Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 37:6 - ಕನ್ನಡ ಸತ್ಯವೇದವು J.V. (BSI)

6 ಅದಲ್ಲದೆ ಚೊಕ್ಕಬಂಗಾರದ ಕೃಪಾಸನವನ್ನು ಮಾಡಿದನು. ಅದು ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇದಲ್ಲದೆ ಚೊಕ್ಕಬಂಗಾರದಿಂದ ಕೃಪಾಸನವನ್ನು ಮಾಡಿದನು. ಅದು ಎರಡುವರೆ ಮೊಳ ಉದ್ದವು, ಒಂದುವರೆ ಮೊಳ ಅಗಲವೂ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅದಲ್ಲದೆ ಚೊಕ್ಕಬಂಗಾರದ ಕೃಪಾಸನವನ್ನು ಮಾಡಿದನು. ಅದು ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಬಳಿಕ ಅವನು ಅಪ್ಪಟ ಬಂಗಾರದ ಕೃಪಾಸನವನ್ನು ಮಾಡಿಸಿದನು. ಅದು ಎರಡೂವರೆ ಮೊಳ ಉದ್ದ ಮತ್ತು ಒಂದೂವರೆ ಮೊಳ ಅಗಲ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇದಲ್ಲದೆ ಸುಮಾರು ನೂರಹತ್ತು ಸೆಂಟಿಮೀಟರ್ ಉದ್ದವೂ ಎಪ್ಪತ್ತು ಸೆಂಟಿಮೀಟರ್ ಅಗಲವೂ ಇರುವ ಕರುಣಾಸನವನ್ನು ಶುದ್ಧ ಬಂಗಾರದಿಂದ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 37:6
11 ತಿಳಿವುಗಳ ಹೋಲಿಕೆ  

ಅದರ ಮೇಲೆ ದೇವರ ಪ್ರಭಾವವನ್ನು ಸೂಚಿಸುವ ಕೆರೂಬಿಗಳು ಕೃಪಾಸನವನ್ನು ಆಚ್ಫಾದಿಸಿಕೊಂಡಿದ್ದವು. ಸದ್ಯಕ್ಕೆ ಈ ವಿಷಯಗಳನ್ನು ಒಂದೊಂದಾಗಿ ವಿವರಿಸುವದಕ್ಕೆ ಆಗುವದಿಲ್ಲ.


ಆತನು ನಮ್ಮ ಪಾಪಗಳನ್ನು ನಿವಾರಣಮಾಡುವ ಯಜ್ಞವಾಗಿದ್ದಾನೆ; ನಮ್ಮ ಪಾಪಗಳನ್ನು ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳನ್ನು ಸಹ ನಿವಾರಣಮಾಡುತ್ತಾನೆ.


ಆತನು ನಮ್ಮನ್ನು ಸಕಲ ಅಧರ್ಮದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಾಧೀನರಾದವರನ್ನು ವಿಮೋಚಿಸಬೇಕೆಂತಲೂ ಪುತ್ರರ ಪದವಿಯನ್ನು ನಮಗೆ ದೊರಕಿಸಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ ಧರ್ಮಶಾಸ್ತ್ರಧೀನನಾಗಿಯೂ ಬಂದನು.


ಈತನು ತನ್ನ ರಕ್ತವನ್ನು ಸುರಿಸಿ ನಂಬಿಕೆಯಿದ್ದವರಿಗಾಗಿ ಕೃಪಾಧಾರವಾಗಬೇಕೆಂದು ದೇವರು ಈತನನ್ನು ಮುಂದಿಟ್ಟನು.


ತರುವಾಯ ದಾವೀದನು ತನ್ನ ಮಗನಾದ ಸೊಲೊಮೋನನಿಗೆ ದೇವಾಲಯದ ಮಂಟಪ, ಕೊಟ್ಟಾರಗಳು, ಭಂಡಾರಗಳು, ಮೇಲುಪ್ಪರಿಗೆಗಳು, ಒಳಗಣ ಕೋಣೆಗಳು ಕೃಪಾಸನಮಂದಿರ ಇವುಗಳ ನಕ್ಷೆಯನ್ನು ಕೊಟ್ಟು


ದೇವದರ್ಶನದ ಗುಡಾರ, ಆಜ್ಞಾಶಾಸನಗಳನ್ನು ಇಟ್ಟಿರುವ ಮಂಜೂಷ, ಅದರ ಮೇಲಿರುವ ಕೃಪಾಸನ, ಗುಡಾರದ ಎಲ್ಲಾ ಉಪಕರಣಗಳು,


ಮಂಜೂಷದ ಎರಡು ಕಡೆಗಳಲ್ಲಿರುವ ಬಳೆಗಳಲ್ಲಿ ಅದನ್ನು ಹೊರುವದಕ್ಕಾಗಿ ಸೇರಿಸಿದನು.


ಕೃಪಾಸನದ ಎರಡು ಕೊನೆಗಳಲ್ಲಿ ಕೆರೂಬಿಯರ ಎರಡು ಬಂಗಾರದ ಆಕಾರಗಳನ್ನು ನಕಾಸಿಕೆಲಸದಿಂದ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು