ವಿಮೋಚನಕಾಂಡ 34:34 - ಕನ್ನಡ ಸತ್ಯವೇದವು J.V. (BSI)34 ಅವನು ಯೆಹೋವನ ಸಂಗಡ ಮಾತಾಡಬೇಕೆಂದು ಸನ್ನಿಧಿಗೆ ಹೋಗುವಾಗೆಲ್ಲಾ ಹೊರಗೆ ಬರುವ ತನಕ ಆ ಮುಸುಕನ್ನು ತೆಗೆದಿಡುವನು. ಅವನು ಹೊರಗೆ ಬಂದಾಗ ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಇಸ್ರಾಯೇಲ್ಯರಿಗೆ ತಿಳಿಸುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಮೋಶೆಯು ಯೆಹೋವನ ಸಂಗಡ ಮಾತನಾಡಬೇಕೆಂದು ಆತನ ಸನ್ನಿಧಿಗೆ ಹೋಗುವಾಗಲೆಲ್ಲಾ ಈ ಮುಸುಕನ್ನು ಹಾಕಿಕೊಳ್ಳುತ್ತಿದ್ದನು. ಹೊರಗೆ ಬಂದಾಗ ಆ ಮುಸುಕನ್ನು ತೆಗೆದಿಡುತ್ತಿದ್ದನು. ಅವನು ಹೊರಗೆ ಬಂದಾಗ ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಇಸ್ರಾಯೇಲರಿಗೆ ತಿಳಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಸರ್ವೇಶ್ವರನ ಸಂಗಡ ಮಾತಾಡಬೇಕೆಂದು ಅವರ ಸನ್ನಿಧಿಗೆ ಹೋಗುವಾಗಲೆಲ್ಲ ಅಲ್ಲಿಂದ ಹೊರಗೆ ಬರುವ ತನಕ ಅವನು ಆ ಮುಸುಕನ್ನು ತೆಗೆದಿಡುತ್ತಿದ್ದನು. ಹೊರಗೆ ಬಂದಾಗ ಸರ್ವೇಶ್ವರ ಆಜ್ಞಾಪಿಸಿದ್ದನ್ನೆಲ್ಲ ಇಸ್ರಯೇಲರಿಗೆ ತಿಳಿಸುತ್ತಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಮೋಶೆಯು ಯೆಹೋವನೊಡನೆ ಮಾತಾಡಲು ಆತನ ಸನ್ನಿಧಿಗೆ ಹೋದಾಗಲೆಲ್ಲಾ ಮೋಶೆಯು ಮುಸುಕನ್ನು ತೆಗೆದಿಡುತ್ತಿದ್ದನು. ಬಳಿಕ ಮೋಶೆ ಹೊರಗೆ ಬಂದು ಯೆಹೋವನು ಆಜ್ಞಾಪಿಸಿದ ಸಂಗತಿಗಳನ್ನು ಇಸ್ರೇಲರಿಗೆ ತಿಳಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಆದರೆ ಮೋಶೆಯು ಯೆಹೋವ ದೇವರ ಸನ್ನಿಧಿಯಲ್ಲಿ ಆತನ ಸಂಗಡ ಮಾತನಾಡುವುದಕ್ಕೆ ಒಳಗೆ ಪ್ರವೇಶಿಸಿ ಹೊರಗೆ ಬರುವವರೆಗೆ ಆ ಮುಸುಕನ್ನು ತೆಗೆದು ಬಿಡುತ್ತಿದ್ದನು. ಅವನು ಹೊರಗೆ ಬಂದು ತನಗೆ ಆಜ್ಞಾಪಿಸಿದ್ದನ್ನು ಇಸ್ರಾಯೇಲರಿಗೆ ಹೇಳಿದನು. ಅಧ್ಯಾಯವನ್ನು ನೋಡಿ |