Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 39:30 - ಕನ್ನಡ ಸತ್ಯವೇದವು J.V. (BSI)

30 ಮತ್ತು ಚೊಕ್ಕಬಂಗಾರದಿಂದ ಪರಿಶುದ್ಧ ಕಿರೀಟವಾಗಿರುವ ಪಟ್ಟವನ್ನು ಮಾಡಿ ಮುದ್ರೆಯನ್ನು ಕೆತ್ತುವ ರೀತಿಯಲ್ಲಿ ಅದರಲ್ಲಿ - ಯೆಹೋವನಿಗೆ ಮೀಸಲು ಎಂಬ ಲಿಪಿಯನ್ನು ಬರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅವರು ಚೊಕ್ಕ ಬಂಗಾರದಿಂದ ಪರಿಶುದ್ಧ ಕಿರೀಟಕ್ಕೆ ಬಾಸಿಂಗವನ್ನು ಮಾಡಿ ಮುದ್ರೆಯನ್ನು ಕೆತ್ತುವ ರೀತಿಯಲ್ಲಿ ಅದರಲ್ಲಿ, ಯೆಹೋವನಿಗೆ ಮೀಸಲು ಎಂಬ ಲಿಪಿಯನ್ನು ಬರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಮತ್ತು ಚೊಕ್ಕಬಂಗಾರದಿಂದ ಪರಿಶುದ್ಧ ಕಿರೀಟದಂಥ ಪಟ್ಟಿಯನ್ನು ಸರ್ವೇಶ್ವರನಿಗೆ ಮಾಡಿ ಮುದ್ರೆಯನ್ನು ಕೆತ್ತುವ ರೀತಿಯಲ್ಲಿ ಅದರಲ್ಲಿ - “ಸರ್ವೇಶ್ವರನಿಗೆ ಮೀಸಲು” ಎಂಬ ಲಿಪಿಯನ್ನು ಬರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ತರುವಾಯ ಅವರು ಪವಿತ್ರಕಿರೀಟವನ್ನು ಅಪ್ಪಟ ಬಂಗಾರದಿಂದ ಮಾಡಿದರು. ಅವರು ಬಂಗಾರದಲ್ಲಿ ಅಕ್ಷರಗಳನ್ನು ಕೆತ್ತಿದರು. ಅವರು, “ಯೆಹೋವನಿಗೆ ಪವಿತ್ರವಾದದ್ದು” ಎಂಬ ಮಾತುಗಳನ್ನು ಬರೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಶುದ್ಧ ಬಂಗಾರದಿಂದ ಪರಿಶುದ್ಧ ಕಿರೀಟದ ತಗಡನ್ನು ಮಾಡಿ, ಮುದ್ರೆ ಕೆತ್ತುವ ಪ್ರಕಾರ ಅದರಲ್ಲಿ, “ಯೆಹೋವ ದೇವರಿಗೆ ಪರಿಶುದ್ಧ,” ಎಂದು ಕೆತ್ತಿಸಿದರು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 39:30
11 ತಿಳಿವುಗಳ ಹೋಲಿಕೆ  

ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ ಯಾಜಕರನ್ನಾಗಿಯೂ ಮಾಡಿದಿ; ಅವರು ಭೂವಿುಯ ಮೇಲೆ ಆಳುವರು ಎಂದು ಹೇಳಿದರು.


ಇಂಥವನೇ ನಮಗೆ ಬೇಕಾದ ಮಹಾಯಾಜಕನು. ಈತನು ಪರಿಶುದ್ಧನೂ ನಿರ್ದೋಷಿಯೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನೂ ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.


ಈತನು ದೇವರ ಪ್ರಭಾವದ ಪ್ರಕಾಶವೂ ಆತನ ತತ್ವದ ಮೂರ್ತಿಯೂ ತನ್ನ ಶಕ್ತಿಯ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ಪಾಪವಿಶುದ್ಧಿಮಾಡಿದ ಮೇಲೆ ಉನ್ನತಲೋಕದೊಳಗೆ ಮಹತ್ವವುಳ್ಳ ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ಆತನು ನಮ್ಮನ್ನು ಸಕಲ ಅಧರ್ಮದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ನಾವು ಆತನಲ್ಲಿ ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಪಾಪಜ್ಞಾನವಿಲ್ಲದ ಆತನನ್ನು ನಮಗೋಸ್ಕರ ಪಾಪ ಸ್ವರೂಪಿಯಾಗ ಮಾಡಿದನು.


ನೀವು ಕ್ರಿಸ್ತ ಯೇಸುವಿನಲ್ಲಿರುವದು ಆತನಿಂದಲೇ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿ ಶುದ್ಧೀಕರಣ ವಿಮೋಚನೆಗಳಿಗೆ ಕಾರಣನೂ ಆದನು.


ಆ ದಿನದಲ್ಲಿ - ಯೆಹೋವನಿಗೆ ಮೀಸಲು ಎಂಬ ಲಿಪಿಯು ಕುದುರೆಗಳ ಘಂಟೆಗಳ ಮೇಲೂ ಕೆತ್ತಿರುವದು; ಯೆಹೋವನ ಆಲಯದ ಪಾತ್ರೆಗಳೆಲ್ಲವೂ ಯಜ್ಞವೇದಿಯ ಪಕ್ಕದ ಬೋಗುಣಿಗಳಂತೆ ಪರಿಶುದ್ಧವಾಗಿರುವವು.


ಡೇರೆಯ ಬಾಗಲಿಗೆ ಹುರಿನಾರಿನ ಬಟ್ಟೆಯಲ್ಲಿ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದ ವಿಚಿತ್ರವಾಗಿ ಕಸೂತಿಹಾಕಿ ಪರದೆಯನ್ನು ಮಾಡಿಸಬೇಕು.


ಹುರಿನಾರಿನಿಂದ ಚಡ್ಡಿಗಳನ್ನೂ ಹುರಿನಾರಿನಿಂದಲೂ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದಲೂ ಬುಟೇದಾರೀ ಕೆಲಸದ ರೀತಿಯಲ್ಲಿ ನಡುಕಟ್ಟನ್ನೂ ಮಾಡಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು.


ಅದನ್ನು ಮುಂಡಾಸಕ್ಕೆ ಬಿಗಿಸುವದಕ್ಕಾಗಿ ನೀಲಿದಾರವನ್ನು ಕಟ್ಟಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು