Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 34:5 - ಕನ್ನಡ ಸತ್ಯವೇದವು J.V. (BSI)

5 ಆಗ ಯೆಹೋವನು ಮೇಘದಿಂದ ಆವರಿಸಲ್ಪಟ್ಟವನಾಗಿ ಇಳಿದು ಬಂದು ಅಲ್ಲಿ ಅವನ ಹತ್ತಿರ ನಿಂತು ಯೆಹೋವನೆಂಬ ನಾಮವನ್ನು ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಯೆಹೋವನು ಮೇಘದಲ್ಲಿ ಇಳಿದು ಬಂದು ಅಲ್ಲಿ ಅವನ ಹತ್ತಿರ ನಿಂತು ಯೆಹೋವನೆಂಬ ತನ್ನ ನಾಮವನ್ನು ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಗ ಸರ್ವೇಶ್ವರ ಸ್ವಾಮಿ ಮೇಘಾವೃತರಾಗಿ ಇಳಿದುಬಂದು ಅಲ್ಲಿ ಅವನ ಹತ್ತಿರ ನಿಂತು, ‘ಸರ್ವೇಶ್ವರ’ ಎಂಬ ತಮ್ಮ ನಾಮವನ್ನು ಪ್ರಕಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಮೋಶೆಯು ಬೆಟ್ಟವನ್ನೇರಿ ಹೋದನಂತರ ಯೆಹೋವನು ಮೇಘದಲ್ಲಿ ಅವನ ಬಳಿಗೆ ಇಳಿದುಬಂದನು. ಯೆಹೋವನು ಮೋಶೆಯೊಡನೆ ಅಲ್ಲಿ ನಿಂತನು ಮತ್ತು ಮೋಶೆಯು ಯೆಹೋವನ ಹೆಸರನ್ನು ಕರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಯೆಹೋವ ದೇವರು ಮೇಘದಲ್ಲಿ ಇಳಿದುಬಂದು ಅಲ್ಲಿ ಅವನ ಸಂಗಡ ನಿಂತುಕೊಂಡು, ಯೆಹೋವ ದೇವರು ತಮ್ಮ ಹೆಸರನ್ನು ಪ್ರಕಟಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 34:5
16 ತಿಳಿವುಗಳ ಹೋಲಿಕೆ  

ಆತನು - ನನ್ನ ಸರ್ವೋತ್ತಮತ್ವವನ್ನು ನಿನ್ನೆದುರಾಗಿ ದಾಟಿಹೋಗುವಂತೆ ಮಾಡುವೆನು; ಯೆಹೋವನ ನಾಮದ ಮಹತ್ವವನ್ನು ನಿನ್ನೆದುರಾಗಿ ಪ್ರಕಟಿಸುವೆನು. ಯಾವನ ಮೇಲೆ ದಯೆಯಿಡುವೆನೋ ಅವನ ಮೇಲೆ ದಯೆಯಿಡುವೆನು; ಯಾರನ್ನು ಕರುಣಿಸುವೆನೋ ಅವರನ್ನು ಕರುಣಿಸುವೆನು ಅಂದನು.


ಯೆಹೋವನು ಆ ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಮಾತಾಡಿ ಅವನಲ್ಲಿದ್ದ ಆತ್ಮೀಯವರಗಳಲ್ಲಿ ಆ ಎಪ್ಪತ್ತು ಮಂದಿ ಹಿರಿಯರಿಗೂ ಪಾಲುಕೊಟ್ಟನು; ಆ ವರಗಳು ಅವರಿಗೆ ದೊರಕಿದಾಗ ಅವರು ಪರವಶರಾಗಿ ಪ್ರವಾದಿಸಿದರು; ಆಮೇಲೆ ಅವರು ತಿರಿಗಿ ಪ್ರವಾದಿಸಲಿಲ್ಲ.


ಮೋಶೆ ಆ ಡೇರೆಯೊಳಕ್ಕೆ ಹೋದ ಕೂಡಲೆ ಮೇಘಸ್ತಂಭವು ಇಳಿದು ಆ ಡೇರೆಯ ಬಾಗಲಲ್ಲಿ ನಿಲ್ಲುತ್ತಿತ್ತು. ಆಗ ಯೆಹೋವನು ಮೋಶೆಯ ಸಂಗಡ ಮಾತಾಡುವನು.


ನಾನು ಅಲ್ಲಿಗೆ ಇಳಿದುಬಂದು ನಿನ್ನ ಸಂಗಡ ಮಾತಾಡುವೆನು. ಅದಲ್ಲದೆ ನಾನು ನಿನಗೆ ಅನುಗ್ರಹಿಸಿರುವ ಆತ್ಮೀಯ ವರಗಳಲ್ಲಿ ಕೆಲವನ್ನು ಅವರಿಗೂ ಪಾಲುಕೊಡುವೆನು. ಆಗ ನೀನೊಬ್ಬನೇ ಈ ಜನರ ಭಾರವನ್ನು ವಹಿಸಬೇಕಾಗಿರುವದಿಲ್ಲ; ನಿನ್ನ ಜೊತೆಯಲ್ಲಿ ಇವರೂ ವಹಿಸುವರು.


ಸೊದೋವಿುನ ಅಧಿಪತಿಗಳೇ, ಯೆಹೋವನ ಮಾತನ್ನು ಆಲಿಸಿರಿ; ಗೊಮೋರದ ಪ್ರಜೆಗಳೇ, ನಮ್ಮ ದೇವರ ಧರ್ಮೋಪದೇಶವನ್ನು ಕೇಳಿರಿ!


ಯೆಹೋವನ ನಾಮವು ಬಲವಾದ ಬುರುಜು; ಶಿಷ್ಟನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುವನು.


ಅವರು ಚೀಯೋನಿನಲ್ಲಿ ಯೆಹೋವನಾಮವನ್ನು ವರ್ಣಿಸುವಂತೆಯೂ ಯೆರೂಸಲೇವಿುನಲ್ಲಿ ತನ್ನ ಕೀರ್ತನೆಯನ್ನು ಹಾಡುವಂತೆಯೂ ಮಾಡಿದ್ದಾನೆ.


ಯೆಹೋವನ ನಾಮಮಹತ್ವವನ್ನು ಪ್ರಕಟಿಸುವೆನು; ನಮ್ಮ ದೇವರನ್ನು ಮಹಾಮಹಿಮೆಯುಳ್ಳವನೆಂದು ಕೊಂಡಾಡಿರಿ.


ಯೆಹೋವನು ಬೆಂಕಿಯೊಳಗೆ ಸೀನಾಯಿ ಬೆಟ್ಟದ ಮೇಲಕ್ಕೆ ಇಳಿದು ಬಂದದರಿಂದ ಆ ಬೆಟ್ಟವೆಲ್ಲಾ ಹೊಗೆಯಿಂದ ಆವರಿಸಿಕೊಂಡಿತು. ಆ ಹೊಗೆ ಆವಿಗೆಯ ಹೊಗೆಯಂತೆ ಏರಿತು; ಅದಲ್ಲದೆ ಬೆಟ್ಟವೆಲ್ಲಾ ಬಹಳವಾಗಿ ಕಂಪಿಸಿತು.


ನನ್ನ ಸ್ವಾವಿುಯೇ, ನೀನು ನಿನ್ನ ವಿಷಯದಲ್ಲಿ-


ಯೆಹೋವನು ಮೋಶೆಗೆ - ಇಗೋ ನಾನು ನಿನ್ನ ಸಂಗಡ ಮಾತಾಡುವಾಗ ಜನರು ಕೇಳಿ ಯಾವಾಗಲೂ ನಿನ್ನನ್ನು ನಂಬುವಂತೆ ನಾನು ಕಾರ್ಮುಗಿಲಲ್ಲಿ ನಿನ್ನ ಬಳಿಗೆ ಬರುವೆನು ಎಂದು ಹೇಳಿದನು.


ನೀವು ಆತನಲ್ಲಿ ಲಕ್ಷ್ಯವಿಟ್ಟು ಆತನ ಮಾತಿಗೆ ಕಿವಿಗೊಡಬೇಕು; ಆತನಿಗೆ ಅವಿಧೇಯರಾಗಿರಬಾರದು; ಅವಿಧೇಯರಾದರೆ ನಿಮ್ಮನ್ನು ಕ್ಷವಿುಸಲಾರನು; ನನ್ನ ನಾಮಮಹಿಮೆ ಆತನಲ್ಲಿ ಇರುವದು.


ಆ ಮೂವರು ಬಂದಾಗ ಯೆಹೋವನು ಮೇಘಸ್ತಂಭದೊಳಗೆ ಇಳಿದು ಬಂದು ದೇವದರ್ಶನದ ಗುಡಾರದ ಬಾಗಲಲ್ಲಿ ನಿಂತು ಆರೋನ್ ವಿುರ್ಯಾಮರನ್ನು ಹತ್ತಿರಕ್ಕೆ ಕರೆದನು.


ಸಮುವೇಲನು ಒಂದನ್ನೂ ಮುಚ್ಚದೆ ಎಲ್ಲವನ್ನೂ ತಿಳಿಸಿದನು; ಏಲಿಯು ಅದನ್ನು ಕೇಳಿ - ಆತನು ಯೆಹೋವನು; ತನಗೆ ಸರಿಕಾಣುವದನ್ನು ಮಾಡಲಿ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು