಿತೃಗಳ ದೇವರಾದ ಯೆಹೋವನ ಆಲಯವನ್ನು ನಿರಾಕರಿಸಿ ಅಶೇರಸ್ತಂಭಗಳನ್ನೂ ವಿಗ್ರಹಗಳನ್ನೂ ಪೂಜಿಸುವವರಾದರು. ಅವರ ಈ ಅಪರಾಧದ ದೆಸೆಯಿಂದ ಯೆಹೂದದ ಮೇಲೆಯೂ ಯೆರೂಸಲೇವಿುನ ಮೇಲೆಯೂ ದೇವಕೋಪವುಂಟಾಯಿತು.


ಆ ದೇಶದ ನಿವಾಸಿಗಳನ್ನೆಲ್ಲಾ ಹೊರಡಿಸಿಬಿಟ್ಟು ಅವರ ವಿಚಿತ್ರವಾದ ಕಲ್ಲುಗಳನ್ನೂ ಲೋಹವಿಗ್ರಹಗಳನ್ನೂ ನಾಶಮಾಡಿ ಅವರ ಪೂಜಾಸ್ಥಳಗಳನ್ನು ಹಾಳುಮಾಡಬೇಕು.


ಆತನು ಅವರನ್ನು ನಿಮ್ಮಿಂದ ಪರಾಜಯಪಡಿಸಿದಾಗ ನೀವು ಅವರ ವಿಷಯದಲ್ಲಿ ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದುಕೊಳ್ಳಬೇಕು.


ಆಗ ಇಸ್ರಾಯೇಲ್ಯರು ಹಿವ್ವಿಯರಾದ ಅವರಿಗೆ - ನೀವು ಒಂದು ವೇಳೆ ಈ ನಮ್ಮ ದೇಶದ ನಿವಾಸಿಗಳೇ ಆಗಿರಬಹುದು; ಆ ಪಕ್ಷದಲ್ಲಿ ನಾವು ನಿಮ್ಮ ಸಂಗಡ ಒಡಂಬಡಿಕೆಮಾಡಿಕೊಳ್ಳುವದು ಹೇಗೆ ಎಂದು ಉತ್ತರಕೊಟ್ಟರು.


ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆಂದೂ ನೀವು ಅಮೋರಿಯರ ಮಧ್ಯದಲ್ಲಿ ವಾಸಿಸುವಾಗ ಅವರ ದೇವತೆಗಳನ್ನು ಪೂಜಿಸಬಾರದೆಂದೂ ಹೇಳಿದೆನು; ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ ಎಂಬದೇ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು