Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 39:8 - ಕನ್ನಡ ಸತ್ಯವೇದವು J.V. (BSI)

8 ಕವಚದಂತೆಯೇ ಬುಟೇದಾರಿಯ ಕೆಲಸದಿಂದ ಚಿನ್ನದ ದಾರದಿಂದಲೂ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದಲೂ ಹುರಿನಾರಿನ ಬಟ್ಟೆಯಲ್ಲಿ ಚೀಲದ ಪದಕವನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಏಫೋದ್ ಕವಚದಂತೆಯೇ ಕಸೂತಿಯಿಂದಲೂ ಕೆಲಸದಿಂದ ಚಿನ್ನದ ದಾರಗಳಿಂದಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದಲೂ ನಯವಾದ ನಾರಿನ ಬಟ್ಟೆಯಲ್ಲಿ ಎದೆಯಪದಕವನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ‘ಏಫೋದ್’ ಕವಚದಂತೆಯೇ, ಚಿನ್ನದ ದಾರದಿಂದಲೂ ನೀಲಿ, ಊದ ಹಾಗು ಕಡುಗೆಂಪುವರ್ಣಗಳುಳ್ಳ ದಾರದಿಂದಲೂ ಹುರಿನಾರಿನ ಬಟ್ಟೆಯಲ್ಲಿ ಕಸೂತಿ ಕೆಲಸದಿಂದ ಕೂಡಿದ ಒಂದು ಚೀಲದಂಥ ವಕ್ಷಪದಕವನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಬಳಿಕ ಅವರು ದೈವನಿರ್ಣಯ ಪದಕವನ್ನು ಮಾಡಿದರು. ಏಫೋದಿನಂತೆಯೇ ಇದು ಸಹ ಬುಟೇದಾರಿ ಕೆಲಸವಾಗಿತ್ತು. ಅದನ್ನು ಚಿನ್ನದ ದಾರಗಳಿಂದಲೂ ಶ್ರೇಷ್ಠವಾದ ನಾರುಬಟ್ಟೆಯಿಂದಲೂ ನೀಲಿ, ನೇರಳೆ, ಕೆಂಪುದಾರಗಳಿಂದಲೂ ಮಾಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಎದೆಪದಕವನ್ನು ಕೌಶಲ್ಯ ಕೆಲಸದಿಂದ ಎಂದರೆ ಏಫೋದಿನ ಕೆಲಸದ ಹಾಗೆಯೇ ಬಂಗಾರ, ನೀಲಿ, ಧೂಮ್ರ, ರಕ್ತವರ್ಣದ ದಾರಿನಿಂದ ಮತ್ತು ನಯವಾದ ನಾರಿನಿಂದ ಹೊಸೆದು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 39:8
9 ತಿಳಿವುಗಳ ಹೋಲಿಕೆ  

ಮಾಡಬೇಕಾದ ವಸ್ತ್ರಗಳು ಯಾವವಂದರೆ - ಪದಕದ ಚೀಲ ಮಹಾಯಾಜಕ ಕವಚ ಮೇಲಂಗಿ ವಿಚಿತ್ರವಾದ ನಿಲುವಂಗಿ ಮುಂಡಾಸ ನಡುಕಟ್ಟು ಇವುಗಳೇ. ನಿನ್ನ ಅಣ್ಣನಾದ ಆರೋನನೂ ಅವನ ಮಕ್ಕಳೂ ನನ್ನ ಯಾಜಕರಾಗುವದಕ್ಕೆ ಅವರಿಗೋಸ್ಕರ ಈ ದೀಕ್ಷಾವಸ್ತ್ರಗಳನ್ನು ಮಾಡಿಸಬೇಕು.


ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ವಜ್ರಕವಚವನ್ನು ಧರಿಸಿಕೊಂಡು


ಧರ್ಮವನ್ನು ವಜ್ರ ಕವಚವನ್ನಾಗಿ ತೊಟ್ಟು ರಕ್ಷಣೆಯೆಂಬ ಶಿರಸ್ತ್ರಾಣವನ್ನು ಧರಿಸಿಕೊಂಡನು; ರೋಷವೆಂಬ ವಸ್ತ್ರವನ್ನು ಉಡುಪುಮಾಡಿಕೊಂಡು ಆಗ್ರಹವನ್ನು ನಿಲುವಂಗಿಯನ್ನಾಗಿ ಹಾಕಿಕೊಂಡನು.


ನನ್ನ ಕೃಪೆಯು ಅವನಲ್ಲಿ ಶಾಶ್ವತವಾಗಿ ಇರುವದು; ನನ್ನ ಒಡಂಬಡಿಕೆಯು ಅವನಲ್ಲಿ ಸ್ಥಿರವಾಗಿರುವದು.


ಮಹಾಯಾಜಕನ ಕವಚಕ್ಕೆ ಬೇಕಾಗಿರುವ ಗೋಮೇಧಕರತ್ನಗಳೂ ಪದಕದ ಚೀಲದಲ್ಲಿ ಕೆತ್ತಬೇಕಾದ ನಾನಾ ರತ್ನಗಳೂ ಇವೇ.


[ನನ್ನ ನಿವಾಸಕ್ಕಾಗಿ] ಒಂದು ಗುಡಾರವನ್ನು ಹತ್ತು ತಾನು ಬಟ್ಟೆಗಳಿಂದ ಮಾಡಿಸಬೇಕು. ಅವು ಹೊಸೆದ ನಾರಿನ ಬಟ್ಟೆಗಳಾಗಿರಬೇಕು. ಅವುಗಳಲ್ಲಿ ನೀಲಿ ಧೂಮ್ರ ರಕ್ತವರ್ಣಗಳ ದಾರದಿಂದ ಕೆರೂಬಿಗಳನ್ನು ಚಮತ್ಕಾರವಾಗಿ ಕಸೂತಿಹಾಕಿಸಬೇಕು.


ಅದು ಚಚ್ಚೌಕವಾಗಿತ್ತು. ಆ ಚೀಲದ ಪದಕವು ಎರಡು ಪದರುಳ್ಳದ್ದಾಗಿತ್ತು; ಅದು ಒಂದು ಗೇಣುದ್ದವೂ ಒಂದು ಗೇಣಗಲವೂ ಆಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು