Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 34:18 - ಕನ್ನಡ ಸತ್ಯವೇದವು J.V. (BSI)

18 ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಜಾತ್ರೆಯನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರ ಮಾಸದ ನೇಮಕವಾದ ಕಾಲದಲ್ಲಿ ಏಳು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ನೀವು ಚೈತ್ರ ಮಾಸದಲ್ಲಿಯೇ ಐಗುಪ್ತದೇಶದಿಂದ ಬಿಡುಗಡೆಯಾಗಿ ಬಂದಿರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದಲ್ಲಿ ನೇಮಕವಾದ ಕಾಲದಲ್ಲಿ ಏಳು ದಿನಗಳ ಕಾಲ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ನೀವು ಚೈತ್ರಮಾಸದಲ್ಲಿಯೇ ಐಗುಪ್ತದೇಶದಿಂದ ಬಿಡುಗಡೆಯಾಗಿ ಬಂದಿರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಹಬ್ಬಗಳನ್ನು ಆಚರಿಸಿರಿ. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದ ನಿಯಮಿತ ಕಾಲದಲ್ಲಿ ಏಳು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಕೆಂದರೆ ನೀವು ಚೈತ್ರಮಾಸದಲ್ಲಿ ಈಜಿಪ್ಟಿನಿಂದ ಬಿಡುಗಡೆಯಾಗಿ ಹೊರಬಂದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಿರಿ. ನಾನು ನಿಮಗೆ ಮೊದಲು ಆಜ್ಞಾಪಿಸಿದಂತೆ ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿನಗಳವರೆಗೆ ತಿನ್ನಿರಿ. ನಾನು ಆರಿಸಿಕೊಂಡ ಅಬೀಬ್ ಮಾಸದಲ್ಲಿ ಇದನ್ನು ಮಾಡಿರಿ. ಯಾಕೆಂದರೆ ಆ ತಿಂಗಳಲ್ಲಿ ನೀವು ಈಜಿಪ್ಟಿನಿಂದ ಬಿಡುಗಡೆ ಹೊಂದಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ಚೈತ್ರ ಮಾಸದ ಏಳು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಕೆಂದರೆ ಅಬೀಬ ತಿಂಗಳಿನಲ್ಲಿ ನೀವು ಈಜಿಪ್ಟ್ ದೇಶವನ್ನು ಬಿಟ್ಟು ಬಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 34:18
15 ತಿಳಿವುಗಳ ಹೋಲಿಕೆ  

ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಜಾತ್ರೆಯನ್ನು ಯೆಹೋವನಿಗೋಸ್ಕರ ಆಚರಿಸಬೇಕು. ಅದು ಮೊದಲುಗೊಂಡು ಏಳು ದಿನಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳನ್ನು ಊಟಮಾಡಬೇಕು.


ಚೈತ್ರ ಮಾಸದ ಈ ದಿನದಲ್ಲೇ ಹೊರಡುವವರಾಗಿದ್ದೀರಷ್ಟೆ.


ಇದು ಯೆಹೂದ್ಯರಿಗೆ ಮೆಚ್ಚಿಕೆಯಾಗಿದೆ ಎಂದು ನೋಡಿ ಅಷ್ಟಕ್ಕೆ ನಿಲ್ಲದೆ ಪೇತ್ರನನ್ನೂ ಹಿಡಿಸಿದನು. ಆ ಕಾಲದಲ್ಲಿ ಹುಳಿಯಿಲ್ಲದ ರೊಟ್ಟಿಯ ಹಬ್ಬ ನಡೆಯುತ್ತಿತ್ತು.


ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುವ ಪಸ್ಕವೆಂಬ ಹಬ್ಬವು ಹತ್ತಿರವಾದಾಗ


ಪಸ್ಕದ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವದಕ್ಕೆ ಇನ್ನೂ ಎರಡು ದಿನಗಳಿದ್ದಾಗ ಮಹಾಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಉಪಾಯದಿಂದ ಹಿಡಿದು ಕೊಲ್ಲುವದಕ್ಕೆ ಮಾರ್ಗವನ್ನು ಹುಡುಕುತ್ತಿದ್ದರು.


ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಜಾತ್ರೆ ಒಂದು. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದ ನೇಮಕವಾದ ಕಾಲದಲ್ಲಿ ಏಳು ದಿವಸವೂ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಆ ಮಾಸದಲ್ಲೇ ಐಗುಪ್ತದೇಶದಿಂದ ಹೊರಟುಬಂದಿರಲ್ಲಾ. ಒಬ್ಬನೂ ಕೈಯಲ್ಲಿ ಕಾಣಿಕೆಯಿಲ್ಲದೆ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಕೂಡದು.


ಎಲ್ಲಾ ಮಾಸಗಳಲ್ಲಿ ಇದೇ ನಿಮಗೆ ಆದಿಮಾಸವಾಗಿರಬೇಕು, ಇದೇ ನಿಮಗೆ ಪ್ರತಿ ವರುಷದ ಮೊದಲನೆಯ ತಿಂಗಳಾಗಿರಬೇಕು.


ಯೆಹೋವನು ಆ ರಾತ್ರಿಯಲ್ಲಿಯೇ ಅವರನ್ನು ಐಗುಪ್ತದೇಶದಿಂದ ಹೊರಗೆ ಬರಮಾಡಿದ್ದರಿಂದ ಅವರು ಈ ರಾತ್ರಿಯಲ್ಲಿ ಆತನ ಘನಕ್ಕಾಗಿ ಜಾಗರಣೆಯನ್ನು ಮಾಡಬೇಕು. ಇಸ್ರಾಯೇಲ್ಯರೆಲ್ಲರೂ ತಲತಲಾಂತರಕ್ಕೂ ಯೆಹೋವನಿಗೆ ಈ ಜಾಗರಣೆಯನ್ನು ಮಾಡಬೇಕು.


ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಯೆಹೋವನು ನೇವಿುಸಿದ ಪಸ್ಕಹಬ್ಬವಾಗಬೇಕು.


ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಜಾತ್ರೆ ಪ್ರಾರಂಭವಾಗುವದು; ಏಳು ದಿನಗಳವರೆಗೂ ಹುಳಿಯಿಲ್ಲದ ರೊಟ್ಟಿಗಳನ್ನು ಊಟಮಾಡಬೇಕು.


ಮೋಶೆ ಇಸ್ರಾಯೇಲ್ಯರಿಗೆ - ನೀವು ದಾಸತ್ವದಲ್ಲಿದ್ದ ಐಗುಪ್ತ ದೇಶದೊಳಗಿಂದ ಬಿಡುಗಡೆಯಾದ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಆ ಸ್ಥಳದಿಂದ ಬಿಡಿಸಿದನಲ್ಲಾ. ಈ ದಿನದಲ್ಲಿ ನೀವು ಹುಳಿಬೆರೆತದ್ದನ್ನು ತಿನ್ನಕೂಡದು.


ನೀವು ವರುಷಕ್ಕೆ ಮೂರಾವರ್ತಿ ನನಗೆ ಜಾತ್ರೆ ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು