Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 34:14 - ಕನ್ನಡ ಸತ್ಯವೇದವು J.V. (BSI)

14 ಸ್ವಗೌರವವನ್ನು ಕಾಪಾಡಿಕೊಳ್ಳುವವನು ಎಂಬ ಹೆಸರುಳ್ಳ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದ್ದರಿಂದ ನೀವು ಬೇರೆ ಯಾವ ದೇವರ ಮುಂದೆಯೂ ಅಡ್ಡ ಬೀಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಏಕೆಂದರೆ ತೀಕ್ಷ್ಣತೆಯುಳ್ಳವನು ಎಂಬ ಹೆಸರುಳ್ಳ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದ್ದರಿಂದ ನೀವು ಬೇರೆ ಯಾವ ದೇವರ ಮುಂದೆಯೂ ಅಡ್ಡಬೀಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನೀವು ಬೇರೆ ದೇವರ ಮುಂದೆ ಅಡ್ಡಬೀಳಬಾರದು; ಏಕೆಂದರೆ ಸ್ವಾಭಿಮಾನಿಯೆಂಬ ಹೆಸರುಳ್ಳ ಸರ್ವೇಶ್ವರನಾದ ನಾನು ನನಗೆ ಸಲ್ಲಬೇಕಾದ ಅಭಿಮಾನವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಬೇರೆ ಯಾವ ದೇವರನ್ನೂ ಪೂಜಿಸಬೇಡಿರಿ. ನಾನೇ ಯೆಹೋವನು. ‘ಸ್ವಗೌರವವನ್ನು ಕಾಪಾಡಿಕೊಳ್ಳುವವನು’ ಎಂಬುದೇ ನನ್ನ ಹೆಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಏಕೆಂದರೆ, ‘ರೋಷವುಳ್ಳವನು,’ ಎಂದು ಹೆಸರುಳ್ಳ ಯೆಹೋವ ದೇವರು ರೋಷವುಳ್ಳ ದೇವರಾಗಿರುವುದರಿಂದ ನೀನು ಬೇರೆ ದೇವರುಗಳನ್ನು ಆರಾಧಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 34:14
20 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದೆ ಉರಿಯುವ ಬೆಂಕಿಯಂತೆ [ದ್ರೋಹಿಗಳನ್ನು] ದಹಿಸಿ ಬಿಡುವವನಾಗಿದ್ದಾನೆಂದು ತಿಳಿಯಿರಿ.


ಅವರು ದೇವರಲ್ಲದವುಗಳ ಮೂಲಕ ನನ್ನನ್ನು ರೇಗಿಸಿದ್ದರಿಂದ ನಾನು ಜನಾಂಗವಲ್ಲದವರ ಮೂಲಕ ಅವರಲ್ಲಿ ಹುರುಡು ಹುಟ್ಟಿಸುವೆನು. ಅವರು ಅಚೇತನ ವಿಗ್ರಹಗಳ ಮೂಲಕ ನನ್ನನ್ನು ಸಿಟ್ಟಿಗೆಬ್ಬಿಸಿದ್ದರಿಂದ ನಾನು ಸದಾಚಾರವಿಲ್ಲದ ಜನರ ಮೂಲಕ ಅವರನ್ನು ಸಿಟ್ಟಿಗೆಬ್ಬಿಸುವೆನು.


ಕರ್ತನನ್ನು ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೇನು?


ಯೇಸು ಅವನಿಗೆ - ಸೈತಾನನೇ, ನೀನು ತೊಲಗಿ ಹೋಗು. ನಿನ್ನ ದೇವರಾಗಿರುವ ಕರ್ತನಿಗೆ ಅಡ್ಡಬಿದ್ದು ಆತನೊಬ್ಬನನ್ನೇ ಆರಾಧಿಸಬೇಕು ಎಂಬದಾಗಿ ಬರೆದದೆ ಎಂದು ಹೇಳಿದನು.


ಯೆಹೋವನು ಸ್ವಗೌರವವನ್ನು ಕಾಪಾಡಿಕೊಳ್ಳುವ ದೇವರು, ಆತನು ಮುಯ್ಯಿತೀರಿಸುವವನು; ಹೌದು, ಯೆಹೋವನು ಮುಯ್ಯಿತೀರಿಸುವವನು, ಕೋಪಭರಿತನು; ಯೆಹೋವನು ತನ್ನ ವಿರೋಧಿಗಳಿಗೆ ಮುಯ್ಯಿತೀರಿಸುತ್ತಾನೆ, ತನ್ನ ಶತ್ರುಗಳ ಮೇಲೆ ದೀರ್ಘರೋಷವಿಡುತ್ತಾನೆ.


ಯೆಹೋವನು ಅಂಥವನನ್ನು ಎಂದಿಗೂ ಕ್ಷವಿುಸದೆ ಬಹಳ ಸಿಟ್ಟುಮಾಡಿಕೊಂಡು ತನ್ನ ಗೌರವವನ್ನು ಕಾಪಾಡಿಕೊಳ್ಳುವವನಾಗಿ ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸಿ ಅವನ ಹೆಸರನ್ನು ಭೂವಿುಯ ಮೇಲೆ ಇಲ್ಲದಂತೆ ಮಾಡುವನು.


ನಿಮ್ಮ ಮಧ್ಯದಲ್ಲಿರುವ ನಿಮ್ಮ ದೇವರಾದ ಯೆಹೋವನು ತನಗೆ ಸಲ್ಲಬೇಕಾದ ಗೌರವವನ್ನು ಇನ್ನೊಬ್ಬನಿಗೆ ಸಲ್ಲಗೊಡಿಸದ ದೇವರು; ಆತನು ನಿಮ್ಮ ಮೇಲೆ ಕೋಪಗೊಂಡರೆ ನಿಮ್ಮನ್ನು ಭೂವಿುಯ ಮೇಲೆ ಉಳಿಯದಂತೆ ನಾಶಮಾಡಾನು.


ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗನ್ನುತ್ತಾನೆ - ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು ದೀನನ ಆತ್ಮವನ್ನೂ ಜಜ್ಜಿಹೋದ ಮನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.


ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವದು; ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರವಿುಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬವು ಅವನ ಹೆಸರು.


ಅವರು ಅನ್ಯದೇವರುಗಳನ್ನು ಪೂಜಿಸಿ ಆತನನ್ನು ರೇಗಿಸಿದರು; ನಿಷಿದ್ಧಾಚಾರಗಳನ್ನು ನಡಿಸಿ ಆತನಿಗೆ ಸಿಟ್ಟೇರಿಸಿದರು.


ಆಗ ಯೆಹೋಶುವನು ಅವರಿಗೆ - ನೀವು ಯೆಹೋವನನ್ನು ಸೇವಿಸಲಾರಿರಿ. ಆತನು ಪರಿಶುದ್ಧನೂ ತನಗೆ ಸಲ್ಲಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದವನೂ ಆಗಿರುವ ದೇವರು. ಆತನು ನಿಮ್ಮ ದ್ರೋಹಾಪರಾಧಗಳನ್ನು ಕ್ಷವಿುಸುವದಿಲ್ಲ.


ನಾನಲ್ಲದೆ ನಿನಗೆ ಬೇರೆ ದೇವರುಗಳು ಇರಬಾರದು.


ನಮ್ಮ ದೇವರಾದ ಯೆಹೋವನು ತನ್ನ ಘನವನ್ನೂ ಮಹಿಮೆಯನ್ನೂ ನಮಗೆ ತೋರಿಸಿ ಅಗ್ನಿಜ್ವಾಲೆಯೊಳಗಿಂದ ತನ್ನ ಸ್ವರವನ್ನು ನಮಗೆ ಕೇಳಿಸಿದನಲ್ಲಾ. ಮನುಷ್ಯನು ತನ್ನ ಸಂಗಡ ದೇವರು ಮಾತಾಡಿದರೂ ಸಾಯದೆ ಬದುಕಿದ್ದುಂಟೆಂಬದು ಈ ಹೊತ್ತು ನಮಗೆ ತಿಳಿಯಬಂತು.


ಆತನು - ನನ್ನ ಸರ್ವೋತ್ತಮತ್ವವನ್ನು ನಿನ್ನೆದುರಾಗಿ ದಾಟಿಹೋಗುವಂತೆ ಮಾಡುವೆನು; ಯೆಹೋವನ ನಾಮದ ಮಹತ್ವವನ್ನು ನಿನ್ನೆದುರಾಗಿ ಪ್ರಕಟಿಸುವೆನು. ಯಾವನ ಮೇಲೆ ದಯೆಯಿಡುವೆನೋ ಅವನ ಮೇಲೆ ದಯೆಯಿಡುವೆನು; ಯಾರನ್ನು ಕರುಣಿಸುವೆನೋ ಅವರನ್ನು ಕರುಣಿಸುವೆನು ಅಂದನು.


ಇನ್ನು ಏನೇನು ಸಂಭವಿಸುವದೋ! ಯೆಹೋವನು ಇಸ್ರಾಯೇಲ್ಯರನ್ನು ಹೊಡಿಯುವನು. ಆಗ ಅವರು ನೀರಿನಲ್ಲಿರುವ ಆಪುಹುಲ್ಲೋ ಎಂಬಂತೆ ಹೊಯ್ದಾಡುವರು. ಅವರು ಅಶೇರವಿಗ್ರಹಸ್ತಂಭಗಳನ್ನು ಮಾಡಿಕೊಂಡು ಆತನಿಗೆ ಕೋಪವನ್ನೆಬ್ಬಿಸಿದದರಿಂದ ಆತನು ಅವರನ್ನು ಅವರ ಪಿತೃಗಳಿಗೆ ಕೊಟ್ಟ ದೇಶದಿಂದ ಕಿತ್ತುಹಾಕಿ ಯೂಫ್ರೇಟೀಸ್ ನದಿಯ ಆಚೆಯಲ್ಲಿರುವ ದೇಶದೊಳಗೆ ಚದರಿಸಿಬಿಡುವನು.


ಅವನು ಅದಕ್ಕೆ - ಸೇನಾಧೀಶ್ವರನಾದ ದೇವರೇ, ಯೆಹೋವನೇ, ಇಸ್ರಾಯೇಲ್ಯರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ, ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ, ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವದರಲ್ಲಿ ಆಸಕ್ತನಾಗಿದ್ದೆನು; ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ ಎಂದು ಉತ್ತರಕೊಟ್ಟನು.


ನಾನು ನನ್ನ ರೋಷವನ್ನು ನಿನ್ನ ಮೇಲೆ ಸುರಿಯಲು ಅವರು ನಿನ್ನಲ್ಲಿ ಕೋಪತೀರಿಸಿಕೊಳ್ಳುವರು; ನಿನ್ನ ಮೂಗು ಕಿವಿಗಳನ್ನು ಕಿತ್ತುಬಿಡುವರು; ನಿನ್ನಲ್ಲಿ ಉಳಿದವರು ಖಡ್ಗಕ್ಕೆ ತುತ್ತಾಗುವರು; ನಿನ್ನ ಗಂಡುಹೆಣ್ಣುಮಕ್ಕಳನ್ನು ಅಪಹರಿಸುವರು; ನಿನ್ನ ಜನಶೇಷವು ಅಗ್ನಿಗೆ ಆಹುತಿಯಾಗುವದು.


ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆಂದೂ ನೀವು ಅಮೋರಿಯರ ಮಧ್ಯದಲ್ಲಿ ವಾಸಿಸುವಾಗ ಅವರ ದೇವತೆಗಳನ್ನು ಪೂಜಿಸಬಾರದೆಂದೂ ಹೇಳಿದೆನು; ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ ಎಂಬದೇ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು