ವಿಮೋಚನಕಾಂಡ 38:21 - ಕನ್ನಡ ಸತ್ಯವೇದವು J.V. (BSI)21 ದೇವದರ್ಶನದ ಗುಡಾರವನ್ನು ಮಾಡುವದರಲ್ಲಿ ಉಪಯೋಗಿಸಿದ ಪದಾರ್ಥಗಳ ಲೆಕ್ಕ. ಮೋಶೆಯ ಆಜ್ಞೆಯ ಮೇರೆಗೆ ಮಹಾಯಾಜಕನಾದ ಆರೋನನ ಮಗ ಈತಾಮಾರನು ಲೇವಿಯರ ಕೈಯಿಂದ ಲೆಕ್ಕ ಮಾಡಿಸಿದ್ದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ದೇವದರ್ಶನದ ಗುಡಾರವನ್ನು ಅಂದರೆ ಒಡಂಬಡಿಕೆಯ ನಿಯಮದ ಗುಡಾರವನ್ನು ಮಾಡುವುದರಲ್ಲಿ ಉಪಯೋಗಿಸಿದ ಪದಾರ್ಥಗಳ ಲೆಕ್ಕಾಚಾರ: ಮೋಶೆಯ ಅಪ್ಪಣೆಯ ಪ್ರಕಾರ ಮಹಾಯಾಜಕನಾದ ಆರೋನನ ಮಗನಾದ ಈತಾಮಾರನು ಲೇವಿಯರ ಕೈಯಿಂದ ಲೆಕ್ಕಮಾಡಿಸಿದ ದೇವದರ್ಶನದ ಗುಡಾರದ ಖರ್ಚು ವೆಚ್ಚಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ದೇವದರ್ಶನದ ಗುಡಾರವನ್ನು ನಿರ್ಮಿಸಿದಾಗ ಉಪಯೋಗಿಸಿದ ಲೋಹಗಳ ಲೆಕ್ಕ ಮೋಶೆಯ ಆಜ್ಞೆಯ ಮೇರೆಗೆ ಮಹಾಯಾಜಕನಾದ ಆರೋನನ ಮಗ ಈತಾಮಾರನು ಲೇವಿಯರ ಕೈಯಿಂದ ಮಾಡಿಸಿದ ಪಟ್ಟಿ: ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಒಡಂಬಡಿಕೆಯ ಗುಡಾರವಾದ ಪವಿತ್ರಗುಡಾರವನ್ನು ಮಾಡಲು ಉಪಯೋಗಿಸಿದ ಎಲ್ಲಾ ವಸ್ತುಗಳನ್ನು ಬರೆದಿಡಬೇಕೆಂದು ಮೋಶೆಯು ಲೇವಿಯರಿಗೆ ಆಜ್ಞಾಪಿಸಿದನು. ಈ ಪಟ್ಟಿಯು ಆರೋನನ ಮಗನಾದ ಈತಾಮಾರನ ವಶದಲ್ಲಿ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ದೇವದರ್ಶನದ ಗುಡಾರಕ್ಕೆ ಅಂದರೆ ಒಡಂಬಡಿಕೆಯ ನಿಯಮದ ಗುಡಾರ ನಿರ್ಮಾಣಕ್ಕೆ ಬಳಸಿದ ವಸ್ತುಗಳ ಲೆಕ್ಕ ಇವು: ಮೋಶೆಯ ಆಜ್ಞೆಯ ಮೇರೆಗೆ ಯಾಜಕನಾದ ಆರೋನನ ಮಗನಾದ ಈತಾಮಾರನ ನಿರ್ದೇಶನದಲ್ಲಿ ಲೇವಿಯರ ಕೈಯಿಂದ ಲೆಕ್ಕ ಮಾಡಿಸಿದ್ದು. ಅಧ್ಯಾಯವನ್ನು ನೋಡಿ |