Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 34:13 - ಕನ್ನಡ ಸತ್ಯವೇದವು J.V. (BSI)

13 [ಆದದರಿಂದ] ನೀವು ಅವರ ಬಲಿಪೀಠಗಳನ್ನು ಕೆಡವಿ ಅವರ ಕಲ್ಲುಕಂಬಗಳನ್ನು ಒಡೆದು ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದರೆ ನೀವು ಅವರ ಯಜ್ಞವೇದಿಗಳನ್ನು ಕೆಡವಿ ಅವರ ಕಲ್ಲುಕಂಬಗಳನ್ನು ಒಡೆದು ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅವರ ಬಲಿಪೀಠಗಳನ್ನು ಕೆಡವಿಬಿಡಿ; ಅವರ ಕಲ್ಲುಕಂಬದ ವಿಗ್ರಹಗಳನ್ನು ಒಡೆದುಬಿಡಿ; ‘ಅಶೇರ’ ಎಂಬ ಸ್ತಂಭಗಳನ್ನು ಕಡಿದುಬಿಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಅವರ ವೇದಿಕೆಗಳನ್ನು ನಾಶಮಾಡಿರಿ. ಅವರು ಪೂಜಿಸುವ ಕಲ್ಲುಗಳನ್ನು ಒಡೆದು ಹಾಕಿರಿ. ಅವರ ವಿಗ್ರಹಗಳನ್ನು ಕಡಿದು ಹಾಕಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದರೆ ಅವರ ಬಲಿಪೀಠಗಳನ್ನು ಒಡೆದುಹಾಕಬೇಕು. ಅವರ ಪವಿತ್ರ ಕಲ್ಲುಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 34:13
25 ತಿಳಿವುಗಳ ಹೋಲಿಕೆ  

ಪೂಜಾಸ್ಥಳಗಳನ್ನು ಹಾಳುಮಾಡಿ ಕಲ್ಲುಕಂಬಗಳನ್ನು ಒಡೆದು ಅಶೇರವಿಗ್ರಹ ಸ್ತಂಭಗಳನ್ನು ಕಡಿದುಹಾಕಿದನು; ಮೋಶೆಯು ಮಾಡಿಸಿದ ತಾಮ್ರಸರ್ಪವನ್ನು ಚೂರು ಚೂರು ಮಾಡಿದನು. ಇಸ್ರಾಯೇಲ್ಯರು ಅದಕ್ಕೆ ಆವರೆಗೂ ಧೂಪಸುಡುತ್ತಿದ್ದರು. ಅದಕ್ಕೆ ನೆಹುಷ್ಟಾನ್ ಎಂಬ ಹೆಸರಿತ್ತು;


ಅವರ ದೇವತೆಗಳನ್ನು ನೀವು ನಮಸ್ಕರಿಸಲೂಬಾರದು, ಪೂಜಿಸಲೂಬಾರದು; ಅವರ ಆಚರಣೆಗಳನ್ನು ಅನುಸರಿಸಲೇಬಾರದು. ಆ ಜನಗಳನ್ನು ನಿರ್ಮೂಲ ಮಾಡಿ ವಿಗ್ರಹಸ್ತಂಭಗಳನ್ನು ನಾಶನ ಮಾಡಬೇಕು.


ನಿಮ್ಮ ದೇವರಾದ ಯೆಹೋವನಿಗೋಸ್ಕರ ನೀವು ಕಟ್ಟಿಸಿಕೊಳ್ಳುವ ಯಜ್ಞವೇದಿಯ ಬಳಿಯಲ್ಲಿ ಯಾವ ವಿಧವಾದ ಮರದ ಅಶೇರವೆಂಬ ವಿಗ್ರಹ ಸ್ತಂಭವನ್ನೂ ನೆಡಬಾರದು;


ಆದದರಿಂದ ನೀವು ಹೀಗೆ ಮಾಡಬೇಕು - ಅವರ ಬಲಿಪೀಠಗಳನ್ನು ಕೆಡವಬೇಕು; ಅವರ ಕಲ್ಲಿನ ಕಂಬಗಳನ್ನು ಒಡೆದು ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದು ಅವರ ದೇವತಾಪ್ರತಿಮೆಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು.


ಇದಾದನಂತರ ನೆರೆದುಬಂದ ಇಸ್ರಾಯೇಲ್ಯರೆಲ್ಲರೂ ಯೆಹೂದ ದೇಶದ ಪಟ್ಟಣಗಳಿಗೆ ಹೋಗಿ ಕಲ್ಲು ಕಂಬಗಳನ್ನು ಒಡೆದು ಅಶೇರವಿಗ್ರಹಸ್ತಂಭಗಳನ್ನು ಕಡಿದುಹಾಕಿ ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಹಾಳುಮಾಡಿಬಿಟ್ಟರು. ಯೆಹೂದ ಬೆನ್ಯಾಮೀನ್ ಪ್ರಾಂತಗಳಲ್ಲಲ್ಲದೆ ಎಫ್ರಾಯೀಮ್ ಮನಸ್ಸೆ ಪ್ರಾಂತಗಳಲ್ಲಿಯೂ ಯಾವದೊಂದನ್ನೂ ಉಳಿಸಲಿಲ್ಲ. ಆಮೇಲೆ ಇಸ್ರಾಯೇಲ್ಯರೆಲ್ಲರೂ ತಮ್ಮ ತಮ್ಮ ಸ್ವಾಸ್ತ್ಯವಿರುವ ಪಟ್ಟಣಗಳಿಗೆ ಹೋದರು.


ಕಲ್ಲುಕಂಬಗಳನ್ನು ಒಡೆದುಹಾಕಿ ಅಶೇರ ವಿಗ್ರಹಸ್ತಂಭಗಳನ್ನು ಕಡಿದುಬಿಟ್ಟು ಅವುಗಳಿದ್ದ ಸ್ಥಳವನ್ನು ಮನುಷ್ಯರ ಎಲುಬುಗಳಿಂದ ತುಂಬಿಸಿದನು.


ಅದೇ ದಿನ ರಾತ್ರಿಯಲ್ಲಿ ಯೆಹೋವನು ಅವನಿಗೆ - ನೀನು ನಿನ್ನ ತಂದೆಯ ಹೋರಿಗಳಲ್ಲಿ ಒಂದು ಚಿಕ್ಕ ಹೋರಿಯನ್ನೂ ಏಳು ವರುಷದ ಇನ್ನೊಂದು ಹೋರಿಯನ್ನೂ ತೆಗೆದುಕೊಂಡುಹೋಗಿ ನಿನ್ನ ತಂದೆಯು ಕಟ್ಟಿರುವ ಬಾಳನ ಯಜ್ಞವೇದಿಯನ್ನು ಕೆಡವಿ ಅದರ ಬಳಿಯಲ್ಲಿರುವ ಅಶೇರವೆಂಬ ವಿಗ್ರಹ ಸ್ತಂಭವನ್ನು ಕಡಿದುಹಾಕಿ


ನೀವು ಈ ದೇಶದ ನಿವಾಸಿಗಳ ಸಂಗಡ ಒಡಂಬಡಿಕೆ ಮಾಡಿಕೊಳ್ಳಬಾರದು; ಅವರ ಯಜ್ಞವೇದಿಗಳನ್ನು ಕೆಡವಿಬಿಡಬೇಕು ಎಂದು ಆಜ್ಞಾಪಿಸಿದೆನು. ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ಹೀಗೆ ಯಾಕೆ ಮಾಡಿದಿರಿ?


ಈ ಗುಡ್ಡದ ಶಿಖರದಲ್ಲಿ ಯೆಹೋವನಿಗೋಸ್ಕರ ನೇಮಕವಾದ ರೀತಿಯಿಂದ ಒಂದು ಯಜ್ಞವೇದಿಯನ್ನು ಕಟ್ಟಿಸಿ ನೀನು ಕಡಿದು ಹಾಕಿದ ಅಶೇರ ವಿಗ್ರಹಸ್ತಂಭದಿಂದ ಬೆಂಕಿಮಾಡಿ ಆ ಎರಡನೆಯ ಹೋರಿಯನ್ನೂ ಸರ್ವಾಂಗಹೋಮವಾಗಿ ಸಮರ್ಪಿಸು ಎಂದು ಹೇಳಿದನು.


ಇನ್ನು ಏನೇನು ಸಂಭವಿಸುವದೋ! ಯೆಹೋವನು ಇಸ್ರಾಯೇಲ್ಯರನ್ನು ಹೊಡಿಯುವನು. ಆಗ ಅವರು ನೀರಿನಲ್ಲಿರುವ ಆಪುಹುಲ್ಲೋ ಎಂಬಂತೆ ಹೊಯ್ದಾಡುವರು. ಅವರು ಅಶೇರವಿಗ್ರಹಸ್ತಂಭಗಳನ್ನು ಮಾಡಿಕೊಂಡು ಆತನಿಗೆ ಕೋಪವನ್ನೆಬ್ಬಿಸಿದದರಿಂದ ಆತನು ಅವರನ್ನು ಅವರ ಪಿತೃಗಳಿಗೆ ಕೊಟ್ಟ ದೇಶದಿಂದ ಕಿತ್ತುಹಾಕಿ ಯೂಫ್ರೇಟೀಸ್ ನದಿಯ ಆಚೆಯಲ್ಲಿರುವ ದೇಶದೊಳಗೆ ಚದರಿಸಿಬಿಡುವನು.


ಇವನು ಅನ್ಯದೇವತೆಗಳ ಯಜ್ಞವೇದಿಗಳನ್ನೂ ಪೂಜಾಸ್ಥಳಗಳನ್ನೂ ತೆಗೆದುಹಾಕಿ ಕಲ್ಲುಕಂಬಗಳನ್ನು ಒಡಿಸಿ ಅಶೇರವಿಗ್ರಹಸ್ತಂಭಗಳನ್ನು ಕಡಿಸಿಬಿಟ್ಟು ಯೆಹೂದ್ಯರಿಗೆ -


ಅರಸನಾದ ಆಸನ ತಾಯಿ ಮಾಕಳು ಅಶೇರದೇವತೆಯ ಒಂದು ಅಸಹ್ಯ ಮೂರ್ತಿಯನ್ನು ಮಾಡಿಸಿದದರಿಂದ ಅವನು ಆಕೆಯನ್ನು ಗದ್ದುಗೆಯಿಂದ ತಳ್ಳಿ ಆ ಮೂರ್ತಿಯನ್ನು ಕಡಿಸಿ ಕಿದ್ರೋನ್ ಹಳ್ಳದ ಬಳಿಯಲ್ಲಿ ಚೂರುಚೂರು ಮಾಡಿ ಸುಡಿಸಿದನು.


ಇವನು ಯೆಹೋವನ ಮಾರ್ಗದಲ್ಲಿ ನಡೆದು ಧೈರ್ಯಗೊಂಡನು; ಇದಲ್ಲದೆ ಯೆಹೂದದೇಶದಲ್ಲಿದ್ದ ಪೂಜಾಸ್ಥಳಗಳನ್ನೂ ಅಶೇರವಿಗ್ರಹಸ್ತಂಭಗಳನ್ನೂ ತೆಗೆದುಹಾಕಿಸಿದನು.


ಅಂದಿನಿಂದ ಅವರು ತಮ್ಮ ಪಿತೃಗಳ ದೇವರಾದ ಯೆಹೋವನ ಆಲಯವನ್ನು ನಿರಾಕರಿಸಿ ಅಶೇರಸ್ತಂಭಗಳನ್ನೂ ವಿಗ್ರಹಗಳನ್ನೂ ಪೂಜಿಸುವವರಾದರು. ಅವರ ಈ ಅಪರಾಧದ ದೆಸೆಯಿಂದ ಯೆಹೂದದ ಮೇಲೆಯೂ ಯೆರೂಸಲೇವಿುನ ಮೇಲೆಯೂ ದೇವಕೋಪವುಂಟಾಯಿತು.


ಅವನ ದೇವಪ್ರಾರ್ಥನೆಯೂ ಅವನಿಗೆ ದೊರಕಿದ ಸದುತ್ತರವೂ ಅವನು ತನ್ನನ್ನು ತಗ್ಗಿಸಿಕೊಳ್ಳುವದಕ್ಕಿಂತ ಮುಂಚೆ ಮಾಡಿದ ಅಪರಾಧದ್ರೋಹಗಳೂ ಅವನು ಅಲ್ಲಲ್ಲಿ ಪೂಜಾಸ್ಥಳಗಳನ್ನು ಏರ್ಪಡಿಸಿ ಅಶೇರಸ್ತಂಭ ವಿಗ್ರಹ ಇವುಗಳನ್ನು ನಿಲ್ಲಿಸಿದ್ದೂ ದರ್ಶಿಗಳ ಚರಿತ್ರೆಯಲ್ಲಿ ಬರೆದಿರುತ್ತವೆ.


ತಮ್ಮ ಸೃಷ್ಟಿಕರ್ತನನ್ನೇ ಲಕ್ಷಿಸಿ ಇಸ್ರಾಯೇಲ್ಯರ ಸದಮಲಸ್ವಾವಿುಯ ಕಡೆಗೇ ಕಣ್ಣಿಡುವರು.


ಹೀಗಿರಲು ಯಾಕೋಬ್ಯರು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿ ಪುಡಿಮಾಡಿ ಅಶೇರವೆಂಬ ವಿಗ್ರಹಸ್ತಂಭಗಳನ್ನೂ ಸೂರ್ಯಸ್ತಂಭಗಳನ್ನೂ ಇನ್ನು ಪ್ರತಿಷ್ಠಿಸದೆ ಹೋದರೆ ಅದೇ ಅವರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗುವದು, ಮತ್ತು ಅವರ ಪಾಪಪರಿಹಾರಕ್ಕೆ ಗುರುತಾದ ಪೂರ್ಣಫಲವೂ ಇದೇ.


ಅವರ ಮಕ್ಕಳು ಸೊಂಪಾಗಿ ಬೆಳೆದಿರುವ ಮರಗಳನ್ನೂ ಎತ್ತರವಾದ ಗುಡ್ಡಗಳನ್ನೂ ಕಂಡಾಗೆಲ್ಲಾ ಅವರ ಯಜ್ಞವೇದಿಗಳನ್ನೂ ಅಶೇರ ವಿಗ್ರಹಸ್ತಂಭಗಳನ್ನೂ ಜ್ಞಾಪಿಸಿಕೊಳ್ಳುವರು.


ನಿನ್ನ ಅಶೇರವೆಂಬ ವಿಗ್ರಹಸ್ತಂಭಗಳನ್ನು ನಿನ್ನ ಮಧ್ಯದೊಳಗಿಂದ ಕಿತ್ತುಬಿಟ್ಟು ನಿನ್ನ ಪಟ್ಟಣಗಳನ್ನು ನಿರ್ಮೂಲಮಾಡುವೆನು.


ಆ ದೇಶದ ನಿವಾಸಿಗಳನ್ನೆಲ್ಲಾ ಹೊರಡಿಸಿಬಿಟ್ಟು ಅವರ ವಿಚಿತ್ರವಾದ ಕಲ್ಲುಗಳನ್ನೂ ಲೋಹವಿಗ್ರಹಗಳನ್ನೂ ನಾಶಮಾಡಿ ಅವರ ಪೂಜಾಸ್ಥಳಗಳನ್ನು ಹಾಳುಮಾಡಬೇಕು.


ಕಲ್ಲಿನ ಕಂಬವನ್ನೂ ನಿಲ್ಲಿಸಬಾರದು; ಇದು ನಿಮ್ಮ ದೇವರಾದ ಯೆಹೋವನಿಗೆ ಹೇಯವಾದದ್ದು.


ಇದಲ್ಲದೆ ಬಾಳನ ವಿಗ್ರಹಸ್ತಂಭವನ್ನೂ ದೇವಸ್ಥಾನವನ್ನೂ ಕೆಡವಿ ಹಾಳುಮಾಡಿದರು. ಅಂದಿನಿಂದ ಇಂದಿನವರೆಗೂ ಆ ಸ್ಥಳವನ್ನು ಶೌಚಕ್ಕಾಗಿ ಉಪಯೋಗಿಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು