Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 4:2 - ಕನ್ನಡ ಸತ್ಯವೇದವು J.V. (BSI)

2 ಯೆಹೋವನು ಅವನನ್ನು - ಅದೇನು ನಿನ್ನ ಕೈಯಲ್ಲಿರುವದು ಎಂದು ಕೇಳಿದನು. ಅವನು - ಇದು ಕೋಲು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅದಕ್ಕೆ ಯೆಹೋವನು ಅವನಿಗೆ, “ನಿನ್ನ ಕೈಯಲ್ಲಿರುವುದೇನು?” ಎಂದು ಕೇಳಿದನು. ಅವನು, ಇದು “ಇದು ಒಂದು ಕೋಲು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅದಕ್ಕೆ ಸರ್ವೇಶ್ವರ ಅವನನ್ನು, “ನಿನ್ನ ಕೈಯಲ್ಲಿರುವುದೇನು?” ಎಂದು ಕೇಳಿದರು, ಅವನು, “ಇದು ಕೋಲು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನು ಮೋಶೆಗೆ, “ನಿನ್ನ ಕೈಯಲ್ಲಿರುವುದೇನು?” ಅಂದನು. ಮೋಶೆ, “ಊರುಗೋಲು” ಎಂದು ಉತ್ತರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೆಹೋವ ದೇವರು ಅವನಿಗೆ, “ನಿನ್ನ ಕೈಯಲ್ಲಿರುವುದೇನು?” ಎಂದು ಕೇಳಿದರು. ಅವನು, “ಕೋಲು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 4:2
10 ತಿಳಿವುಗಳ ಹೋಲಿಕೆ  

ಮೋಶೆ ತನ್ನ ಹೆಂಡತಿಯನ್ನೂ ಮಕ್ಕಳನ್ನೂ ಕತ್ತೆಯ ಮೇಲೆ ಹತ್ತಿಸಿ ಕರೆದುಕೊಂಡು ಐಗುಪ್ತ ದೇಶಕ್ಕೆ ಹೊರಟುಹೋದನು. ಅವನು ದೇವದಂಡವನ್ನು ಕೈಯಲ್ಲಿ ತೆಗೆದುಕೊಂಡನು.


ಇದಲ್ಲದೆ ಈ ಕೋಲನ್ನು ಕೈಯಲ್ಲಿ ತೆಗೆದುಕೊಂಡು ಹೋಗಬೇಕು; ಇದರಿಂದಲೇ ಆ ಮಹತ್ಕಾರ್ಯಗಳನ್ನು ಮಾಡುವಿ ಅಂದನು.


ದನಗಳೇಯಾಗಲಿ ಆಡುಕುರಿಗಳೇಯಾಗಲಿ ಒಡೆಯನು ಲೆಕ್ಕಿಸಿದ ಎಲ್ಲಾ ಪಶುಗಳಲ್ಲಿ ಪ್ರತಿ ಹತ್ತನೆಯದು ಯೆಹೋವನಿಗೆ ಮೀಸಲಾಗಿರಬೇಕು.


ಬಡವರಿಗೋಸ್ಕರ ನ್ಯಾಯವಾಗಿ ತೀರ್ಪುಮಾಡುವನು, ಲೋಕದ ದೀನರಿಗೋಸ್ಕರ ಧರ್ಮವಾಗಿ ನಿರ್ಣಯಿಸುವನು; ಲೋಕವನ್ನು ತನ್ನ ಬಾಯ ದಂಡದಿಂದ ದಂಡಿಸುವನು, ದುಷ್ಟರನ್ನು ತನ್ನ ಬಾಯುಸುರಿನಿಂದ ಕೊಲ್ಲುವನು.


ಫಲವತ್ತಾದ ಭೂವಿುಯ ಮಧ್ಯದಲ್ಲಿನ ಕಾಡಿನೊಳಗೆ ಪ್ರತ್ಯೇಕವಾಗಿ ತಂಗುವ ನಿನ್ನ ಜನರನ್ನು, ನಿನ್ನ ಸ್ವಾಸ್ತ್ಯವಾದ ಹಿಂಡನ್ನು ನಿನ್ನ ಕೋಲಿನಿಂದ ಮೇಯಿಸು; ಪೂರ್ವಕಾಲದಂತೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.


ಯೆಹೋವನು ನಿನ್ನ ರಾಜದಂಡದ ಆಳಿಕೆಯನ್ನು ಚೀಯೋನಿನ ಹೊರಗೂ ಹಬ್ಬಿಸುವನು; ನಿನ್ನ ವೈರಿಗಳ ಮಧ್ಯದಲ್ಲಿ ದೊರೆತನಮಾಡು.


ಹೀಗಿರುವಲ್ಲಿ ಯಾಕೋಬನು ಲಿಬ್ನೆ, ಲೂಜು, ಅರ್ಮೋನ್ ಎಂಬೀ ಮರಗಳಲ್ಲಿ ಹಸಿಕೋಲುಗಳನ್ನು ತೆಗೆದುಕೊಂಡು ಪಟ್ಟೆಪಟ್ಟೆಯಾಗಿ ತೊಗಟೆಯನ್ನು ಸುಲಿದು ಅವುಗಳಲ್ಲಿರುವ ಬಿಳೀ ಬಣ್ಣವು ಕಾಣಿಸುವಂತೆ ಮಾಡಿ


ಫರೋಹನು ನಿಮಗೆ - ನಾನು ನಿಮ್ಮ ಮಾತನ್ನು ನಂಬುವಂತೆ ನೀವು ಮಹತ್ಕಾರ್ಯವನ್ನು ನನ್ನ ಮುಂದೆ ಮಾಡಬೇಕೆಂದು ಹೇಳಿದರೆ ಮೋಶೆಯು ಆರೋನನಿಗೆ - ನಿನ್ನ ಕೈಯಲ್ಲಿರುವ ಕೋಲನ್ನು ಫರೋಹನ ಮುಂದೆ ನೆಲದಲ್ಲಿ ಬೀಸಾಡು ಎಂದು ಹೇಳಬೇಕು, ಅದು ಸರ್ಪವಾಗುವದು ಎಂದು ಆಜ್ಞಾಪಿಸಿದನು.


ಬೆಳಿಗ್ಗೆ ಫರೋಹನ ಬಳಿಗೆ ಹೋಗು; ಅವನು ನದಿಗೆ ಹೋಗುತ್ತಾನಲ್ಲಾ. ಸರ್ಪವಾಗಿ ಮಾಡಲ್ಪಟ್ಟ ಆ ಕೋಲನ್ನು ನೀನು ಕೈಯಲ್ಲಿ ಹಿಡಿದುಕೊಂಡು ಅವನನ್ನು ಎದುರುಗೊಳ್ಳುವದಕ್ಕೆ ನೈಲ್ ನದೀತೀರದಲ್ಲಿ ನಿಂತುಕೊಂಡು ಹೀಗನ್ನಬೇಕು -


ಎಲೀಷನು ಆಕೆಗೆ - ನಾನು ನಿನಗೇನು ಮಾಡಬೇಕನ್ನುತ್ತೀ? ನಿನ್ನ ಮನೆಯಲ್ಲಿ ಏನಿರುತ್ತದೆ, ಹೇಳು ಅಂದನು. ಅದಕ್ಕೆ ಆಕೆಯು - ನಿನ್ನ ದಾಸಿಯ ಮನೆಯಲ್ಲಿ ಒಂದು ಮೊಗೆ ಎಣ್ಣೆ ಹೊರತಾಗಿ ಏನೂ ಇಲ್ಲ ಎಂದು ಉತ್ತರಕೊಟ್ಟಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು