Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 34:27 - ಕನ್ನಡ ಸತ್ಯವೇದವು J.V. (BSI)

27 ಯೆಹೋವನು ಮೋಶೆಗೆ - ನೀನು ಈ ವಾಕ್ಯಗಳನ್ನು ಬರೆ. ಈ ವಾಕ್ಯಗಳ ಮೇರೆಗೆ ನಿನ್ನ ಸಂಗಡಲೂ ಇಸ್ರಾಯೇಲ್ಯರ ಸಂಗಡಲೂ ನಿಬಂಧನೆಮಾಡಿದ್ದೇನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಯೆಹೋವನು ಮೋಶೆಗೆ, “ನೀನು ಈ ವಾಕ್ಯಗಳನ್ನು ಬರೆ, ಏಕೆಂದರೆ ಈ ವಾಕ್ಯಗಳ ಮೇರೆಗೆ ನಿನ್ನ ಸಂಗಡಲೂ ಇಸ್ರಾಯೇಲರ ಸಂಗಡಲೂ ಒಡಂಬಡಿಕೆ ಮಾಡಿಕೊಂಡಿದ್ದೇನೆ” ಎಂದು ಅಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಸರ್ವೇಶ್ವರ ಮೋಶೆಗೆ, “ನೀನು ಈ ವಾಕ್ಯಗಳನ್ನು ಬರೆ. ಏಕೆಂದರೆ ಈ ವಾಕ್ಯಗಳ ಆಧಾರದ ಮೇಲೆ ನಾನು ನಿನ್ನೊಂದಿಗೂ ಇಸ್ರಯೇಲರೊಂದಿಗೂ ಒಂದು ಒಡಂಬಡಿಕೆಯನ್ನು ಮಾಡಿಕೊಂಡಿದ್ದೇನೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಬಳಿಕ ಯೆಹೋವನು ಮೋಶೆಗೆ, “ನಾನು ನಿನಗೆ ಹೇಳಿದ ಸಂಗತಿಗಳನ್ನೆಲ್ಲಾ ಬರೆ. ಆ ಸಂಗತಿಗಳು ನಾನು ನಿನ್ನೊಂದಿಗೆ ಮತ್ತು ಇಸ್ರೇಲರೊಂದಿಗೆ ಮಾಡಿದ ಒಡಂಬಡಿಕೆಯಾಗಿದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಯೆಹೋವ ದೇವರು ಮೋಶೆಗೆ ಹೀಗೆ ಹೇಳಿದರು, “ನೀನು ಈ ವಾಕ್ಯಗಳನ್ನು ಬರೆ. ಏಕೆಂದರೆ ಈ ವಾಕ್ಯಗಳ ಪ್ರಕಾರವೇ ನಾನು ನಿನ್ನ ಮತ್ತು ಇಸ್ರಾಯೇಲಿನ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 34:27
6 ತಿಳಿವುಗಳ ಹೋಲಿಕೆ  

ಮೋಶೆಯು ಯೆಹೋವನ ಆಜ್ಞೆಗಳನ್ನೆಲ್ಲಾ ಬರೆದು ಬೆಳಿಗ್ಗೆ ಎದ್ದು ಆ ಬೆಟ್ಟದ ಬುಡದಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲ್ಯರ ಹನ್ನೆರಡು ಕುಲಗಳಿಗೆ ಹನ್ನೆರಡು ಕಲ್ಲಿನ ಕಂಬಗಳನ್ನು ಸ್ಥಾಪನೆ ಮಾಡಿಸಿ ಇಸ್ರಾಯೇಲ್ಯರ ಯೌವನಸ್ಥರಿಗೆ -


ಮೋಶೆ ಈ ಧರ್ಮಶಾಸ್ತ್ರವನ್ನು ಬರೆದು ಯೆಹೋವನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮತ್ತು ಹಿರಿಯರ ವಶಕ್ಕೆ ಕೊಟ್ಟು ಅವರಿಗೆ -


ನೀವು ಅನುಸರಿಸಬೇಕೆಂದು ಆತನು ನೇವಿುಸಿದ ನಿಬಂಧನೆಯನ್ನು ಅಂದರೆ ಹತ್ತು ಕಟ್ಟಳೆಗಳನ್ನು ನಿಮಗೆ ವಿವರಿಸಿ ಎರಡುಕಲ್ಲಿನ ಹಲಗೆಗಳಲ್ಲಿ ಕೆತ್ತಿಸಿದ್ದೂ;


ಆಗ ಯೆಹೋವನು ಮೋಶೆಗೆ - ಭೂವಿುಯ ಮೇಲೆ ಅಮಾಲೇಕ್ಯರ ಹೆಸರೇ ಇಲ್ಲದಂತೆ ಮಾಡುವೆನು; ಈ ಮಾತನ್ನು ಜ್ಞಾಪಕಾರ್ಥವಾಗಿ ಪುಸ್ತಕದಲ್ಲಿ ಬರೆ, ಮತ್ತು ಯೆಹೋಶುವನಿಗೆ ಮಂದಟ್ಟು ಮಾಡಿಕೊಡು ಎಂದು ಹೇಳಿದನು.


ಯೆಹೋವನು ಹೇಳಿದ್ದೇನಂದರೆ - ನಾನು ಒಂದು ನಿಬಂಧನೆಯನ್ನು ಸ್ಥಾಪಿಸುತ್ತೇನೆ, ಕೇಳು; ಲೋಕದಲ್ಲಿ ಎಲ್ಲಿಯೂ ಯಾವ ಜನಾಂಗದಲ್ಲಿಯಾದರೂ ನಡೆಯದಂಥ ಮಹತ್ಕಾರ್ಯಗಳನ್ನು ನಿನ್ನ ಜನರೆಲ್ಲರು ನೋಡುವಂತೆ ನಡಿಸುವೆನು. ನಿಮ್ಮ ಸುತ್ತಮುತ್ತಲಿರುವ ಎಲ್ಲಾ ಜನರೂ ಯೆಹೋವನು ಮಾಡುವ ಮಹತ್ಕಾರ್ಯವನ್ನು ನೋಡುವರು. ನಾನು ನಿಮ್ಮ ವಿಷಯದಲ್ಲಿ ಮಾಡಬೇಕೆಂದಿರುವದು ಭಯಂಕರವಾದದ್ದು.


ತರುವಾಯ ನಿಬಂಧನ ಗ್ರಂಥವನ್ನು ತೆಗೆದುಕೊಂಡು ಜನರಿಗೆ ಕೇಳಿಸುವಂತೆ ಓದಿದನು. ಅವರು ಕೇಳಿ - ಯೆಹೋವನ ಆಜ್ಞೆಗಳನ್ನೆಲ್ಲಾ ನಾವು ಅನುಸರಿಸಿ ವಿಧೇಯರಾಗಿರುವೆವು ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು