Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 34:4 - ಕನ್ನಡ ಸತ್ಯವೇದವು J.V. (BSI)

4 ಆದಕಾರಣ ಮೋಶೆ ಮೊದಲಿದ್ದ ಹಲಿಗೆಗಳಂತೆ ಎರಡು ಕಲ್ಲಿನ ಹಲಿಗೆಗಳನ್ನು ಸಿದ್ಧಪಡಿಸಿಕೊಂಡು ಯೆಹೋವನ ಅಪ್ಪಣೆಯ ಮೇರೆಗೆ ಬೆಳಿಗ್ಗೆ ಎದ್ದು ಆ ಎರಡು ಕಲ್ಲಿನ ಹಲಿಗೆಗಳನ್ನು ಕೈಯಲ್ಲಿ ತೆಗೆದುಕೊಂಡು ಸೀನಾಯಿಬೆಟ್ಟವನ್ನು ಹತ್ತಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದಕಾರಣ ಮೋಶೆಯು ಮೊದಲಿದ್ದ ಹಲಗೆಗಳಂತೆ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿಕೊಂಡು, ಯೆಹೋವನ ಅಪ್ಪಣೆಯ ಮೇರೆಗೆ ಬೆಳಗ್ಗೆ ಎದ್ದು ಆ ಎರಡು ಕಲ್ಲಿನ ಹಲಗೆಗಳನ್ನು ಕೈಯಲ್ಲಿ ತೆಗೆದುಕೊಂಡು ಸೀನಾಯಿಬೆಟ್ಟವನ್ನು ಹತ್ತಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅಂತೆಯೇ ಮೋಶೆ ಮೊದಲಿದ್ದ ಹಲಗೆಗಳಂತೆ ಎರಡು ಕಲ್ಲಿನ ಹಲಗೆಗಳನ್ನು ಸಿದ್ಧಪಡಿಸಿಕೊಂಡು, ಸರ್ವೇಶ್ವರನ ಅಪ್ಪಣೆಯ ಮೇರೆಗೆ ಬೆಳಿಗ್ಗೆ ಎದ್ದು ಆ ಎರಡು ಕಲ್ಲಿನ ಹಲಗೆಗಳನ್ನು ಕೈಯಲ್ಲಿ ತೆಗೆದುಕೊಂಡು ಸೀನಾಯಿ ಬೆಟ್ಟವನ್ನು ಹತ್ತಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದ್ದರಿಂದ ಮೋಶೆ ಮೊದಲಿನ ಎರಡು ಕಲ್ಲುಗಳಂತೆ ಇನ್ನೆರಡು ಕಲ್ಲಿನ ಹಲಿಗೆಗಳನ್ನು ಮಾಡಿದನು. ಬಳಿಕ ಮರುದಿನ ಮುಂಜಾನೆ ಬೇಗನೆ ಸೀನಾಯಿ ಬೆಟ್ಟವನ್ನೇರಿದನು. ಯೆಹೋವನು ಆಜ್ಞಾಪಿಸಿದಂತೆ ಮೋಶೆಯು ಪ್ರತಿಯೊಂದನ್ನು ಮಾಡಿದನು. ಮೋಶೆಯು ಎರಡು ಕಲ್ಲಿನ ಹಲಿಗೆಗಳನ್ನು ಹಿಡಿದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಮೋಶೆಯು ಮೊದಲಿನವುಗಳಂತೆ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿಕೊಂಡನು. ಬೆಳಿಗ್ಗೆ ಎದ್ದು ಯೆಹೋವ ದೇವರು ತನಗೆ ಆಜ್ಞಾಪಿಸಿದಂತೆ ಕಲ್ಲಿನ ಎರಡು ಹಲಗೆಗಳನ್ನು ತನ್ನ ಕೈಯಲ್ಲಿ ತೆಗೆದುಕೊಂಡು ಸೀನಾಯಿ ಬೆಟ್ಟದ ಮೇಲೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 34:4
6 ತಿಳಿವುಗಳ ಹೋಲಿಕೆ  

ಯೆಹೋವನು ಮೋಶೆಗೆ - ನೀನು ಮೊದಲಿನ ಕಲ್ಲಿನ ಹಲಿಗೆಗಳಂತೆ ಇನ್ನು ಎರಡು ಕಲ್ಲಿನ ಹಲಿಗೆಗಳನ್ನು ಸಿದ್ಧಪಡಿಸಿಕೋ. ನೀನು ಒಡೆದು ಬಿಟ್ಟ ಆ ಮೊದಲನೆಯ ಹಲಿಗೆಗಳ ಮೇಲಿದ್ದ ವಾಕ್ಯಗಳನ್ನು ನಾನು ಈ ಹಲಿಗೆಗಳ ಮೇಲೆ ಬರೆಯುವೆನು.


ಆದಕಾರಣ ನಾನು ಜಾಲೀಮರದಿಂದ ಮಂಜೂಷವನ್ನು ಮಾಡಿಸಿ ಮೊದಲಿನ ಕಲ್ಲಿನ ಹಲಿಗೆಗಳಂತೆ ಬೇರೆ ಎರಡು ಹಲಿಗೆಗಳನ್ನು ಸಿದ್ಧಪಡಿಸಿ ಆ ಎರಡು ಹಲಿಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬೆಟ್ಟವನ್ನು ಹತ್ತಿದೆನು.


ಮೋಶೆ ಬೆಟ್ಟವನ್ನೇರಿ ದೇವರ ಸನ್ನಿಧಿಗೆ ಹೋದಾಗ ಯೆಹೋವನು ಅವನಿಗೆ ಬೆಟ್ಟದ ಮೇಲಿನಿಂದ ಕೂಗಿ - ನೀನು ಯಾಕೋಬನ ಮನೆತನದವರಾದ ಇಸ್ರಾಯೇಲ್ಯರಿಗೆ ಈ ಮಾತುಗಳನ್ನು ಹೇಳಬೇಕು;


ಯೆಹೋವನು ಸೀನಾಯಿಬೆಟ್ಟದ ಶಿಖರಕ್ಕೆ ಇಳಿದು ಬಂದನು. ಆತನು - ಬೆಟ್ಟದ ತುದಿಗೆ ಬಾ ಎಂದು ಮೋಶೆಯನ್ನು ಕರೆಯಲು ಅವನು ಬೆಟ್ಟವನ್ನೇರಿದನು.


ಆ ಶಿಲಾಶಾಸನಗಳು ದೇವರ ಕೆಲಸವೇ; ಅವುಗಳಲ್ಲಿ ಬರೆದದ್ದು ದೇವರು ಕೆತ್ತಿದ ಅಕ್ಷರಗಳೇ.


ಆ ಕಾಲದಲ್ಲಿ ಯೆಹೋವನು ನನಗೆ - ನೀನು ಮೊದಲಿನ ಕಲ್ಲಿನ ಹಲಿಗೆಗಳಂತೆ ಬೇರೆ ಎರಡು ಹಲಿಗೆಗಳನ್ನು ಸಿದ್ಧಪಡಿಸಿಕೊಂಡು ಬೆಟ್ಟವನ್ನು ಹತ್ತಿ ನನ್ನ ಬಳಿಗೆ ಬಾ; ಮತ್ತು ಒಂದು ಮರದ ಮಂಜೂಷವನ್ನು ಮಾಡಿಸಿಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು