Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 39:5 - ಕನ್ನಡ ಸತ್ಯವೇದವು J.V. (BSI)

5 ಕವಚದ ಮೇಲಿರುವ ವಿಚಿತ್ರವಾದ ಬುಟೇದಾರಿಯ ನಡುಕಟ್ಟು ಕವಚಕ್ಕೆ ಏಕವಾಗಿದ್ದು ಅದರಂತೆಯೇ ಹುರಿನಾರಿನ ಬಟ್ಟೆಯಿಂದಲೂ ಚಿನ್ನದ ದಾರದಿಂದಲೂ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದಲೂ ಉಂಟಾಗಿತ್ತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕವಚದ ಮೇಲಿರುವ ಕಸೂತಿ ನಡುಕಟ್ಟು ಕವಚಕ್ಕೆ ಏಕವಾಗಿದ್ದು ಅದರಂತೆಯೇ ನಯವಾಗಿ ಹೊಸೆದ ಹತ್ತಿಯ ಬಟ್ಟೆಯಿಂದಲು, ಚಿನ್ನದ ದಾರಗಳಿಂದಲು ಹಾಗೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ಮಾಡಲ್ಪಟ್ಟಿತ್ತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಕವಚದ ಮೇಲಿದ್ದ ಅಪೂರ್ವವಾದ ಕಸೂತಿ ನಡುಕಟ್ಟು ಕವಚಕ್ಕೆ ಅಂಗವಾಗಿದ್ದು ಅದರಂತೆಯೇ ಹುರಿನಾರಿನ ಬಟ್ಟೆಯಿಂದಲೂ, ಚಿನ್ನದ ದಾರದಿಂದಲೂ ಮತ್ತು ನೀಲಿ, ಊದ ಹಾಗು ಕಡುಗೆಂಪು ವರ್ಣಗಳುಳ್ಳ ದಾರದಿಂದಲು ತಯಾರಿಸಲಾಗಿತ್ತು. ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆಯೇ ಮಾಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಅವರು ನಡುಕಟ್ಟನ್ನು ಹೆಣೆದು ಏಫೋದಿಗೆ ಬಿಗಿಯಾಗಿ ಕಟ್ಟಿದರು. ಏಫೋದನ್ನು ಮಾಡಿದಂತೆಯೇ ಇದನ್ನು ಮಾಡಲಾಯಿತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅವರು ಇದನ್ನು ಮಾಡುವುದಕ್ಕೆ ಚಿನ್ನದ ದಾರ, ಶ್ರೇಷ್ಠ ನಾರುಬಟ್ಟೆಯನ್ನು ಮತ್ತು ನೀಲಿ, ನೇರಳೆ, ಕೆಂಪುದಾರಗಳನ್ನು ಉಪಯೋಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಅದರ ಮೇಲಿರುವ ಅದರ ಮೇಲಿರುವ ಕಸೂತಿ ಕೆಲಸದ ಏಫೋದಿನ ನಡುಕಟ್ಟನ್ನು ಒಂದೇ ರೀತಿಯ ವಸ್ತುಗಳಿಂದ ತಯಾರಿಸಬೇಕು ಅಂದರೆ ಬಂಗಾರ, ನೀಲಿ, ಧೂಮ್ರ, ರಕ್ತವರ್ಣದ ದಾರಿನಿಂದ ಮತ್ತು ನಯವಾದ ನಾರಿನಿಂದ ಹೊಸೆದು ಮಾಡಲಾಗಿತ್ತು, ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 39:5
10 ತಿಳಿವುಗಳ ಹೋಲಿಕೆ  

ತಿರುಗಿದಾಗ ಏಳು ಚಿನ್ನದ ದೀಪಸ್ತಂಭಗಳನ್ನೂ ಆ ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಕುಮಾರನಂತೆ ಇರುವವನನ್ನೂ ಕಂಡೆನು. ಆತನು ನಿಲುವಂಗಿಯನ್ನು ತೊಟ್ಟು ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು.


ನಾನು ನಿಮಗೆ ಆಜ್ಞಾಪಿಸಿದ್ದನ್ನೆಲ್ಲಾ ಕಾಪಾಡಿಕೊಳ್ಳುವದಕ್ಕೆ ಅವರಿಗೆ ಉಪದೇಶ ಮಾಡಿರಿ. ನೋಡಿರಿ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿವಸ ನಿಮ್ಮ ಸಂಗಡ ಇರುತ್ತೇನೆ ಎಂದು ಹೇಳಿದನು.


ನಾನು ನಿಮಗೆ ತಿಳಿಸಿಕೊಟ್ಟ ಉಪದೇಶವನ್ನು ಕರ್ತನಿಂದ ಹೊಂದಿದೆನು. ಅದೇನಂದರೆ - ಕರ್ತನಾದ ಯೇಸು ತಾನು ಹಿಡಿದು ಕೊಡಲ್ಪಟ್ಟ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ ಮುರಿದು -


ಧರ್ಮವೇ ಅವನಿಗೆ ನಡುಕಟ್ಟು, ಪ್ರಾಮಾಣಿಕತೆಯೇ ಸೊಂಟಪಟ್ಟಿ.


ಆಮೇಲೆ ಯೆಹೋವನು ಆಜ್ಞಾಪಿಸಿದಂತೆ ಆರೋನನಿಗೆ ನಿಲುವಂಗಿಯನ್ನು ತೊಡಿಸಿ ನಡುಕಟ್ಟನ್ನು ಸುತ್ತಿ ಮೇಲಂಗಿಯನ್ನು ತೊಡಿಸಿ ಕವಚವನ್ನು ಹಾಕಿಸಿ ಕವಚದ ಮೇಲಣ ವಿಚಿತ್ರವಾದ ನಡುಕಟ್ಟನ್ನು ಕಟ್ಟಿ ಅದರಿಂದ ಕವಚವನ್ನು ಅವನಿಗೆ ಬಂಧಿಸಿ


ಆ ವಸ್ತ್ರಗಳನ್ನು ಅಂದರೆ ನಿಲುವಂಗಿಯನ್ನೂ ಕವಚದ ಸಂಗಡ ತೊಟ್ಟುಕೊಳ್ಳತಕ್ಕ ಮೇಲಂಗಿಯನ್ನೂ ಕವಚವನ್ನೂ ಚೀಲದ ಪದಕವನ್ನೂ ಆರೋನನಿಗೆ ತೊಡಿಸಿ ಕವಚದ ವಿಚಿತ್ರವಾದ ನಡುಕಟ್ಟನ್ನು ಕಟ್ಟಿಸಿ


ಕವಚದ ಮೇಲಿರುವ ವಿಚಿತ್ರವಾದ ಬುಟೇದಾರಿಯ ನಡುಕಟ್ಟು ಕವಚಕ್ಕೆ ಏಕವಾಗಿದ್ದು ಅದರಂತೆಯೇ ಹುರಿನಾರಿನ ಬಟ್ಟೆಯಿಂದ ಮಾಡಲ್ಪಟ್ಟು ಚಿನ್ನದ ದಾರದಿಂದಲೂ ನೀಲಿ ಧೂಮ್ರರಕ್ತವರ್ಣಗಳುಳ್ಳ ದಾರದಿಂದಲೂ ಅಲಂಕರಿಸಲ್ಪಡಬೇಕು.


ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರಗಳೂ ನಾರುಬಟ್ಟೆಗಳೂ ಆಡುಕೂದಲಿನ ಬಟ್ಟೆಗಳೂ


ಆ ಕವಚಕ್ಕೆ ಹೆಗಲಿನ ಮೇಲೆ ಎರಡು ಪಟ್ಟಿಗಳನ್ನು ಮಾಡಿದರು; ಅದರ ಎರಡು ಕೊನೆಗಳು ಜೋಡಿಸಲ್ಪಟ್ಟವು.


ಮುದ್ರಾರತ್ನವನ್ನು ಕೆತ್ತುವ ರೀತಿಯಲ್ಲಿ [ಎರಡು] ಗೋಮೇಧಕರತ್ನಗಳಲ್ಲಿ ಇಸ್ರಾಯೇಲ್ಯರ ಹನ್ನೆರಡು ಕುಲಗಳ ಹೆಸರುಗಳನ್ನು ಕೆತ್ತಿ ಆ ರತ್ನಗಳನ್ನು ಕುಂದಣದಲ್ಲಿ ಕಟ್ಟಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು