Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 34:30 - ಕನ್ನಡ ಸತ್ಯವೇದವು J.V. (BSI)

30 ಮೋಶೆಯ ಮುಖವು ಪ್ರಕಾಶವಾಗಿರುವದನ್ನು ಆರೋನನೂ ಇಸ್ರಾಯೇಲ್ಯರೆಲ್ಲರೂ ನೋಡಿ ಅವನ ಹತ್ತಿರಕ್ಕೆ ಬರುವದಕ್ಕೆ ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಮೋಶೆಯ ಮುಖವು ಪ್ರಕಾಶಮಾನವಾಗಿರುವುದನ್ನು ಆರೋನನೂ ಇಸ್ರಾಯೇಲರೆಲ್ಲರೂ ನೋಡಿ ಅವನ ಹತ್ತಿರಕ್ಕೆ ಬರುವುದಕ್ಕೆ ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಮೋಶೆಯ ಮುಖ ಹೀಗೆ ಪ್ರಕಾಶವಾಗಿರುವುದನ್ನು ಆರೋನನು ಮತ್ತು ಇಸ್ರಯೇಲರೆಲ್ಲರು ನೋಡಿ ಅವನ ಹತ್ತಿರಕ್ಕೆ ಬರಲು ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಮೋಶೆಯ ಮುಖವು ಶುಭ್ರವಾಗಿ ಹೊಳೆಯುತ್ತಿರುವುದನ್ನು ಆರೋನನೂ ಇಸ್ರೇಲರೆಲ್ಲರೂ ನೋಡಿದರು. ಆದ್ದರಿಂದ ಅವನ ಬಳಿಗೆ ಹೋಗಲು ಅವರು ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆದರೆ ಆರೋನನು ಮತ್ತು ಇಸ್ರಾಯೇಲರೆಲ್ಲರೂ ಮೋಶೆಯನ್ನು ನೋಡಿದಾಗ, ಇಗೋ, ಅವನ ಮುಖವು ಪ್ರಕಾಶಿಸುತ್ತಿತ್ತು. ಆದ್ದರಿಂದ ಅವರು ಅವನ ಹತ್ತಿರ ಬರುವುದಕ್ಕೆ ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 34:30
7 ತಿಳಿವುಗಳ ಹೋಲಿಕೆ  

ಆತನ ವಸ್ತ್ರಗಳು ಬಹು ಬೆಳ್ಳಗೆ ಹೊಳೆಯುತ್ತಿದ್ದವು; ಭೂಲೋಕದಲ್ಲಿರುವ ಯಾವ ಅಗಸನಾದರೂ ಅಷ್ಟು ಬೆಳ್ಳಗೆ ಮಾಡಲಾರನು.


ಸೀಮೋನ್ ಪೇತ್ರನು ಇದನ್ನು ಕಂಡು ಯೇಸುವಿನ ಮೊಣಕಾಲಿಗೆ ಬಿದ್ದು - ಸ್ವಾಮೀ, ನಾನು ಪಾಪಾತ್ಮನು; ನನ್ನನ್ನು ಬಿಟ್ಟುಹೋಗಬೇಕು ಅಂದನು.


ಕೂಡಲೆ ಆ ಗುಂಪಿನವರೆಲ್ಲರು ಯೇಸುವನ್ನು ಕಂಡು ಬಹು ಆಶ್ಚರ್ಯಪಟ್ಟು ಆತನ ಬಳಿಗೆ ಓಡಿ ಬಂದು ಆತನನ್ನು ವಂದಿಸಿದರು.


ಅವನ ಸಂಗಡ ನಾನು ಗೂಢವಾಗಿ ಅಲ್ಲ, ಪ್ರತ್ಯಕ್ಷದಲ್ಲಿ ಸ್ಪಷ್ಟವಾಗಿಯೇ ಮಾತಾಡುವೆನು. ಅವನು ಯೆಹೋವನ ಸ್ವರೂಪವನ್ನೇ ದೃಷ್ಟಿಸುವನು. ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತಾಡುವದಕ್ಕೆ ಭಯಪಡಬೇಕಾಗಿತ್ತು ಎಂದು ಹೇಳಿ ಕೋಪಗೊಂಡು ಹೋದನು.


ಮರಣವಿಧಿಸುವ ನಿಯಮದ ಸೇವೆಯು ಕಲ್ಲಿನ ಮೇಲೆ ಲಿಖಿತವಾದ ಅಕ್ಷರಗಳಲ್ಲಿ ಆಧಾರಗೊಂಡಿದ್ದರೂ ಪ್ರಭಾವದಿಂದ ಕೂಡಿದ್ದಾಗಿತ್ತು. ಆ ಪ್ರಭಾವದಿಂದ ಮೋಶೆಯ ಮುಖಕ್ಕೆ ಬಂದ ಪ್ರಕಾಶವು ಕುಂದಿಹೋಗುವಂಥದಾಗಿದ್ದರೂ ಅದರ ನಿವಿುತ್ತ ಇಸ್ರಾಯೇಲ್ಯರು ಅವನ ಮುಖವನ್ನು ನೋಡಲಾರದೆ ಇದ್ದರು.


ಆದರೆ ಮೋಶೆ ಅವರನ್ನು ಕರೆಯಲು ಆರೋನನೂ ಸಮೂಹದ ಅಧಿಪತಿಗಳೆಲ್ಲರೂ ಅವನ ಬಳಿಗೆ ಬಂದರು; ಮೋಶೆ ಅವರ ಸಂಗಡ ಮಾತಾಡಿದನು.


ಜ್ಞಾನಿಯ ಹಾಗಿರುವವನು ಯಾರು? ವಿಷಯವನ್ನು ವಿವರಿಸಬಲ್ಲವರು ಯಾರು? ಜ್ಞಾನದಿಂದ ಒಬ್ಬನ ಮುಖವು ಪ್ರಕಾಶಗೊಳ್ಳುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು