Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 4:14 - ಕನ್ನಡ ಸತ್ಯವೇದವು J.V. (BSI)

14 ಯೆಹೋವನು ಅವನ ಮೇಲೆ ಕೋಪಗೊಂಡು - ನಿನ್ನ ಅಣ್ಣನಾಗಿರುವ ಲೇವಿಯನಾದ ಆರೋನನಿದ್ದಾನಲ್ಲಾ, ಅವನು ಚೆನ್ನಾಗಿ ಮಾತಾಡಬಲ್ಲವನೆಂದು ನನಗೆ ಗೊತ್ತದೆ; ಅವನೇ ನಿನ್ನನ್ನು ಎದುರುಗೊಳ್ಳುವದಕ್ಕೆ ಬರುತ್ತಾನೆ; ನಿನ್ನನ್ನು ಕಂಡು ಸಂತೋಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ಯೆಹೋವನು ಮೋಶೆಯ ಮೇಲೆ ಕೋಪಗೊಂಡು ಅವನಿಗೆ, “ಲೇವಿಯನಾದ ಆರೋನನು ನಿನ್ನ ಸಹೋದರನಲ್ಲವೇ? ಅವನು ಚೆನ್ನಾಗಿ ಮಾತನಾಡಬಲ್ಲವನೆಂದು ನನಗೆ ತಿಳಿದಿದೆ. ಅವನೇ ನಿನ್ನನ್ನು ಎದುರುಗೊಳ್ಳುವುದಕ್ಕೆ ಬರುತ್ತಾನೆ. ಅವನು ನಿನ್ನನ್ನು ನೋಡಿದಾಗ ಅವನು ತನ್ನ ಹೃದಯದಲ್ಲಿ ಸಂತೋಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅವನಿಗೆ, “ಲೇವಿಯನಾದ ಆರೋನನು ನಿನಗೆ ಅಣ್ಣನಲ್ಲವೆ? ಅವನು ಚೆನ್ನಾಗಿ ಮಾತಾಡಬಲ್ಲನೆಂದು ನನಗೆ ಗೊತ್ತಿದೆ. ಇಗೋ, ಅವನೇ ನಿನ್ನನ್ನು ಭೇಟಿಯಾಗಲು ಬರುತ್ತಿದ್ದಾನೆ. ನಿನ್ನನ್ನು ಕಂಡು ಆನಂದಿಸಲಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನು ಮೋಶೆಯ ಮೇಲೆ ಕೋಪಗೊಂಡು, “ಹಾಗಾದರೆ ನಿನ್ನ ಅಣ್ಣನಾದ ಲೇವಿ ಕುಟುಂಬದ ಆರೋನನನ್ನು ನಾನು ಉಪಯೋಗಿಸುವೆನು. ಅವನಿಗೆ ವಾಕ್ಚಾತುರ್ಯವಿದೆ. ಈಗ ಅವನು ನಿನ್ನ ಬಳಿಗೆ ಬರುತ್ತಿದ್ದಾನೆ. ನಿನ್ನನ್ನು ಕಂಡು ಅವನಿಗೆ ಸಂತೋಷವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೆಹೋವ ದೇವರು ಮೋಶೆಯ ಮೇಲೆ ಬೇಸರಗೊಂಡು, “ಲೇವಿಯನಾದ ಆರೋನನು ನಿನ್ನ ಸಹೋದರನಲ್ಲವೇ? ಅವನು ಚೆನ್ನಾಗಿ ಮಾತನಾಡಬಲ್ಲನೆಂದು ನನಗೆ ಗೊತ್ತಿದೆ. ಅವನು ನಿನ್ನನ್ನು ಎದುರುಗೊಳ್ಳುವುದಕ್ಕೆ ಬರುತ್ತಾನೆ. ಅವನು ನಿನ್ನನ್ನು ಕಂಡು, ತನ್ನ ಹೃದಯದಲ್ಲಿ ಆನಂದಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 4:14
19 ತಿಳಿವುಗಳ ಹೋಲಿಕೆ  

ಖಾನೇಷುಮಾರಿಮಾಡಿದ್ದು ದೇವರಿಗೆ ಕೆಟ್ಟದ್ದೆಂದು ಕಂಡದರಿಂದ ಆತನು ಇಸ್ರಾಯೇಲ್ಯರನ್ನು ಬಾಧಿಸಿದನು.


ಇದಲ್ಲದೆ ಯೆಹೋವನು ಆರೋನನಿಗೆ - ನೀನು ಮೋಶೆಯನ್ನು ಎದುರುಗೊಳ್ಳುವದಕ್ಕೆ ಅರಣ್ಯಕ್ಕೆ ಹೊರಟುಹೋಗು ಎಂದು ಹೇಳಲಾಗಿ ಅವನು ಹೋಗಿ ದೇವರ ಬೆಟ್ಟದಲ್ಲೇ ಅವನನ್ನು ಎದುರುಗೊಂಡು ಮುದ್ದಿಟ್ಟನು.


ಎಲ್ಲರೂ ಸ್ವಕಾರ್ಯಗಳ ಮೇಲೆ ಮನಸ್ಸಿಡುತ್ತಾರೆಯೇ ಹೊರತು ಯೇಸು ಕ್ರಿಸ್ತನ ಕಾರ್ಯಗಳ ಮೇಲೆ ಮನಸ್ಸಿಡುವದಿಲ್ಲ.


ಆದರೂ ನನ್ನ ಸಹೋದರನಾದ ತೀತನು ನನಗೆ ಸಿಕ್ಕಲಿಲ್ಲವಾದ ಕಾರಣ ನನ್ನ ಆತ್ಮಕ್ಕೆ ಉಪಶಮನವಿಲ್ಲದೆ ಅಲ್ಲಿದ್ದವರಿಂದ ಕಳುಹಿಸಿಕೊಂಡವನಾಗಿ ಹೊರಟು ಮಕೆದೋನ್ಯಕ್ಕೆ ಬಂದೆನು.


ವಿಗ್ರಹಕ್ಕೆ ನೈವೇದ್ಯಮಾಡಿದ್ದನ್ನೂ ರಕ್ತವನ್ನೂ ಕುತ್ತಿಗೆಹಿಸುಕಿ ಕೊಂದದ್ದನ್ನೂ ಹಾದರವನ್ನೂ ವಿಸರ್ಜಿಸುವದು ಅವಶ್ಯವಾಗಿದೆ. ಇದಕ್ಕೆ ಹೆಚ್ಚಿನ ಭಾರವನ್ನು ನಿಮ್ಮ ಮೇಲೆ ಹಾಕಬಾರದೆಂದು ಪವಿತ್ರಾತ್ಮನಿಗೂ ನಮಗೂ ವಿಹಿತವಾಗಿ ತೋರಿತು. ನೀವು ಎಚ್ಚರವಾಗಿದ್ದು ಇವುಗಳ ಗೊಡವೆಗೆ ಹೋಗದಿದ್ದರೆ ನಿಮಗೆ ಒಳ್ಳೇದಾಗುವದು. ಶುಭವಾಗಲಿ.


ಇಸ್ರಾಯೇಲ್‍ದೇವರಾದ ಯೆಹೋವನು ಸೊಲೊಮೋನನಿಗೆ ಎರಡು ಸಾರಿ ಕಾಣಿಸಿಕೊಂಡು


ಆಗ ಯೆಹೋವನು ಉಜ್ಜನ ಮೇಲೆ ಕೋಪಗೊಂಡು ಈ ತಪ್ಪಿನ ಸಲವಾಗಿ ಅವನನ್ನು ಹತಮಾಡಿದನು; ಅವನು ಅಲ್ಲೇ ದೇವರ ಮಂಜೂಷದ ಬಳಿಯಲ್ಲಿ ಸತ್ತನು.


ಇದಲ್ಲದೆ ಈ ಕೋಲನ್ನು ಕೈಯಲ್ಲಿ ತೆಗೆದುಕೊಂಡು ಹೋಗಬೇಕು; ಇದರಿಂದಲೇ ಆ ಮಹತ್ಕಾರ್ಯಗಳನ್ನು ಮಾಡುವಿ ಅಂದನು.


ಅದಕ್ಕೆ ಮೋಶೆ - ಸ್ವಾಮೀ, ಈ ಕಾರ್ಯಕ್ಕೆ ಬೇರೊಬ್ಬನನ್ನು ನೇವಿುಸಬೇಕು ಎನ್ನಲು


ತರುವಾಯ ನಾನು ಮೋಶೆ ಆರೋನರನ್ನು ಕಳುಹಿಸಿ ಆ ಐಗುಪ್ತ್ಯರಲ್ಲಿ ಅನೇಕ ಮಹತ್ಕಾರ್ಯಗಳನ್ನು ನಡಿಸಿ ಅವರನ್ನು ಬಾಧಿಸಿ ನಿಮ್ಮನ್ನು ಹೊರಗೆ ಕರತಂದೆನು.


ದೇವರ ಮನುಷ್ಯನೊಬ್ಬನು ಏಲಿಯ ಬಳಿಗೆ ಬಂದು ಅವನಿಗೆ - ಯೆಹೋವನು ನಿನಗೆ ಹೇಳುವದೇನಂದರೆ - ಇಸ್ರಾಯೇಲ್ಯರು ಐಗುಪ್ತದಲ್ಲಿ ಫರೋಹನ ದಾಸತ್ವದಲ್ಲಿದ್ದಾಗ ನಾನು ನಿನ್ನ ಗೋತ್ರದವರಿಗೆ ಪ್ರತ್ಯಕ್ಷನಾಗಿ


ಐಗುಪ್ತಕ್ಕೆ ಬಂದ ಯಾಕೋಬನ ವಂಶದವರಾದ ನಮ್ಮ ಹಿರಿಯರು ಯೆಹೋವನಿಗೆ ಮೊರೆಯಿಟ್ಟಾಗ ಆತನು ಮೋಶೆ ಆರೋನರ ಮುಖಾಂತರ ಅವರನ್ನು ಐಗುಪ್ತದಿಂದ ಬಿಡಿಸಿ ಈ ದೇಶದಲ್ಲಿ ನೆಲೆಗೊಳಿಸಿದನು.


ಆಗ ಆತನು ತನ್ನ ಸೇವಕನಾದ ಮೋಶೆಯನ್ನೂ ತಾನು ಆರಿಸಿಕೊಂಡ ಆರೋನನನ್ನೂ ಕಳುಹಿಸಿದನು.


ಯೆಹೋವನು ಮೋಶೆಯ ಮೂಲಕವಾಗಿ ಮಾತ್ರವೇ ಮಾತಾಡಿದ್ದಾನೋ; ನಮ್ಮ ಮೂಲಕವೂ ಆತನು ಮಾತಾಡಲಿಲ್ಲವೇ ಎಂದು ಹೇಳಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು