Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 4:21 - ಕನ್ನಡ ಸತ್ಯವೇದವು J.V. (BSI)

21 ಯೆಹೋವನು ಮೋಶೆಗೆ ಇಂತೆಂದನು - ನೀನು ಐಗುಪ್ತ ದೇಶಕ್ಕೆ ತಿರಿಗಿ ಬಂದಾಗ ನಾನು ನಿನಗೆ ತೋರಿಸಿಕೊಟ್ಟ ಮಹತ್ಕಾರ್ಯಗಳನ್ನೆಲ್ಲಾ ಫರೋಹನ ಮುಂದೆ ಮಾಡಬೇಕು. ಆದರೂ ನಾನು ಅವನ ಹೃದಯವನ್ನು ಕಠಿಣಪಡಿಸುವೆನಾದದರಿಂದ ಅವನು ಜನರನ್ನು ಹೋಗಗೊಡಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೆಹೋವನು ಮೋಶೆಗೆ ಇಂತೆಂದನು, “ನೀನು ಐಗುಪ್ತ ದೇಶಕ್ಕೆ ಹಿಂತಿರುಗಿ ಬಂದಾಗ ನಾನು ನಿನ್ನ ಕೈಯಿಂದ ಮಾಡಿದ ಮಹತ್ಕಾರ್ಯಗಳನ್ನೆಲ್ಲಾ ಫರೋಹನ ಮುಂದೆ ಮಾಡಬೇಕು. ಆದರೂ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಆದ್ದರಿಂದ ಅವನು ಜನರನ್ನು ಹೋಗಲು ಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಸರ್ವೇಶ್ವರ ಮೋಶೆಗೆ ಮತ್ತೆ ಇಂತೆಂದರು: “ನೀನು ಈಜಿಪ್ಟಿಗೆ ಮರಳಿದಾಗ ನಾನು ನಿನಗೆ ತೋರಿಸಿಕೊಟ್ಟ ಸೂಚಕಕಾರ್ಯಗಳನ್ನೆಲ್ಲಾ ಫರೋಹ ರಾಜನ ಮುಂದೆ ಮಾಡಿ ತೋರಿಸು. ಆದರೆ ನಾನು ಅವನ ಹೃದಯವನ್ನು ಕಲ್ಲಾಗಿಸುವೆನು. ಅವನು ಇಸ್ರಯೇಲರನ್ನು ಹೋಗಗೊಡಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಮೋಶೆ ಈಜಿಪ್ಟಿಗೆ ಪ್ರಯಾಣ ಮಾಡುತ್ತಿದ್ದಾಗ ಯೆಹೋವನು ಅವನೊಡನೆ ಮಾತಾಡಿ, “ನೀನು ಫರೋಹನೊಂದಿಗೆ ಮಾತಾಡುವಾಗ ನಾನು ತೋರಿಸಿಕೊಟ್ಟ ಅದ್ಭುತಕಾರ್ಯಗಳನ್ನೆಲ್ಲಾ ಅವನ ಮುಂದೆ ಮಾಡು. ಆದರೂ ನಾನು ಫರೋಹನ ಹೃದಯವನ್ನು ಕಠಿಣಗೊಳಿಸುವುದರಿಂದ ಅವನು ಇಸ್ರೇಲರನ್ನು ಹೋಗಗೊಡಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆಗ ಯೆಹೋವ ದೇವರು ಮೋಶೆಗೆ, “ನೀನು ಈಜಿಪ್ಟ್ ದೇಶಕ್ಕೆ ಹಿಂದಿರುಗಿ ಹೋಗುವಾಗ, ನಾನು ನಿನ್ನ ಕೈಯಲ್ಲಿ ಮಾಡಿಸಿದ ಎಲ್ಲಾ ಸೂಚಕಕಾರ್ಯಗಳನ್ನು ಫರೋಹನ ಮುಂದೆ ಮಾಡು. ಆದರೆ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಅವನು ಜನರನ್ನು ಹೋಗಗೊಡಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 4:21
34 ತಿಳಿವುಗಳ ಹೋಲಿಕೆ  

ದೇವರು ಯಾರನ್ನು ಕರುಣಿಸಿದರೂ ಯಾರನ್ನು ಕಠಿಣಪಡಿಸಿದರೂ ಅದೆಲ್ಲವು ಆತನ ಇಷ್ಟಾನುಸಾರವಾಗಿಯೇ ಇದೆ ಎಂಬದು ಇದರಿಂದ ತೋರಿಬರುತ್ತದೆ.


ಯೆಹೋವನೇ, ನಾವು ನಿನ್ನ ಮಾರ್ಗದಿಂದ ತಪ್ಪಿ ಅಲೆಯುವಂತೆ ಏಕೆ ಮಾಡುತ್ತೀ? ನಾವು ನಿನಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿನ ಪಡಿಸುವದೇಕೆ? ನಿನ್ನ ಸೇವಕರ ನಿವಿುತ್ತ ನಿನ್ನ ಬಾಧ್ಯವಾದ ಕುಲಗಳಿಗಾಗಿ ತಿರುಗಿ ಪ್ರಸನ್ನನಾಗು,


ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಇಸ್ರಾಯೇಲ್ಯರು ಅವರೆಲ್ಲರನ್ನೂ ಕರುಣೆಯಿಲ್ಲದೆ ಸಂಹರಿಸಿಬಿಡುವ ಹಾಗೆ ಆತನು ತಾನೇ ಆ ಜನರ ಹೃದಯಗಳನ್ನು ಕಠಿಣಪಡಿಸಿ ಯುದ್ಧಕ್ಕೆ ಬರಮಾಡಿದನು.


ಅವರು ಕಣ್ಣಿನಿಂದ ಕಾಣದೆ ಹೃದಯದಿಂದ ಗ್ರಹಿಸದೆ ತಿರುಗಿಕೊಳ್ಳದೆ ತನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ಆತನು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿನಮಾಡಿದನು ಎಂಬದೇ.


ಯೆಹೋವನು ಐಗುಪ್ತದೇಶದ ಅರಸನಾದ ಫರೋಹನ ಹೃದಯವನ್ನು ಕಠಿಣಪಡಿಸಿದ್ದದರಿಂದ ಅವನು ಇಸ್ರಾಯೇಲ್ಯರನ್ನು ಬೆನ್ನಟ್ಟಿಹೋದನು. ಇಸ್ರಾಯೇಲ್ಯರು ಅಟ್ಟಹಾಸದಿಂದ ಹೊರಟರು.


ಯೆಹೋವನು ಮೋಶೆಯಿಂದ ಹೇಳಿಸಿದಂತೆಯೇ ಆಯಿತು; ಫರೋಹನ ಹೃದಯವು ಕಠಿಣವಾಗಿತ್ತು. ಅವನು ಇಸ್ರಾಯೇಲ್ಯರನ್ನು ಹೋಗಗೊಡಿಸಲೇ ಇಲ್ಲ.


ಆದರೂ ಯೆಹೋವನು ಮೋಶೆಗೆ ಹೇಳಿದ್ದಂತೆಯೇ ಆಯಿತು; ಯೆಹೋವನು ಫರೋಹನ ಹೃದಯವನ್ನು ಕಠಿಣ ಮಾಡಿದ್ದರಿಂದ ಅವನು ಅವರ ಮಾತಿಗೆ ಕಿವಿಗೊಡದೆಹೋದನು.


ಯೆಹೋವನು ಮೊದಲು ಹೇಳಿದ್ದಂತೆಯೇ ಫರೋಹನ ಹೃದಯವು ಕಠಿಣವಾಯಿತು; ಅವನು ಅವರ ಮಾತಿಗೆ ಕಿವಿಗೊಡದೆ ಹೋದನು.


ಆದಕಾರಣ ನಾನು ಕೈಚಾಚಿ ಐಗುಪ್ತದೇಶದ ಮಧ್ಯದಲ್ಲಿ ಮಹತ್ಕಾರ್ಯಗಳನ್ನು ಮಾಡಿ ಅದನ್ನು ನಾನಾ ವಿಧವಾಗಿ ಬಾಧಿಸುವೆನು; ಆಮೇಲೆ ಅರಸನು ನಿಮ್ಮನ್ನು ಬಿಡುವನು.


ಆದರೂ ಯೆಹೋವನು ಫರೋಹನ ಹೃದಯವನ್ನು ಕಠಿಣಮಾಡಿದ್ದದರಿಂದ ಅವನು ಇಸ್ರಾಯೇಲ್ಯರನ್ನು ಹೋಗಗೊಡಿಸಲೇ ಇಲ್ಲ.


ಆದರೂ ನಾನು ಫರೋಹನ ಮನಸ್ಸಿನಲ್ಲಿ ಹಟವನ್ನು ಹುಟ್ಟಿಸಿ ಐಗುಪ್ತ ದೇಶದಲ್ಲಿ ಅನೇಕ ಸೂಚಕಕಾರ್ಯಗಳನ್ನೂ ಅದ್ಭುತ ಕಾರ್ಯಗಳನ್ನೂ ನಡಿಸಿ ನನ್ನ ಶಕ್ತಿಯನ್ನು ತೋರಿಸುವೆನು.


ಕಣ್ಣಿನಿಂದ ಕಂಡು ಕಿವಿಯಿಂದ ಕೇಳಿ ಹೃದಯದಿಂದ ಗ್ರಹಿಸಿ ನನ್ನ ಕಡೆಗೆ ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೇಗೂ ಹೊಂದದ ಹಾಗೆ ಈ ಜನರ ಹೃದಯಕ್ಕೆ ಕೊಬ್ಬೇರಿಸಿ ಕಿವಿಯನ್ನು ಮಂದಮಾಡಿ ಕಣ್ಣಿಗೆ ಅಂಟುಬಳಿ ಎಂದು ನನಗೆ ಹೇಳಿದನು.


ನಾನು ಫರೋಹನ ಹೃದಯವನ್ನು ಕಠಿಣಪಡಿಸುವೆನಾದದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು; ಆಗ ನಾನು ಫರೋಹನಲ್ಲಿಯೂ ಅವನ ಸೈನ್ಯದಲ್ಲಿಯೂ ಪ್ರಖ್ಯಾತಿಗೊಳ್ಳುವೆನು. ನಾನೇ ಯೆಹೋವನೆಂಬದು ಐಗುಪ್ತ್ಯರಿಗೆ ತಿಳಿದುಬರುವದು ಎಂದು ಹೇಳಿದನು. ಯೆಹೋವನು ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ನಡೆದರು.


ಅದು ಎಡವುವ ಕಲ್ಲು ಮುಗ್ಗರಿಸುವ ಬಂಡೆ ಎಂತಲೂ ಬರೆದಿರುವ ಮಾತು ಸರಿಬೀಳುತ್ತದೆ. ಅವರು ದೇವರ ವಾಕ್ಯವನ್ನು ನಂಬಲೊಲ್ಲದೆ ಇರುವದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ; ಅದಕ್ಕಾಗಿಯೇ ಅವರು ನೇಮಕವಾದರು.


ನಾವು ನಾಶನಮಾರ್ಗದಲ್ಲಿರುವವರಿಗೆ ಮರಣದಿಂದ ಹುಟ್ಟಿ ಮರಣವನ್ನು ಹುಟ್ಟಿಸುವ ವಾಸನೆಯಾಗಿಯೂ ರಕ್ಷಣಾಮಾರ್ಗದಲ್ಲಿರುವವರಿಗೆ ಜೀವದಿಂದ ಹುಟ್ಟಿ ಜೀವವನ್ನು ಹುಟ್ಟಿಸುವ ವಾಸನೆಯಾಗಿಯೂ ಇದ್ದೇವೆ. ಇಂಥ ಕಾರ್ಯಗಳಿಗೆ ಯಾರು ಯೋಗ್ಯರು?


ಇದಲ್ಲದೆ ದೇವರ ಜ್ಞಾನವು ಅವರಿಗೆ ಇಷ್ಟವಿಲ್ಲದ್ದರಿಂದ ಅಲ್ಲದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅನಿಷ್ಟಭಾವಕ್ಕೆ ಒಪ್ಪಿಸಿದನು.


ಆತನು ಆ ದೇಶದವರ ಹೃದಯವನ್ನು ಮಾರ್ಪಡಿಸಿದ್ದರಿಂದ ಅವರು ಆತನ ಜನರನ್ನು ದ್ವೇಷಿಸಿ ಆತನ ಸೇವಕರನ್ನು ಕುಯುಕ್ತಿಯಿಂದ ನಡಿಸಿದರು.


ಹೇಗೆ ಪ್ರೇರಿಸುವಿ ಎಂದು ಯೆಹೋವನು ಕೇಳಲು ಅದು - ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲಾ ಪ್ರವಾದಿಗಳಲ್ಲಿ ಸೇರುವೆನು ಎಂದು ಉತ್ತರಕೊಟ್ಟಿತು. ಆಗ ಆತನು ಅದಕ್ಕೆ - ಹೋಗಿ ಅದರಂತೆ ಮಾಡು; ಅವನನ್ನು ಪ್ರೇರಿಸಿ ಸಫಲನಾಗುವಿ ಅಂದನು.


ಅರ್ನೋನ್ ತಗ್ಗಿನ ಅಂಚಿನಲ್ಲಿರುವ ಅರೋಯೇರ್ ಪಟ್ಟಣವು ಮತ್ತು ತಗ್ಗಿನಲ್ಲಿಯೇ ಇರುವ ಪಟ್ಟಣವು ಇವುಗಳು ಮೊದಲುಗೊಂಡು ಗಿಲ್ಯಾದ್ ಸೀಮೆಯವರೆಗೂ ಯಾವ ಪಟ್ಟಣವೂ ನಮಗೆ ಅಸಾಧ್ಯವಾಗಲಿಲ್ಲ. ನಮ್ಮ ದೇವರಾದ ಯೆಹೋವನು ಅವುಗಳನ್ನೆಲ್ಲಾ ನಮ್ಮ ಕೈಗೆ ಸಿಕ್ಕುವಂತೆ ಮಾಡಿದನು.


ಆಗ ಯೆಹೋವನು - ನನ್ನ ಆತ್ಮವು ಮನುಷ್ಯರಲ್ಲಿ ಶಾಶ್ವತವಾಗಿರುವದಿಲ್ಲ; ಅವರು ಭ್ರಷ್ಟರಾದದರಿಂದ ಮರ್ತ್ಯರೇ. ಅವರ ಆಯುಷ್ಯವು ನೂರ ಇಪ್ಪತ್ತು ವರುಷವಾಗಿರಲಿ ಅಂದನು.


ಆದರೂ ಫರೋಹನು ಆಗಲೂ ತನ್ನ ಹೃದಯವನ್ನು ಮೊಂಡುಮಾಡಿಕೊಂಡು ಜನರಿಗೆ ಅಪ್ಪಣೆ ಕೊಡದೆಹೋದನು.


ತರುವಾಯ ಯೆಹೋವನು ಮೋಶೆಗೆ ಇಂತೆಂದನು - ಫರೋಹನ ಬಳಿಗೆ ತಿರಿಗಿ ಹೋಗು. ನಾನು ಫರೋಹನ ಮತ್ತು ಅವನ ಪರಿವಾರದವರ ಮುಂದೆ ಈ ಮಹತ್ಕಾರ್ಯಗಳನ್ನು ನಡಿಸುವದಕ್ಕೆ ಆಸ್ಪದವಾಗುವದಕ್ಕೂ


ಆದರೂ ಯೆಹೋವನು ಫರೋಹನ ಹೃದಯವನ್ನು ಕಠಿಣಪಡಿಸಿದದರಿಂದ ಅವರಿಗೆ ಅಪ್ಪಣೆ ಕೊಡುವದಕ್ಕೆ ಫರೋಹನು ಒಪ್ಪಲಿಲ್ಲ.


ಯೆಹೋವನು ಮೋಶೆಗೆ - ಫರೋಹನು ನಿಮ್ಮ ಮಾತನ್ನು ಕೇಳುವದಿಲ್ಲವಾದದರಿಂದ ಐಗುಪ್ತದೇಶದಲ್ಲಿ ಮಹತ್ಕಾರ್ಯಗಳನ್ನು ಹೆಚ್ಚಾಗಿ ನಡಿಸುವದಕ್ಕೆ ನನಗೆ ಆಸ್ಪದವಾಗುವದೆಂಬದಾಗಿ ಹೇಳಿದ್ದನಷ್ಟೆ.


ಮೋಶೆ ಆರೋನರು ಫರೋಹನ ಮುಂದೆ ಆ ಮಹತ್ಕಾರ್ಯಗಳನ್ನೆಲ್ಲಾ ಮಾಡಿದಾಗ್ಯೂ ಯೆಹೋವನು ಫರೋಹನ ಹೃದಯವನ್ನು ಕಠಿಣಮಾಡಿದ್ದದರಿಂದ ಫರೋಹನು ಇಸ್ರಾಯೇಲ್ಯರಿಗೆ ತನ್ನ ದೇಶವನ್ನು ಬಿಟ್ಟು ಹೊರಡುವದಕ್ಕೆ ಅಪ್ಪಣೆ ಕೊಡದೆಹೋದನು.


ಬಿಡಿಸುವ ಸಮಯದಲ್ಲಿ ಆತನು ಐಗುಪ್ತದಲ್ಲಿ ಮಹತ್ಕಾರ್ಯಗಳನ್ನೂ ಸೋನ್ ಸೀಮೆಯಲ್ಲಿ ಅದ್ಭುತಗಳನ್ನೂ ನಡಿಸಿದ್ದೂ ಹೇಗಂದರೆ -


ಐಗುಪ್ತದ ಅರಸನೋ, ಎಷ್ಟು ಬಲಾತ್ಕಾರಮಾಡಿದರೂ ನಿಮ್ಮನ್ನು ಬಿಡುವದಿಲ್ಲವೆಂದು ತಿಳಿದಿದ್ದೇನೆ.


ಕಪ್ಪೆಗಳು ನಿನ್ನನ್ನೂ ನಿನ್ನ ಮನೆಗಳನ್ನೂ ನಿನ್ನ ಪ್ರಜಾಪರಿವಾರದವರನ್ನೂ ಬಿಟ್ಟು ನದಿಯಲ್ಲಿ ಮಾತ್ರ ಇರುವವು; ಇದರಿಂದ ನಮ್ಮ ದೇವರಾಗಿರುವ ಯೆಹೋವನಿಗೆ ಸಮಾನರು ಬೇರೆ ಯಾರೂ ಇಲ್ಲವೆಂದು ತಿಳಿದುಕೊಳ್ಳುವಿ ಅಂದನು.


ಆದರೆ ಫರೋಹನು ಉಪಶಮನವಾಯಿತೆಂದು ತಿಳಿದಾಗ ತನ್ನ ಹೃದಯವನ್ನು ಮೊಂಡುಮಾಡಿಕೊಂಡನು. ಯೆಹೋವನು ಹೇಳಿದ್ದಂತೆಯೇ ಅವನು ಅವರ ಮಾತನ್ನು ಕೇಳದೆ ಹೋದನು.


ನಾನಂತೂ ಐಗುಪ್ತ್ಯರ ಹೃದಯಗಳನ್ನು ಕಠಿಣಪಡಿಸುವೆನಾದದರಿಂದ ಅವರು ಇವರ ಹಿಂದೆ ಸಮುದ್ರದೊಳಗೆ ಹೋಗುವರು; ಆಗ ನಾನು ಫರೋಹನಲ್ಲಿಯೂ ಅವನ ಸಮಸ್ತ ಸೈನ್ಯದಲ್ಲಿಯೂ ರಥಗಳಲ್ಲಿಯೂ ಕುದುರೆಗಳಲ್ಲಿಯೂ ಪ್ರಖ್ಯಾತಿಗೊಳ್ಳುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು