Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 4:12 - ಕನ್ನಡ ಸತ್ಯವೇದವು J.V. (BSI)

12 ಹೀಗಿರುವದರಿಂದ ನೀನು ಹೊರಟುಹೋಗು; ನಾನು ನಿನ್ನ ಬಾಯಿಗೆ ಸಹಾಯವಾಗಿದ್ದು ನೀನು ಮಾತಾಡಬೇಕಾದದ್ದನ್ನು ಬೋಧಿಸುವೆನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹಾಗಾದರೆ ಈಗಲೇ ನೀನು ಹೊರಡು, ನಾನು ನಿನ್ನಗೆ ಮಾತನಾಡಲು ಬೇಕಾದ ಸಾಮರ್ಥ್ಯವನ್ನು ಕೊಡುತ್ತಾ, ನೀನು ಮಾತನಾಡಬೇಕಾದದ್ದನ್ನು ನಿನಗೆ ಬೋಧಿಸುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆದುದರಿಂದ ಈಗಲೇ ಹೊರಡು; ನಿನ್ನ ಬಾಯಲ್ಲಿ ನಾನೇ ಇರುವೆನು; ನೀನು ಮಾತಾಡಬೇಕಾದುದನ್ನು ನಿನಗೆ ಕಲಿಸಿಕೊಡುವೆನು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಈಗ ಹೋಗು. ನೀನು ಮಾತಾಡುವಾಗ ನಾನೇ ನಿನ್ನೊಂದಿಗಿರುವೆನು. ನೀನು ಹೇಳಬೇಕಾದ ಮಾತುಗಳನ್ನು ನಾನು ನಿನಗೆ ಕೊಡುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಹಾಗಾದರೆ ಈಗ ಹೋಗು, ನಾನೇ ನಿನ್ನ ಸಂಗಡವಿದ್ದು, ನೀನು ಮಾತನಾಡತಕ್ಕದ್ದನ್ನು ನಿನಗೆ ಬೋಧಿಸುವೆನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 4:12
20 ತಿಳಿವುಗಳ ಹೋಲಿಕೆ  

ಆಗ ಯೆಹೋವನು ಕೈಚಾಚಿ ನನ್ನ ಬಾಯನ್ನು ಮುಟ್ಟಿ - ಇಗೋ, ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟಿದ್ದೇನೆ;


ನಿಮ್ಮನ್ನು ಹಿಡುಕೊಂಡುಹೋಗಿ ಒಪ್ಪಿಸುವಾಗ ಏನು ಹೇಳಬೇಕು ಎಂದು ಮುಂಚಿತವಾಗಿ ಚಿಂತೆಮಾಡಬೇಡಿರಿ; ಆ ಗಳಿಗೆಯಲ್ಲಿ ನಿಮಗೆ ಸೂಚನೆಯಾಗುವಂಥ ಮಾತನ್ನೇ ಆಡಿರಿ; ಮಾತಾಡುವವರು ನೀವಲ್ಲ, ಪವಿತ್ರಾತ್ಮನೇ.


ಬಳಲಿಹೋದವರನ್ನು ಮಾತುಗಳಿಂದ ಸುಧಾರಿಸುವದಕ್ಕೆ ನಾನು ಬಲ್ಲವನಾಗುವಂತೆ ಕರ್ತನಾದ ಯೆಹೋವನು ಶಿಕ್ಷಿತರ ನಾಲಿಗೆಯನ್ನು ನನಗೆ ದಯಪಾಲಿಸಿದ್ದಾನೆ; ಬೆಳಬೆಳಗೂ ನನ್ನನ್ನು ಎಚ್ಚರಿಸಿ ಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಜಾಗರಗೊಳಿಸುತ್ತಾನೆ.


ನನಗೋಸ್ಕರ ಸಹ ಪ್ರಾರ್ಥನೆಮಾಡಿರಿ. ನಾನು ಬಾಯಿ ತೆರೆಯುವಾಗ ಪೂರ್ವಕಾಲದಲ್ಲಿ ಗುಪ್ತವಾಗಿದ್ದ ಸುವಾರ್ತಾಸತ್ಯಾರ್ಥವನ್ನು ಭಯವಿಲ್ಲದೆ ತಿಳಿಸುವದಕ್ಕೆ ಬೇಕಾದ ಮಾತನ್ನು ದೇವರು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.


ಆದರೆ ಆ ಸಹಾಯಕನು ಅಂದರೆ ನನ್ನ ಹೆಸರಿನಲ್ಲಿ ತಂದೆಯು ಕಳುಹಿಸಿಕೊಡುವ ಪವಿತ್ರಾತ್ಮನೇ ನಿಮಗೆ ಎಲ್ಲವನ್ನು ಉಪದೇಶಿಸಿ ನಾನು ನಿಮಗೆ ಹೇಳಿದ್ದನ್ನೆಲ್ಲಾ ನಿಮ್ಮ ನೆನಪಿಗೆ ತರುವನು.


ಆತನು ಒಂದಾನೊಂದು ಸ್ಥಳದಲ್ಲಿ ಪ್ರಾರ್ಥನೆಮಾಡಿ ಮುಗಿಸಿದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ - ಸ್ವಾಮೀ, ಯೋಹಾನನು ತನ್ನ ಶಿಷ್ಯರಿಗೆ ಕಲಿಸಿದ ಹಾಗೆ ನಮಗೂ ಪ್ರಾರ್ಥನೆಮಾಡುವದನ್ನು ಕಲಿಸು ಎಂದು ಕೇಳಿದನು.


ನನ್ನ ಬಾಯನ್ನು ಹದವಾದ ಖಡ್ಗವನ್ನಾಗಿ ಮಾಡಿ ತನ್ನ ಕೈಯ ನೆರಳಿನಲ್ಲಿ ನನ್ನನ್ನು ಹುದುಗಿಸಿದ್ದಾನೆ; ನನ್ನನ್ನು ಚೂಪಾದ ಬಾಣವನ್ನಾಗಿ ರೂಪಿಸಿ ತನ್ನ ಬತ್ತಳಿಕೆಯಲ್ಲಿ ಮುಚ್ಚಿಟ್ಟಿದ್ದಾನೆ.


ನಿನ್ನ ಚಿತ್ತದಂತೆ ನಡಕೊಳ್ಳುವದನ್ನು ನನಗೆ ಕಲಿಸು; ನನ್ನ ದೇವರು ನೀನಲ್ಲವೋ? ಶುಭಕಾರಿಯಾಗಿರುವ ನಿನ್ನ ಆತ್ಮನು ನನ್ನನ್ನು ಮಟ್ಟನೆಲದಲ್ಲಿ ನಡಿಸಲಿ.


[ಆದದರಿಂದ] ನೀವು ವಿವೇಕಹೀನರಾಗಿ ಕುದುರೆಯಂತಾಗಲಿ ಹೇಸರಕತ್ತೆಯಂತಾಗಲಿ ಇರಬೇಡಿರಿ; ಅವುಗಳು ಬಾರುಕಡಿವಾಣಗಳಿಂದಲ್ಲದೆ ಸ್ವಾಧೀನವಾಗುವದಿಲ್ಲವಷ್ಟೆ.


ಅದಕ್ಕೆ ದೇವರು - ನಾನೇ ನಿನ್ನ ಸಂಗಡ ಇರುವೆನು; ಮತ್ತು ನೀನು ನನ್ನ ಜನರನ್ನು ಐಗುಪ್ತದೇಶದಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ದೇವರನ್ನು ಆರಾಧಿಸುವಿರಿ; ನಿನ್ನನ್ನು ಕಳುಹಿಸಿದವನು ನಾನೇ ಎಂಬದಕ್ಕೆ ಇದೇ ನಿನಗೆ ಗುರುತಾಗಿರುವದು ಅಂದನು.


ಅದಕ್ಕೆ ಮೋಶೆ - ಸ್ವಾಮೀ, ಈ ಕಾರ್ಯಕ್ಕೆ ಬೇರೊಬ್ಬನನ್ನು ನೇವಿುಸಬೇಕು ಎನ್ನಲು


ನೀನು ಅವನ ಸಂಗಡ ಮಾತಾಡಿ ಹೇಳಬೇಕಾದ ಮಾತುಗಳನ್ನು ಅವನಿಗೆ ತಿಳಿಸಬೇಕು. ನಿನ್ನ ಬಾಯಿಗೂ ಅವನ ಬಾಯಿಗೂ ಸಹಾಯವಾಗಿದ್ದು ನೀವು ಮಾಡಬೇಕಾದದ್ದನ್ನು ಬೋಧಿಸುವೆನು.


ಅವನೇ ನಿನಗೋಸ್ಕರ ಜನರ ಸಂಗಡ ಮಾತಾಡುವನು. ಅವನು ನಿನಗೆ ಬಾಯಂತಿರುವನು; ನೀನು ಅವನಿಗೆ ದೇವರಂತಿರುವಿ.


ಆಗ ಮೋಶೆ ಜನರಿಗೆ - ಈ ಕಾರ್ಯಗಳೆಲ್ಲಾ ನನ್ನ ಆಲೋಚನೆಯಿಂದ ಆಗಲಿಲ್ಲವೆಂದೂ ಯೆಹೋವನೇ ಇವುಗಳನ್ನು ನಡಿಸುವದಕ್ಕೆ ನನ್ನನ್ನು ಕಳುಹಿಸಿದನೆಂದೂ ನೀವು ತಿಳುಕೊಳ್ಳುವದು ಹೇಗಂದರೆ -


ಇವರ ಸ್ವದೇಶದವರಲ್ಲಿ ನಿನ್ನಂಥ ಪ್ರವಾದಿಯನ್ನು ಅವರಿಗೋಸ್ಕರ ಏರ್ಪಡಿಸುವೆನು; ಅವನ ಬಾಯಿಂದ ನನ್ನ ಮಾತುಗಳನ್ನು ನುಡಿಸುವೆನು; ನಾನು ಅವನಿಗೆ ಆಜ್ಞಾಪಿಸಿದ್ದನ್ನೆಲ್ಲಾ ಅವನು ಅವರಿಗೆ ತಿಳಿಸುವನು.


ಆಗ ಆತನು ತನ್ನ ಸೇವಕನಾದ ಮೋಶೆಯನ್ನೂ ತಾನು ಆರಿಸಿಕೊಂಡ ಆರೋನನನ್ನೂ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು