Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 35:22 - ಕನ್ನಡ ಸತ್ಯವೇದವು J.V. (BSI)

22 ಸಿದ್ಧಚಿತ್ತರಾದ ಗಂಡಸರೂ ಹೆಂಗಸರೂ ಬಂದು ಯೆಹೋವನಿಗೆ ಚಿನ್ನದ ಕಾಣಿಕೆಗಳನ್ನು ಅಂದರೆ ಕಡಗ, ಮೂಗುತಿ, ಮುದ್ರೆಯುಂಗುರ, ಕಂಠಮಾಲೆ ಮೊದಲಾದ ಚಿನ್ನದ ಒಡವೆಗಳನ್ನು ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಸಿದ್ಧಚಿತ್ತರಾದ ಗಂಡಸರೂ, ಹೆಂಗಸರೂ ಬಂದು ಯೆಹೋವನಿಗೆ ಚಿನ್ನದ ಕಾಣಿಕೆಗಳನ್ನು ಅಂದರೆ ಕಡಗ, ಮೂಗುತಿ, ಮುದ್ರೆಯುಂಗರ, ಕಂಠಮಾಲೆ ಮೊದಲಾದ ಚಿನ್ನದ ಒಡವೆಗಳನ್ನು ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಹೆಂಗಸರು ಹಾಗು ಗಂಡಸರು ಧಾರಾಳ ಮನಸ್ಸಿನಿಂದ ಸರ್ವೇಶ್ವರನಿಗೆ ಚಿನ್ನದ ಕಾಣಿಕೆಗಳನ್ನು, ಅಂದರೆ ಕಡಗ, ಮೂಗುತಿ, ಮುದ್ರೆಯುಂಗುರ, ಕಂಠಮಾಲೆ ಮೊದಲಾದ ಚಿನ್ನದ ಒಡವೆಗಳನ್ನು ಸಮರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಕಾಣಿಕೆ ಕೊಡುವುದಕ್ಕೆ ಬಯಸಿದ ಎಲ್ಲಾ ಗಂಡಸರು, ಹೆಂಗಸರು ಎಲ್ಲಾ ವಿಧದ ಚಿನ್ನದ ಆಭರಣಗಳನ್ನು ತಂದರು. ಅವರು ತಮ್ಮ ಕಡಗ, ಮೂಗುತಿ, ಉಂಗುರ, ಕಂಠಮಾಲೆ ಮತ್ತು ಇತರ ಚಿನ್ನದ ಆಭರಣಗಳನ್ನು ತಂದರು. ಅವರೆಲ್ಲರು ತಮ್ಮ ಎಲ್ಲಾ ಕೊಡುಗೆಗಳನ್ನು ಯೆಹೋವನಿಗೆ ಕೊಟ್ಟರು. ಇದು ಯೆಹೋವನಿಗೆ ಕೊಟ್ಟ ವಿಶೇಷವಾದ ಕಾಣಿಕೆಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿ ಬಂದು ಬಳೆಗಳನ್ನೂ ಮೂಗುತಿಗಳನ್ನೂ ಉಂಗುರಗಳನ್ನೂ ಮುದ್ರೆಗಳನ್ನೂ ಚಿನ್ನದ ಎಲ್ಲಾ ಒಡವೆಗಳನ್ನೂ ತಂದರು. ಜನರೆಲ್ಲಾ ಚಿನ್ನವನ್ನು ವಿಶೇಷ ಕಾಣಿಕೆಗಳನ್ನಾಗಿ ಯೆಹೋವ ದೇವರಿಗೆ ಅರ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 35:22
18 ತಿಳಿವುಗಳ ಹೋಲಿಕೆ  

ಮತ್ತು ಆ ಮನೆಯೊಳಕ್ಕೆ ಹೋಗಿ ಆ ಕೂಸನ್ನು ಅದರ ತಾಯಿಯಾದ ಮರಿಯಳ ಬಳಿಯಲ್ಲಿ ಕಂಡು ಅದಕ್ಕೆ ಸಾಷ್ಟಾಂಗನಮಸ್ಕಾರ ಮಾಡಿ ತಮ್ಮ ಗಂಟುಗಳನ್ನು ಬಿಚ್ಚಿ ಅದಕ್ಕೆ ಚಿನ್ನ ಧೂಪ ರಕ್ತಬೋಳಗಳನ್ನು ಕಾಣಿಕೆಯಾಗಿ ಕೊಟ್ಟರು.


ಮತ್ತು ನಾನು ನಿನ್ನ ಕೈಗಳಿಗೆ ಬಳೆಗಳನ್ನು, ಕಂಠಕ್ಕೆ ಮಾಲೆಯನ್ನು,


ನನ್ನ ಪವಿತ್ರಾಲಯವನ್ನು ಭೂಷಿಸುವದಕ್ಕಾಗಿ ತುರಾಯಿ, ತಪಸಿ, ತಿಲಕ ಈ ವೃಕ್ಷರೂಪವಾದ ಲೆಬನೋನಿನ ಮಹಿಮೆಯು ನಿನಗಾಗುವದು; ನನ್ನ ಪಾದಸನ್ನಿಧಿಯ ಮಂದಿರವನ್ನು ವೈಭವಪಡಿಸುವೆನು.


ಯೆಹೋವನು ನಿನ್ನನ್ನು ವೈಭವಪಡಿಸಿರುವದನ್ನು ಕೇಳಿ ತಾರ್ಷೀಷಿನ ಹಡಗುಗಳು ನಿನ್ನ ದೇವರಾದ ಯೆಹೋವನ ನಾಮಮಹತ್ತಿನ ವಿಧಿಯೂ ಇಸ್ರಾಯೇಲಿನ ಸದಮಲಸ್ವಾವಿುಯ ಸನ್ನಿಧಿಯೂ ಆದ ಸ್ಥಾನಕ್ಕೆ ನಿನ್ನ ಮಕ್ಕಳನ್ನು ಅವರ ಬೆಳ್ಳಿ ಬಂಗಾರಗಳ ಸಮೇತ ದೂರದಿಂದ ತರುವದರಲ್ಲಿ ಮುಂದಾಗುತ್ತಿವೆ.


ಜುಮಕಿ, ಬಳೆ, ಮುಸುಕು, ಮುಂಡಾಸ, ಕಾಲಸರಪಣಿ, ನಡುಕಟ್ಟು, ಗಂಧದ ಡಬ್ಬಿ, ತಾಯಿತಿ,


ಆದಕಾರಣ ಯೆಹೋವನು ಕಾಪಾಡಿದ ನಮ್ಮ ಪ್ರಾಣಗಳಿಗೆ ಈಡಾಗಿ ಆತನಿಗೋಸ್ಕರ ಕಾಣಿಕೆಯಾಗಿ ನಮ್ಮಲ್ಲಿ ಒಬ್ಬೊಬ್ಬನು ತನಗೆ ಸಿಕ್ಕಿದ ಚಿನ್ನದ ಒಡವೆಗಳನ್ನು ಅಂದರೆ ತೋಳ್ಬಳೆ, ಕಡಗ, ಮುದ್ರೆಯುಂಗರ, ಮುರುವು, ಕಂಠಮಾಲೆ ಮುಂತಾದವುಗಳನ್ನು ತಂದಿದ್ದೇವೆ ಅಂದರು.


ಜನರೆಲ್ಲರು ತಮ್ಮ ಕಿವಿಗಳಲ್ಲಿದ್ದ ಚಿನ್ನದ ಮುರುವುಗಳನ್ನು ಕಿತ್ತು ಆರೋನನ ಬಳಿಗೆ ತಂದು ಕೊಟ್ಟರು.


ಅದಕ್ಕೆ ಆರೋನನು - ನಿಮ್ಮ ಹೆಂಡರೂ ಗಂಡುಮಕ್ಕಳೂ ಹೆಣ್ಣುಮಕ್ಕಳೂ ಕಿವಿಗೆ ಹಾಕಿಕೊಂಡಿರುವ ಚಿನ್ನದ ಮುರುವುಗಳನ್ನು ನೀವು ಕಿತ್ತು ನನಗೆ ಒಪ್ಪಿಸಿರಿ ಎಂದು ಹೇಳಲಾಗಿ


ಯಾರಾರನ್ನು ಹೃದಯವು ಪ್ರೇರಿಸಿತೋ ಯಾರಾರ ಮನಸ್ಸು ಸಿದ್ಧವಾಗಿತ್ತೋ ಅವರೆಲ್ಲರೂ ಬಂದು ದೇವದರ್ಶನದ ಗುಡಾರದ ಕೆಲಸಕ್ಕೋಸ್ಕರವೂ ಅದರ ಸಮಸ್ತ ಸೇವೆಗೋಸ್ಕರವೂ ದೀಕ್ಷಾವಸ್ತ್ರಗಳಿಗೋಸ್ಕರವೂ ಯೆಹೋವನಿಗೆ ಕಾಣಿಕೆಗಳನ್ನು ತಂದರು.


ಯಾರಲ್ಲಿ ನೀಲಿಧೂಮ್ರ ರಕ್ತವರ್ಣಗಳುಳ್ಳ ದಾರಗಳೂ ನಾರುಬಟ್ಟೆಯೂ ಆಡುಕೂದಲಿನ ಬಟ್ಟೆಯೂ ಹದಮಾಡಿದ ಕೆಂಪುಬಣ್ಣದ ಕುರಿದೊಗಲುಗಳೂ ಕಡಲುಹಂದಿಯ ತೊಗಲುಗಳೂ ಇದ್ದವೋ ಅವರು ಅವುಗಳನ್ನು ತಂದುಕೊಟ್ಟರು.


ಯೆಹೋವಾಷನು ಯಾಜಕರಿಗೆ - ನೀವು ಯೆಹೋವನ ಆಲಯಕ್ಕೆ ಸೇರುವ ಎಲ್ಲಾ ಪರಿಶುದ್ಧದ್ರವ್ಯವನ್ನು ಅಂದರೆ ಖಾನೇಷುಮಾರಿಯಲ್ಲಿ ಲೆಕ್ಕಿಸಲ್ಪಟ್ಟ ಪ್ರತಿಯೊಬ್ಬನು ತಂದುಕೊಡುವ ಹಣ, ದೇವರಿಗೆ ಪ್ರತಿಷ್ಠಿತನಾದ ಮನುಷ್ಯನು ತನ್ನ ಪ್ರಾಣವನ್ನು ಬಿಡಿಸಿಕೊಳ್ಳುವದಕ್ಕಾಗಿ ತರುವ ಹಣ, ಜನರು ಯೆಹೋವನ ಆಲಯಕ್ಕೆ ಸ್ವೇಚ್ಫೆಯಿಂದ ತಂದೊಪ್ಪಿಸುವ ಹಣ ಇವುಗಳನ್ನು ತೆಗೆದುಕೊಂಡು


ಆಮೇಲೆ ಹಿಜ್ಕೀಯನು ಸಮೂಹದವರಿಗೆ - ನೀವು ಈಗ ಯೆಹೋವನಿಗೋಸ್ಕರ ನಿಮ್ಮನ್ನು ಪ್ರತಿಷ್ಠಿಸಿಕೊಂಡಿರಲ್ಲಾ; ಹತ್ತಿರ ಬಂದು ಯೆಹೋವನ ಆಲಯಕ್ಕೋಸ್ಕರ ಸಮಾಧಾನಯಜ್ಞಗಳನ್ನೂ ಕೃತಜ್ಞತಾ ಯಜ್ಞಗಳನ್ನೂ ಸಮರ್ಪಿಸಿರಿ ಅನ್ನಲು ಸಮೂಹದವರು ಸಮಾಧಾನಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿದ್ದಲ್ಲದೆ ಅನೇಕರು ಸ್ವೇಚ್ಫೆಯಿಂದ ಸರ್ವಾಂಗಹೋಮಗಳನ್ನೂ ಸಮರ್ಪಿಸಿದರು.


ಕೇಳುವ ಕಿವಿಗೆ ಮುಟ್ಟುವ ಬುದ್ಧಿವಾದವು ಹೊನ್ನಿನ ಮುರುವಿಗೂ ಅಪರಂಜಿಯ ಆಭರಣಕ್ಕೂ ಸಮಾನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು