Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 37:9 - ಕನ್ನಡ ಸತ್ಯವೇದವು J.V. (BSI)

9 ಆ ಕೆರೂಬಿಗಳು ಮೇಲಕ್ಕೆ ರೆಕ್ಕೆಗಳನ್ನು ಚಾಚಿರುವಂತೆಯೂ ಕೃಪಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚುವಂತೆಯೂ ಇದ್ದವು. ಅವುಗಳ ಮುಖಗಳು ಎದುರು ಬದುರಾಗಿ ಕೃಪಾಸನವನ್ನು ನೋಡುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆ ಕೆರೂಬಿಗಳು ಮೇಲಕ್ಕೆ ರೆಕ್ಕೆಗಳನ್ನು ಚಾಚಿರುವಂತೆಯೂ, ಕೃಪಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚುವಂತೆಯೂ ಇದ್ದವು. ಅವುಗಳ ಮುಖಗಳು ಎದುರು ಬದುರಾಗಿ ಕೃಪಾಸನವನ್ನು ನೋಡುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆ ಕೆರೂಬಿಗಳು ಮೇಲಕ್ಕೆ ರೆಕ್ಕೆಗಳನ್ನು ಚಾಚಿರುವಂತೆಯೂ ಇದ್ದವು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಕೆರೂಬಿಗಳ ರೆಕ್ಕೆಗಳು ಆಕಾಶದ ಕಡೆಗೆ ಚಾಚಿದ್ದವು. ಅವುಗಳು ಕೃಪಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚಿದ್ದವು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆ ಕೆರೂಬಿಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಚಾಚಿರುವಂತೆಯೂ ಕರುಣಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚುವಂತೆಯೂ ಇದ್ದವು. ಕೆರೂಬಿಗಳ ಮುಖಗಳು ಎದುರುಬದುರಾಗಿ ಕರುಣಾಸನವನ್ನು ನೋಡುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 37:9
15 ತಿಳಿವುಗಳ ಹೋಲಿಕೆ  

ಈ ಸಂಗತಿಗಳನ್ನು ಮುಂತಿಳಿಸುವದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದರೆಂಬದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಿದವು ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರಿಗೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂಬ ಅಪೇಕ್ಷೆ ಉಂಟು.


ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಡುವ ಊಳಿಗದ ಆತ್ಮಗಳಲ್ಲವೋ?


ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥವು ಗಂಭೀರವಾದದ್ದೆಂಬದಕ್ಕೆ ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ; ಅದೇನಂದರೆ - ಆತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮ ಸಂಬಂಧವಾಗಿ ಆತನೇ ಎಂದು ಸ್ಥಾಪಿಸಲ್ಪಟ್ಟನು; ದೇವದೂತರಿಗೆ ಕಾಣಿಸಿಕೊಂಡನು; ಅನ್ಯಜನರಲ್ಲಿ ಪ್ರಸಿದ್ಧಿ ಮಾಡಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಪ್ರಭಾವಸ್ಥಾನದಲ್ಲಿ ಸೇರಿಸಲ್ಪಟ್ಟನು.


ಇಷ್ಟೇ ಅಲ್ಲದೇ, ನನ್ನ ಕರ್ತನಾದ ಕ್ರಿಸ್ತ ಯೇಸುವನ್ನರಿಯುವದೇ ಅತಿಶ್ರೇಷ್ಠವಾದದ್ದೆಂದು ತಿಳಿದು ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ಆತನ ನಿವಿುತ್ತ ನಾನು ಎಲ್ಲವನ್ನೂ ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ.


ದೇವರು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ಅನಾದಿಕಾಲದಿಂದ ಮಾಡಿದ ಸಂಕಲ್ಪದ ಮೇರೆಗೆ ತನ್ನ ನಾನಾ ವಿಧವಾದ ಜ್ಞಾನವು ಪರಲೋಕದಲ್ಲಿ ರಾಜತ್ವಗಳಿಗೂ ಅಧಿಕಾರಗಳಿಗೂ ಈಗ ಕ್ರೈಸ್ತ ಸಭೆಯ ಮೂಲಕ ಗೊತ್ತಾಗಬೇಕೆಂಬದನ್ನು ಉದ್ದೇಶಿಸಿದ್ದನು.


ನಾವೆಲ್ಲರೂ ಮುಸುಕುತೆಗೆದಿರುವ ಮುಖದಿಂದ ಕರ್ತನ ಪ್ರಭಾವವನ್ನು ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ಪ್ರಭಾವದಿಂದ ಅಧಿಕಪ್ರಭಾವಕ್ಕೆ ಹೋಗುತ್ತಾ ಆ ಪ್ರಭಾವದ ಸಾರೂಪ್ಯವುಳ್ಳವರೇ ಆಗುತ್ತೇವೆ; ಇದು ದೇವರಾತ್ಮನಾಗಿರುವ ಕರ್ತನ ಕೆಲಸಕ್ಕನುಸಾರವಾದದ್ದೇ.


ಇದಲ್ಲದೆ ಅವನಿಗೆ - ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಪರಲೋಕವು ತೆರೆದಿರುವದನ್ನೂ ಮನುಷ್ಯಕುಮಾರನ ಮೇಲೆ ದೇವದೂತರು ಏರಿಹೋಗುತ್ತಾ ಇಳಿದುಬರುತ್ತಾ ಇರುವದನ್ನೂ ನೋಡುವಿರಿ ಎಂದು ಹೇಳಿದನು.


ಆತನ ಸುತ್ತ ಸೆರಾಫಿಯರು ಇದ್ದರು; ಪ್ರತಿಯೊಬ್ಬನು ಆರಾರು ರೆಕ್ಕೆಯುಳ್ಳವನಾಗಿ ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು ಎರಡನ್ನು ಬಡಿಯುತ್ತಾ ನೆಲಸೋಕದೆ ನಿಂತಿದ್ದನು.


ಆ ಕೆರೂಬಿಗಳು ಮೇಲಕ್ಕೆ ರೆಕ್ಕೆಗಳನ್ನು ಚಾಚಿರುವಂತೆಯೂ ಕೃಪಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚುವಂತೆಯೂ ಇರಬೇಕು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುತ್ತಿರಬೇಕು.


ಆ ರಾತ್ರಿ ಅವನು ಕನಸುಕಂಡನು. ಆ ಕನಸಿನಲ್ಲಿ ಒಂದು ನಿಚ್ಚಣಿಗೆ ನೆಲದ ಮೇಲೆ ನಿಂತಿತ್ತು; ಅದರ ತುದಿ ಆಕಾಶವನ್ನು ಮುಟ್ಟಿತ್ತು; ಅದರ ಮೇಲೆ ದೇವದೂತರು ಹತ್ತುತ್ತಾ ಇಳಿಯುತ್ತಾ ಇದ್ದರು.


ಅದಲ್ಲದೆ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಆತನು ಏದೆನ್ ವನದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಧಗಧಗನೆ ಪ್ರಜ್ವಲಿಸುತ್ತಾ ಸುತ್ತುವ ಕತ್ತಿಯನ್ನೂ ಇರಿಸಿದನು.


ಕೃಪಾಸನದ ಒಂದೊಂದು ಕೊನೆಯಲ್ಲಿ ಒಂದೊಂದು ಕೆರೂಬಿಯನ್ನು ಮಾಡಿ ಕೃಪಾಸನಕ್ಕೆ ಜೋಡಿಸಿದನು.


ಅವನು ಜಾಲೀಮರದಿಂದ ಮೇಜನ್ನು ಮಾಡಿದನು. ಅದು ಎರಡು ಮೊಳ ಉದ್ದವೂ ಒಂದು ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಆಗಿತ್ತು.


ಅವನು ಅವುಗಳನ್ನು ದೇವಾಲಯದ ಗರ್ಭಗೃಹದಲ್ಲಿಡಿಸಿದನು. ಅವುಗಳ ರೆಕ್ಕೆಗಳು ಚಾಚಿದವುಗಳಾಗಿದ್ದದರಿಂದ ಮೊದಲನೆಯ ಕೆರೂಬಿಯ ಒಂದು ರೆಕ್ಕೆಯು ಈಚೆಯ ಗೋಡೆಗೂ ಎರಡನೆಯ ಕೆರೂಬಿಯ ಒಂದು ರೆಕ್ಕೆಯು ಆಚೆಯ ಗೋಡೆಗೂ ತಗುಲಿದ್ದವು; ಅವುಗಳ ಬೇರೆ ಎರಡು ರೆಕ್ಕೆಗಳು ಮನೆಯ ಮಧ್ಯದಲ್ಲಿ ಒಂದನ್ನೊಂದು ತಗುಲಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು