Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 34:22 - ಕನ್ನಡ ಸತ್ಯವೇದವು J.V. (BSI)

22 [ಪಸ್ಕವಾದ ಏಳು] ವಾರಗಳ ಮೇಲೆ ನಡೆಯುವ ಜಾತ್ರೆ ಅಂದರೆ ಗೋದೀ ಬೆಳೆಯ ಪ್ರಥಮ ಸಮರ್ಪಣದ ಸುಗ್ಗಿಜಾತ್ರೆಯನ್ನೂ ಸಂವತ್ಸರದ ಅಂತ್ಯದಲ್ಲಿ ಫಲಸಂಗ್ರಹದ ಜಾತ್ರೆಯನ್ನೂ ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 “ಗೋದಿ ಬೆಳೆಯ ಪ್ರಥಮ ಫಲದ ಸಮರ್ಪಣೆಯನ್ನು ಪಸ್ಕಹಬ್ಬವಾಗಿ ಏಳು ವಾರಗಳ ನಂತರ ಸುಗ್ಗಿ ಹಬ್ಬವನ್ನು ಆಚರಿಸುವಾಗ ಸಮರ್ಪಿಸಬೇಕು. ವರ್ಷದ ಅಂತ್ಯದಲ್ಲಿ ಫಲಸಂಗ್ರಹದ ಹಬ್ಬವನ್ನೂ ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 “ಹೊಸ ಗೋದಿ ಬೆಳೆಯ ಪ್ರಥಮ ಸಮರ್ಪಣೆಯ, ಅಂದರೆ (ಪಾಸ್ಕವಾದ ಏಳು) ವಾರಗಳ ಮೇಲೆ ನೀವು ಸುಗ್ಗಿಹಬ್ಬವನ್ನು ಆಚರಿಸಬೇಕು. ವರ್ಷದ ಕೊನೆಯಲ್ಲಿ ಬೆಳೆ ಒಕ್ಕಣೆಯ ಹಬ್ಬವನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ವಾರಗಳ ಹಬ್ಬವನ್ನು ಆಚರಿಸಿರಿ. ಈ ಹಬ್ಬಕ್ಕಾಗಿ ಗೋಧಿಬೆಳೆಯ ಪ್ರಥಮ ಕಾಳನ್ನು ಉಪಯೋಗಿಸಿರಿ ಮತ್ತು ವರ್ಷಾಂತ್ಯದಲ್ಲಿ ಸುಗ್ಗಿಹಬ್ಬವನ್ನು ಆಚರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ಪ್ರಥಮ ಗೋಧಿ ಸುಗ್ಗಿಯ ವಾರಗಳ ಹಬ್ಬವನ್ನು ಮತ್ತು ವರ್ಷದ ಕೊನೆಯಲ್ಲಿ ಬೆಳೆ ಸಂಗ್ರಹದ ಹಬ್ಬವನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 34:22
13 ತಿಳಿವುಗಳ ಹೋಲಿಕೆ  

ಅದಲ್ಲದೆ ನೀವು ಬಿತ್ತಿದ ಹೊಲದಲ್ಲಿ ಪ್ರಥಮಫಲವು ದೊರೆತಾಗ ಸುಗ್ಗಿಯ ಜಾತ್ರೆಯನ್ನೂ ಹೊಲತೋಟಗಳ ಬೆಳೆಯನ್ನು ಕೂಡಿಸುವಾಗ ಅಂದರೆ ವರುಷದ ಕೊನೆಯಲ್ಲಿ ಫಲಸಂಗ್ರಹ ಜಾತ್ರೆಯನ್ನೂ ಆಚರಿಸಬೇಕು.


ಪರ್ಣಶಾಲೆಗಳ ಹಬ್ಬವೆಂಬ ಯೆಹೂದ್ಯರದೊಂದು ಜಾತ್ರೆಯು ಸಮೀಪವಾದಾಗ


ಪಂಚಾಶತ್ತಮ ದಿನದ ಹಬ್ಬವು ಬಂದಿರಲಾಗಿ ಅವರೆಲ್ಲರು ಏಕಮನಸ್ಸಿನಿಂದ ಒಂದೇ ಸ್ಥಳದಲ್ಲಿ ಕೂಡಿದ್ದರು.


ನೀವು ವರುಷಕ್ಕೆ ಮೂರಾವರ್ತಿ ನನಗೆ ಜಾತ್ರೆ ಮಾಡಬೇಕು.


ಅವುಗಳನ್ನು ಪ್ರಥಮಫಲವಾಗಿ ಯೆಹೋವನಿಗೆ ಸಮರ್ಪಿಸಬಹುದೇ ಹೊರತು ಯಜ್ಞವೇದಿಯ ಮೇಲೆ ಸುವಾಸನೆಯನ್ನುಂಟುಮಾಡುವದಕ್ಕಾಗಿ ಹೋಮಮಾಡಕೂಡದು.


ತುತೂರಿಗಳ ಧ್ವನಿಯಿಂದ ಪ್ರಕಟವಾಗುವ ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನೀವು ಯಾವ ಉದ್ಯೋಗವನ್ನೂ ನಡಿಸದೆ ದೇವಾರಾಧನೆಗಾಗಿ ಸಭೆಕೂಡಬೇಕು.


ಬೆಳೆ ಕೊಯ್ಯುವದಕ್ಕೆ ಕುಡುಗೋಲು ಹಾಕುವ ಕಾಲ ಮೊದಲುಗೊಂಡು ಏಳು ವಾರಗಳನ್ನು ಎಣಿಸಿ


ಯೆಹೋವನ ಯಜ್ಞವೇದಿಯ ಮೇಲೆ ಮೋಶೆಯ ಆಜ್ಞೆಯಂತೆ ಸಬ್ಬತ್ ದಿವಸ, ಅಮಾವಾಸ್ಯೆ ಇವುಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳ ಜಾತ್ರೆ, ಪಂಚಾಶತ್ತಮದಿನದ ಜಾತ್ರೆ, ಪರ್ಣಶಾಲೆಗಳ ಜಾತ್ರೆ ಎಂಬೀ ಮೂರು ವಾರ್ಷಿಕಜಾತ್ರೆಗಳಲ್ಲಿಯೂ ಆಯಾ ದಿವಸಗಳಿಗೆ ನೇಮಕವಾದ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಿದ್ದನು.


ಸಬ್ಬತ್‍ದಿನದ ಮಾರಣೆಯ ದಿನ ಮೊದಲುಗೊಂಡು ಅಂದರೆ ಆ ಪ್ರಥಮ ಸಿವುಡನ್ನು ನೈವೇದ್ಯವಾಗಿ ನಿವಾಳಿಸಿದ ದಿನ ಮೊದಲುಗೊಂಡು ಪೂರ್ಣವಾಗಿ ಏಳು ವಾರಗಳು ಮುಗಿಯುವಂತೆ ಐವತ್ತು ದಿನಗಳನ್ನು ಲೆಕ್ಕಿಸಬೇಕು.


ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸು - ಏಳನೆಯ ತಿಂಗಳಿನ ಹದಿನೈದನೆಯ ದಿನ ಮೊದಲುಗೊಂಡು ಏಳು ದಿನಗಳವರೆಗೆ ಪರ್ಣಶಾಲೆಗಳ ಜಾತ್ರೆಯನ್ನು ಯೆಹೋವನಿಗೋಸ್ಕರ ಆಚರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು