Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 37:17 - ಕನ್ನಡ ಸತ್ಯವೇದವು J.V. (BSI)

17 ಮತ್ತು ಚೊಕ್ಕಬಂಗಾರದ ದೀಪಸ್ತಂಭವನ್ನು ಮಾಡಿದನು. ಅದರ ಬುಡವನ್ನೂ ಕಂಬವನ್ನೂ ನಕಾಸಿಕೆಲಸದಿಂದ ಮಾಡಿದನು. ಆ ದೀಪಸ್ತಂಭವೆಲ್ಲಾ ಅಖಂಡವಾಗಿ ಪುಷ್ಪಪಾತ್ರೆಗಳಂತೆಯೂ ಪುಷ್ಪಗಳಂತೆಯೂ ಅಲಂಕಾರವಾಗಿ ಕೆತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಮತ್ತು ಚೊಕ್ಕ ಬಂಗಾರದ ದೀಪಸ್ತಂಭವನ್ನು ಮಾಡಿದನು. ಅದರ ಬುಡವನ್ನು ಮತ್ತು ಕಂಬವನ್ನು ನಕಾಸಿಕೆಲಸದಿಂದ ಮಾಡಿದನು. ಆ ದೀಪಸ್ತಂಭವನ್ನು ಅಖಂಡವಾಗಿ ಪುಷ್ಪದಗೊಂಚಲುಗಳು, ಪುಷ್ಪಗಳು, ಮೊಗ್ಗುಗಳು ಅಲಂಕಾರವಾಗಿ ಅದರಿಂದಲೇ ಹೊರಟಂತೆ ಕೆತ್ತಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಚೊಕ್ಕಬಂಗಾರದ ದೀಪವೃಕ್ಷವನ್ನು ಮಾಡಿದನು. ಅದರ ಬುಡವನ್ನೂ ಕಂಬವನ್ನೂ ನಕಾಸಿ ಕೆಲಸದಿಂದ ಮಾಡಿದನು. ಆ ದೀಪಸ್ತಂಭವೆಲ್ಲಾ ಅಖಂಡವಾಗಿ ಮೊಗ್ಗುಗಳಂತೆಯೂ ಪುಷ್ಪಗಳಂತೆಯೂ ಅಲಂಕಾರವಾಗಿ ಕೆತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಬಳಿಕ ಅವನು ದೀಪಸ್ತಂಭವನ್ನು ಮಾಡಿದನು. ಅವನು ಅಪ್ಪಟ ಬಂಗಾರದಿಂದ ಕಂಬವನ್ನು ಮಾಡಿದನು. ತರುವಾಯ ಹೂವು, ಮೊಗ್ಗು ಮತ್ತು ದಳಗಳನ್ನು ಮಾಡಿ ಜೋಡಿಸಿದನು. ಹೀಗೆ ಅವು ಪುಷ್ಪಾಲಂಕಾರವಾದ ಒಂದೇ ವಸ್ತುವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಚೊಕ್ಕ ಬಂಗಾರದಿಂದ ದೀಪಸ್ತಂಭವನ್ನು ಮಾಡಿದರು. ಅದರ ಬುಡವನ್ನೂ ಕಂಬವನ್ನೂ ನಕಾಸಿ ಕೆಲಸದಿಂದ ಮಾಡಿದರು. ದೀಪಸ್ತಂಭದ ಬುಡದಿಂದಲೇ ಅಖಂಡವಾಗಿ ಪುಷ್ಪದ ಗೊಂಚಲುಗಳಂತೆಯೂ ಹಣತೆಗಳಂತೆಯೂ ಮೊಗ್ಗುಗಳಂತೆಯೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 37:17
17 ತಿಳಿವುಗಳ ಹೋಲಿಕೆ  

ಅಂದರೆ ಒಂದು ಗುಡಾರವು ಕಟ್ಟಲ್ಪಟ್ಟಿತು; ಅದರ ಮೊದಲನೆಯ ಭಾಗದಲ್ಲಿ ದೀಪಸ್ತಂಭ, ಮೇಜು, ಸಮರ್ಪಿಸಿದ ರೊಟ್ಟಿ ಇವುಗಳಿದ್ದವು; ಅದಕ್ಕೆ ಪವಿತ್ರಸ್ಥಾನ ಎಂದು ಹೆಸರು.


ನನ್ನ ಸಂಗಡ ಮಾತಾಡುತ್ತಿದ್ದ ಶಬ್ದವು ಯಾರದೆಂದು ನೋಡುವದಕ್ಕೆ ಹಿಂದಕ್ಕೆ ತಿರುಗಿದೆನು.


ಹೀಗೆ ನೀವು ನಿರ್ದೋಷಿಗಳೂ ಯಥಾರ್ಥಮನಸ್ಸುಳ್ಳವರೂ ಆಗಿದ್ದು ವಕ್ರಬುದ್ಧಿಯುಳ್ಳ ಮೂರ್ಖಜಾತಿಯ ಮಧ್ಯದಲ್ಲಿ ದೇವರ ನಿಷ್ಕಳಂಕರಾದ ಮಕ್ಕಳಾಗಿರುವಿರಿ.


ಮತ್ತು ದೀಪವನ್ನು ಹತ್ತಿಸಿ ಕೊಳಗದೊಳಗೆ ಇಡುವದಿಲ್ಲ; ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕುಕೊಡುವದು.


ಇದನ್ನು ಕೇಳಿ ನಾನು ದೇವದೂತನನ್ನು - ದೀಪಸ್ತಂಭದ ಎಡಬಲದಲ್ಲಿರುವ ಈ ಎಣ್ಣೆಯ ಮರಗಳು ಏನು ಎಂದು ಪ್ರಶ್ನೆಮಾಡಿ


ಇಗೋ, ಏಳು ದೀಪಸ್ತಂಭಗಳುಳ್ಳ ಸುವರ್ಣಮಯವಾದ ಒಂದು ದೀಪಸ್ತಂಭವನ್ನು ನೋಡುತ್ತೇನೆ; ಅದರ ಮೇಲಿನ ದೀಪಗಳಿಗೆ ಏಳು ನಾಳಗಳಿವೆ; ಅದರ ಮೇಲ್ಗಡೆ ಎಣ್ಣೆಯ ಪಾತ್ರೆಯಿದೆ;


ಆ ಯಾಜಕರು ಪ್ರತಿದಿನ ಪ್ರಾತಃಸ್ಸಾಯಂಕಾಲಗಳಲ್ಲಿ ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಾ ಸುಗಂಧ ದ್ರವ್ಯಧೂಪವನ್ನು ಹಾಕುತ್ತಾ ಚೊಕ್ಕ [ಬಂಗಾರದ] ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಯೆಹೋವನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಆತನನ್ನು ಬಿಟ್ಟವರು.


ಇದಲ್ಲದೆ ಆರಾಧನೆಯ ಆಯಾ ಆಚಾರಗಳಲ್ಲಿ ಉಪಯೋಗವಾಗಬೇಕಾದ ಎಲ್ಲಾ ಸಾಮಾನುಗಳ ಬೆಳ್ಳಿ ಬಂಗಾರದ ತೂಕ ಅಂದರೆ ಬಂಗಾರದ ಹಣತೆಗಳಿರುವ ಬಂಗಾರದ ಪ್ರತಿಯೊಂದು ದೀಪಸ್ತಂಭದ ತೂಕ, ಬೇರೆ ಬೇರೆ ಕೆಲಸಗಳಿಗೆ ಉಪಯೋಗವಾಗುವ ಪ್ರತಿಯೊಂದು ಬೆಳ್ಳಿಯ ದೀಪಸ್ತಂಭದ ಮತ್ತು ಅದರ ಹಣತೆಗಳ ತೂಕ,


ಅವನು ಪ್ರತಿನಿತ್ಯವೂ ಯೆಹೋವನ ಸನ್ನಿಧಿಯಲ್ಲಿ ಹಣತಿಗಳನ್ನು ಆ ಚೊಕ್ಕಬಂಗಾರದ ದೀಪಸ್ತಂಭದ ಮೇಲೆ ಸರಿಯಾಗಿ ಇಡಬೇಕು.


ಮೇಜು ಅದರ ಉಪಕರಣಗಳು, ಚೊಕ್ಕಬಂಗಾರದ ದೀಪಸ್ತಂಭ, ಅದರ ಉಪಕರಣಗಳು,


ಮೇಜಿನ ಮೇಲೆ ಇಡಬೇಕಾದ ಉಪಕರಣಗಳನ್ನು ಅಂದರೆ ಹರಿವಾಣಗಳು, ಧೂಪಾರತಿಗಳು, ಹೂಜೆಗಳು, ಪಾನದ್ರವ್ಯವನ್ನು ಅರ್ಪಿಸುವದಕ್ಕೆ ಬೇಕಾದ ಬಟ್ಟಲುಗಳು ಇವುಗಳನ್ನು ಚೊಕ್ಕ ಬಂಗಾರದಿಂದ ಮಾಡಿದನು.


ಕಂಬದ ಒಂದೊಂದು ಪಾರ್ಶ್ವದಲ್ಲಿ ಮೂರು ಮೂರು ಕೊಂಬೆಗಳು ಅಂತೂ ಆರು ಕೊಂಬೆಗಳು ಇದ್ದವು.


ಆ ದೀಪಸ್ತಂಭವು ಅದರ ಬುಡವೂ ಪುಷ್ಪಾಲಂಕಾರಗಳೂ ಚಿನ್ನದ ನಕಾಸಿ ಕೆಲಸದಿಂದ ಮಾಡಲ್ಪಟ್ಟಿತ್ತು. ಯೆಹೋವನು ತೋರಿಸಿದ ಮಾದರಿಯಂತೆ ಮೋಶೆ ಅದನ್ನು ಮಾಡಿಸಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು